Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ - Vistara News

ಉಡುಪಿ

Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಯುವಕರ ಗ್ಯಾಂಗ್‌ವೊಂದು ಕೈಯಲ್ಲಿ ತಲ್ವಾರ್‌ ಹಿಡಿದು ರಸ್ತೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ್ದಾರೆ. ಅನಿರೀಕ್ಷಿತ ದಾಳಿಯಿಂದಾಗಿ ನಾಲ್ಕೈದು ಮಂದಿ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

assault case
ಗಾಂಜಾ ನಶೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ ಯುವಕರ ತಂಡ.. ಆಸ್ಪತ್ರೆಗೆ ದಾಖಲಾದ ಯುವಕ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಉಡುಪಿಯ ಕುಂದಾಪುರ ಸಮೀಪದ ವಕ್ವಾಡಿಯಲ್ಲಿ ಗಾಂಜಾ ನಶೆಯಲ್ಲಿ ಬಂದ ಹತ್ತಾರು ಯುವಕರ ಗ್ಯಾಂಗ್‌ವೊಂದು ತಲ್ವಾರ್‌ (Assault Case) ಝಳಪಿಸಿದೆ. ನಿನ್ನೆ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ನಾಲ್ಕೈದು ಜನರಿಗೆ ಗಂಭೀರವಾಗಿ ಗಾಯವಾಗಿದೆ.

ವಕ್ವಾಡಿಯಲ್ಲಿ ಗಾಂಜಾ ನಶೆಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ದಾಂಧಲೆ ಮಾಡಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಆಟೋ, ಬೈಕ್ ಮೇಲು ತಲ್ವಾರ್‌ ಬೀಸಿ ಹಾನಿ ಮಾಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೆ ಪಕ್ಕದಲ್ಲಿ ನಿಂತಿದ್ದ ಅಶೋಕ್ ಮತ್ತು ಚಂದ್ರಶೇಖರ್ ಎಂಬುವವರ ಮೇಲೆ ದಾಳಿ ಮಾಡಿದ್ದಾರೆ.

ಇದರಿಂದಾಗಿ ವಕ್ವಾಡಿಯ ಚಂದ್ರಶೇಖರ್ (27) ಮತ್ತು ಅಶೋಕ್ ದೇವಾಡಿಗ (45) ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವಕ್ವಾಡಿಯ ಆದರ್ಶ(33), ಎಡ್ವರ್ಡ್(35), ಗಣೇಶ್ ಕುಂಭಾಶಿ(28), ಗೋವರ್ಧನ್(32)ಬಂಧಿತರು. ಪ್ರಕರಣದಲ್ಲಿ ಭಾಗಿಯಾಗಿದ್ದ ಉಳಿದ ಆರೋಪಿಗಳು ಪರಾರಿ ಆಗಿದ್ದು, ಪೊಲೀಸ್‌ರು ಹುಡುಕಾಟ ನಡೆಸಿದ್ದಾರೆ.

ವಕ್ವಾಡಿ, ಗೋಪಾಡಿ ಭಾಗದಲ್ಲಿ ಗಾಂಜಾ, ಡ್ರಗ್ ನಶೆ ವಿಪರೀತವಾಗಿದ್ದು, ಅಪರಾಧ ಚಟುವಟಿಕೆ ಹೆಚ್ಚಾಗಿದೆ. ಹಲವಾರು ವರ್ಷಗಳಿಂದ ದಂಧೆ ಜತೆಗೆ ಅನೈತಿಕ ಚಟುವಟಿಕೆ ನಡೆಯುತ್ತಿದೆ. ಸಾಕಷ್ಟು ಭಾರಿ ಈ ಬಗ್ಗೆ ಸ್ಥಳೀಯರು ದೂರು ನೀಡಿದ್ದರು ಇದುವರೆಗೂ ಸರಿಯಾದ ಕ್ರಮ ತೆಗೆದುಕೊಂಡಿಲ್ಲ ಜನರು ಕಿಡಿಕಾರಿದ್ದಾರೆ.

ಇದನ್ನೂ ಓದಿ: CM Siddaramaiah: ಇಂದು ಕಟಕಟೆ ಏರಲಿದೆ ಮುಡಾ ಪ್ರಕರಣ; 20 ಅಂಶಗಳೊಂದಿಗೆ ಸಿದ್ದರಾಮಯ್ಯ ಹೈಕೋರ್ಟ್‌ಗೆ; ಇಂದು ಏನೇನಾಗಲಿದೆ?

