ಉಡುಪಿ: ಬ್ರಹ್ಮಾವರದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ (Udupi News) ನಿರ್ಮಾಣವಾಗುತ್ತಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನೂತನ ಕಟ್ಟಡದ ಶಿಲಾನ್ಯಾಸ ನೇರವೇರಿತು.
ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ (ರಿ.) ಈ ಕಟ್ಟಡ ನಿರ್ಮಾಣಕ್ಕೆ ೨.೭೦ ಕೋಟಿ ರೂ. ಅನುದಾನ ನೀಡಿದೆ. ಸೊಸೈಟಿಯ ಅಧ್ಯಕ್ಷ, ದಾನಿಗಳಾದ ಎಚ್. ಎಸ್ ಶೆಟ್ಟಿ ಅವರು ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೇರವೇರಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ (ರಿ.) ಉಪಾಧ್ಯಕ್ಷ ನಾಗರಾಜ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮೋಹನ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಪೌಢ ಶಾಲಾ ವಿಭಾಗದ ಅಧ್ಯಕ್ಷ ರಾಮಕೃಷ್ಣ, ಶಾಲಾಭಿವೃದ್ಧಿ ಸಮಿತಿಯ ಪ್ರಾಥಮಿಕ ವಿಭಾಗದ ಅಧ್ಯಕ್ಷ ಪಾಂಡುರಂಗ ಕುಲಾಲ್, ವಾರಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗವೇಣಿ, ಚಾಂತಾರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬೇಬಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಾರುತಿ, ಡಯಟ್ ಉಪ ಪ್ರಾಂಶುಪಾಲರಾದ ಅಶೋಕ್ ಕಾಮತ್, ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಂಗನಾಥ್, ಪ್ರಾಂಶುಪಾಲರಾದ ರವೀಂದ್ರ ಉಪಾಧ್ಯ, ಉಪ ಪ್ರಾಂಶುಪಾಲರಾದ ಬಿ.ಟಿ ನಾಯ್ಕ್, ಮುಖ್ಯೋಪಾಧ್ಯಾಯರಾದ ದೇವ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: Jasprit Bumrah: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಿಂದ ಹೊರಬಿದ್ದ ಜಸ್ಪ್ರೀತ್ ಬುಮ್ರಾ; ವರದಿ