Udupi Election Results: ಕೃಷ್ಣನ ನಾಡು ಉಡುಪಿಯಲ್ಲಿ ಯಶ ಕಂಡ ಯಶಪಾಲ್‌ ಸುವರ್ಣ - Vistara News

ಉಡುಪಿ

Udupi Election Results: ಕೃಷ್ಣನ ನಾಡು ಉಡುಪಿಯಲ್ಲಿ ಯಶ ಕಂಡ ಯಶಪಾಲ್‌ ಸುವರ್ಣ

Karnataka Election 2023: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರಿಗೆ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಈ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಪಕ್ಷದ ಯಶಪಾಲ್‌ ಸುವರ್ಣ ಜಯಗಳಿಸಿದ್ದಾರೆ.

VISTARANEWS.COM


on

Udupi Karnataka Election results winner Yashpal suvarna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಾರಿ ಉಡುಪಿ ವಿಧಾನಸಭಾ ಕ್ಷೇತ್ರವೂ ಎಲ್ಲರ ಗಮನ ಸೆಳೆದಿತ್ತು. ಬಿಜೆಪಿಯಲ್ಲಿ ಹಾಲಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ಇಲ್ಲಿನ ಫಲಿತಾಂಶದ ಮೇಲೆ ಎಲ್ಲರ ಕಣ್ಣೂ ಇತ್ತು. ಇದೀಗ ಫಲಿತಾಂಶ (Udupi Election Results) ಹೊರಬಿದ್ದಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಯಶ್‌ಪಾಲ್‌ ಸುವರ್ಣ ಅವರು ಜಯ ಸಾಧಿಸಿದ್ದಾರೆ.

ಸ್ಥಾನ ಉಳಿಸಿಕೊಂಡ ಬಿಜೆಪಿ

ಉಡುಪಿ ವಿಧಾನಸಭೆ ಕ್ಷೇತ್ರವನ್ನು ಪರಿಗಣಿಸಿದರೆ ಚುನಾವಣಾ ದಿನಾಂಕ ಘೋಷಣೆಯಾಗುವ ಮೊದಲಿನಿಂದಲೂ ಬಿಜೆಪಿ ಹಾಲಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ನೀಡುತ್ತದೆ ಎನ್ನುವ ನಿರೀಕ್ಷೆಯಿತ್ತು. ಆದರೆ ಕೊನೆಯ ಕ್ಷಣದಲ್ಲಿ ರಘುಪತಿ ಭಟ್ ಬದಲಿಗೆ ಕಾರ್ಯಕರ್ತ, ಮೊಗವೀರ ಸಮುದಾಯದ ಯಶ್ ಪಾಲ್ ಸುವರ್ಣ ಅವರಿಗೆ ಟಿಕೆಟ್ ನೀಡುವ ಮೂಲಕ ಆಕಾಂಕ್ಷಿಗಳ ಜತೆಗೆ ಮತದಾರರನ್ನು ಕೂಡ ಆಶ್ಚರ್ಯಕ್ಕೀಡಾಗುವಂತೆ ಮಾಡಿತ್ತು. ಪ್ರಾರಂಭದಲ್ಲಿ ರಘುಪತಿ ಭಟ್, ಪಕ್ಷದ ಈ ಅಚಾನಕ್ ನಿರ್ಧಾರದಿಂದ ಬೇಸರಗೊಂಡರೂ ಬಳಿಕ ಅಭ್ಯರ್ಥಿಯ ಜತೆ ಕಣದಲ್ಲಿ ತಮ್ಮದೇ ಚುನಾವಣೆ ಎನ್ನುವಂತೆ ಪ್ರಚಾರವನ್ನು ನಡೆಸಿದ್ದರು. ಹೀಗಾಗಿ ಬಿಜೆಪಿಗೆ ಸಾಂಪ್ರದಾಯಿಕ ಮತ ಸೇರಿದಂತೆ ಕಾರ್ಯಕರ್ತರೊಬ್ಬರಿಗೆ ಟಿಕೆಟ್‌ ಕೊಟ್ಟಿರುವುದೂ ಇಲ್ಲಿ ವರ್ಕೌಟ್‌ ಆಗಿದೆ. ಅಲ್ಲದೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾಗಿದ್ದೂ ಮತ್ತೊಂದು ಪ್ಲಸ್‌.