ಚಿಕ್ಕಬಳ್ಳಾಪುರದಲ್ಲಿ ರೋಡ್‌ ರೋಮಿಯೊಗಳ ವ್ಹೀಲಿಂಗ್‌

ಚಿಕ್ಕಬಳ್ಳಾಪುರದಲ್ಲಿ ರೋಡ್‌ ರೋಮಿಯೊಗಳ ವ್ಹೀಲಿಂಗ್‌ ಹುಚ್ಚಾಟ ಹೆಚ್ಚಾಗಿದೆ. ಹುಡುಗಿಯರಿಗೆ ಗಾಳ ಹಾಕಲು ಬಸ್ ಹಿಂದೆ ವ್ಹೀಲಿಂಗ್‌ ಮಾಡಿ ಫೋಸ್‌ ಕೊಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ 44 ಸೇರಿದಂತೆ ಹಲವು ರಸ್ತೆಗಳಲ್ಲಿ ವ್ಹೀಲಿಂಗ್ ಹಾವಳಿಗೆ ಇತರ ಸವಾರರು ಆತಂಕಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

Karnataka Weather Forecast
Karnataka Weather Forecast

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಗುಡುಗು ಸಹಿತ ಮಳೆ

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಎಫೆಕ್ಟ್‌; ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ 20ಕ್ಕೂ ಹೆಚ್ಚು ಕುರಿಗಳು

Karnataka Weather Forecast : ಶನಿವಾರ ರಾತ್ರಿ ಸುರಿದ ಮಳೆಯು ಹಲವೆಡೆ ಅವಾಂತರವನ್ನೇ ಸೃಷ್ಟಿಸಿದೆ. ಭಾರಿ ಮಳೆಗೆ (Rain News) ಬೆಳೆಗಳು ಜಲಾವೃತಗೊಂಡು ರೈತರು ಕಂಗಲಾಗಿದ್ದಾರೆ.

VISTARANEWS.COM


on

By

Karnataka weather Forecast
Koo

ಯಾದಗಿರಿ ಜಿಲ್ಲೆಯಾದ್ಯಂತ ನಿನ್ನೆ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ (Rain News) ಬೂದನೂರಿನ ಹಿರೇಹಳ್ಳ ತುಂಬಿ ಹರಿಯುತ್ತಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ 20ಕ್ಕೂ ಹೆಚ್ಚು ಕುರಿಗಳು ಕೊಚ್ಚಿ ಹೋಗಿವೆ. ಇತ್ತ ಹಿರೇಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ 50 ಕುರಿಗಳ ರಕ್ಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬೂದನೂರಿನ ಹಿರೇಹಳ್ಳದಲ್ಲಿ ಘಟನೆ (Karnataka Weather Forecast) ನಡೆದಿದೆ. ಬೂದನೂರ ಗ್ರಾಮದ ಸಾಮಯ್ಯ ಎಂಬ ಕುರುಗಾಯಿಗೆ ಸೇರಿದ್ದ ಕುರಿಗಳನ್ನು ಸಂಜೆ ಎಂದಿನಂತೆ ಹಳ್ಳ ದಾಟಿ ಬರುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಗ್ರಾಮಸ್ಥರ ಸಹಾಯದಿಂದ 50 ಕ್ಕೂ ಹೆಚ್ಚು ಕುರಿಗಳ ರಕ್ಷಣೆ ಮಾಡಲಾಗಿದೆ. 20 ಕ್ಕೂ ಹೆಚ್ಚು ಕುರಿಗಳು ಹಿರೇಹಳ್ಳದ ನೀರು ಪಾಲಾಗಿವೆ.

ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತ ಭಾನುವಾರ ಅರ್ಧ ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆಯಾಗಿದೆ. ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಮಳೆ ಆರ್ಭಟ ಜೋರಾಗಿತ್ತು. ಮಳೆಗೆ ರಸ್ತೆ ಹಾಗೂ ಚರಂಡಿಗಳ ಮೇಲೆ ನೀರು ಹರಿದು ಮನೆಗಳತ್ತ ತೆರಳಲು ಜನರು ಪರದಾಡಿದ್ದರು. ರಾಜಧಾನಿ ಬೆಂಗಳೂರಿನ ಸುತ್ತಮುತ್ತಲೂ ಮಳೆಯಾಗಿದೆ.

