udupi pejawar seer visits karnataka cabinet minister dr g parameshwar houseKarnataka Cabinet: ಡಾ.ಜಿ. ಪರಮೇಶ್ವರ್‌ ಮನೆಗೆ ಪೇಜಾವರ ಶ್ರೀ ಭೇಟಿ: ಬಜರಂಗದಳ ನಿಷೇಧ ಇಲ್ಲ ಎಂದ ಸಚಿವ - Vistara News

ಕರ್ನಾಟಕ

Karnataka Cabinet: ಡಾ.ಜಿ. ಪರಮೇಶ್ವರ್‌ ಮನೆಗೆ ಪೇಜಾವರ ಶ್ರೀ ಭೇಟಿ: ಬಜರಂಗದಳ ನಿಷೇಧ ಇಲ್ಲ ಎಂದ ಸಚಿವ

ಇನ್ನೂ ಖಾತೆಗಳ ಕುರಿತು ಅಧೀಕೃತ ಆದೇಶ ಆಗಿಲ್ಲವಾದರೂ ಪೊಲೀಸ್‌ ಅಧಿಕಾರಿಗಳು ಒಬ್ಬೊಬ್ಬರಾಗಿ ಡಾ. ಜಿ ಪರಮೇಶ್ವರ್‌ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ.

VISTARANEWS.COM


on

Udupi Pejawar mutt seer vishwaprasanna tirtha swamiji visits minister Dr G Parameshwar house in bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವರಾಗಿ ಆಯ್ಕೆಯಾಗಿರುವ ಡಾ. ಜಿ. ಪರಮೇಶ್ವರ್‌ ಅವರ ನಿವಾಸಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿದರು. ಸದಾಶಿವನಗರದಲ್ಲಿರುವ ಡಾ. ಜಿ. ಪರಮೇಶ್ವರ್‌ ಮನೆಗೆ ಭೇಟಿ ನೀಡಿದ ಶ್ರೀಗಳು ಆಶೀರ್ವದಿಸಿದರು. ಪರಮೇಶ್ವರ್‌ ದಂಪತಿ, ಶ್ರೀಗಳಿಗೆ ಫಲತಾಂಬೂಲ ನೀಡಿ ನಮಸ್ಕರಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್‌, ಆದರೆ ಸರ್ಕಾರ ಸುಸೂತ್ರವಾಗಿ ನಡೆದುಕೊಂಡು ಹೋಗಲು ಎಲ್ಲರ ಸಹಕಾರ ಅಗತ್ಯ. ಈಗ ಬ್ಯಾನ್ ಬ್ಯಾನ್ ಬ್ಯಾನ್ ಅಂತಿದ್ದಾರೆ. ತಕ್ಷಣ ಯಾವುದೇ ಸಂಸ್ಥೆಯನ್ನು ಬ್ಯಾನ್ ಮಾಡಲು ಸಾಧ್ಯವಿಲ್ಲ. ಏನಾದರೂ ಸಂವಿಧಾನ ನಿಯಮ ಉಲ್ಲಂಘನೆ ಮಾಡಿದರೆ ಮಾತ್ರ ಅಂತಹ ಕ್ರಮ ಆಗುತ್ತದೆ. ಕಾನೂನು ಉಲ್ಲಂಘನೆ ಮಾಡದೇ ಇದ್ದರೆ ಅಂತಹ ಪ್ರಶ್ನೆಯೇ ಬರುವುದಿಲ್ಲ ಎಂದರು.

