ಕುಂದಾಪುರ: ಪಟ್ಟಣದ ಭಂಡಾರ್‌ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜು ವತಿಯಿಂದ ಉದ್ಯಮಿ ಡಾ. ಹಾಲಾಡಿ ಶ್ರೀನಿವಾಸ ಶೆಟ್ಟಿ (Dr HS Shetty) ಅವರಿಗೆ ಸನ್ಮಾನ ಸಮಾರಂಭ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಡಿಸೆಂಬರ್ 8ರಂದು ಬೆಳಗ್ಗೆ 10.30ಕ್ಕೆ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವದಲ್ಲಿ ʼಡಾಕ್ಟರ್ ಆಫ್ ಸೈನ್ಸ್ʼ ಗೌರವಕ್ಕೆ ಭಾಜನರಾದ ಹಿನ್ನೆಲೆಯಲ್ಲಿ ಸಾಧಕ, ದಾನಿ ಪ್ರಾಕ್ತನ ವಿದ್ಯಾರ್ಥಿ ಹಾಗೂ ವಿಸ್ತಾರ ನ್ಯೂಸ್ ಕಾರ್ಯ ನಿರ್ವಾಹಕ ಚೇರ್ಮನ್ ಡಾ. ಹಾಲಾಡಿ ಶ್ರೀನಿವಾಸ ಶೆಟ್ಟಿ (Dr HS Shetty) ಅವರನ್ನು ಸನ್ಮಾನಿಸಲಾಗುತ್ತಿದೆ.
ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಅಧ್ಯಕ್ಷ ಡಾ. ಎಚ್. ಎಸ್. ಬಲ್ಲಾಳ್ ಅವರು ಸಾಧಕರಿಗೆ ಸನ್ಮಾನ ಮಾಡಲಿದ್ದಾರೆ. ಭಂಡಾರ್‌ಕಾರ್ಸ್ ಕಾಲೇಜು ವಿಶ್ವಸ್ಥ ಮಂಡಳಿ ಹಿರಿಯ ಸದಸ್ಯ ಕೆ. ಶಾಂತಾರಾಮ ಪ್ರಭು ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆಗಮಿಸಲಿದ್ದಾರೆ.
ಇದನ್ನೂ ಓದಿ | Yellapur News: ಯಲ್ಲಾಪುರದಲ್ಲಿ ಡಿ. 9, 10 ರಂದು ಜಿಲ್ಲಾ ಮಟ್ಟದ ಸಾಹಿತ್ಯ ಮತ್ತು ಗಮಕ ಅಧಿವೇಶನ
ಭಂಡಾರ್‌ಕಾರ್ಸ್ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ. ಜಿ. ಎಂ. ಗೊಂಡ, ಭಂಡಾರ್‌ಕಾರ್ಸ್ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ. ಡಾ. ಶುಭಕರಾಚಾರಿ, ಸಂಸ್ಥೆಯ ವಿಶ್ವಸ್ಥರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಬೋಧಕರು, ಬೋಧಕೇತರರು, ‘ರಕ್ಷಕ – ಶಿಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿರಲಿದ್ದಾರೆ.