ಕರ್ನಾಟಕ
Students Drowned : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು
ಕೋಲಾರದ ಕೆಜಿಎಫ್ ಸಮೀಪದ ಕೆರೆಯೊಂದರಲ್ಲಿ ಆಟವಾಡಲು ಹೋದ ಇಬ್ಬರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಕೋಲಾರ: ಕೆಜಿಎಫ್ ತಾಲೂಕಿನ (KGF taluk) ಸೂರಹಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ (Student drowned). ಕಾರ್ತಿಕ್ (14), ಲೋಕೇಶ್ವರಿ (11) ನೀರು ಪಾಲಾದ ವಿದ್ಯಾರ್ಥಿಗಳು.
ಇವರಿಬ್ಬರೂ ಸ್ನೇಹಿತರ ಜತೆಗೂ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಮುಳುಗಿದ್ದಾರೆ ಎನ್ನಲಾಗಿದೆ. ಅಗ್ನಿ ಶಾಮಕ ದಳ ಮತ್ತು ಪೊಲೀಸರ ಸಹಕಾರದಿಂದ ವಿದ್ಯಾರ್ಥಿಗಳ ಮೃತ ದೇಹಗಳನ್ನು ಹೊರತೆಗೆಯಲಾಗಿದೆ
ಮೃತ ದೇಹಗಳನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಂಡರ್ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ: ಸ್ನೇಹಿತರೊಂದಿಗೆ ತಲಕಾಡಿಗೆ ಹೋಗಿದ್ದ ಬಾಲಕರಿಬ್ಬರು ನೀರುಪಾಲು; ಆಳವಿದ್ದ ಕಡೆ ಈಜಿದ್ದೇ ಜೀವಕ್ಕೆ ಮುಳುವಾಯ್ತು
ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು
ಹಾಸನ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ (Road accident) ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಗ್ರಾಮದ ಬಳಿ ನಡೆದ ಘಟನೆಯಲ್ಲಿ ಪುಟ್ಟರಾಜು (65), ಭಾರತಿ (54) ಮೃತಪಟ್ಟಿದ್ದಾರೆ.
ಮೃತ ದಂಪತಿ ಬೇಲೂರು ತಾಲೂಕಿನ ಮೂಳೆನಹಳ್ಳಿ ಗ್ರಾಮದವರಾಗಿದ್ದು, ಇವರು ಬೈಕ್‌ನಲ್ಲಿ ತೆರಳುವಾಗ ನಾಯಿ ಅಡ್ಡ ಬಂತೆನ್ನಲಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ಲಾರಿಗೆ ಡಿಕ್ಕಿ ಹೊಡೆದಿದೆ.
ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ
Drowned in Pond: ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು
High temperature: ಬಿಸಿಲಿನ ಝಳ ಸಹಿಸಲಾಗದೆ ಕೆರೆಗೆ ಸ್ನಾನಕ್ಕೆ ಹೋಗಿದ್ದವರಲ್ಲಿ ಒಬ್ಬ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.
ಕೋಲಾರ : ರಾಜ್ಯಾದ್ಯಂತ ಸೆಕೆ ವಿಪರೀತವಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಕೆಲವರು ನೀರಿನಲ್ಲಿ ಈಜಲೂ ಹೋಗುವುದುಂಟು. ಆದರೆ, ಇಲ್ಲೊಬ್ಬರು ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು (Drowned in Pond) ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.
ಕೋಲಾರದ (Kolar news) ಗಾಂಧಿ ನಗರದ ಮೂವರು ಯುವಕರು ಮಂಗಸಂದ್ರ-ಮಾಲೂರು ಮಾರ್ಗದ ರಸ್ತೆ ಬದಿಯ ಕೆರೆಯಲ್ಲಿ ಸ್ನಾನಕ್ಕೆಂದು ಹೋಗಿದ್ದವರು. ಮೂವರಲ್ಲಿ ಇಬ್ಬರಿಗೆ ಈಜು ಬರುತ್ತಿದ್ದರೆ ಒಬ್ಬನಿಗೆ ಬರುತ್ತಿರಲಿಲ್ಲ.