ಇನ್ನೂ ಖಾತೆಗಳ ಕುರಿತು ಅಧೀಕೃತ ಆದೇಶ ಆಗಿಲ್ಲವಾದರೂ ಪೊಲೀಸ್‌ ಅಧಿಕಾರಿಗಳು ಒಬ್ಬೊಬ್ಬರಾಗಿ ಡಾ. ಜಿ ಪರಮೇಶ್ವರ್‌ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಪೊಲೀಸ್ ನೇಮಕಾತಿಯ ಡಿಜಿ ಕಮಲ್ ಪಂಥ್ ಸೇರಿ ಅನೇಕರು ಆಗಮಿಸಿದರು. ಈ ಹಿನ್ನೆಯಲ್ಲಿ, ಡಾ. ಜಿ. ಪರಮೇಶ್ವರ್‌ ಅವರಿಗೆ ಗೃಹಖಾತೆ ನೀಡುವುದು ಖಚಿತ ಎನ್ನಲಾಗುತ್ತಿದೆ.

ಕಾಂಗ್ರೆಸ್‌ನ ಗ್ಯಾರಂಟಿಗಳ ಕುರಿತು ಪ್ರತಿಪಕ್ಷಗಳ ಟೀಕಗೆ ಬಗ್ಗೆ ಮಾತನಾಡಿದ ಪರಮೇಶ್ವರ್‌, ಒಂದು ಸರ್ಕಾರ ಹೇಗೆ ನಡೆಯುತ್ತದೆ ಎಂಬುದೂ ಕೂಡ ಬಿಜೆಪಿಯವರಿಗೆ ಗೊತ್ತಿಲ್ಲವ? ಜನರೇ ಇವರಿಗೆ ಮನೆಯಲ್ಲಿ ಕೂರಿಸಿದರೂ ಬುದ್ದಿ ಬರ್ತಾ ಇಲ್ವಾ? ಅನಗತ್ಯ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ. ಜನರೇ ಬುದ್ದಿ ಕಲಿಸಿದರೂ ಬುದ್ದಿ ಬಂದಿಲ್ಲ ಇವರಿಗೆ?

ಅನ್ನ ಭಾಗ್ಯ ಯೋಜನೆಯಲ್ಲಿ ಅಕ್ಕಿ ಕೊಡ್ತೇವೆ ಅಂತ ಹೇಳಿದ್ದೇವೆ. 10 ಕೆ.ಜಿ. ಹೊಂದಿಸಿಕೊಳ್ಳುವುದಕ್ಕಾದರೂ ಸಮಯ ಬೇಕಲ್ಲ? ಮಾನದಂಡಗಳು ವಿಪಕ್ಷಗಳು ಹೇಳಿದ ತರಹ ಏನೂ ಇರಲ್ಲ. ನಾವು ಇನ್ನೂ ಗ್ಯಾರಂಟಿಗಳ ಬಗ್ಗೆ ನಿಯಮಗಳ ಬಗ್ಗೆ ಹೇಳಿಯೇ ಇಲ್ಲ. ಆಗಲೇ ಅವರು ಯಾಕೆ ಜನರನ್ನು ರಾಜಕೀಯ ಮಾಡ್ತಿದ್ದಾರೆ? ಎಂದು ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ವಿರುದ್ದ ಪರಮೇಶ್ವರ್ ಕಿಡಿಕಾರಿದರು.

ಗ್ಯಾರಂಟಿಗಳ ಜಾರಿ ಬಗ್ಗೆ ಜನರಿಗೆ ಮಾತು ಕೊಟ್ಟಿದ್ದೇವೆ. ಮೊದಲ ಕ್ಯಾಬಿನೆಟ್ ನಲ್ಲಿ ಆದೇಶ ಆಗಿದೆ. ಇದಾದ ಮೇಲೆ ಇಂತಹ ಇಲಾಖೆಗೆ ಈ ಜವಾಬ್ದಾರಿ ಇದೆ‌‌. ಇವರು ಇದನ್ನು ವರ್ಕೌಟ್ ಮಾಡಿ ಮುಂದಿನ ಕ್ಯಾಬಿನೆಟ್‌ಗೆ ತನ್ನಿ ಎಂದು ಹೇಳಿದ್ದೇವೆ. ಮುಂದಿನ ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಿ ಯಾವ ಇಲಾಖೆ ಯಾವ ನಿರ್ದೇಶನ ಕೊಡಬೇಕೋ ಕೊಡ್ತೇವೆ. ನಿರ್ದೇಶನದ ಪ್ರಕಾರ ಗ್ಯಾರಂಟಿಗಳು ಅನುಷ್ಠಾನ ಮಾಡ್ತೇವೆ. ಅವರು ಹೆಸರಿಸಿದ್ರೆ ಹೆದುರಿ ಬೀಡುತ್ತೆವಾ..? ಎಂದರು.