Udupi Election Results
ಉಡುಪಿ ಚುನಾವಣಾ ಫಲಿತಾಂಶ

ಕಾಂಗ್ರೆಸ್‌ಗೆ ಪ್ರಮೋದ್‌ ಮಧ್ವರಾಜ್‌ ಏಟು!

ಕಾಂಗ್ರೆಸ್ ಪಾಳಯದಲ್ಲಿ ಕಳೆದ ಬಾರಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಯೇ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿತ್ತು. ಇಂತಹ ಸಂದರ್ಭದಲ್ಲಿ ಒಂದಿಷ್ಟು ಆಕಾಂಕ್ಷಿಗಳು ಪಟ್ಟಿಯಲ್ಲಿದ್ದರೂ ಕೊನೆಯ ಕ್ಷಣದಲ್ಲಿ ಮೊಗವೀರ ಸಮುದಾಯದ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಟಿಕೆಟ್‌ ನೀಡಿತ್ತು. ಇದರಿಂದ ಒಂದಿಷ್ಟು ಗೊಂದಲ, ಬಂಡಾಯದಂತಹ ಬೆಳವಣಿಗೆಗಳಾದರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಅದನ್ನು ಶಮನ ಮಾಡಲಾಗಿತ್ತು. ಹೀಗಾಗಿ ಪ್ರಸಾದ್‌ ರಾಜ್‌ ಭರ್ಜರಿ ಪ್ರಚಾರ ನಡೆಸಿದರಾದರೂ ಗೆಲುವು ಅವರ ಕೈ ಹಿಡಿಯಲಿಲ್ಲ.

ಪ್ರಭಾವ ಬೀರಿದ ಅಂಶಗಳೇನು?

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಮೊಗವೀರ ವರ್ಸಸ್ ಮೊಗವೀರ ಸ್ಪರ್ಧೆ ಏರ್ಟಟ್ಟಿದ್ದಂತೂ ಸತ್ಯ. ಹೆಚ್ಚಾಗಿ ಜನರ ಮಧ್ಯೆ ಇರುವ ಯಶ್ ಪಾಲ್ ಸುವರ್ಣ ಅವರಿಗೆ ಕ್ಷೇತ್ರದಲ್ಲಿ ಹಿಡಿತ ಹೆಚ್ಚಿತ್ತು. ಹೀಗಾಗಿ ಬಿಜೆಪಿಯ ಪ್ರಭಾವ, ಹಿಜಾಬ್ ಪ್ರಕರಣದ ಕುರಿತದಾದ ಎರಡೂ ಪಕ್ಷಗಳ ನಿಲುವು, ರಾಜ್ಯ ಮತ್ತು ರಾಷ್ಟ್ರ ನಾಯಕರ ಹೇಳಿಕೆಗಳು ಮತ್ತು ಅಭಿವೃದ್ಧಿ ವಿಚಾರವು ಈ ಚುನಾವಣೆಯಲ್ಲಿ ಪ್ರಭಾವ ಬೀರಿದೆ.

