ಉತ್ತರ ಕನ್ನಡ
Karwar Accident: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು
Karwar Accident: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ತೋಡೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ಅಪಘಾತ ನಡೆದಿದೆ.
ಕಾರವಾರ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಾರವಾರದ ರಾಷ್ಟ್ರೀಯ ಹೆದ್ದಾರಿ-66ರ ತೋಡೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸಂದೀಪ್ ಗುನಗ, ಲಿಂಗರಾಜು ಮೃತ ಬೈಕ್ ಸವಾರರು. ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಯಚೂರಿನಲ್ಲಿ ಬೈಕ್ ಮೇಲೆ ಲಾರಿ ಹರಿದು ಇಬ್ಬರ ದುರ್ಮರಣ
ರಾಯಚೂರು: ಬೈಕ್ ಮೇಲೆ ಲಾರಿ ಹರಿದಿದ್ದರಿಂದ ಇಬ್ಬರು ಸವಾರರು ದುರ್ಮರಣ ಹೊಂದಿರುವ ಘಟನೆ ನಗರದ ಸಾಥ್ ಮೈಲ್ ಬಳಿ ನಡೆದಿದೆ. ಹುಣಿಶ್ಯಾಳಹುಡಾ ಗ್ರಾಮದ ಹನುಮೇಶ (30), ಆಂಜನೇಯ (35) ಮೃತರು. ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ | Assault Case: ಹಣಕಾಸಿನ ಕಿರಿಕ್; ರಾಜಿಗೆಂದು ಕರೆಸಿ ಮಚ್ಚು, ಲಾಂಗು ಬೀಸಿದರು
ಬಾವಿಯಲ್ಲಿ ಬಿದ್ದು ವೃದ್ಧೆ ಸಾವು
ಕೊಪ್ಪಳ: ಸೌದೆ ತರಲು ಹೋಗಿದ್ದಾಗ ಬಾವಿಯಲ್ಲಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟಿರುವುದು ಜಿಲ್ಲೆ ಕುಷ್ಟಗಿ ತಾಲೂಕಿನ ರ‍್ಯಾ ವಣಕಿಯಲ್ಲಿ ನಡೆದಿದೆ. ಗ್ರಾಮದ ಭರಮವ್ವ ಹರಿಜನ (65) ಮೃತರು. ಈಕೆ ಸೋಮವಾರ ಸೌದೆ ತರಲು ಹೋಗಿದ್ದರು. ಆದರೆ, ಮಂಗಳವಾರ ಬಸಪ್ಪ ಎಂಬುವವರ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕುಷ್ಟಗಿ ಪೊಲೀಸರ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ
karnataka weather forecast : ಮುಕ್ಕಾಲು ರಾಜ್ಯಕ್ಕೆ ಕೈಕೊಟ್ಟ ಮಳೆರಾಯ; ಮತ್ತೆ ಮುಂಗಾರು ದುರ್ಬಲ
Rain News : ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ (karnataka weather forecast) ನಿರೀಕ್ಷೆ ಇದೆ. ಉಳಿದಂತೆ ಒಣ ಹವೆ ಇರಲಿದೆ.
ಬೆಂಗಳೂರು: ಸಕ್ರಿಯವಾಗಿದ್ದ ಮುಂಗಾರು ರಾಜ್ಯದಲ್ಲಿ (karnataka weather forecast) ಮತ್ತೆ ದುರ್ಬಲಗೊಂಡಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇದೀಗ ವರುಣ ಕೈಕೊಟ್ಟಿದ್ದಾನೆ. ಮುಂದಿನ 24 ಗಂಟೆಯಲ್ಲಿ ಒಣ ಹವೆ ಇರಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಒಣಹವೆ ಮೇಲುಗೈ ಸಾಧಿಸುತ್ತದೆ. ಬೆಂಗಳೂರು ನಗರ ಪ್ರದೇಶದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ಒಣಹವೆ ಇರಲಿದೆ.
ಇದನ್ನೂ ಓದಿ: Mangaluru News : ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದು ಮಹಿಳೆ ಸಾವು
ಉತ್ತರ ಒಳನಾಡಲ್ಲಿ ಲಘು ಮಳೆ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಗುಡುಗು ಮಳೆ
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದ ಮಳೆ ಸುರಿಯಬಹುದು.