ಕೆರೆಯ ನೀರಿನಲ್ಲಿ ಸ್ನಾನ ಮಾಡುತ್ತಾ ಖುಷಿಪಡುತ್ತಿದ್ದಾಗ ಪ್ರಭಾಸ್ ಎಂಬ ಯುವಕ ನೀರಿನಲ್ಲಿ ಮುಳುಗಿದ್ದಾನೆ. ಆತನಿಗೆ ಈಜು ಬಾರದೆ ಮುಳುಗಿದ್ದಾನೆ. ಉಳಿದ ಇಬ್ಬರು ಆತನ ರಕ್ಷಣೆಗೆ ಪ್ರಯತ್ನ ಮಾಡಿದರೂ ಫಲ ನೀಡಲಿಲ್ಲ.
ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಎಸ್ ಎನ್ ಆರ್ ಆಸ್ಪತ್ರಗೆ ರವಾನಿಸಲಾಗಿದೆ.
ಸಿಗಂದೂರಿಗೆ ಲಾಂಚ್ ಸಂಚಾರ ಸ್ಥಗಿತ
ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ನೀರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಹಲ್ಕೆ-ಮುಪ್ಪಾನೆ ಲಾಂಚ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕಾರ್ಗಲ್, ಜೋಗದಿಂದ ಶ್ರೀ ಕ್ಷೇತ್ರ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಲಾಂಚ್ ಇದಾಗಿದೆ.
ಹಿನ್ನೀರಿನಲ್ಲಿ ವಾಡಿಕೆಗಿಂತಲೂ ನೀರು ಕಡಿಮೆಯಾಗಿದೆ. ಹೀಗಾಗಿ, ಲಾಂಚ್ ಸಂಚಾರಕ್ಕೆ ಕಲ್ಲು, ಮರದ ದಿಮ್ಮಿ, ಮರಳಿನ ದಿಬ್ಬ ಅಡ್ಡಿಯಾಗಿದೆ. ಒಂದೊಮ್ಮೆ ಕಡಿಮೆ ನೀರಿನಲ್ಲಿ ಲಾಂಚ್ ಓಡಾಡಿದರೆ ಅಪಘಾತಕ್ಕೀಡಾಗುವ ಆತಂಕ ಎದುರಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಲಾಂಚ್ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಿಗರು ವಾಹನಿಗರಿಗೆ 60 ಕಿ.ಮೀ. ದೂರ ಸುತ್ತು ಬಳಸಿ ದೇವಸ್ಥಾನಕ್ಕೆ ಹೋಗಬೇಕಾಗಿದೆ.
ಇದನ್ನೂ ಓದಿ: Students Drowned : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು
ಕರ್ನಾಟಕ
Shivamogga News: ಶಿವಮೊಗ್ಗ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ: ಸಂಸದ ಬಿ.ವೈ. ರಾಘವೇಂದ್ರ
Shivamogga News: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಕೇಂದ್ರ ಸರ್ಕಾರವು ಅನುಮತಿ ನೀಡಿದ್ದು, ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಯೋಜನೆಯನ್ನು ಕಾರ್ಯಗತಗೊಳಿಸಿ, ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಸೂಚನೆ ನೀಡಿದ್ದಾರೆ.
ಶಿವಮೊಗ್ಗ: ಕೇಂದ್ರ ಸರ್ಕಾರವು (Central government) ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ (Mobile towers) ಸ್ಥಾಪನೆಗೆ ಅನುಮತಿ ನೀಡಿದ್ದು, ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಯೋಜನೆಯನ್ನು ಕಾರ್ಯಗತಗೊಳಿಸಿ, ಯಶಸ್ವಿಗೊಳಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಸೂಚನೆ ನೀಡಿದರು.
ಶಿವಮೊಗ್ಗ ವಲಯದ ಬಿಎಸ್ಎನ್ಎಲ್‌ನ ಹಿರಿಯ ಅಧಿಕಾರಿಗಳೊಂದಿಗೆ ಈ ಕುರಿತು ಸಭೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ, ಎಲ್ಲ ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಕಾರ್ಯಗತಗೊಳಿಸಿ, ಯಶಸ್ವಿಗೊಳಿಸಿ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.
