Site icon Vistara News

Tiger Nail: ಹುಲಿ ಉಗುರು ಡಾಲರ್ ಹಾಕಿದ್ದ ಪ್ರಸಿದ್ಧ ದೇವಾಲಯದ ಇಬ್ಬರು ಅರ್ಚಕರು ವಶಕ್ಕೆ

tiger nail pendant

ಚಿಕ್ಕಮಗಳೂರು: ರಾಜ್ಯದಲ್ಲಿ ಹುಲಿ ಉಗರು ಪೆಂಡೆಂಟ್ ಧರಿಸಿದ ಹಲವರಿಗೆ ಅರಣ್ಯ ಇಲಾಖೆ ನೋಟಿಸ್‌ ನೀಡಿ ವಿಚಾರಣೆ ನಡೆಸುತ್ತಿದೆ. ಈ ನಡುವೆ ಅಜ್ಜ-ಮುತ್ತಜ್ಜನ ಕಾಲದ ಹುಲಿ ಉಗುರು ಪ್ರಕರಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಪಟ್ಟಂತೆ ಪ್ರಸಿದ್ಧ ದೇವಾಲಯದ ಇಬ್ಬರು ಅರ್ಚಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತಿಹಾಸ ಪ್ರಸಿದ್ಧ ಖಾಂಡ್ಯ ಮಾರ್ಕಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಲಿ ಉಗುರು ಡಾಲರ್ ಧರಿಸಿದ್ದ ಆರೋಪದಲ್ಲಿ ದೇವಾಲಯದ ಅರ್ಚಕರನ್ನೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಳೆಹೊನ್ನೂರು ವಲಯ ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಬಾಳೆಹೊನ್ನೂರು ಠಾಣೆ ಪೊಲೀಸರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇ-ಮೇಲ್ ಮೂಲಕ ಅರ್ಚಕರ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಅರ್ಚಕರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ | Tiger Nail : ಹುಲಿ ಚರ್ಮ ವಿನಯ್‌ ಗುರೂಜಿ ಆಶ್ರಮದಲ್ಲಿ ಇದ್ದದ್ದು ಒಂದೇ ದಿನ!; ವೈರಲ್‌ ಫೋಟೊ ರಾದ್ಧಾಂತ

ನಿಖಿಲ್‌ ಹುಲಿ ಉಗುರಿನ ಪೆಂಡೆಂಟ್‌ ಹಾಕಿಲ್ಲ, ಅದು ಸಿಂಥೆಟಿಕ್‌: ಎಚ್‌ಡಿಕೆ ಸ್ಪಷ್ಟನೆ

ಬೆಂಗಳೂರು: ನಿಖಿಲ್‌ ಕುಮಾರಸ್ವಾಮಿ ಧರಿಸಿದ್ದ ಹುಲಿ ಉಗುರು ರೀತಿಯ ಪೆಂಡೆಂಟ್‌ ನೈಜವಲ್ಲ. ಸಿಂಥೆಟಿಕ್‌ನಿಂದ ಮಾಡಿರುವುದು. ಸಾಕಷ್ಟು ಜನರ ಬಳಿ ಇಂತಹ ಪೆಂಡೆಂಟ್ (Tiger Nail) ಇರುತ್ತದೆ. ಅದನ್ನು ಪರಿಶೀಲನೆ ಮಾಡಲು ಅರಣ್ಯಾಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಜೆಪಿ ನಗರದ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಪೆಂಡೆಂಟ್‌ (Tiger Claw Pendant) ಅನ್ನು ಪರಿಶೀಲನೆ ನಡೆಸಿದ ವೇಳೆ ಮಾಜಿ ಸಿಎಂ ಮಾತನಾಡಿದ್ದು, ಇವತ್ತು ಬೆಳಗ್ಗಿನಿಂದ ಚಿತ್ರನಟರು, ಜ್ಯೋತಿಷಿಗಳು ಇಟ್ಟಿರುವ ಹುಲಿ ಉಗುರುಗಳ ಪೆಂಡೆಂಟ್‌ಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಹೆಸರು ಈ ವಿಷಯದಲ್ಲಿ ಕೇಳಿ ಬಂದಿದೆ. ನಿಖಿಲ್ ಮದುವೆ ಸಂದರ್ಭದಲ್ಲಿ ಕೊರಳಿಗೆ ಹಾಕಿದ್ದ ಪೆಂಡೆಂಟ್ ಅದು ಎಂದು ಹೇಳಿದ್ದಾರೆ.

ನಿಖಿಲ್ ಹೆಸರು ಬಂದ ಬಳಿಕ ಸ್ವತಃ ನಾನೇ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ, ಪರಿಶೀಲನೆ ಮಾಡಿಕೊಳ್ಳಿ, ನಿಮಗೆ ಮುಜುಗರ ಆಗಬಾರದು. ಈ ರಾಜ್ಯದಲ್ಲಿ ನ್ಯಾಯ ಎನ್ನುವುದು ಎಲ್ಲರಿಗೂ ಒಂದೇ ಎಂದು ತಿಳಿಸಿದ್ದೆ. ಅದರಂತೆ ಬಂದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣದಲ್ಲಿ ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲು ಯಾವುದೇ ತೊಂದರೆ ಇಲ್ಲ. ನೀವು ಬಂದು ಪರಿಶೀಲನೆ ಮಾಡಿ ಎಂದು ಹೇಳಿದ್ದೇನೆ. ಅದರಂತೆ ಅಧಿಕಾರಿಗಳು ಬಂದು ಮಹಜರು ಮಾಡಿದ್ದಾರೆ. ನಾನೇ ಅಧಿಕಾರಿಗಳ ಜತೆಯಲ್ಲಿ ಚಿನ್ನದ ಅಂಗಡಿಗೆ ಅದನ್ನು ಕಳುಹಿಸಿದ್ದೇನೆ. ನಮ್ಮ ಬಳಿ ಇರುವ ಹುಲಿ ಉಗುರು ರೀತಿಯ ಪೆಂಡೆಂಟ್ ಸಿಂಥೆಟಿಕ್‌ನಿಂದ ಮಾಡಿರುವುದು, ಸಾಕಷ್ಟು ಜನರ ಬಳಿ ಇಂತಹ ಪೆಂಡೆಂಟ್ ಇರುತ್ತದೆ ಎಂದು ಹೇಳಿದ್ದಾರೆ.

Exit mobile version