ಇನ್ನು ರಾಜ್ಯದಲ್ಲಿ ಸೋಮವಾರ ಕಲಬುರಗಿಯ ಅಡಕಿಯಲ್ಲಿ 3 ಸೆಂ.ಮೀ, ಮುಧೋಳದಲ್ಲಿ 2 ಸೆಂ.ಮೀ ಹಾಗೂ ಉತ್ತರ ಕನ್ನಡದ ಕದ್ರಾ, ಮಂಕಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉತ್ತರ ಕನ್ನಡ
Uttara Kannada News: ರಾಜ್ಯಮಟ್ಟದ ವೇಷದೊಡನೆ ಭಾಷಣ ಸ್ಪರ್ಧೆ; ಯಲ್ಲಾಪುರದ ಶ್ರೀರಕ್ಷಾಗೆ ಪ್ರಥಮ ಸ್ಥಾನ
Uttara Kannada News: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು, ಮಕ್ಕಳ ಸಮಗ್ರ ವಿಕಾಸ ವೇದಿಕೆ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ವೇಷದೊಡನೆ ಭಾಷಣ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಶ್ರೀರಕ್ಷಾ ಶಿವಾನಂದ ವೆರ್ಣೇಕರ ಪ್ರಥಮ ಸ್ಥಾನ ಪಡೆದಿದ್ದಾಳೆ.
ಯಲ್ಲಾಪುರ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು, ಮಕ್ಕಳ ಸಮಗ್ರ ವಿಕಾಸ ವೇದಿಕೆ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯ (77th Independence Day Celebration) ಪ್ರಯುಕ್ತ ಆಯೋಜಿಸಿದ್ದ ರಾಜ್ಯಮಟ್ಟದ (State Level) ವೇಷದೊಡನೆ ಭಾಷಣ ಸ್ಪರ್ಧೆಯಲ್ಲಿ ತಾಲೂಕಿನ ಶ್ರೀರಕ್ಷಾ ಶಿವಾನಂದ ವೆರ್ಣೇಕರ ಪ್ರಥಮ ಸ್ಥಾನ (First Place) ಪಡೆದಿದ್ದಾಳೆ.
1 ರಿಂದ 5 ನೇ ಹಾಗೂ 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ವೇಷದೊಡನೆ ಭಾಷಣ ಸ್ಪರ್ಧೆಯನ್ನು ಆನ್‌ಲೈನ್‌ನಲ್ಲಿ ಆಯೋಜನೆ ಮಾಡಲಾಗಿತ್ತು. ಆನ್‌ಲೈನ್ ಮೂಲಕ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ನ ತಾಂತ್ರಿಕ ಮುಖ್ಯಸ್ಥ ಚಂದ್ರಶೇಖರ ನಾಯಕ, ಇಂದಿನ ಮಕ್ಕಳಲ್ಲಿ ಸ್ವಾತಂತ್ರ್ಯ ನಾಯಕರ ಮೌಲ್ಯಗಳನ್ನು ಬೆಳೆಸಲು ಈ ವೇಷದೊಡನೆ ಭಾಷಣ ಸ್ಪರ್ಧೆ ಸ್ಫೂರ್ತಿ ನೀಡುತ್ತದೆ ಎಂದರು.
ಇದನ್ನೂ ಓದಿ: Yashasvi Jaiswal: ಚೊಚ್ಚಲ ಟಿ20 ಶತಕ ಬಾರಿಸಿ ಗಿಲ್ ದಾಖಲೆ ಮುರಿದ ಜೈಸ್ವಾಲ್
ಮಕ್ಕಳ ಸಮಗ್ರ ವಿಕಾಸ ವೇದಿಕೆಯ ಹೊ.ರಾ. ಪರಮೇಶ್ವರ ಉಪನ್ಯಾಸ ನೀಡಿ, ಮಾತನಾಡಿ, ಮಕ್ಕಳಲ್ಲಿ ಭಾಷಣ ಕಲೆ ಮೂಡಿಸಲು ಬೇಕಾಗುವ ತಂತ್ರಗಳನ್ನು ತಿಳಿಸಿದರು.