ಚಿಕ್ಕಬಳ್ಳಾಪುರದಲಿ ಬಾಳೆ ತೋಟ ನಾಶ

ಇಡೀ ರಾತ್ರಿ ಸುರಿದ ಭಾರಿ ಮಳೆಗೆ ಬಾಳೆ ತೋಟ ನಾಶವಾಗಿದೆ. ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು ಹತ್ತು ಲಕ್ಷ ಬೆಲೆ ಬಾಳುವ 2500 ಬಾಳೆ ಗಿಡಗಳು ನಾಶವಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಬೀಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹನುಮಂತರಾಯಪ್ಪ ಎಂಬ ರೈತನಿಗೆ ಸೇರಿದ ಬಾಳೆ ತೋಟ ಫಸಲಿಗೆ ಬಂದಿದ್ದ ಬೆಳೆ ನೆಲಕಚ್ಚಿದೆ. ಇತ್ತ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಮೇಲೂರು ಗ್ರಾಮ ದೇವತೆ ಗಂಗಾದೇವಿ ದೇವಸ್ಥಾನ ಜಲಾವೃತಗೊಂಡಿದೆ. ಮನೆಗಳಿಗೆ ಹಾಗೂ ದೇವಸ್ಥಾನಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಅಧಿಕಾರಿಗಳಿಗೆ ಜನರು ಹಿಡಿಶಾಪ ಹಾಕಿದ್ದಾರೆ.

ತುಮಕೂರಿನಲ್ಲಿ ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

ತುಮಕೂರು ಜಿಲ್ಲೆಯ ಹಲವೆಡೆ ತಡರಾತ್ರಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿ ರಸ್ತೆಗಳು ಜಲಾವೃತಗೊಂಡಿದೆ. ತುಮಕೂರು ನಗರ, ಗುಬ್ಬಿ, ಕುಣಿಗಲ್ ತಾಲೂಕಿನಲ್ಲಿ ಮಳೆಯಾಗಿದೆ. ತುಮಕೂರು ನಗರದ ಬನಶಂಕರಿಯಲ್ಲಿ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರ ಪರದಾಟಬೇಕಾಯಿತು. ಹಲವಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ವಿಜಯಪುರದಲ್ಲಿ ಜಮೀನು ಜಲಾವೃತ

ಕಾಲುವೆಗೆ ನೀರು ಬಿಟ್ಟಿದ್ದರಿಂದ ಭೂಮಿಯ ಬದು ಒಡೆದು ಜಮೀನಿಗೆ ನೀರು ನುಗ್ಗಿದೆ. ಕಾಲುವೆ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರೈತರು ಬೆಳೆದ ಮುಂಗಾರು ಬೆಳೆಗಳಾದ ತೊಗರಿ, ಮೆಕ್ಕೆಜೋಳ ಸಂಪೂರ್ಣ ಜಲಾವೃತಗೊಂಡಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೊಟ್ಯಾಳ ಗ್ರಾಮದ ರೈತರ ಗೋಳು ಕೇಳುವವರು ಇಲ್ಲದಂತಾಗಿದೆ. ನೂರಾರು ಎಕರೆದಲ್ಲಿ ಬೆಳೆದ ಬೆಳೆ ಸಂಪೂರ್ಣಹಾನಿಯಾಗಿದೆ. ಕೂಡಲೇ ಕಾಲುವೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಜತೆಗೆ ನಾಶವಾದ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಮಳೆಗೆ ಧರೆಗುರುಳಿದ ಮರಗಳು