ಇದನ್ನೂ ಓದಿ: Ram Mandir: ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಹೇಗಿದೆ? ಇಲ್ಲಿದೆ ಫೋಟೊ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮಹಿಳಾ ಮೀಸಲಾತಿಗೆ ಬೆಂಬಲ; ಡಿಲಿಮಿಟೇಷನ್‌ ಗೆ ವಿರೋಧ:ಸಿಎಂ ಸಿದ್ದರಾಮಯ್ಯ ಸಷ್ಟನೆ

VISTARANEWS.COM


on

ಚಾಮರಾಜನಗರ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ಚಾಮರಾಜನಗರದ ಜೆಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇಂದು ಗುಂಡ್ಲುಪೇಟೆಯಲ್ಲಿ 475 ಕೋಟಿ ರೂ.ಗಳ ವೆಚ್ಚದಲ್ಲಿ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯೂ ಸೇರಿದಂತೆ ಒಟ್ಟು 523 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಂಜುಂಡಪ್ಪ ವರದಿಯ ಪ್ರಕಾರ ಗುಂಡ್ಲುಪೇಟೆಯನ್ನು ಅತಿ ಹಿಂದುಳಿದ ತಾಲ್ಲೂಕುಂದು ಗುರುತಿಸಲಾಗಿದ್ದು, ಈ ತಾಲ್ಲೂಕಿಗೆ ವಿಶೇಷ ಆದ್ಯತೆಯನ್ನು ನೀಡಲಾಗಿದೆ. ಈ ಕಾರ್ಯಗಳಿಗೆ ಸ್ಥಳೀಯ ಶಾಸಕರಾದ ಶ್ರೀ ಗಣೇಶ್ ಪ್ರಸಾದ್ ಅವರ ಒತ್ತಾಸೆಯಿಂದ ಇದು ಸಾಧ್ಯವಾಗಿದೆ.


ವಿರೋಧಪಕ್ಷಗಳ ಅಪಪ್ರಚಾರ:
ನಮ್ಮ ಸರ್ಕಾರದ ಮೂರು ವರ್ಷಗಳ ಅಧಿಕಾರದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ. ಆದಾಗ್ಯೂ ವಿರೋಧಪಕ್ಷಗಳು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದೆ. ಆದರೆ ಜನರು ಇದರ ಸತ್ಯಾಸತ್ಯತೆಯನ್ನು ಅರಿಯಬೇಕು ಎಂದರು.


