Site icon Vistara News

Drowned in Lake: ಸ್ನೇಹಿತರ ಜೊತೆ ಈಜಲು ತೆರಳಿದ ಬಾಲಕ ಸಾವು

drowned boy udupi

ಉಡುಪಿ: ಸ್ನೇಹಿತರ ಜೊತೆಗೆ ಈಜಲು ತೆರಳಿದ ಬಾಲಕನೊಬ್ಬ ಮುಳುಗಿ (boy drowned) ಸಾವಿಗೀಡಾಗಿದ್ದಾನೆ. ಉಡುಪಿ ಜಿಲ್ಲೆಯ (udupi news) ಕಾಪು ತಾಲೂಕು ಬೆಳಪು ಕೆಐಎಡಿಬಿ ಯೋಜನಾ ಪ್ರದೇಶದಲ್ಲಿ (Drowned in Lake) ದುರ್ಘಟನೆ ನಡೆದಿದೆ.

ಬೆಳಪು ವಸತಿ ಬಡಾವಣೆ ಕಸ್ತೂರಿ ಅವರ ಪುತ್ರ ವಿಶ್ವಾಸ್ ನಾಯಕ್ (11) ಮೃತ ದುರ್ದೈವಿ. ಈತ ಇನ್ನಂಜೆ ಎಸ್‌ಎಸ್ ಆಂಗ್ಲಮಾಧ್ಯಮ ಶಾಲೆಯ ಏಳನೇಯ ತರಗತಿ ವಿದ್ಯಾರ್ಥಿಯಾಗಿದ್ದು, ಗುರುವಾರ ಶಾಲೆಯಿಂದ ಬಂದವನು ಸ್ನೇಹಿತರ ಜೊತೆ ಕೆರೆಗೆ ಈಜಲು ತೆರಳಿದ್ದ.

ಈಜುತ್ತಿದ್ದ ವಿಶ್ವಾಸ್ ಮುಳುಗಿ ಅಸ್ವಸ್ಥನಾಗಿದ್ದನ್ನು ಕಂಡು ಸ್ನೇಹಿತರು ಮಹಿಳೆಯೊಬ್ಬರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಸ್ಥಳೀಯರು ಕೆರೆಯಿಂದ ವಿಶ್ವಾಸ್‌ನನ್ನು ಮೇಲಕ್ಕೆತ್ತಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ವಿಶ್ವಾಸ್ ನಾಯಕ್ ಮೃತಪಟ್ಟಿದ್ದಾನೆ.

ಬೈಕುಗಳ ಡಿಕ್ಕಿ, ಪೊಲೀಸ್‌ ಕಾನ್‌ಸ್ಟೇಬಲ್‌ ಸಾವು

ತುಮಕೂರು: ಎರಡು ಬೈಕುಗಳ ನಡುವೆ ಡಿಕ್ಕಿಯಾಗಿ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.

ಶ್ರೀನಿವಾಸ್ (46) ಸ್ಥಳದಲ್ಲೇ ಮೃತ ಪಟ್ಟ ಪೊಲೀಸ್ ಸಿಬ್ಬಂದಿ. ತುಮಕೂರು ಜಿಲ್ಲೆ ಕುದೂರಿನಲ್ಲಿ ಅಪಘಾತ ನಡೆದಿದೆ. ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ಪೊಲೀಸರು ಸ್ಥಳಕ್ಕೆ ತೆರಳುವಷ್ಟರಲ್ಲಿ ಇನ್ನೊಂದು ಬೈಕ್‌ ನ ಸವಾರ ಸ್ಥಳದಲ್ಲಿರಲಿಲ್ಲ. ಪರಾರಿಯಾಗಿರಬಹುದು ಅಥವಾ ಗಾಯಗೊಂಡು ಆಸ್ಪತ್ರೆಗೆ ಸೇರಿರಬಹುದು ಎಂದು ಶಂಕಿಸಲಾಗಿದೆ.

ಬೆಂಗಳೂರಿನ ಉಪ್ಪಾರ ಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಅಗಿದ್ದ ಶ್ರೀನಿವಾಸ್ ನೆಲಮಂಗಲದ ಚಿಕ್ಕೇನಹಳ್ಳಿ ಮೂಲದವರು. ಸದ್ಯ ಬೆಂಗಳೂರಿನ ಕಮಲ ನಗರದಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ ಸಿಎಂ ಬಂದೋಬಸ್ತ್ ಡ್ಯೂಟಿ ಮುಗಿಸಿ ತೆರಳಿದ್ದರು. ರಾತ್ರಿ ಕುದೂರು ಮಾರ್ಗದಲ್ಲಿ ಏಕೆ ಹೋಗುತ್ತಿದ್ದರು ಎಂದು ತಿಳಿದು ಬಂದಿಲ್ಲ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Sirsi News: ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ, ಸಾವು

ರಾಮನಗರ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಕೇರಳ ಮೂಲದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚನ್ನಪಟ್ಟಣದ ಭೈರಾಪಟ್ಟಣ ಗ್ರಾಮದ ಬಳಿ ಘಟನೆ ನಡೆದಿದೆ.

ಅನಾಥ್ ಪಿ.ಎಸ್ (35) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಬೆಂಗಳೂರಿಂದ ಮೈಸೂರಿಗೆ ಹೋಗುತ್ತಿದ್ದ ಹ್ಯುಂಡೈ ಐಟ್ವೆಂಟಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ಡಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ವ್ಯಕ್ತಿಯ ತಲೆ ಛಿದ್ರವಾಗಿ, ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Exit mobile version