6 ರಿಂದ 10 ನೇ ತರಗತಿಯ ಹಿರಿಯ ವಿಭಾಗದಲ್ಲಿ ಶ್ರೀರಕ್ಷಾ ಶಿವಾನಂದ ವೆರ್ಣೇಕರ ಪ್ರಥಮ, ನಂದಿತಾ ಜಿ.ಎನ್. ದ್ವಿತೀಯ ಹಾಗೂ ಪಂಚಮಿ ಮಹೇಶ ಭಟ್ಟ ತೃತೀಯ ಬಹುಮಾನವನ್ನು ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್‌ನ ರಾಜ್ಯಾಧ್ಯಕ್ಷ ಪಿ. ಮಹೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂತೋಷ ಬಂಡೆ ಹಾಗೂ ಸತೀಶ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ: Gold Rate Today: ಹಬ್ಬದ ಸೀಸನ್ ಮುನ್ಸೂಚನೆ, ಇಳಿಯಿತು ಚಿನ್ನದ ಬೆಲೆ
ವೇದಿಕೆ ಮುಖ್ಯಸ್ಥೆ ಆಶಾ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು. ಆರ್.ಎಸ್. ಪಾಟೀಲ ಸ್ವಾಗತಿಸಿದರು. ಆರ್. ಆಶಾ ನಿರೂಪಿಸಿದರು.
ಉತ್ತರ ಕನ್ನಡ
Karwar Tunnel Route : ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗ ಕೊನೆಗೂ ಸಂಚಾರ ಮುಕ್ತ!
Karwar Tunnel Route : ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗದಲ್ಲಿ ಸಂಚಾರಕ್ಕೆ ಕೊನೆಗೂ ಅನುಮತಿ ಸಿಕ್ಕಿದೆ. ಈ ಮಾರ್ಗದಲ್ಲಿ ಯಾವುದೇ ಅವಘಡಗಳು ಸಂಭವಿಸಿದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರೇ ಹೊಣೆ ಎಂಬ ಷರತ್ತಿನ ಮೇರೆಗೆ ಅನುಮತಿ ನೀಡಲಾಗಿದೆ.
ಕಾರವಾರ: ಜಿಲ್ಲಾಡಳಿತ ಹಾಗೂ ಸಾರ್ವಜನಿಕರ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ (National Highway 66 in Karwar) ಸುರಂಗ ಮಾರ್ಗದಲ್ಲಿ (Karwar Tunnel Route) ಸಂಚಾರಕ್ಕೆ ಕೊನೆಗೂ ಜಿಲ್ಲಾಡಳಿತ ಅನುಮತಿ ನೀಡಿದೆ. ಅಕ್ಟೋಬರ್ 2ಕ್ಕೆ ನಿಗದಿಯಾಗಿದ್ದ ಸುರಂಗ ಮಾರ್ಗದ (Subway of Karwar) ತಾಂತ್ರಿಕ ತಪಾಸಣೆ (Technical Inspection) ಅ.8ಕ್ಕೆ ನಡೆಯಲಿದ್ದು ಟನಲ್ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ನೀಡುವಂತೆ ಜನಸಾಮಾನ್ಯರಿಂದ ಸಾಕಷ್ಟು ಒತ್ತಡ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆ ನಡೆಯುವವರೆಗೆ ಈ ಮಾರ್ಗದಲ್ಲಿ ಯಾವುದೇ ಅವಘಡಗಳು ಸಂಭವಿಸಿದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (National Highways Authority of India) ಯೋಜನಾ ನಿರ್ದೇಶಕರೇ ಹೊಣೆಯಾಗಲಿದ್ದಾರೆ ಎನ್ನುವ ಷರತ್ತಿನ ಮೇರೆಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅ.2ರ ಸಂಜೆಯಿಂದಲೇ ಸುರಂಗ ಮಾರ್ಗದಲ್ಲಿ ಸಂಚಾರಕ್ಕೆ ಅನುಮತಿ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರದಿಂದ ಬಿಣಗಾದವರೆಗೆ ನಿರ್ಮಿಸಲಾಗಿರುವ ಸುರಂಗ ಮಾರ್ಗದಲ್ಲಿ (Tunnel from Karwar to Binaga) ಮಳೆಗಾಲದಲ್ಲಿ ನೀರು ಸೋರಿಕೆಯಾಗುತ್ತಿದುದರಿಂದ, ಸುರಕ್ಷತೆಯ ಕಾರಣಕ್ಕೆ ಸಂಚಾರವನ್ನು ನಿಷೇಧಿಸಲಾಗಿತ್ತು. ರಿಪೇರಿ ಕಾರ್ಯ ಕೈಗೊಂಡ ಬಳಿಕ ಖಾಸಗಿ ಸಂಸ್ಥೆಯಿಂದ ಟನಲ್ ತಪಾಸಣೆ ಕೈಗೊಂಡು ದೃಢತೆ ಪ್ರಮಾಣಪತ್ರ ಸಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಲಾಗಿತ್ತು.