ಮಹಿಳಾ ಮೀಸಲಾತಿ ಅತ್ಯಗತ್ಯ:
ಪ್ರಸ್ತುತ, ಮಹಿಳಾ ಮೀಸಲಾತಿ ಬಿಲ್ ಅನ್ನು ಕಾಂಗ್ರೆಸ್ ವಿರೋಧಿಸಿತು ಎಂದು ಬಿಜೆಪಿ ಸುಳ್ಳುಪ್ರಚಾರ ಮಾಡುತ್ತಿದೆ. ಆದರೆ ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಹಿಂದೆ ಸಂವಿಧಾನದ ಕಲಂ 73,74 ತಿದ್ದುಪಡಿಯನ್ನು ಬಿಜೆಪಿಯವರು ವಿರೋಧಿಸಿದ್ದರು. ಪ್ರಧಾನಿ ಮೋದಿಯವರು ಮಹಿಳಾ ಮೀಸಲಾತಿಯನ್ನು ವಿರೋಧಿಸಿದವರನ್ನು ಮಹಿಳೆಯರು ಕ್ಷಮಿಸುವುದಿಲ್ಲ ಎಂದಿದ್ದಾರೆ. ಆದರೆ 2023 ರಲ್ಲಿಯೇ ಮಹಿಳಾ ಮೀಸಲಾತಿ ಕಾಯ್ದೆ ತರಲಾಗಿದ್ದು, ಈ ಕಾಯ್ದೆಗೆ ಕಾಂಗ್ರೆಸ್ ವಿರೋಧಿಸದೇ ಸ್ವಾಗತಿಸಿದ್ದೆವು. ಆದರೆ ಸಹಮತಿ ಸೂಚಿಸಲಾಗಿದ್ದ ಮಹಿಳಾ ಮೀಸಲಾತಿಯನ್ನು 2028ರವರೆಗೆ ಜಾರಿಗೆ ತರಲು ಸಾಧ್ಯವಿಲ್ಲವೆಂದು ಬಿಜೆಪಿಯವರೇ ಹೇಳಿದರು. ಕಾಂಗ್ರೆಸ್ ಪಕ್ಷ ಎಂದಿಗೂ ಮಹಿಳಾ ಮೀಸಲಾತಿಯನ್ನು ಬೆಂಬಲಿಸುತ್ತದೆ. ಜನಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರಿದ್ದು, ಅವರಿಗೆ ನ್ಯಾಯಯುತವಾದ ಮೀಸಲಾತಿ ದೊರೆಯಬೇಕಿರುವುದು ಅತ್ಯಗತ್ಯ ಎಂದರು.


ಡಿಲಿಮಿಟೇಷನ್ ಕಾಯ್ದೆಗೆ ಕಾಂಗ್ರೆಸ್ ವಿರೋಧ:
ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯತಿಗಳು, ನಗರಸಭೆ , ನಗರಪಾಲಿಕೆಗಳಲ್ಲಿ ಶೇ.50 ರಷ್ಟು ಮಹಿಳೆಯರಿದ್ದು, ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ. ಪ್ರಸ್ತುತ, ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಕಾಯ್ದೆಯ ಜೊತೆಗೆ ಡೀಲಿಮಿಟೇಷನ್ ಕಾಯ್ದೆ ತರಲು ಪ್ರಯತ್ನಿಸಿದ್ದರಿಂದ ವಿರೋಧವನ್ನು ವ್ಯಕ್ತಪಡಿಸಲಾಗಿದೆ. ಕಾಂಗ್ರೆಸ್ ಡಿಲಿಮಿಟೇಷನ್ ಕಾಯ್ದೆ ಯನ್ನು ವಿರೋಧಿಸಿದೆಯೇ ಹೊರತು ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಸಾಗುತ್ತಿದೆ:


ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ವಿರೋಧಿಸಿದರು. ಆದರೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಹಲವು ರಾಜ್ಯಗಳಲ್ಲಿ ಅನುಸರಿಸುತ್ತಿದ್ದಾರೆ. ಗ್ಯಾರಂಟಿಗಳನ್ನು ಜಾರಿಗೊಳಿಸಿದರೆ, ಕರ್ನಾಟಕ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿಯವರು ಟೀಕಿಸಿದ್ದರು. ಆದರೂ, ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಯನ್ನು ಸಾಧಿಸುತ್ತಿರುವುದಕ್ಕೆ , ಇಂದು ಗುಂಡ್ಲುಪೇಟೆಯಲ್ಲಿ ನಡೆದಿರುವ ಈ ಕಾರ್ಯಕ್ರಮವೇ ಸಾಕ್ಷಿ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುತ್ತದೆ ಎಂದರು.
ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಒಟ್ಟು 1 ಲಕ್ಷ 60 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಎಸ್.ಸಿ.ಎಸ್. ಪಿ / ಟಿ ಎಸ್ ಪಿ ಯೋಜನೆಯಡಿ 1 ಲಕ್ಷ 10 ಸಾವಿರ ಕೋಟಿ ಮಾತ್ರ ವೆಚ್ಚ ಮಾಡಿದೆ ಎಂದರು.


ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆ:
ಸಮಾಜದಲ್ಲಿ ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು, ಹಿಂದುಳಿದವರು ಹಾಗೂ ಎಲ್ಲಾ ಧರ್ಮ , ಜಾತಿಗಳ ಬಡವರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಎಂದಿಗೂ ಬಡವರ, ಅಲ್ಪಸಂಖ್ಯಾತರ, ದಲಿತರ ಪಕ್ಷ. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ ಎಂದರು.
ಬಿಜೆಪಿ ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಅವರು ಎಂದಿಗೂ ಬಡವರ ಪರವಾಗಿಲ್ಲ ಹಾಗೂ ಸಂವಿಧಾನ ವಿರೋಧಿಗಳು ಎಂದರು.


ಶಾಸಕ ಗಣೇಶ್ ಪ್ರಸಾದ್ ಅವರಿಗೆ ಕೆಲಸ ಮಾಡುವ ಉತ್ಸಾಹವಿದ್ದು, ಅದಕ್ಕೆ ಸರ್ಕಾರ ಸಹಕಾರ ನೀಡಲಿದೆ ಎಂದರು. ಗುಂಡ್ಲುಪೇಟೆಯಲ್ಲಿ ಸಂಚಾರ ಪೊಲೀಸ್ ಠಾಣೆಯನ್ನು ಸ್ಥಾಪಿಸಲು ಈ ಬಾರಿ ಆಯವ್ಯಯದಲ್ಲಿ ಘೋಷಣೆ ಮಾಡಲಾಗಿದೆ. ಕನಕ ಭವನಕ್ಕೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

Continue Reading

Latest

ಕುಮಾರಸ್ವಾಮಿಗೆ ಬೆಂಗಳೂರಿನ ಬಗ್ಗೆ ಅರಿವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

VISTARANEWS.COM


on

ಬೆಂಗಳೂರು: ಜೆಡಿಎಸ್‌ ಧುರೀಣ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೆಂಗಳೂರಿನ ಬಗ್ಗೆ ಅರಿವು ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಬೆಂಗಳೂರಿನ ಬಗ್ಗೆ ಜಿಬಿಎ ಬಗ್ಗೆ ಮಾಹಿತಿ ಇಲ್ಲ ಎಂದಾದರೆ, ಸಮಿತಿಯಲ್ಲಿದ್ದ ಅವರ ಪಕ್ಷದ ಶಾಸಕರಿಂದ ಕೇಳಿ ತಿಳಿದುಕೊಳ್ಳಲಿ ಎಂದರು. ಬಿಜೆಪಿ, ಜೆಡಿಎಸ್‌‍ ಸೇರಿದಂತೆ ಎಲ್ಲಾ ಪಕ್ಷಗಳ ಶಾಸಕರು ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು. ಎಲ್ಲರ ಅಭಿಪ್ರಾಯ ಪಡೆದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ವಿರೋಧ ಪಕ್ಷಗಳ ಅಭಿಪ್ರಾಯಗಳು ಏನೇ ಇರಬಹುದು. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆಂಬ ಸಣ್ಣ ಅನುಭವ ತಮಗಿದೆ. ಸಭೆಯಲ್ಲಿ ಎಷ್ಟು ಗಂಟೆ ಯಾವ ರೀತಿ ಚರ್ಚೆ ನಡೆಸಲಾಗಿದೆ ಎಂದು ಶಾಸಕರನ್ನು ಕೇಳಿ ಕುಮಾರಸ್ವಾಮಿ ತಿಳಿದುಕೊಳ್ಳಲಿ ಎಂದರು. ಜಿಬಿಎಗೆ ಚುನಾವಣೆ ನಡೆಸಲು ಈಗಾಗಲೇ ನಾವು ಸಿದ್ಧರಿದ್ದೇವೆ. ನ್ಯಾಯಾಲಯ ಸೂಕ್ತ ನಿರ್ದೇಶನ ನೀಡಬೇಕು. ಸರ್ಕಾರ ಅದರಂತೆ ತೀರ್ಮಾನ ತೆಗೆದುಕೊಳ್ಳಬೇಕು. ಜಿಬಿಎ ವತಿಯಿಂದ ಎಲ್ಲಾ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಕೇಂದ್ರದಿಂದ ಅನುದಾನ ಬರುತ್ತಿಲ್ಲ ಎಂದು ಜಿಬಿಎ ಮುಖ್ಯ ಆಯುಕ್ತರು ಪತ್ರ ಬರೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಆ ರೀತಿ ಪತ್ರ ಬರೆದಿದ್ದರೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು. ಯಾವುದೇ ಹಗೆ ಇಲ್ಲ: ಅಲ್ಪಸಂಖ್ಯಾತರ ವಿಚಾರವಾಗಿ ಕಾಂಗ್ರೆಸ್‌‍ನಲ್ಲಿ ಯಾರೂ ಹಗೆ ಸಾಧಿಸುತ್ತಿಲ್ಲ. ಪಕ್ಷದ ಶಿಸ್ತಿನಲ್ಲಿ ನೀಡುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು. ಹೈಕಮಾಂಡ್‌ ನಿರ್ದೇಶನ ಪ್ರಕಾರ ಕೆಪಿಸಿಸಿ ಕ್ರಮ ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು. ಕುಡಿಯುವ ನೀರಿನ ಸಮಸ್ಯೆಗೆ ಮುಂಜಾಗ್ರತೆ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಇರುವ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