ಇದನ್ನೂ ಓದಿ: Karnataka Election Results Live Updates: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಬೆಳವಣಿಗೆ

ಕಳೆದ ಚುನಾವಣೆ ಫಲಿತಾಂಶ
ರಘುಪತಿ ಭಟ್ (ಬಿಜೆಪಿ): 84,946 | ಪ್ರಮೋದ್ ಮಧ್ವರಾಜ್ (ಕಾಂಗ್ರೆಸ್) 72,902 | ಗೆಲುವಿನ ಅಂತರ- 12,044

ಈ ಬಾರಿಯ ಚುನಾವಣಾ ಫಲಿತಾಂಶ
ಯಶ್‌ಪಾಲ್‌ ಸುವರ್ಣ (ಬಿಜೆಪಿ): 97079 | ಪ್ರಸಾದ್ ರಾಜ್ ಕಾಂಚನ್ (ಕಾಂಗ್ರೆಸ್‌) 64303 | ಗೆಲುವಿನ ಅಂತರ: 32776 | ನೋಟಾ: 1316

ಕರ್ನಾಟಕ ಚುನಾವಣೆಯ ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆ; ಯೆಲ್ಲೊ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನದಲ್ಲಿ ಸಾಧಾರಣವಾಗಿರಲಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸುಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗಾಳಿ ಸಹಿತ ಭಾರಿ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆಯಲ್ಲಿ ಎತ್ತಿನ ಬಂಡಿ ಸಮೇತ ನದಿಯಲ್ಲಿ ಕೊಚ್ಚಿಕೊಂಡು ಹೋದ ರೈತ

ಕಲಬುರಗಿ‌ ಜಿಲ್ಲೆಯಾದ್ಯಂತ ವರುಣನ‌ ಆರ್ಭಟ ಜೋರಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಇರಗಪಳ್ಳಿ ಬಳಿಯ ಭೋಗಾವತಿ ನದಿಯಲ್ಲಿ ಎತ್ತಿನ ಬಂಡಿ ಸಮೇತ ರೈತ ಕೊಚ್ಚಿಕೊಂಡು ಹೋಗಿದ್ದಾರೆ. ನದಿಯಿಂದ ನೀರು ತರಲು ಹೋಗಿದ್ದ ರೈತ ಅಮೃತ್ ನೀರಿನ‌ ರಭಸಕ್ಕೆ ಕೊಚ್ಚಿ‌ಹೋಗುತ್ತಿದ್ದ ವೇಳೆ ಡ್ರಮ್ ಮೂಲಕ ಹೊರ ಬಂದಿದ್ದಾರೆ. ಅದೃಷ್ಟವಶಾತ್ ರೈತ ಅಮೃತ್ ಬಚಾವ್ ಆದರೆ, ಎರಡು ಎತ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ವ್ಯಾಪಕ ಮಳೆ ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬುಧವಾರದಂದು (ಸೆ.25) ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದ ಹಾಸನ, ಕೊಡಗು ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ.

ರೆಡ್‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ನೀಡಲಾಗಿದೆ.

ಇದನ್ನೂ ಓದಿ: MLA Muniratna: ಅತ್ಯಾಚಾರ ಕೇಸ್‌; ಶಾಸಕ ಮುನಿರತ್ನಗೆ 12 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ

ದಾವಣಗೆರೆಯಲ್ಲಿ ಮನೆಗಳಿಗೆ ನುಗ್ಗಿದ ನೀರು

ದಾವಣಗೆರೆಯಲ್ಲೂ ಮಂಗಳವಾರ ಸತತ ಒಂದು ಗಂಟೆಗೂ ಹೆಚ್ಚು ಮಳೆ ಸುರಿದಿತ್ತು. ಪಿ ಬಿ ರಸ್ತೆ, ಪಿಜೆ ಬಡಾವಣೆ, ಗಾಂಧಿ ವೃತ್ತ ಸೇರಿದಂತೆ ಹಲವೆಡೆ ಮಳೆಯಿಂದ ವಾಹನ ಸವಾರರು ಪರದಾಡಿದರು. ದಾವಣಗೆರೆ, ಮಾಯಕೊಂಡ, ಹರಿಹರ ಸೇರಿದಂತೆ ರಸ್ತೆಯ ಮೇಲೆ ನೀರು ಹರಿದಿತ್ತು. ವಾಹನ ಸವಾರಿಗೆ ತೊಂದರೆ ಉಂಟಾಗಿತ್ತು. ಕಳೆದ ಮೂರು ದಿನಗಳಿಂದ ಸಂಜೆ ವೇಳೆ ವರುಣನ ಆಗಮಿಸುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ರೈತರು ಬೆಳೆದ ಬೆಳೆಗಳಿಗೆ ಮಳೆಯಿಂದ ಅನುಕೂಲವಾಗಲಿದೆ.

