ಬಳ್ಳಾರಿ: ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ವಿಮ್ಸ್)ಯಲ್ಲಿ ಬುಧವಾರ ಸಂಭವಿಸಿರುವ ಇಬ್ಬರ ಸಾವಿಗೆ ತೀವ್ರತರಹದ ಆರೋಗ್ಯ ಸಮಸ್ಯೆಗಳೇ ಕಾರಣ ಎಂದು ವಿಮ್ಸ್ ನಿರ್ದೇಶಕ ಡಾ.ಗಂಗಾಧರ್ ಗೌಡ ಸ್ಪಷ್ಟನೆ ನೀಡಿದ್ದಾರೆ.
ವಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ವಿದ್ಯುತ್ ವ್ಯತ್ಯಯದಿಂದ ಇಬ್ಬರು ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದರಿಂದ ಸ್ಪಷ್ಟನೆ ನೀಡಿರುವ ಅವರು, ಒಬ್ಬ ರೋಗಿ ವಿಷಪೂರಿತ ಹಾವಿನ ಕಡಿತದಿಂದ ದೇಹದಲ್ಲಿ ಆಂತರಿಕ ರಕ್ತಸ್ರಾವವಾಗಿ ಸಾವಿಗೀಡಾಗಿದ್ದರೆ, ಇನ್ನೊಬ್ಬರು ಬಹು ಅಂಗಾಗ ವೈಫಲ್ಯದಿಂದ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದ್ದಾರೆ.
ವಿಮ್ಸ್ ಆಸ್ಪತ್ರೆಯು ಉನ್ನತ ಚಿಕಿತ್ಸಾ ಕೇಂದ್ರವಾಗಿದೆ. ರೋಗಿಗಳು ಎಲ್ಲ ಕೇಂದ್ರಗಳಲ್ಲಿ ಚಿಕಿತ್ಸೆ ಫಲಕಾರಿಯಾಗದಿದ್ದಲ್ಲಿ ಕೊನೆಗೆ ಪರಿಸ್ಥಿತಿ ಉಲ್ಬಣಗೊಂಡ ನಂತರ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುತ್ತಾರೆ. ಹೀಗಾಗಿ ಸಾವು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಬೆಳಗ್ಗೆ ಅದೇ ಸಮಯದಲ್ಲಿ ವಿದ್ಯುತ್ ಸಂಪರ್ಕ ಕೈಕೊಟ್ಟಿರುವುದು ಕಾಕತಾಳೀಯವಾಗಿದ್ದು, ವಿಮ್ಸ್ ಆಸ್ಪತ್ರೆ ಯಾವಾಗಲೂ ರೋಗಿಗಳ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | Accident | ಖಾಸಗಿ ಶಾಲೆ ಬಸ್ ಡಿಕ್ಕಿಯಾಗಿ ಸರ್ಕಾರಿ ಶಾಲೆ ಬಾಲಕ ಸಾವು