Site icon Vistara News

Fire Accident: ಟಯರ್ ಆಯಿಲ್ ಉತ್ಪಾದನೆ ಘಟಕದಲ್ಲಿ ಏಕಾಏಕಿ ಬೆಂಕಿ; ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ

#image_title

ಬೀದರ್: ಜಿಲ್ಲೆಯ ಹುಮ್ನಾಬಾದ್‌ ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿನ ಹಿಮಾಲಯ ಸ್ಟೀಲ್ ಇಂಡಸ್ಟ್ರಿಯಲ್ ಟಯರ್ ಆಯಿಲ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ (Fire Accident) ಸಂಭವಿಸಿದ್ದು, ಇಬ್ಬರು ಕಾರ್ಮಿಕರಿಗೆ ಗಂಭಿರ ಗಾಯಗಳಾಗಿವೆ.

ಟಯರ್ ಆಯಿಲ್ ಉತ್ಪಾದನೆ ಘಟಕದಲ್ಲಿ ಶನಿವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅವಘಡದಲ್ಲಿ ಸುನಿಲ್ ಬಚ್ಚಾರಾಮ, ಸಚಿನ್ ಬಚ್ಚಾರಾಮ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಹುಮ್ನಾಬಾದ್‌ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಯಿತು. ಅಗ್ನಿ ಶಾಮಕ ಸಿಬ್ಬಂದಿ ಧಾವಿಸಿ ಕಾರ್ಖಾನೆಯಲ್ಲಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಹುಮ್ನಾಬಾದ್‌ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಖಾಸಗಿ ಬಸ್ ಪಲ್ಟಿ; 60ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿದ್ದೇ ಪವಾಡ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಬಂಡೇಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ವೊಂದು (Private Bus) ಪಲ್ಟಿಯಾಗಿದೆ. ಅದೃಷ್ಟವಶಾತ್‌ ಬಸ್‌ನೊಳಗೆ ಇದ್ದ 60ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ (Road Accident) ಪಾರಾಗಿದ್ದಾರೆ.

ಹಿರಿಯೂರು ಕಡೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಬರುತ್ತಿದ್ದಾಗ ಬಂಡೇಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಬದಿಯ ಖಾಲಿ ಜಾಗದಲ್ಲಿ ಪಲ್ಟಿ ಹೊಡೆದಿದೆ. ಬಸ್ ಪಲ್ಟಿಯಿಂದಾಗಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಸುಮಾರು 60 ರಿಂದ 70 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದೆ. ಸದ್ಯ ಯಾವುದೇ ಪ್ರಾಣ ಹಾನಿ ಆಗಿಲ್ಲವೆಂದು ತಿಳಿದು ಬಂದಿದೆ.

ಇದನ್ನೂ ಓದಿ | Karnataka Election 2023: ರಾಜ್ಯದ ವಿವಿಧೆಡೆ ನಗದು, ಕುಕ್ಕರ್‌, ಸೀರೆ ಸೇರಿ 7.64 ಕೋಟಿ ರೂ. ಮೌಲ್ಯದ ವಸ್ತುಗಳ ಜಪ್ತಿ

ಬಸ್‌ವೊಳಗೆ ಸಿಲುಕಿದವರನ್ನು ಸ್ಥಳೀಯರು ರಕ್ಷಿಸಿದ್ದು, ಗಾಯಾಳುಗಳಿಗೆ ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪಲ್ಟಿಯಾದ ಬಸ್‌ ಅನ್ನು ಮೇಲಕ್ಕೆ ಎತ್ತುವ ಕೆಲಸದಲ್ಲಿ ನಿರತರಾಗಿದ್ದಾರೆ.

Exit mobile version