ಈಗಾಗಲೇ ಜಿಲ್ಲೆಯ ಹಲವು ಗ್ರಾಮಾಂತರ ಪ್ರದೇಶಗಳಲ್ಲಿ ಬಿ.ಎಸ್.ಎನ್.ಎಲ್. ಸಂಪರ್ಕ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ನೆಟ್‌ವರ್ಕ್ ಇಲ್ಲದೇ ಜನಸಾಮಾನ್ಯರಿಗೆ ಆನ್‌ಲೈನ್ ಮೂಲಕ ಹಣದ ವ್ಯವಹಾರ ಮಾಡಲೂ ಸಹ ತೊಂದರೆಯಾಗುತ್ತಿರುವುದರಿಂದ, ಹಾಲಿ ಇರುವ ಟವರ್‌ಗಳಲ್ಲಿಯೂ ಸಹ ಉತ್ತಮ ರೀತಿಯಲ್ಲಿ ನೆಟ್ವರ್ಕ್ ಸಂಪರ್ಕ ದೊರೆಯುವಂತೆ ಮಾಡಲು ತೀವ್ರ ಗಮನಹರಿಸುವಂತೆ ಹಾಗೂ ಗ್ರಾಮಸ್ಥರಿಂದ ಆಕ್ಷೇಪಣೆ ಬಾರದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಬೇಸಿಗೆ ರಜಾ ಇದ್ದರೂ ಶಾಲೆಗೆ ಹೋಗಿ ನಿಗೂಢವಾಗಿ ಮೃತಪಟ್ಟ 10ನೇ ತರಗತಿ ವಿದ್ಯಾರ್ಥಿನಿ
ಒಟ್ಟು 225 ಮೊಬೈಲ್ ಟವರ್‌ಗಳ ಪೈಕಿ, ಸಾಗರ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್‌ಗಳು ಮಂಜೂರಾಗಿವೆ. ಆರಂಭಿಕ ಮೂರು ಹಂತಗಳಲ್ಲಿ ಶಿವಮೊಗ್ಗ ಜಿಲ್ಲೆಯ 112 ಹಾಗೂ ಬೈಂದೂರು ಕ್ಷೇತ್ರದಲ್ಲಿ 25 ಟವರ್ ಸ್ಥಾಪನೆಗೆ ಅನುಮತಿ ಲಭ್ಯವಾಗಿದ್ದು, ಬಿ.ಎಸ್.ಎನ್.ಎಲ್. ಸಂಸ್ಥೆಯು ಟವರ್ ಸ್ಥಾಪನೆಗೆ ಸೂಕ್ತ ಜಾಗಗಳನ್ನು ಗುರುತಿಸಿದೆ. ಈ ಸಂಬಂಧ ಭೂಮಿ ಹಸ್ತಾಂತರದ ಪ್ರಕ್ರಿಯೆ ಆರಂಭವಾಗಬೇಕಿದೆ. ತಲಾ ಒಂದು ಟವರ್‌ಗೆ ಅಂದಾಜು 75 ಲಕ್ಷ ರೂ.ಗಳಿಂದ 1 ಕೋಟಿವರೆಗೂ ಖರ್ಚಾಗುವ ಸಾಧ್ಯತೆ ಇದ್ದು, ಒಟ್ಟಾರೆ 200 ಕೋಟಿಗೂ ಅಧಿಕ ಮೊತ್ತ ಈ ಕಾಮಗಾರಿಗೆ ಖರ್ಚಾಗಲಿದೆ ಎಂದು ತಿಳಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ದೂರ ಸಂಪರ್ಕ ವ್ಯವಸ್ಥೆಯಲ್ಲಿನ ಅಭಿವೃದ್ಧಿ ಮತ್ತು ಸುಧಾರಣೆ ದೃಷ್ಟಿಯಿಂದ ಅದರಲ್ಲೂ ದೂರಸಂಪರ್ಕ ವ್ಯವಸ್ಥೆಯಿಂದ ವಂಚಿತವಾದ ನೂರಾರು ಕುಗ್ರಾಮಗಳನ್ನು ಗುರುತಿಸಿ, ಆ ಗ್ರಾಮಗಳಿಗೆ ತುರ್ತಾಗಿ ದೂರಸಂಪರ್ಕ ವ್ಯವಸ್ಥೆಯನ್ನು ಮತ್ತು ಮೊಬೈಲ್ ಟವರ್ ಸ್ಥಾಪನೆಗೆ ಕಳೆದ 3-4 ವರ್ಷಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿ.ಎಸ್.ಎನ್.ಎಲ್. ಜೊತೆಯಲ್ಲಿ ಖಾಸಗಿ ಕಂಪನಿಗಳಾದ ಜಿಯೋ ಮತ್ತು ಏರ್‌ಟೆಲ್ ಸಂಸ್ಥೆಗಳೊಂದಿಗೆ ಕ್ಷೇತ್ರದಲ್ಲಿನ ನೆಟ್‌ವರ್ಕ್ ವಂಚಿತ ಪ್ರದೇಶಗಳಿಗೆ ಮೊಬೈಲ್ ಟವರ್ ಒದಗಿಸುವ ನಿಟ್ಟಿನಲ್ಲಿ ಹಲವಾರು ಬಾರಿ ಸಭೆ ನಡೆಸಿದ್ದರು.
ಇದನ್ನೂ ಓದಿ: Ashish Vidyarthi: ಯಾವುದೇ ವಯಸ್ಸಲ್ಲಾದರೂ ಸಂತೋಷವಾಗಿರಬಹುದು; ಮದುವೆ ಬಗ್ಗೆ ಆಶಿಶ್ ವಿದ್ಯಾರ್ಥಿ ಹೇಳಿದ್ದೇನು?
ಕೆಲವು ಕಡೆಗಳಲ್ಲಿ ಖಾಸಗಿ ಕಂಪನಿಗಳಾದ ಜಿಯೋ ಮತ್ತು ಏರ್ಟೆಲ್ ಕಂಪನಿಗಳು ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿದರೂ ಸಹ ಕೆಲವು ಕುಗ್ರಾಮಗಳಲ್ಲಿ ಜನವಸತಿ ಕಡಿಮೆ ಇರುವ ಕಾರಣದಿಂದಾಗಿ ಈ ಖಾಸಗಿ ಕಂಪನಿಗಳು ಟವರ್ ನಿರ್ಮಾಣದಲ್ಲಿ ಆಸಕ್ತಿ ತೋರಿರಲಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದಲೇ ಮೊಬೈಲ್ ಟವರ್ ನಿರ್ಮಾಣವನ್ನು ಕೈಗೊಳ್ಳಲು ಕೇಂದ್ರದ ದೂರಸಂಪರ್ಕ ಸಚಿವ ಅಶ್ವಿನಿ ವೃಷ್ಣವ್ ಅವರಿಗೆ ಕಳೆದ ಆ.2ರಂದು 96 ಸ್ಥಳಗಳಲ್ಲಿ ಟವರ್ ನಿರ್ಮಾಣಕ್ಕೆ ಮನವಿ ಸಲ್ಲಿಸಲಾಗಿತ್ತು. ನಂತರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮೊಬೈಲ್ ನೆಟ್ ವರ್ಕ್ ಇಲ್ಲದ ಸ್ಥಳಗಳ ವಿವರಗಳನ್ನೂ ಸಹ ಕೇಂದ್ರ ದೂರಸಂಪರ್ಕ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ನನ್ನ ಸತತ ಪ್ರಯತ್ನಕ್ಕೆ ಮನ್ನಣೆ ನೀಡಿದ ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣನ್ ಅವರು ಶಿವಮೊಗ್ಗ ಟೆಲಿಕಾಂ ಜಿಲ್ಲೆಗೆ 4ಜಿ ಸ್ಯಾಚುರೇಷನ್ ಯೋಜನೆಯಡಿಯಲ್ಲಿ 198 ಹಾಗೂ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ 27 ಹೊಸ 4G ಟವರ್‌ಗಳಿಗೆ ಒಟ್ಟಾರೆ 225 ಟವರ್ ಗಳಿಗೆ ಮಂಜೂರಾತಿ ನೀಡಿದ್ದಾರೆ ಎಂದು ಸಂಸದರು ತಿಳಿಸಿದರು.