ನಿನ್ನೆ ಶನಿವಾರ ಸುರಿದ ಗಾಳಿ ಮಳೆಗೆ ಅಡಿಕೆ ಹಾಗೂ ತೆಂಗಿನ ಮರಗಳು ಧರೆಗುರುಳಿವೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಾಸಡಿ ಗ್ರಾಮ ಒಂದರಲ್ಲೇ 3 ಸಾವಿರಕ್ಕೂ ಅಧಿಕ ಅಡಿಕೆ ಮರ 200ಕ್ಕೂ ಅಧಿಕ ತೆಂಗಿನ ಮರಗಳು ಉರುಳಿ ಬಿದ್ದಿವೆ. ಫಲಕ್ಕೆ ಬಂದ ಅಡಿಕೆ ಮರ ಕಳೆದುಕೊಂಡ ರೈತರು ಗೋಳಾಡುತ್ತಿದ್ದಾರೆ. 16 ವರ್ಷಗಳ ಕಾಲ ಮಕ್ಕಳಂತೆ ಸಾಕಿದ್ದ ಅಡಿಕೆ ಮರ ಧರೆಗುರುಳಿದ್ದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ. ರೈತರೂಂದಿಗೆ ಮಾಜಿ ಸಚಿವ ರೇಣುಕಾಚಾರ್ಯ ಬೆಳೆ ಹಾನಿ ತೋಟಗಳಿಗೆ ಭೇಟಿ ನೀಡಿದರು. ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು. ಬೆಳೆ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ: POCSO Case: ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಆಸೆ ತೋರಿಸಿ ಅತ್ಯಾಚಾರವೆಸಗಿದ ಕಾಮುಕ

ನಾಳೆ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಆ.19ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನೂ ದಕ್ಷಿಣ ಒಳನಾಡಿನ ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಹಿನ್ನೆಲೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ (Rain News) ಮಾಡಲಾಗಿದೆ. ಕೆಲವೊಮ್ಮೆ ಗಾಳಿ ವೇಗವು ಬೀಸಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಇಂದು ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಚದುರಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್‌ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Dina Bhavishya: ಈ ರಾಶಿಯವರಿಗೆ ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

ಎಲ್ಲಿಗೆ ಹೋದರೂ, ಏನೇ ಮಾಡಿದರೂ, ಎಲ್ಲಿಂದ ಬಂದಿದ್ದೇವೆ (Kundapura Kannada Habba) ಎನ್ನುವುದು ಮುಖ್ಯ. ಆ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನನ್ನ ಸಿನಿಮಾದ ಎಲ್ಲ ಕಥೆಗಳಿಗೂ ಕುಂದಾಪುರದ ನನ್ನೂರು ಕೆರಾಡಿಯೇ ಕಾರಣ. ನಾನು ಬೆಳೆದ ಪರಿಸರವೇ ಪ್ರೇರಣೆ ಎಂದು ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಿಳಿಸಿದ್ದಾರೆ.

VISTARANEWS.COM


on

Kundapura Kannada Habba
Koo

ಬೆಂಗಳೂರು: ನನ್ನ ಸಿನಿಮಾದ ಕಥೆಗಳಿಗೆ ನನ್ನ ಊರು ಮತ್ತು ಯಕ್ಷಗಾನವೇ ಪ್ರೇರಣೆ ಎಂದು ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ (Kundapura Kannada Habba) ಹೇಳಿದರು. ‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ‘ಕುಂದಾಪುರ ಕನ್ನಡ ಹಬ್ಬ-2024’ ದ ಮೊದಲ ದಿನವಾದ ಶನಿವಾರ ‘ಊರ ಗೌರವ’ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಎಲ್ಲಿಗೆ ಹೋದರೂ, ಏನೇ ಮಾಡಿದರೂ, ಎಲ್ಲಿಂದ ಬಂದಿದ್ದೇವೆ ಎನ್ನುವುದು ಮುಖ್ಯ. ಆ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನನ್ನ ಸಿನಿಮಾದ ಎಲ್ಲ ಕಥೆಗಳಿಗೂ ಕುಂದಾಪುರದ ನನ್ನೂರು ಕೆರಾಡಿಯೇ ಕಾರಣ. ನಾನು ಬೆಳೆದ ಪರಿಸರವೇ ಪ್ರೇರಣೆ. ಅದರಲ್ಲೂ ಓದದೆಯೇ ರಾಮಾಯಣ-ಮಹಾಭಾರತದ ಸಾರ ತಿಳಿಯಲು ಯಕ್ಷಗಾನ ಕಾರಣ. ‘ಕಾಂತಾರ’ ಸಿನಿಮಾ ಚಿತ್ರೀಕರಣ ಕೂಡ ಕುಂದಾಪುರ ಪರಿಸರದಲ್ಲೇ ಆಗಿರುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: 7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