Continue Reading

Latest

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

VISTARANEWS.COM


on

ಬೆಂಗಳೂರು: ನನ್ನ ಮೇಲೆ ನಡೆದ ಇಡಿ ದಾಳಿಗೂ ನನ್ನ ತಂದೆ, ಶಾಸಕ ಬಿಡಿಎ ಅಧ್ಯಕ್ಷರೂ ಆದ ಎನ್.ಎ. ಹ್ಯಾರಿಸ್‌ ಅವರಿಗೂ ಯಾವುದೇ ಸಂಬಂಧವಿಲ್ಲ. ನನ್ನ ಹಾಗೂ ನನ್ನ ತಮ್ಮನ ಮನೆಗಳ ಮೇಲೆ ದಾಳಿ ನಡೆದಿದೆ ಎಂದು ಯುವ ಕಾಂಗ್ರೆಸ್‌ ಮುಖಂಡ ನಳಪಾಡ್‌ ಸ್ಪಷ್ಟಪಡಿಸಿದ್ದಾರೆ. ಶ್ರೀಕಿ ಜತೆ ಬಿಟ್‌ ಕಾಯಿನ್‌ ಅವ್ಯವಹಾರ ನಡೆಸಿರುವುದಕ್ಕೆ ಸಂಬಂಧಪಟ್ಟಂತೆ ನಿನ್ನೆ ನಳಪಾಡ್‌ ಅವರ ಮೇಲೆ ಜಾರಿ ನಿರ್ಧೇಶನಾಲಯ ದಾಳಿ ನಡೆಸಿತ್ತು. ಇಂದು ಪ್ರತಿಕ್ರಿಯೆ ನೀಡಿದ ಅವರು, ಶ್ರೀಕಿ ನನಗೆ ಪರಿಚಯ ಇಲ್ಲ ಎಂದು ಹೇಳುವುದಿಲ್ಲ. ಶ್ರೀಕಿ ಜತೆಯಲ್ಲಿ ಕುಳಿತು ಊಟ ಮಾಡಿರಬಹುದು ಅಷ್ಟೇ. ನನ್ನ ತಂದೆ ಹ್ಯಾರಿಸ್‌ ಅವರಿಗೆ ಸಚಿವ ಹುದ್ದೆ ತಪ್ಪಿಸಲು ವಿಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ ಎಂದು ಹೇಳಿದ್ದಾರೆ.