ಕೊಡಗಿನಲ್ಲೂ ಜಿಟಿ ಜಿಟಿ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುವಭಾರ ಕುಸಿತ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ವಿವಿಧೆಡೆ ಜಿಟಿ ಜಿಟಿ ಮಳೆಯಾಗಿತ್ತು. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ವಾತವರಣದಿಂದಾಗಿ ವಿದ್ಯಾರ್ಥಿಗಳು ಹಾಗೂ ಬೈಕ್ ಸವಾರರು ಕಿರಿಕಿರಿ ಅನುಭವಿಸಿದರು. ಇನ್ನು ಎರಡು ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಮೈಸೂರಿನಲ್ಲೂ ಸಾಧಾರಣ ಮಳೆಯಾಗಿದೆ. ಸುಮಾರು ಅರ್ಧ ಗಂಟೆಗೂ ಸುರಿದ ವರ್ಷಧಾರೆಗೆ ವಾಹನ ಸಂಚಾರಕ್ಕೆ ಅಡ್ಡಿ ಆಯಿತು.

ಯಾದಗಿರಿಯಲ್ಲಿ ಮುಂದುವರಿದ ಮಳೆ ಅಬ್ಬರ

ಯಾದಗಿರಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಅರ್ಭಟಕ್ಕೆ ಭತ್ತದ ಜಮೀನಿಗೆ ನೀರು ನುಗ್ಗಿದೆ. ಭೀಮಾನದಿ ತೀರದ ರೈತರ ಜಮೀನಿಗೆ ಮಳೆ ನೀರು ನುಗ್ಗಿ, ಭತ್ತದ ಬೆಳೆ ಜಲಾವೃತಗೊಂಡಿತ್ತು. ಯಾದಗಿರಿ ಜಿಲ್ಲೆಯ ವಡಗೇರಾ ಜೋಳದಡಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಗೇಟ್ ಎತ್ತದೆ ಕೆಬಿಜೆಎನ್‌ಎಲ್ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಜೋಳದಡಗಿ ಗ್ರಾಮದ ಭೀಮಾನದಿಗೆ ಅಡ್ಡಲಾಗಿರುವ ಬ್ರಿಡ್ಜ್ ಕಂ ಬ್ಯಾರೇಜ್‌ನ ಗೇಟ್ ಎತ್ತದೇ ನಿರ್ಲಕ್ಷ್ಯ ವಹಿಸಿದ್ದಾರೆ. ಭಾರಿ ಮಳೆಯಿಂದ ಭೀಮಾನದಿಗೆ ನೀರಿನ ಒಳಹರಿವು ಹೆಚ್ಚಳವಾಗಿತ್ತು. ಆದರೆ, ಗೇಟ್ ಎತ್ತದಕ್ಕೆ ಭೀಮಾನದಿಯ ನೀರು ಜಮೀನಿಗೆ ನುಗ್ಗಿ ಅಪಾರಪ್ರಮಾಣದ ಬೆಳೆ ಹಾನಿಯಾಗಿದೆ ಎಂದು ರೈತರ ಕಂಗಾಲಾದರು.