ಇದನ್ನೂ ಓದಿ: NIA Raid: ಮಧ್ಯಪ್ರದೇಶದಲ್ಲಿ ಐಸಿಸ್ ಉಗ್ರರ ಜಾಲ ಬಯಲು; ಮಸೀದಿಗಳಲ್ಲೇ ಸಂಚು ರೂಪಿಸುತ್ತಿದ್ದ ಮೂವರ ಬಂಧನ
ಈ ಸಂದರ್ಭದಲ್ಲಿ ಡಿ.ಜಿ.ಎಂ. (ಆಪರೇಷನ್) ವೆಂಕಟೇಶ್, ಸಬ್ ಡಿವಿಜನಲ್ ಎಂಜಿನಿಯರ್‌ಗಳಾದ ರಾಜು, ಜಯಕುಮಾರ್, ಎ.ಜಿ.ಎಂ. (ಆಪರೇಷನ್) ಎನ್. ಬಿ. ಹೆಬ್ಬಾಳ್, ಜೆ.ಟಿ.ಒ. ರಾಘವೇಂದ್ರ ಪಾಲ್ಗೊಂಡಿದ್ದರು.
ಕರ್ನಾಟಕ
Challakere News: ಶಿಥಿಲಾವಸ್ಥೆಯಲ್ಲಿ ದೊಡ್ಡೇರಿ ಗ್ರಾಮದ ಬಸ್ ತಂಗುದಾಣ; ದುರಸ್ತಿಗೆ ಬೇಕಿದೆ ಅನುದಾನ
Challakere News: ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಬಸ್ ತಂಗುದಾಣ ಶಿಥಿಲಾವಸ್ಥೆಯಲ್ಲಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಇದರಿಂದಾಗಿ ಪ್ರಯಾಣಿಕರು ನಿತ್ಯ ಬಸ್ಸಿಗಾಗಿ ಸುಡು ಬಿಸಿಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಎದುರಾಗಿದೆ.
ಚಳ್ಳಕೆರೆ: ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಬಸ್ ತಂಗುದಾಣ (Bus stand) ಶಿಥಿಲಾವಸ್ಥೆಯಲ್ಲಿದ್ದು (Dilapidated condition) ಪ್ರಯಾಣಿಕರಿಗೆ ಇದ್ದೂ ಇಲ್ಲದಂತಾಗಿದೆ. ಇದರಿಂದಾಗಿ ನಿತ್ಯ ಬಸ್ಸಿಗಾಗಿ ಸುಡು ಬಿಸಿಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಎದುರಾಗಿದೆ.
ಗ್ರಾಮದಲ್ಲಿರುವ ಈ ಬಸ್ ತಂಗುದಾಣ ಬೀಳುವ ಹಂತದಲ್ಲಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಬಸ್ ಬರುವ ತನಕವೂ ಮಹಿಳೆಯರು, ವಿದ್ಯಾರ್ಥಿಗಳು, ವೃದ್ಧರು ಜೀವ ಕೈಯಲ್ಲಿ ಹಿಡಿದು ಕುಳಿತುಕೊಳ್ಳುವ ಅನಿವಾರ್ಯತೆ ಎದುರಾಗಿದೆ.
