ಉಡುಪಿ: ಉಡುಪಿಯ (Udupi news) ಗಾಂಧಿನಗರದ ಬಾರ್ ಮಾಲೀಕರೊಬ್ಬರ ಮನೆಯಲ್ಲಿ ಭಾರಿ ಅಗ್ನಿ ಅವಘಡ (Fire Tragedy) ಸಂಭವಿಸಿದ್ದು, ಸುಟ್ಟ ಗಾಯಗಳಿಂದ (Burn injury) ಮಾಲೀಕ ಸಾವಿಗೀಡಾಗಿದ್ದಾರೆ. ಮಾಲೀಕರ ಪತ್ನಿಯೂ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಡುಪಿಯ ಅಂಬಲಪಾಡಿಯ ಗಾಂಧಿ ನಗರದಲ್ಲಿ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕರ ಮನೆಯಲ್ಲಿ ದುರ್ಘಟನೆ ನಡೆದಿದೆ. ಹೊತ್ತಿ ಉರಿಯುತ್ತಿದ್ದ ಮನೆಯ ಒಳಗೆ ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರಮಾನಂದ್ ಶೆಟ್ಟಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಶೆಟ್ಟಿಗೂ ಗಂಭೀರ ಸುಟ್ಟ ಗಾಯಗಳಾಗಿವೆ. ಇವರ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಜ್ವಾಲೆಯಿಂದಾಗಿ ಪ್ರಜ್ಞೆ ತಪ್ಪಿದ್ದ ದಂಪತಿಯನ್ನು ಅಗ್ನಿಶಾಮಕ ಸಿಬ್ಬಂದಿ ವಿನಾಯಕ್ ರಕ್ಷಿಸಿದ್ದರು. ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸಿದ್ದರು. ಬೆಂಕಿಯ ಜ್ವಾಲೆಗೆ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಪದವಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದ ವಿದ್ಯಾರ್ಥಿ ಆತ್ಮಹತ್ಯೆ
ಶಿವಮೊಗ್ಗ: ಪದವಿ ಸೆಮಿಸ್ಟರ್ ಪರೀಕ್ಷೆಯ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ವಿದ್ಯಾರ್ಥಿಯೊಬ್ಬ ಕಳೆನಾಶಕ ಸೇವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಅಡೂರು ಗ್ರಾಮದಲ್ಲಿ ನಡೆದಿದೆ. ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸಿ ಮನುಷ್. ಡಿ(19) ಮೃತ ದುರ್ದೈವಿ.
ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಮನುಷ್, ಇತ್ತೀಚೆಗೆ ನಡೆದ ಡಿಗ್ರಿ ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದ. ಹೀಗಾಗಿ ಮನನೊಂದ ಯುವಕ ಶುಕ್ರವಾರ ವಿಷ ಸೇವಿಸಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮನುಷ್ ಮೃತಪಟ್ಟಿದ್ದಾನೆ.
ಇದನ್ನೂ ಓದಿ | Fake CBI Officer: ಪೋಲಿಸರಿಗೆ ಆವಾಜ್ ಹಾಕುತ್ತಿದ್ದ ನಕಲಿ ಸಿಬಿಐ ಅಧಿಕಾರಿ ಅರೆಸ್ಟ್!
ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಯೊಂದಿಗೆ ಆತ್ಮಹತ್ಯೆಗೆ ಶರಣಾದ ವಿವಾಹಿತೆ
ಚಿಕ್ಕಬಳ್ಳಾಪುರ: ಆಷಾಢಕ್ಕೆ ತವರು ಮನೆಗೆ ಬಂದ ವಿವಾಹಿತೆಯೊಬ್ಬಳು ಪ್ರಿಯಕರನೊಂದಿಗೆ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಪಲ್ಲಿ ಗ್ರಾಮದಲ್ಲಿ ನಡೆದಿದೆ. ಅನುಷಾ( 19) ಮತ್ತು ಆಕೆಯ ಪ್ರಿಯಕರ ವೇಣು (21) ಆತ್ಮಹತ್ಯೆ ಮಾಡಿಕೊಂಡವರು.
ಸೊಂಟಕ್ಕೆ ವೇಲ್ ಬಿಗಿದುಕೊಂಡು ಕೃಷಿ ಹೊಂಡಕ್ಕೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನುಷಾ ಮತ್ತು ವೇಣು 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಅನುಷಾ ಮನೆಯವರು ಈ ಪ್ರೀತಿಗೆ ಒಪ್ಪಿಗೆ ನೀಡದೆ ಆಕೆಗೆ ಬೇರೆ ಮದುವೆ ಮಾಡಿಸಿದ್ದರು. ಕೆಲವು ತಿಂಗಳ ಹಿಂದೆ ಚೌಡರೆಡ್ಡಿ ಎಂಬವರೊಂದಿಗೆ ಅನುಷಾ ವಿವಾಹ ನಡೆದಿತ್ತು.
ಇದನ್ನೂ ಓದಿ | Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!