ನಮ್ಮ ಭಾಷೆ ಸಂಸ್ಕೃತಿ ಮಕ್ಕಳಿಗೆ ಗೊತ್ತಾಗಬೇಕು. ಅದಕ್ಕಾಗಿ ಇಂಥ ಹಬ್ಬಗಳು ಅತ್ಯಗತ್ಯ. ತುಳಸಿ ಕಟ್ಟೆಗಳು ಅಪರೂಪ ಆಗಿರುವ ಈ ಕಾಲದಲ್ಲಿ ಇಲ್ಲಿ ತುಳಸಿ ಕಟ್ಟೆ ಇಟ್ಟು ಉದ್ಘಾಟನೆ ನಡೆಸಿರುವುದು ಉತ್ತಮ ಸಂಗತಿ. ನಾನು‌ ಕೂಡ ನನ್ನ ಪ್ರತಿ ಸಿನಿಮಾದಲ್ಲೂ ಅಕ್ಕಿಮುಡಿ, ನೆಟ್ಟಿ ಮುಂತಾದವನ್ನು ತೋರಿಸುತ್ತಿರುತ್ತೇನೆ ಎಂದು ರಿಷಬ್ ಶೆಟ್ಟಿ ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಭಾಷೆಯ ಉಳಿವು ಬೆಳವಣಿಗೆ ದೃಷ್ಟಿಯಿಂದ ಈ ಕುಂದಾಪುರ ಕನ್ನಡ ಹಬ್ಬ ಉತ್ತಮ ಪ್ರಯೋಗ. ದಿನನಿತ್ಯದ ಬಳಕೆಯಲ್ಲಿ ಸಾಧ್ಯವಾದಷ್ಟೂ ಅಧಿಕ ಕುಂದಾಪುರ ಕನ್ನಡ ಬಳಕೆ ಆಗಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಅಧ್ಯಕ್ಷ ಡಾ.ದೀಪಕ್ ಶೆಟ್ಟಿ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ ಮುಂತಾದವರು ಉಪಸ್ಥಿತರಿದ್ದರು.

ಹಬ್ಬಕ್ಕೆ ತಾರಾ ಮೆರುಗು

ಕುಂದಾಪುರ ಕನ್ನಡ ಹಬ್ಬದ ಭಾನುವಾರದ ಕಾರ್ಯಕ್ರಮಕ್ಕೆ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ, ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ಗೋಲ್ಡನ್ ಸ್ಟಾರ್ ಗಣೇಶ್, ನಟ-ನಿರ್ಮಾಪಕ ಪ್ರಮೋದ್ ಶೆಟ್ಟಿ ಆಗಮಿಸಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಅವರನ್ನೂ ಆಹ್ವಾನಿಸಲಾಗಿದ್ದು, ಅವರೂ ಬರುವ ನಿರೀಕ್ಷೆ ಇದೆ. ಅಲ್ಲದೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರು ಇದೇ ಮೊದಲು ಸಂಗೀತ ಸಂಜೆ ಕಾರ್ಯಕ್ರಮ ನೀಡುತ್ತಿದ್ದು, ಇದು ಭಾನುವಾರದ ಪ್ರಮುಖ ಆಕರ್ಷಣೆ ಆಗಿರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇದನ್ನೂ ಓದಿ: Pralhad Joshi: ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗಿಯೇ ಇದೆ; ಪ್ರಲ್ಹಾದ್‌ ಜೋಶಿ ಸಮರ್ಥನೆ