ಫಿಟ್ನೆಸ್ ಪ್ರಮಾಣ ಪತ್ರ ಸಲ್ಲಿಕೆ ಆಗಿಲ್ಲ
ಎರಡು ತಿಂಗಳು ಕಳೆದರೂ ಸಹ ಎನ್‌ಎಚ್ಎಐ ಅಥವಾ ಐಆರ್‌ಬಿ ಕಂಪೆನಿ ಫಿಟ್ನೆಸ್ ಪ್ರಮಾಣಪತ್ರವನ್ನು (Fitness Certificate_ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಟನಲ್ ಅನ್ನು ಸಂಚಾರಕ್ಕೆ ಮುಕ್ತಗೊಳಿಸಿರಲಿಲ್ಲ. ಟನಲ್ ಸಂಚಾರಕ್ಕೆ ಆಗ್ರಹಿಸಿ ಸೆಪ್ಟೆಂಬರ್ 29ರಂದು ಎಂಎಲ್‌ಸಿ ಗಣಪತಿ ಉಳ್ವೇಕರ್ ನೇತೃತ್ವದಲ್ಲಿ ಸಾರ್ವಜನಿಕರು ಬೃಹತ್ ಪ್ರತಿಭಟನೆ ನಡೆಸಿದ್ದು, ಇದಾದ ಬಳಿಕ ಅ.2 ರಂದು ತಾಂತ್ರಿಕ ತಪಾಸಣೆಯನ್ನು (Technical Inspection) ತಜ್ಞರಿಂದ ಮಾಡಿಸಿ ಸಂಚಾರಕ್ಕೆ ಅವಕಾಶ ನೀಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದರು. ಕಾರಣಾಂತರಗಳಿಂದ ತಪಾಸಣೆಯನ್ನು ಅ.8ರಂದು ನಿಗದಿಪಡಿಸಲಾಗಿದೆ.
ಸವಾರರ ಅನುಕೂಲಕ್ಕಾಗಿ ಷರತ್ತುಬದ್ಧ ಅನುಮತಿ
ತಪಾಸಣೆ ಕಾರ್ಯದ ವಿಳಂಬದಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಹಾಗೂ ವಾಹನ ಸವಾರರ ಅನುಕೂಲಕ್ಕಾಗಿ, ಕಾರವಾರದಿಂದ ಬಿಣಗಾಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಮನವಿ ಮಾಡಿದ್ದರು. ಈ ಹಿನ್ನೆಲೆ ಟನಲ್ ಸಂಚಾರದ ನಿರ್ಬಂಧ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ.8ರ ವರೆಗೆ ಸುರಂಗ 1 ಮತ್ತು 2ರಲ್ಲಿ ಉಂಟಾಗುವ ಯಾವುದೇ ಅನಾಹುತಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರೇ ಜವಾಬ್ದಾರರಾಗಿದ್ದಾರೆ. ಅ.8 ರಂದು ತಪಾಸಣೆ ಕೈಗೊಳ್ಳುವ ಜವಾಬ್ದಾರಿ ಯೋಜನಾ ನಿರ್ದೇಶಕರದ್ದಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಯಾವುದೇ ಪತ್ರ ವ್ಯವಹಾರ ನಡೆಸಲಾಗುವುದಿಲ್ಲ ಎನ್ನುವ ನಿಬಂಧನೆಯನ್ನು ಹಾಕಿ ಜಿಲ್ಲಾಡಳಿತ ಆದೇಶ ಹೊರಡಿಸಿ, ಟನಲ್ ಸಂಚಾರ ಆರಂಭಕ್ಕೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: BK Hariprasad : ಹೈಕಮಾಂಡ್‌ಗೆ ನನ್ನ ಮೇಲೆ ಲವ್ ಜಾಸ್ತಿ; ನಾನೇನು ಮಾತನಾಡಲ್ಲ, ಮಾತನಾಡಿದ್ರೆ ನೋಟಿಸ್ ಕೊಡ್ತಾರೆ!