ಜಮಖಂಡಿಯಲ್ಲಿ ಮಳೆ ಅವಾಂತರ

ಬಾಗಲಕೋಟೆಯ ಜಮಖಂಡಿಯಲ್ಲಿ ರಾತ್ರಿ ಸುರಿದ ಮಳೆಯು ಅವಾಂತರವೇ ಸೃಷ್ಟಿಯಾಗಿದೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು. ಜಲಾವೃತವಾದ ಮನೆಗಳಿಗೆ ಮಾಜಿ ಶಾಸಕ ಆನಂದ್ ನ್ಯಾಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಕ್ಕನಕೇರೆ ಬೈಪಾಸ್ ರಸ್ತೆ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿತ್ತು. ನಿವಾಸಿಗಳಿಗೆ ಆದ ಹಾನಿ ಭರಿಸುವ ಭರವಸೆಯನ್ನು ಮಾಜಿ ಶಾಸಕ ಆನಂದ್ ನ್ಯಾಮಗೌಡ ನೀಡಿದರು. ಶಿಥಿಲಗೊಂಡ ಹಳೆ ಮನೆಯವರಿಗೆ ಸುರಕ್ಷಿತ ಸ್ಥಳದಲ್ಲಿ ವಾಸಿಸುವಂತೆ ಮನವಿ ಮಾಡಿದರು. ಜಮಖಂಡಿ ಎಸಿ ಶ್ವೇತಾ ಸಾಥ್‌ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಈ 14 ಜಿಲ್ಲೆಗಳಿಗೆ ಭಾರಿ ಮಳೆ! ಕರಾವಳಿಗೆ ಆರೆಂಜ್‌, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌

Karnataka Weather : 14 ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಗೆ ಆರೆಂಜ್‌, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಉಳಿದೆಡೆ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ತುಮಕೂರು, ಮಂಡ್ಯ, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಪ್ರದೇಶದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಯೆಲ್ಲೋ ಅಲರ್ಟ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Karnataka Rain : ಯಾದಗಿರಿಯಲ್ಲಿ ಭಯಂಕರ ಮಳೆ; ಸಿಡಿಲಿಗೆ ಒಂದೇ ದಿನ ನಾಲ್ವರು ಬಲಿ

ಸಿಡಿಲು ಬಡಿದು ನಾಲ್ವರು ಸಾವು

ಸೋಮವಾರ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಇಬ್ಬರು ಸಹೋದರರು ಹಾಗೂ ಸಹೋದರಿ ದುರ್ಮರಣ ಹೊಂದಿದ್ದಾರೆ. ಯಾದಗಿರಿ ತಾಲೂಕಿನ ಜೀನಕೇರಾ ತಾಂಡದಲ್ಲಿ ಘಟನೆ ನಡೆದಿದೆ.

ಕೀಶನ್ ಜಾಧವ್ ( 25), ಚನ್ನಪ್ಪ ಜಾಧವ್ (18) ಹಾಗೂ ಸುನೀಬಾಯಿ ರಾಠೋಡ (27), ನೇನು ಜಾಧವ್ (15) ಮೃತ ದುರ್ದೈವಿ. ಸಿಡಿಲು ಬಡಿದು ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಯಾದಗಿರಿ ತಾಲ್ಲೂಕಿನ ಜೀನಕೇರಾ ತಾಂಡಾದಲ್ಲಿ ಕುಟುಂಬಸ್ಥರ ಜತೆ ಉಳ್ಳಾಗಡ್ಡಿ ಹಚ್ಚಲು ತೆರಳಿದರು. ಈ ವೇಳೆ ಭಾರಿ ಮಳೆಯಿಂದ ರಕ್ಷಣೆ‌ ಮಾಡಿಕೊಳ್ಳಲು ದೇವಸ್ಥಾನದೊಳಗೆ ತೆರಳಿದರು. ಜೀನಕೇರಾ ತಾಂಡಾದ ದುರ್ಗಮ್ಮ ದೇವಸ್ಥಾನದೊಳಗೆ ತೆರಳಿದ್ದರು. ಈ ವೇಳೆ ಸಿಡಿಲು ಬಡಿದಿದೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿಯಲ್ಲಿ ಅಬ್ಬರಿಸಿದ್ದ ಮಳೆ

