ಮುಂಬೈ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಗಡಿ ವಿವಾದ ಕುರಿತು ಹೇಳಿಕೆ ನೀಡುತ್ತಿದ್ದಾರೆ. ಮಹಾರಾಷ್ಟ್ರದ 40 ಹಳ್ಳಿಗಳನ್ನು ಸ್ವಾಧೀನಪಡಿಸಿಕೊಳ್ಳುವ ಮಾತನಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮೊದಲು ಮಹಾರಾಷ್ಟ್ರದ ಪ್ರತಿಪಕ್ಷ ನಾಯಕ ಅಜಿತ್ ಪವಾರ್ ಅವರೂ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಬೊಮ್ಮಾಯಿ ಹೇಳಿಕೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ತಕ್ಕ ಉತ್ತರ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ. ಅಲ್ಲದೇ, ಈ ವಿಷಯದಲ್ಲಿ ಕೇಂದ್ರ ಸರ್ಕಾರವು ಮಧ್ಯ ಪ್ರವೇಶಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಏತನ್ಮಧ್ಯೆ, ದೇವೇಂದ್ರ ಫಡ್ನವಿಸ್ ಅವರು, ಮಹಾರಾಷ್ಟ್ರದ ಯಾವ ಹಳ್ಳಿಗಳೂ ಕರ್ನಾಟಕಕ್ಕೆ ಬಿಟ್ಟು ಕೊಡುವುದಿಲ್ಲ. ಕರ್ನಾಟಕ ಮುಖ್ಯಮಂತ್ರಿ ಕನಸು ಯಾವತ್ತಿಗೂ ಕೈಗೂಡುವುದಿಲ್ಲ. ನಮ್ಮ ಸರ್ಕಾರವು ಮಹಾರಾಷ್ಟ್ರದ ನೆಲ, ಜಲ ಮತ್ತು ಗಡಿ ರಕ್ಷಣೆಗೆ ಬದ್ಧವಾಗಿದೆ ಎಂದು ಅವರು ಹೇಳಿದರು. ಅಲ್ಲದೇ, ಬೆಳಗಾವಿ-ಕಾರವಾರ-ನಿಪ್ಪಾಣಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ | ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ | ರಾಜ್ಯದ ಒಂದಿಂಚು ಜಾಗವನ್ನೂ ಬಿಡಲ್ಲ, ಫಡ್ನವಿಸ್‌ಗೆ ಬೊಮ್ಮಾಯಿ ತಿರುಗೇಟು