ಪಾವಗಡ ಕಡೆಗೆ ಹೋಗುವಾಗ ಸರ್ಕಾರಿ, ಖಾಸಗಿ ಬಸ್‌ಗಳು, ಆಟೋಗಳಿಗಾಗಿ ಇಲ್ಲಿ ಕಾಯುವ ಪ್ರಯಾಣಿಕರಿಗೆ ಬಿಸಿಲಿಗೆ ಸೂಕ್ತ ರಕ್ಷಣೆ ಇಲ್ಲದಂತೆ ಆಗಿದೆ. ಅಲ್ಲದೆ, ಮಳೆ ಬಂದರೂ ಸುರಕ್ಷತೆ ಇಲ್ಲವಾಗಿದೆ. ತುಂಬಾ ಹಳೆಯದಾಗಿರುವ ಈ ಬಸ್ ನಿಲ್ದಾಣದ ಗೋಡೆಗಳು ಬಿರುಕು ಬಿಟ್ಟಿದ್ದು, ಯಾವುದೇ ವೇಳೆ ಬೀಳುವ ಅಪಾಯ ಎದುರಾಗಿದೆ.
ಇದನ್ನೂ ಒದಿ: Congress Guarantee: ಗಿಫ್ಟ್ ಕೂಪನ್‌ನಿಂದ ರಾಮನಗರದಲ್ಲಿ ಸೋಲು; ಜೆಡಿಎಸ್ ಆರೋಪಕ್ಕೆ ಬಿಜೆಪಿ ಸಾಕ್ಷಿ!
ಇದರಿಂದ ತಂಗುದಾಣದ ಒಳಗಡೆ ಪ್ರವೇಶಿಸಲು ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದಾರೆ. ಆದರೆ, ತಾಲೂಕು ಆಡಳಿತವಾಗಲಿ ಅಥವಾ ಗ್ರಾಮ ಪಂಚಾಯಿತಿಯವರು ಸಹ ಈ ಸಮಸ್ಯೆ ಪರಿಹಾರ ಕಲ್ಪಿಸುವ ಗೋಜಿಗೆ ಹೋಗಿಲ್ಲ.
ಗ್ರಾಮದಿಂದ ಪ್ರತಿದಿನ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು, ಗ್ರಾಮಸ್ಥರು ತಮ್ಮ ದಿನನಿತ್ಯದ ಕೆಲಸಗಳಿಗೆ ತಾಲೂಕು ಕೇಂದ್ರಕ್ಕೆ ಹೋಗಬೇಕು ಎಂದರೆ ಅಗತ್ಯ ಬಸ್ಸಿಗಾಗಿ ಕಾಯಲು ಸುಸಜ್ಜಿತ ತಂಗುದಾಣದ ಅವಶ್ಯಕತೆ ಇದೆ. ಆದರೆ, ಈ ಬಗ್ಗೆ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ನಿರ್ವಹಣೆ ಕೊರತೆ
ತಾಲೂಕಿನ ಹಲವು ಗ್ರಾಮೀಣ ಪ್ರದೇಶದ ಅನೇಕ ಮುಖ್ಯರಸ್ತೆಗಳಲ್ಲಿ ಬಸ್ ತಂಗುದಾಣ ಇಲ್ಲದೆ ಜನತೆ ಬಿರುಬಿಸಿಲಿನಲ್ಲಿ ಬಸ್ಸಿಗಾಗಿ ಕಾದು ನಿಂತು ಹೈರಾಣಾಗುತ್ತಿದ್ದಾರೆ, ಇರುವ ಬಸ್ ತಂಗುದಾಣಗಳು ನಿರ್ವಹಣೆ ಇಲ್ಲದೆ ಬೀಳುವ ಸ್ಥಿತಿಯಲ್ಲಿವೆ. ಕೆಲವು ಪಡ್ಡೆ ಹುಡುಗರ ಅಡ್ಡೆಗಳಾಗುತ್ತಿವೆ.
ಇದನ್ನೂ ಓದಿ: NIA Raid: ಮಧ್ಯಪ್ರದೇಶದಲ್ಲಿ ಐಸಿಸ್ ಉಗ್ರರ ಜಾಲ ಬಯಲು; ಮಸೀದಿಗಳಲ್ಲೇ ಸಂಚು ರೂಪಿಸುತ್ತಿದ್ದ ಮೂವರ ಬಂಧನ
ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ಅನುಕೂಲ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.