Continue Reading

Latest

ದಲಿತರಿಗೆ ಒಳ ಮೀಸಲಾತಿ: ಏ.24ರಂದು ವಿಶೇಷ ಸಂಪುಟ ಸಭೆ

VISTARANEWS.COM


on

ಕರ್ನಾಟಕದಲ್ಲಿ ದಲಿತ ಸಮುದಾಯದ ದೀರ್ಘಕಾಲದ ಬೇಡಿಕೆಯಾದ ಒಳಮೀಸಲಾತಿಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಒಟ್ಟು ಮೀಸಲಾತಿ ಪ್ರಮಾಣವು ಶೇಕಡಾ 50ರ ಮಿತಿಯನ್ನು ಮೀರದಂತೆ ದಲಿತರ 101 ಉಪಜಾತಿಗಳಿಗೆ ನ್ಯಾಯಸಮ್ಮತವಾಗಿ ಮೀಸಲಾತಿ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ಏಪ್ರಿಲ್ 24ರಂದು ವಿಶೇಷ ಸಂಪುಟ ಸಭೆಯನ್ನು ಕರೆಯಲಾಗಿದೆ. ಎಡಗೈ ಸಮುದಾಯದವರು ತಮಗೆ ಶೇಕಡಾ 6ರಷ್ಟು ಒಳಮೀಸಲಾತಿ ನೀಡಬೇಕೆಂದು ಪಟ್ಟು ಹಿಡಿದಿದ್ದರಿಂದ, ಈ ಜಟಿಲ ಸಮಸ್ಯೆಯನ್ನು ಬಗೆಹರಿಸಲು ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಸದ್ಯ ಇರುವ ಶೇಕಡಾ 15ರಷ್ಟು ಪರಿಶಿಷ್ಟ ಜಾತಿ ಮೀಸಲಾತಿಯಲ್ಲೇ ವಿವಿಧ ಗುಂಪುಗಳಿಗೆ ಹಂಚಿಕೆ ಮಾಡಲು ಶಿಫಾರಸು ಮಾಡಿದೆ.

ತಜ್ಞರ ವರದಿಯ ಶಿಫಾರಸಿನಂತೆ, ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ ಶೇ. 5.29ರಷ್ಟು ಹಾಗೂ ಭೋವಿ, ಲಂಬಾಣಿ, ಕೊರವ ಮತ್ತು ಕೊರಮ ಸಮುದಾಯಗಳಿಗೆ ಒಟ್ಟಾಗಿ ಶೇ. 4.42ರಷ್ಟು ಮೀಸಲಾತಿಯನ್ನು ನಿಗದಿಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರದಿಯನ್ನು ಆಧರಿಸಿ ಒಳಮೀಸಲಾತಿಯನ್ನು ಜಾರಿಗೆ ತರಲು ಗಂಭೀರ ಆಲೋಚನೆ ನಡೆಸಿದ್ದಾರೆ. ರಾಜ್ಯದಲ್ಲಿ ನಿರುದ್ಯೋಗದ ಬಗ್ಗೆ ಯುವಜನರಿಂದ ಪ್ರತಿಭಟನೆ ವ್ಯಕ್ತವಾದಾಗ ಸರ್ಕಾರವು 56,432 ಹುದ್ದೆಗಳ ಭರ್ತಿಗೆ ಭರವಸೆ ನೀಡಿತ್ತಾದರೂ, ಒಳಮೀಸಲಾತಿಯ ಗೊಂದಲದಿಂದಾಗಿ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆಗಳು ಕಳೆದ ಕೆಲವು ಸಮಯದಿಂದ ಸ್ಥಗಿತಗೊಂಡಿದ್ದವು. ಹೀಗಾಗಿ ಈ ವಿವಾದವನ್ನು ಬಗೆಹರಿಸುವುದು ಸರ್ಕಾರದ ಮುಂದಿರುವ ಅನಿವಾರ್ಯತೆಯಾಗಿದೆ.

