Site icon Vistara News

Bike Accident: ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿಯಾಗಿ ಅಕ್ಕ-ತಮ್ಮ ಸಾವು

roda Accident

ಶಿರಾ(ತುಮಕೂರು): ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿಯಾಗಿ ಅಕ್ಕ-ತಮ್ಮ ಮೃತಪಟ್ಟಿರುವ ಘಟನೆ (Bike Accident) ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗ್ರಾಮದ ಸಮೀಪ ಶನಿವಾರ ನಡೆದಿದೆ. ತುಮಕೂರಿನ ಅಂತರಸನಹಳ್ಳಿ ಮೂಲದ ಅಕ್ಕ-ತಮ್ಮ ಮೃತರು.

ಇವರು ದೊಡ್ಡ ಅಲದ ಮರದ ಮೂಲಕ ಬಡವನಹಳ್ಳಿ ರಸ್ತೆಯಲ್ಲಿ ಆಂಧ್ರಪ್ರದೇಶದ ಅಗಳಿಗೆ ಮದುವೆಗೆ ತೆರಳುತ್ತಿದ್ದಾಗ ಎದುರಿಗೆ ಬಂದ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿಹೊಡೆದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಅವರು ಮೃತಪಟ್ಟಿದ್ದಾರೆ.

ಅಪರಿಚಿತ ವಾಹನ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಅಪಘಾತ ಸಂಭವಿಸಿದೆ. ಘಟನೆ ನಡೆದ ಬಳಿಕ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಳ್ಳಂಬೆಳ್ಖ
ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Lakshmi Hebbalkar : ಹೆದ್ದಾರಿಯಲ್ಲಿ ಅಪಘಾತವಾಗಿ ನರಳುತ್ತಿದ್ದ ವಿದ್ಯಾರ್ಥಿ ನೆರವಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ರಾಯಚೂರಿನಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್‌ ಸವಾರ ಸಾವು

ರಾಯಚೂರು: ನಗರದ ಗದ್ವಾಲ್ ರಸ್ತೆಯಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಕುಲಸಂಬಿ ಕಾಲೋನಿಯ ಬಸವರಾಜ್ (45) ಮೃತರು. ಟಿಪ್ಪರ್ ಡಿಕ್ಕಿಯಾಗಿದ್ದರಿಂದ ತೀವ್ರ ರಕ್ತಸ್ರಾವವಾಗಿ ಬೈಕ್ ಸವಾರ ಮೃತಪಟ್ಟಿದ್ದು, ರಾಯಚೂರು ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಾ ಬಳಿ ಹೆದ್ದಾರಿಯಲ್ಲಿ ಭೀಕರ ಅಪಘಾತ; ನಿವೃತ್ತರಾಗಿ ಮನೆಗೆ ತೆರಳುತ್ತಿದ್ದ ಇಬ್ಬರು ಸಾವು

sira accident two death

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ (highway accident) ಇಂದು ಬೆಳಗಿನ ಜಾವ ನಡೆದಿರುವ ಸರಣಿ ಅಪಘಾತದಲ್ಲಿ (Road accident) ಇಬ್ಬರು ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಇಂದು ಬೆಳಗಿನ ಜಾವ ಸರಣಿ ಅಪಘಾತ ಸಂಭವಿಸಿದೆ. ಟಾಟಾ ಏಸ್, ಕ್ಯಾಂಟರ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದೆ. ಟಾಟಾ ಏಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತ ದುರ್ದೈವಿಗಳು ಕಲ್ಬುರ್ಗಿ ಜಿಲ್ಲೆ ಅರಳಗುಡಿ ಗ್ರಾಮದ ಭೀಮಾಬಾಯಿ (70), ಮಹಾಂತಪ್ಪ (50) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವಾಸವಿದ್ದ ಇವರ ಕುಟುಂಬ ನಿವೃತ್ತಿಯ ಬಳಿಕ ಸ್ವಗ್ರಾಮಕ್ಕೆ ಮನೆಯ ಸಾಮಾನು ಸಾಗಿಸುವ ವೇಳೆ ಅಪಘಾತ ಸಂಭವಿಸಿದೆ.

ಇದನ್ನೂ ಓದಿ | Children death : ಹೆಂಡತಿ ಬಿಟ್ಟು ಹೋದ ಬೇಸರ; 3 ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನ; ಇಬ್ಬರು ಮಕ್ಕಳು ಸಾವು

ಚಿಕ್ಕನಹಳ್ಳಿ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಉಂಟಾಗಿದ್ದು, ಈ ವೇಳೆ ಮುಂದೆ ಹೋಗುತ್ತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ನಂತರ ಹಿಂಬದಿಯಿಂದ ಟಾಟಾ ಏಸ್‌ಗೆ ಖಾಸಗಿ ಬಸ್ ಬಂದು ಡಿಕ್ಕಿಯಾಗಿದೆ. ಏಸ್‌ನಲ್ಲಿದ್ದವರು ಕ್ಯಾಂಟರ್‌ ಹಾಗೂ ಬಸ್‌ ನಡುವೆ ಸಿಲುಕಿ ಅಪ್ಪಚ್ಚಿಯಾಗಿದ್ದಾರೆ. ಗಾಯಾಳುಗಳಿಗೆ ಕಳ್ಳಂಬೆಳ್ಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅಪಘಾತ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲ ಸಮಯ ಸಂಚಾರ ವ್ಯತ್ಯಯ ಉಂಟಾಗಿದ್ದು, ಕಳ್ಳಂಬೆಳ್ಳ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ.

Exit mobile version