ಕರ್ನಾಟಕ
Vijayanagara News: ಜಿ-20 ಶೃಂಗಸಭೆಯ ಪೂರ್ವಸಿದ್ಧತಾ ಸಭೆ; ಸಂಸ್ಕೃತಿಯ ಅನಾವರಣಕ್ಕೆ ತೀರ್ಮಾನ
G-20 Summit: ಜುಲೈನಲ್ಲಿ ಹಂಪಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆ ಕುರಿತು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಸಭೆಗೆ ಕೈಗೊಳ್ಳಬೇಕಾದ ಸೌಕರ್ಯ ಹಾಗೂ ಪ್ರವಾಸಿ ತಾಣಗಳ ಪರಿಚಯಕ್ಕೆ ಸಂಬಂಧಿಸಿದಂತೆ ಸಿದ್ಧತಾ ಕ್ರಮಗಳ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಸಂಸ್ಕೃತಿ ಸಚಿವಾಲಯದ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಹೊಸಪೇಟೆ: ಹಂಪಿಯಲ್ಲಿ ಜುಲೈ 13 ರಿಂದ 15 ರವರೆಗೆ 3 ದಿನಗಳ ಕಾಲ ನಡೆಯಲಿರುವ ಜಿ-20 ಶೃಂಗಸಭೆ ಪೂರ್ವ ಸಿದ್ಧತಾ ಸಭೆಗೆ (G-20 Summit) ಆಗಮಿಸುವ ಪ್ರತಿನಿಧಿಗಳಿಗೆ, ಸಭೆಗೆ ಅಗತ್ಯವುಳ್ಳ ಸಕಲ ಸೌಕರ್ಯ ಒದಗಿಸುವುದರ ಜತೆಗೆ ಐತಿಹಾಸಿಕ ಸಾಮ್ರಾಜ್ಯದ ಸಾಂಸ್ಕೃತಿಕ ಪರಂಪರೆಯ ಅನಾವರಣಗೊಳಿಸುವ (Unveil culture) ಕುರಿತು ಸಿದ್ಧತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ತಿಳಿಸಿದರು.
ಹಂಪಿ ಸಮೀಪದ ಕಮಲಾಪುರದ ಇವೋಲ್ವ್ ಬ್ಯಾಕ್ ಹೋಟೆಲ್‌ನಲ್ಲಿ ಶುಕ್ರವಾರ ನಡೆದ ಜಿ-20 ಶೃಂಗಸಭೆ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಸಭೆಯ ಕುರಿತು ಕೈಗೊಳ್ಳಬೇಕಾದ ಸೌಕರ್ಯ ಹಾಗೂ ಪ್ರವಾಸಿ ತಾಣಗಳ ಪರಿಚಯಕ್ಕೆ ಸಂಬಂಧಿಸಿದಂತೆ ಸಿದ್ಧತಾ ಕ್ರಮಗಳ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಸಂಸ್ಕೃತಿ ಸಚಿವಾಲಯದ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಇದನ್ನೂ ಓದಿ: Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಕೈಗೊಳ್ಳುವ ಕುರಿತು ಕೇಂದ್ರ ಸಚಿವಾಲಯದ ತಂಡದೊಂದಿಗೆ ಸಭೆ ನಡೆಸಲಾಗಿದೆ. ಹಂಪಿಯಲ್ಲಿ ಸಭೆ ನಡೆಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಹಾಗೂ ಸಭೆಯಲ್ಲಿ ಪಾಲ್ಗೊಳ್ಳುವ ಪ್ರತಿನಿಧಿಗಳಿಗೆ ವಿಶ್ವ ಪಾರಂಪರಿಕ ತಾಣಗಳನ್ನು ಪರಿಚಯಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ತಿಳಿಸಿದರು.
