ಉಡುಪಿ: ಫಿಟ್ನೆಸ್ ಪ್ರಿಯರಾಗಿದ್ದ (fitness freak) ಹಾಗೂ ಉತ್ತಮ ಹಾಡುಗಾರನೂ (Singer) ಆಗಿದ್ದ ವೈದ್ಯರೊಬ್ಬರು (Doctor) ಹೃದಯಾಘಾತದಿಂದ (Heart Attack) ಸಾವಿಗೀಡಾಗಿದ್ದಾರೆ. ಕುಂದಾಪುರ ಶ್ರೀಮಾತಾ ಖಾಸಗಿ ಆಸ್ಪತ್ರೆಯ ವೈದ್ಯ ಡಾ.ಸತೀಶ ಪೂಜಾರಿ (54) ಮೃತಪಟ್ಟವರು.
ಇಂದು ಮುಂಜಾನೆ ಕೋಟತಟ್ಟುವಿನ ತಮ್ಮ ಮನೆಯಲ್ಲಿ ಸತೀಶ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶ್ರೀಮಾತಾ ಆಸ್ಪತ್ರೆಯ ಮಾಲೀಕರೂ ಆಗಿದ್ದ ಡಾ. ಸತೀಶ್ ಪೂಜಾರಿ, ಫಿಟ್ನೆಸ್ ಕುರಿತು ಅತಿ ಹೆಚ್ಚು ಒಲವು ಹೊಂದಿದ್ದ ಡಾ.ಸತೀಶ್ ಪೂಜಾರಿ, ವ್ಯಾಯಾಮ ಹಾಗೂ ಜಿಮ್ ಮೂಲಕ ದೇಹವನ್ನು ಸದೃಢವಾಗಿ ಕಾಪಾಡಿಕೊಂಡಿದ್ದರು.
ತಮ್ಮ ವಿಭಿನ್ನ ಶೈಲಿಯ ಹಾಡುಗಾರಿಕೆಯ ಮೂಲಕವೂ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದರು. ಸಾಂಸ್ಕೃತಿಕ ಮತ್ತು ಸಂಗೀತ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿದ್ದರು. ಎಸ್. ಜಾನಕಿ, ರಾಜೇಶ್, ಗುರುಕಿರಣ್ ಮುಂತಾದವರ ಜೊತೆಗೆ ರಸಮಂಜರಿಗಳಲ್ಲಿ ಹಾಡಿದ್ದರು. ಮೃತರಿಗೆ ಪತ್ನಿ ಮತ್ತು ಮಗ ಇದ್ದಾರೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
ಉಡುಪಿ: ರಾಜ್ಯದಲ್ಲಿ ಎಳೇ ಜೀವಗಳನ್ನು ಬಲಿ ಪಡೆಯುತ್ತಿರುವ ಹೃದಯಾಘಾತಗಳ (Heart Attack Death) ಸಂಖ್ಯೆ ಹೆಚ್ಚುತ್ತಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು (SSLC Student Death) ಸಾವನ್ನಪ್ಪಿರುವ ಘಟನೆ ಉಡುಪಿ (Udupi news) ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದಿದೆ. ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.
ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ- ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಇತ್ತೀಚೆಗೆ ಕೊಡಗಿನಲ್ಲಿ ಯುವತಿಯೊಬ್ಬಳು ಹೀಗೇ ಹೃದಯಾಘಾತಕ್ಕೆ ಬಲಿಯಾಗಿದ್ದಳು. ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕ ಪೊನ್ನಪ್ಪ (24) ಮೃತ ದುರ್ದೈವಿ. ಕರ್ತವ್ಯಕ್ಕೆಂದು ಮನೆಯಿಂದ ಹೊರಟಾಗ ಹೃದಯ ಬಡಿತವೇ ನಿಂತು ಹೋಗಿದೆ. ಎದೆ ನೋವೆಂದು ಒದ್ದಾಡಿದ ನಿಲಿಕ ಕುಸಿದು ಬಿದ್ದಿದ್ದಳು. ಕೂಡಲೇ ಅಲ್ಲಿದ್ದವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ವೈದ್ಯರು ದೃಢಪಡಿಸಿದ್ದರು.
ಇದನ್ನೂ ಓದಿ: Silent Heart Attack: ಏನಿದು ಸೈಲೆಂಟ್ ಹಾರ್ಟ್ ಅಟ್ಯಾಕ್? ಇದರ ಲಕ್ಷಣಗಳೇನು?