ಎರಡೂ ಬದಿ ಟನಲ್ ಮಾರ್ಗ ಸಂಚಾರ ಮುಕ್ತ
ಟನಲ್ ಸಂಚಾರ ಆರಂಭಕ್ಕೆ ಸೂಚನೆ ನೀಡಿದ ಬೆನ್ನಲ್ಲೇ ಕಾರವಾರ ಸಂಚಾರಿ ಠಾಣಾ ಪೊಲೀಸರು ಟನಲ್‌ಗೆ ಅಡ್ಡಲಾಗಿ ಹಾಕಲಾಗಿದ್ದ ಕಲ್ಲುಗಳನ್ನು ಐಆರ್‌ಬಿಯ ಜೆಸಿಬಿ ಮೂಲಕ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಬೆಳಗಿನ ವೇಳೆ ಒಂದು ಬದಿ ಟನಲ್‌ನಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಎರಡೂ ಟನಲ್‌ಗಳೂ ಸಹ ಸಂಚಾರಕ್ಕೆ ಮುಕ್ತವಾಗುವ ಮೂಲಕ ಸಾಕಷ್ಟು ದಿನಗಳಿಂದ ಹೋರಾಟ, ರಾಜಕೀಯ ಆರೋಪ, ಪ್ರತ್ಯಾರೋಪಗಳಿಗೂ ಕಾರಣವಾಗಿದ್ದ ಟನಲ್ ಸಂಚಾರ ನಿರ್ಬಂಧ ಪ್ರಕರಣ ಸುಖಾಂತ್ಯ ಕಂಡಂತಾಗಿದೆ.
ಉಡುಪಿ
Karnataka Weather Forecast : ಕರಾವಳಿಯಲ್ಲಿ ನಾನ್ ಸ್ಟಾಪ್ ಮಳೆ; ಬೆಂಗಳೂರಲ್ಲಿ ಫುಲ್ ಸ್ಟಾಪ್
Karnataka Weather Forecast : ದಕ್ಷಿಣ ಒಳನಾಡಲ್ಲಿ ಮಳೆ ದುರ್ಬಲವಾಗಿದ್ದು, ಉತ್ತರ ಒಳನಾಡು ಹಾಗೂ ಕರಾವಳಿ, ಮಲೆನಾಡಲ್ಲಿ (Rain News) ಸಾಮಾನ್ಯವಾಗಿರಲಿದೆ.
ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Rain News) ತಗ್ಗಿದೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸಾಧಾರಣವಾಗಿದೆ. ದಕ್ಷಿಣ ಒಳನಾಡಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ.
ಬ್ರೇಕ್ ಹಾಕಿದ ಮಳೆರಾಯ, ಶುಷ್ಕ ವಾತಾವರಣ
ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಬಹುದು. ಉಳಿದ ಪ್ರದೇಶಗಳಲ್ಲಿ ಶುಷ್ಕ ವಾತಾವರಣದಿಂದ ಕೂಡಿರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಮತ್ತು ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ಮಲೆನಾಡಲ್ಲಿ ಚದುರಿದ ಮಳೆ
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆ ಸುರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 30 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 19 ಡಿ.ಸೆ
ಕಾರವಾರ: 33 ಡಿ.ಸೆ – 23 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ದೇಶ21 hours ago
Viral Video: ಫ್ರಿಡ್ಜ್ ಡೋರ್ ತೆಗೆಯಲು ಹೋದ 4 ವರ್ಷದ ಬಾಲಕಿಗೆ ಕರೆಂಟ್ ಶಾಕ್, ಸ್ಥಳದಲ್ಲೇ ಸಾವು
-
ಪ್ರಮುಖ ಸುದ್ದಿ16 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ಟಾಪ್ 10 ನ್ಯೂಸ್23 hours ago
VISTARA TOP 10 NEWS : ನಮಗೆ ರಕ್ಷಣೆ ಇಲ್ಲವೇ ಎಂದ ಹಿಂದೂಗಳು, ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಶಾಮನೂರು ಇತರ ದಿನದ ಪ್ರಮುಖ ಸುದ್ದಿಗಳು
-
ದೇಶ22 hours ago
K Annamalai: ಲೇಡಿ ರಿಪೋರ್ಟರ್ ಜತೆ ಅಣ್ಣಾಮಲೈ ಕಿರಿಕ್! ಆಕೆ ಕೇಳಿದ ಪ್ರಶ್ನೆಗೆ ರೇಗಿದ ಬಿಜೆಪಿ ನಾಯಕ
-
ಕ್ರಿಕೆಟ್24 hours ago
ICC World Cup 2023 : ಭಾರತದ ಮಾಜಿ ಆಟಗಾರ ಅಫಘಾನಿಸ್ತಾನ ತಂಡದ ಮೆಂಟರ್
-
ದೇಶ11 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
ಕಿರುತೆರೆ6 hours ago
BBK Season 10 : ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?
-
ಕ್ರೈಂ12 hours ago
4 ವರ್ಷದಿಂದ ಇಬ್ಬರು ಪುತ್ರಿಯರ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿಯ ಬಂಧನ; ಇವನೆಂಥಾ ತಂದೆ?