ಸಭೆಯಲ್ಲಿ ಪ್ರತಿನಿಧಿಗಳು ಸೇರಿ 200ಕ್ಕೂ ಹೆಚ್ಚು ಅಧಿಕಾರಿಗಳ ಮಟ್ಟದ ತಂಡ ಭೇಟಿ ನೀಡಲಿದೆ. ಇವರಿಗೆ ಸೌಲಭ್ಯ ಒದಗಿಸಲು ಕೇಂದ್ರ ಸಚಿವಾಲಯದ ಅಧಿಕಾರಿಗಳು ಸೂಕ್ತ ನಿರ್ದೇಶನ ನೀಡಿದ್ದು, ಅದಕ್ಕೆ ಪೂರಕವಾಗಿ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ವಿಶ್ವವಿಖ್ಯಾತ ಹಂಪಿಯಲ್ಲಿ ವಿಜಯ ವಿಠ್ಠಲ ದೇವಸ್ಥಾನ, ಪುರಂದರ ಮಂಟಪ ಹಾಗೂ ಎದುರು ಬಸವಣ್ಣ ವೇದಿಕೆಗಳ ಪರಿಶೀಲನೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಅಧಿಕಾರಿಗಳು ಸ್ಥಳ ವೀಕ್ಷಣೆ ಮಾಡಿದ್ದು, ಅಂತಿಮವಾಗಿ ಎರಡು ಸ್ಥಳಗಳು ನಿಗದಿಯಾಗಲಿವೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: Electric Bike : ಬೆಂಗಳೂರಿನ ರಸ್ತೆಗಿಳಿದಿದೆ 65,990 ರೂಪಾಯಿಯ ಎಲೆಕ್ಟ್ರಿಕ್ ಬೈಕ್
ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ವಿಶ್ವಪಾರಂಪರಿಕ ಸ್ಥಳ ಹಂಪಿಯಲ್ಲಿ ಶೆರ್ಪಾ ಮಟ್ಟದ ಸಭೆ ನಡೆಯಲಿದ್ದು, ಸಭೆಯನ್ನು ಉನ್ನತ ಮಟ್ಟದಲ್ಲಿ ನಡೆಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಂಪಿಯನ್ನು ವಿಶ್ವಮಟ್ಟದಲ್ಲಿ ಪ್ರಸ್ತುತ ಪಡಿಸಲು ಉತ್ತಮ ಅವಕಾಶ ದೊರಕಿದೆ. ಸಭೆಗೆ ಅಗತ್ಯವುಳ್ಳ ಮೂಲಭೂತ ಸೌಕರ್ಯಗಳನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಜಿಲ್ಲಾಡಳಿತಕ್ಕೆ ಪೂರ್ವಭಾವಿ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಶೃಂಗಸಭೆ ಅಂಗವಾಗಿ ಇಲ್ಲಿನ ವಿಶೇಷ ಆಚರಣೆ ತುಂಗಾರತಿಯನ್ನು ಸಹ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಭಾಗಿಯಾದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಸಿನ್ಹಾ ಹಾಗೂ ರಮೇಶ್ ಬಾಬು ಅವರು ಹಂಪಿಯಲ್ಲಿ ಒದಗಿಸಬೇಕಾದ ಅಗತ್ಯ ಸೌಕರ್ಯಗಳ ಸಿದ್ಧತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಿದ್ಧತೆ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಿದರು.
ಇದನ್ನೂ ಓದಿ: IPL 2023: ಗಿಲ್ ಶತಕದ ಕಮಾಲ್; ಮುಂಬೈಗೆ ಬೃಹತ್ ಮೊತ್ತದ ಗುರಿ
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
-
ಸುವಚನ14 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ5 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ20 hours ago
ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ
-
Live News8 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ20 hours ago
RP Ashok: ಇನ್ಸ್ಪೆಕ್ಟರ್ ಆರ್.ಪಿ.ಅಶೋಕ್ಗೆ ಆರ್ಯಭಟ ಪ್ರಶಸ್ತಿ ಪ್ರದಾನ
-
ಕ್ರಿಕೆಟ್21 hours ago
IPL 2023: ಗಿಲ್ ಶತಕದ ಕಮಾಲ್; ಮುಂಬೈಗೆ ಬೃಹತ್ ಮೊತ್ತದ ಗುರಿ
-
ಉತ್ತರ ಕನ್ನಡ19 hours ago
Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ
-
ಪ್ರಮುಖ ಸುದ್ದಿ19 hours ago
ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