ಕುಂದಾಪುರ ಕನ್ನಡ ಹಬ್ಬ ಆ.18 ರ ಕಾರ್ಯಕ್ರಮಗಳು

ಬೆಳಗ್ಗೆ 10 ಗಂಟೆಗೆ ಬಯಲಾಟ- ಗ್ರಾಮೀಣ ಉತ್ಸವ, ತಾರೆಯರ ಜತೆ ಮಾತುಕತೆ, ಕವಿತೆ., ಬೆಳಗ್ಗೆ 11 ಗಂಟೆಗೆ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ʼಡಾನ್ಸ್ ಕುಂದಾಪ್ರ ಡಾನ್ಸ್ʼ, ಬೆಳಗ್ಗೆ 11.15 ಕ್ಕೆ ಕುಂದಾಪುರ ಭಾಷೆ ಬದುಕು ಬರಹ ಕುರಿತ ನುಡಿಚಾವಡಿ, ಮಧ್ಯಾಹ್ನ 12 ಗಂಟೆಗೆ ಮನು ಹಂದಾಡಿ ಅವರಿಂದ ʼಹಂದಾಡ್ತಾ ನೆಗ್ಯಾಡಿʼ ಹಾಸ್ಯ ಕಾರ್ಯಕ್ರಮ., ಮಧ್ಯಾಹ್ನ 1.30 ಕ್ಕೆ ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ ʼಪೆಟ್ ಒಂದೇ, ಸ್ವರ ಬೇರೆʼ, ಮಧ್ಯಾಹ್ನ 2.30 ಕ್ಕೆ ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ ʼಮಂದಾರ್ತಿ ಮಾದೇವಿʼ, ಸಂಜೆ 4.30 ಕ್ಕೆ ರಥೋತ್ಸವ, ರಾತ್ರಿ 7.30 ಗಂಟೆಗೆ ʼರವಿ ಬಸ್ರೂರ್ ನೈಟ್ಸ್ʼ ವಿಶೇಷ ಸಂಗೀತ ಸಂಜೆ.

Continue Reading
Advertisement
murder case
ಚಿಕ್ಕಬಳ್ಳಾಪುರ13 mins ago

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

BJP-JDS Protest
ಪ್ರಮುಖ ಸುದ್ದಿ18 mins ago

BJP-JDS Protest: ಭಂಡತನ ಬಿಟ್ಟು ರಾಜೀನಾಮೆ ಕೊಡಿ; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ-ಜೆಡಿಎಸ್‌ ನಾಯಕರ ಆಗ್ರಹ

Chhaava teaser Vicky Kaushal Rashmika M
ಸ್ಯಾಂಡಲ್ ವುಡ್1 hour ago

Chhaava teaser: ‘ಛಾವಾ’ ಟೀಸರ್ ಔಟ್‌; ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ಗರ್ಜಿಸಿದ ವಿಕ್ಕಿ ಕೌಶಲ್!

Road Accident
ಬೆಂಗಳೂರು1 hour ago

Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

Uttarakhand Horror
ದೇಶ1 hour ago

Uttarakhand Horror: ದೇಶವನ್ನೇ ಬೆಚ್ಚಿಬೀಳಿಸೋ ಮತ್ತೊಂದು ಘಟನೆ! ಬಸ್‌ನಲ್ಲೇ ಯುವತಿ ಮೇಲೆ ಡ್ರೈವರ್‌ ಸೇರಿ ಐವರಿಂದ ಗ್ಯಾಂಗ್‌ರೇಪ್‌

muda case congress protest
ಪ್ರಮುಖ ಸುದ್ದಿ2 hours ago

MUDA Case: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ರಾಜಭವನ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರು

Vettaiyan VS Kanguva Vettaiyan to clash with Suriya's Kanguva
ಕಾಲಿವುಡ್2 hours ago

Vettaiyan VS Kanguva: ರಜನಿಕಾಂತ್ ಹೊಸ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌; ʻಕಂಗುವʼ ಜತೆ ಕ್ಲ್ಯಾಶ್‌!

Viral Video
Latest2 hours ago

Viral Video: ಹೂ ಮಾರಿ ಜೀವನ ಮಾಡುವ ತಾಯಿ ಬಳಿ ಐಫೋನ್‌ಗಾಗಿ ಮಗ ಮಾಡಿದ ಬ್ಲ್ಯಾಕ್‌ಮೇಲ್‌ ಏನು ನೋಡಿ!

Duniya Vijay 20 crore collection till today
ಸ್ಯಾಂಡಲ್ ವುಡ್2 hours ago

Duniya Vijay: 20 ಕೋಟಿ ರೂ. ಕಲೆಕ್ಷನ್‌ ಮಾಡಿ ʻಭೀಮʼ ದಾಖಲೆ ? ಇಲ್ಲಿಯವರೆಗಿನ ಕಲೆಕ್ಷನ್‌ ಎಷ್ಟು?

assault case
ಉಡುಪಿ2 hours ago

Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