Site icon Vistara News

Bus Accident: ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದು ಇಬ್ಬರು ಪಾದಚಾರಿಗಳ ದುರ್ಮರಣ

BMTC Bus

#image_title

ಬೆಂಗಳೂರು: ರಾಜಧಾನಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ನಗರದ ಹೊರ ವರ್ತುಲ ರಸ್ತೆಯ ಲಗ್ಗೆರೆ ಬಳಿಯ ಕೆಂಪೇಗೌಡ ಆರ್ಚ್ ಬಳಿ ಬುಧವಾರ ರಾತ್ರಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. 25 ರಿಂದ 30 ವರ್ಷದವರು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ರಾಜಾಜಿನಗರ ಸಂಚಾರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದಲ್ಲಿ ಬಸ್‌ ಹರಿದು ಸಾವು ಸಂಭವಿಸುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಇದಕ್ಕೆ ಬಸ್‌ ಚಾಲಕರ ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Koratagere Accident: ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವು, ಐವರಿಗೆ ಗಾಯ

ಚನ್ನಪಟ್ಟಣದಲ್ಲಿ ಭೀಕರ ಅಪಘಾತ; ಇಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ

ಅಪಘಾತದಲ್ಲಿ ಲಾರಿಗೆ ಡಿಕ್ಕಿಯಾಗಿ ಕಾರು ನುಜ್ಜುಗುಜ್ಜಾಗಿರುವುದು.

ರಾಮನಗರ: ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವುದು ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯ ದೇವರ ಹೊಸಹಳ್ಳಿ ಬಳಿ ನಡೆದಿದೆ.

ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ. ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರು ಕಡೆಗೆ 6 ಪ್ರಯಾಣಿಕರು ಬುಧವಾರ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಹೀಗಾಗಿ 13 ವರ್ಷದ ಬಾಲಕಿ ಹಾಗೂ 20 ವರ್ಷದ ಯುವತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ರಾಮನಗರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ | Road accident : ಟೆಂಪೊ, ಬೈಕ್‌ ನಡುವೆ ಅಪಘಾತ; ಮೂವರು ಸ್ನೇಹಿತರ ದಾರುಣ ಮರಣ

ಹೆದ್ದಾರಿಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಇತ್ತೀಚೆಗೆ ಇದೇ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಡಿವೈಡರ್‌ ಡಿಕ್ಕಿಯಾಗಿದ್ದರಿಂದ ಮೂವರು ಯುವಕರು ಮೃತಪಟ್ಟಿದ್ದರು. ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್‌ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಅಪಘಾತ ನಡೆದಿತ್ತು.

 

Exit mobile version