ಯಾದಗಿರಿ ಜಿಲ್ಲೆಯಲ್ಲಿ ಸೋಮವಾರ ಮಳೆಯು ಅಬ್ಬರಿಸಿದೆ. ಕಳೆದ ಒಂದು ಗಂಟೆಗೂ ಹೆಚ್ಚು ಮಳೆ ಸುರಿದಿದೆ. ಯಾದಗಿರಿ ನಗರ, ವಡಗೇರಾ ಸೇರಿದಂತೆ ಮೊದಲಾದ ಕಡೆ ಮಳೆ ಅರ್ಭಟ ಜೋರಾಗಿತ್ತು. ವರುಣನ ಅಬ್ಬರಕ್ಕೆ ರಸ್ತೆ ಜಲಾವೃತಗೊಂಡಿತ್ತು. ಕೇಂದ್ರ ಬಸ್ ನಿಲ್ದಾಣ ಮುಂಭಾಗ ರಸ್ತೆ ಕರೆಯಂತಾಗಿತ್ತು. ಊರಿಗೆ ತೆರಳಲು ಜನರು ಸಂಕಷ್ಟ ಪಡಬೇಕಾಯಿತು.

ಕಲಬುರಗಿಯಲ್ಲೂ ಒಂದು ಗಂಟೆಯಿಂದ ಧಾರಾಕಾರ ಮಳೆಯಾಗಿದೆ. ಕಲಬುರಗಿ ನಗರ, ಗ್ರಾಮೀಣ , ಔರಾದ್ ಸೇರಿ ಹಲವು ಭಾಗದಲ್ಲಿ ಭಾರಿ ಮಳೆಯಾಗಿದ್ದು, ರಿಂಗ್ ರಸ್ತೆಯಲ್ಲೂ ಗುಡುಗು ಸಹಿತ ಸುರಿದ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು, ಕಾಲುವೆಯಂತಾಗಿತ್ತು. ವಾಹನ ಸವಾರರು ಪರದಾಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಯಾದಗಿರಿಯಲ್ಲಿ ಭಯಂಕರ ಮಳೆ; ಸಿಡಿಲಿಗೆ ಒಂದೇ ದಿನ ನಾಲ್ವರು ಬಲಿ

Karnataka Rain : ಯಾದಗಿರಿಯಲ್ಲಿ ಭಯಂಕರ ಮಳೆಯಾಗುತ್ತಿದ್ದು, ಸಿಡಿಲಿಗೆ ಒಂದೇ ದಿನ ನಾಲ್ವರು ಬಲಿಯಾಗಿದ್ದಾರೆ.

VISTARANEWS.COM


on

By

karnataka rain
Koo

ಯಾದಗಿರಿ: ಸೋಮವಾರ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಇಬ್ಬರು ಸಹೋದರರು ಹಾಗೂ ಸಹೋದರಿ ದುರ್ಮರಣ ಹೊಂದಿದ್ದಾರೆ. ಯಾದಗಿರಿ ತಾಲೂಕಿನ ಜೀನಕೇರಾ ತಾಂಡದಲ್ಲಿ ಘಟನೆ ನಡೆದಿದೆ.

