ಗದಗ: ತಾಲೂಕಿನ ಮಲ್ಲಸಮುದ್ರದಲ್ಲಿ ಗ್ರಾಮದಲ್ಲಿ ಮೊಹರಂ ಹಬ್ಬದ ವೇಳೆ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದ್ದು, ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೌಸಿಫ್ ಹೊಸಮನಿ(23), ಮುಸ್ತಾಕ್ ಹೊಸಮನಿ (24) ಗಾಯಾಳುಗಳು. ಸೋಮೇಶ್ ಗುಡಿ ಎಂಬಾತ ಈ ಕೃತ್ಯ ನಡೆಸಿದ್ದಾನೆ. ಮೊಹರಂ ಮೆರವಣಿಯಲ್ಲಿ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು, ಗಲಾಟೆ ನಡೆದ ನಂತರ ತೌಸಿಫ್ ಹೊಸಮನಿ ಮನೆಗೆ ನುಗ್ಗಿದ ಆರೋಪಿ ಸೋಮೇಶ್ ಗುಡಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತೌಸಿಫ್ ಎಂಬಾತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹಳೇಯ ದ್ವೇಷವೇ ಘಟನೆಗೆ ಕಾರಣ ಎನ್ನಲಾಗಿದೆ.
ಜಿಲ್ಲಾಸ್ಪತ್ರೆಗೆ ಎಸ್.ಪಿ ಶಿವಪ್ರಕಾಶ್ ದೇವರಾಜು, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಪ್ರವೀಣ್ ನೆಟ್ಟಾರು ಕೊಲೆ: ಏಳನೇ ಆರೋಪಿ ಸೆರೆ, ಜಟ್ಟಿಪಳ್ಳದ ಕಬೀರ್ ಪಾತ್ರವೇನು?