ಉಡುಪಿ : ವೇಗದಿಂದ ಬಂದ ಆಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದಾರೆ. ಗುರುವಾರ (ಜು.20) ಸಂಜೆ ಉಡುಪಿ ಜಿಲ್ಲೆಯ (Udupi) ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‌ನಲ್ಲಿ ದುರಂತ ಸಂಭವಿಸಿದೆ.
ಆಂಬುಲೆನ್ಸ್ ಮೂಲಕ ರೋಗಿಯನ್ನು ಹೊನ್ನಾವರದಿಂದ ಕುಂದಾಪುರಕ್ಕೆ ಸಾಗಿಸಲಾಗುತ್ತಿತ್ತು. ಆದರೆ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಟೋಲ್‌ಗೆ ಆಂಬುಲೆನ್ಸ್ ಡಿಕ್ಕಿ ಹೊಡೆದಿದ್ದು ರೋಗಿ, ರೋಗಿಯ ಪತ್ನಿ, ಇಬ್ಬರು ಸಂಬಂಧಿ ದುರ್ಮರಣ ಹೊಂದಿದ್ದಾರೆ. ರೋಗಿ ಲೋಕೇಶ್ ಮಾಧವ ನಾಯ್ಕ್, ಪತ್ನಿ ಜ್ಯೋತಿ, ಸಂಬಂಧಿಗಳಾದ ಗಜಾನನ ನಾಯ್ಕ್ ಮತ್ತು ಮಂಜುನಾಥ್ ನಾಯ್ಕ್ ಮೃತ ದುರ್ದೈವಿಗಳು. ಚಾಲಕ ಗಾಯಗೊಂಡಿದ್ದು, ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ | ಬೆಂಗಳೂರಿನ ಹೆಬ್ಬಾಳ ಬಳಿ ಸರಣಿ ಅಪಘಾತ, ಪ್ರಾಣಾಪಾಯದಿಂದ ಪಾರಾದ ಕಾರು ಚಾಲಕರು
ಇದಲ್ಲದೆ ಟೋಲ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಭೀಕರ ರಸ್ತೆ ಅಪಘಾತ; ಆಂಧ್ರದ ಒಂದೇ ಕುಟುಂಬದ ನಾಲ್ವರು ಬಲಿ