ಕೀಶನ್ ಜಾಧವ್ ( 25), ಚನ್ನಪ್ಪ ಜಾಧವ್ (18) ಹಾಗೂ ಸುನೀಬಾಯಿ ರಾಠೋಡ (27), ನೇನು ಜಾಧವ್ (15) ಮೃತ ದುರ್ದೈವಿ. ಸಿಡಿಲು ಬಡಿದು ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಯಾದಗಿರಿ ತಾಲ್ಲೂಕಿನ ಜೀನಕೇರಾ ತಾಂಡಾದಲ್ಲಿ ಕುಟುಂಬಸ್ಥರ ಜತೆ ಉಳ್ಳಾಗಡ್ಡಿ ಹಚ್ಚಲು ತೆರಳಿದರು. ಈ ವೇಳೆ ಭಾರಿ ಮಳೆಯಿಂದ ರಕ್ಷಣೆ‌ ಮಾಡಿಕೊಳ್ಳಲು ದೇವಸ್ಥಾನದೊಳಗೆ ತೆರಳಿದರು. ಜೀನಕೇರಾ ತಾಂಡಾದ ದುರ್ಗಮ್ಮ ದೇವಸ್ಥಾನದೊಳಗೆ ತೆರಳಿದ್ದರು. ಈ ವೇಳೆ ಸಿಡಿಲು ಬಡಿದಿದೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗದಲ್ಲಿ ಸಿಡಿಲು ಬಡಿದು ಕುರಿಗಳು ಸಾವು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಮಳೆ ಜತೆಗೆ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ನಿಪ್ಪಾಣಿ ಮೂಲದ ಕುರಿಗಾಹಿಗೆ ಸೇರಿದ ನಾಲ್ಕು ಕುರಿಗಳು ಮೃತಪಟ್ಟಿವೆ. ಮಳೆಗಾಲದಲ್ಲಿ ತಮ್ಮ ಕುರಿಗಳನ್ನು ಮೇಯಿಸುತ್ತಾ ಸಂಚಾರ ಮಾಡುವ ಕುರಿಗಾಹಿಗಳು, ನಿನ್ನೆ ರಾತ್ರಿ ಗ್ರಾಮದ ಹೊರವಲಯದಲ್ಲಿ ತಂಗಿದ್ದರು. ನಿ‌ನ್ನೆ ರಾತ್ರಿ ಸುರಿದ ಭಾರಿ ಮಳೆ ವೇಳೆ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ಕುರಿಗಾಹಿಗಳಿಗೆ ಪಶು ಸಂಗೋಪನಾ ಇಲಾಖೆ ಪರಿಹಾರ ನೀಡಲಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸಿಡಿಲಿಗೆ ರೈತ ಬಲಿ

ಧಾರವಾಡ ಜಿಲ್ಲೆಯಲ್ಲಿ ಸಿಡಿಲಿನ ಹೊಡೆತಕ್ಕೆ ರೈತರೊಬ್ಬರು ಬಲಿಯಾಗಿದ್ದಾರೆ. ಧಾರವಾಡ ತಾಲೂಕಿನ ಹನುಮನಾಳ ಗ್ರಾಮದ ರೈತ ಭೀಮನಗೌಡ ಪಾಟೀಲ(65)ಮೃತ ದುರ್ದೈವಿ. ಹೊಲದಿಂದ ಮನೆಗೆ ಬರುವಾಗ ಸಿಡಿಲು ಬಡಿದು ಭೀಮನಗೌಡ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗರಗ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಾಗಿದೆ.

ಮಳೆಗೆ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವು

ಉತ್ತರ ಒಳನಾಡಿನಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದ್ದು, ಧಾರಾಕಾರವಾಗಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ಸ್ಥಳದಲ್ಲೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾ ಗ್ರಾಮದಲ್ಲಿ ಘಟನೆ ನಡೆದಿದೆ. ರಾಜೇಂದ್ರ ಪಾಟೀಲ್ (62) ಮೃತ ದುದೈವಿ.

ರಾಜೋಳ ಗ್ರಾಮದಿಂದ ಮಗಳ ಮನೆ ಕುರುಕುಂಟಾ ಗ್ರಾಮಕ್ಕೆ ತೆರಳಿದ್ದರು. ಮನೆಯಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿದಿದೆ. ಪರಿಣಾಮ ರಾಜೇಂದ್ರ ಅವರು ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಕುರುಕುಂಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement
Actor darshan
ಪ್ರಮುಖ ಸುದ್ದಿ6 ಗಂಟೆಗಳು ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು7 ಗಂಟೆಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ7 ಗಂಟೆಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು8 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು8 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು9 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು10 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು11 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು12 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ13 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