ರಾಜಕೀಯವಾಗಿಯೂ ಈ ವಿಷಯವು ಸರ್ಕಾರದ ಮೇಲೆ ಒತ್ತಡ ತಂದಿದೆ. ಕಳೆದ ಸಚಿವ ಸಂಪುಟ ಸಭೆಯಲ್ಲಿ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಯಾವುದೇ ಕಠಿಣ ನಿರ್ಧಾರ ಕೈಗೊಂಡಿರಲಿಲ್ಲ. ಆದರೆ, ಎಡಗೈ ಸಮುದಾಯದ ಮುಖಂಡರಾದ ಸಚಿವ ಕೆ.ಎಚ್. ಮುನಿಯಪ್ಪ ಅವರು ಈ ವಿಚಾರದಲ್ಲಿ ಸರ್ಕಾರ ವಿಳಂಬ ಮಾಡಬಾರದೆಂದು ಕಠಿಣ ನಿಲುವು ತಳೆದಿದ್ದಾರೆ. ಒಂದು ವೇಳೆ ಸರ್ಕಾರ ಒಳಮೀಸಲಾತಿ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ ತಾವು ಅಧಿಕಾರ ಬಿಟ್ಟು ಹೊರಬರಬೇಕಾದ ಅನಿವಾರ್ಯತೆ ಎದುರಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಏಪ್ರಿಲ್ 24ರ ಸಂಪುಟ ಸಭೆಯು ದಲಿತ ಸಮುದಾಯದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿಯಾಗಿದೆ.

Continue Reading
Advertisement
Latest1 hour ago

ಮಹಿಳಾ ಮೀಸಲಾತಿಗೆ ಬೆಂಬಲ; ಡಿಲಿಮಿಟೇಷನ್‌ ಗೆ ವಿರೋಧ:ಸಿಎಂ ಸಿದ್ದರಾಮಯ್ಯ ಸಷ್ಟನೆ

Latest1 hour ago

ಕುಮಾರಸ್ವಾಮಿಗೆ ಬೆಂಗಳೂರಿನ ಬಗ್ಗೆ ಅರಿವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Latest1 hour ago

ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ

Latest2 hours ago

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

Latest2 hours ago

ದಲಿತರಿಗೆ ಒಳ ಮೀಸಲಾತಿ: ಏ.24ರಂದು ವಿಶೇಷ ಸಂಪುಟ ಸಭೆ

Latest2 hours ago

“ಗ್ರೇಟರ್ ಇಸ್ರೇಲ್” ಸಾಕಾರಕ್ಕೆ ನೆತನ್ಯಾಹು ಬಿಗ್‌ ಪ್ಲಾನ್:‌ ಮಧ್ಯ ಪ್ರಾಚ್ಯದಲ್ಲಿ ಶಾಂತಿಗಿಲ್ಲ ನೆಲೆ

Latest2 hours ago

ಜೆಡಿಎಸ್‌ ಗೆ ಮರಳುತ್ತೀರಾ?; ಸಚಿವ ಜಮೀರ್‌ ಅಹಮದ್‌ ಕೊಟ್ಟ ಉತ್ತರ ಏನು?

Latest2 hours ago

ಬೇಸಿಗೆಯಲ್ಲೂ ಸಣ್ಣ ನೀರಾವರಿ ಕೆರೆಗಳಲ್ಲಿ ಸಮೃದ್ದ ನೀರು ಸಂಗ್ರಹ: ಸಚಿವ ಎನ್‌ ಎಸ್‌ ಭೋಸರಾಜು

Latest2 hours ago

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

Latest3 hours ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ ಆಕ್ರೋಶ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