Heart Attack : ಮಲಗಿದ್ದಲೇ ಹೃದಯ ಸ್ತಬ್ಧ! ನಾಲ್ಕೈದು ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ - Vistara News

ಉಡುಪಿ

Heart Attack : ಮಲಗಿದ್ದಲೇ ಹೃದಯ ಸ್ತಬ್ಧ! ನಾಲ್ಕೈದು ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Heart Attack : ಮಲಗಿದ್ದಲ್ಲೇ ವ್ಯಕ್ತಿಯೊಬ್ಬರ ಹೃದಯದ ಬಡಿತ ನಿಂತು ಹೋಗಿದ್ದು, ನಾಲ್ಕೈದು ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಶವ (Dead Body Found) ಪತ್ತೆಯಾಗಿದೆ. ಬಾಗಲಕೋಟೆಯಲ್ಲಿ ಬಸ್‌ ಹತ್ತುವಾಗಲೇ ಪ್ರಯಾಣಿಕನಿಗೆ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Heart attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಉಡುಪಿಯ ಕುಂದಾಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಮನೆಯೊಳಗೆ ಶವ (Dead Body Found) ಪತ್ತೆಯಾಗಿದೆ. ಸಂತೋಷ್‌ ಆಚಾರ್ಯ(45) ಮೃತ ದುರ್ದೈವಿ. ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್‌ ಅವರು ಕುಂದಾಪುರ ನಗರದ ಚಿಕ್ಕನಸಾಲು ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ 25 ವರ್ಷಗಳಿಂದ ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು. ವಾರಕ್ಕೊಮ್ಮೆ ಬ್ರಹ್ಮಾವರ ಬಳಿಯ ಉಪ್ಪೂರಿನಲ್ಲಿರುವ ತನ್ನ ಮನಗೆ ಹೋಗಿ ಬರುತ್ತಿದ್ದರು.

ಅಣ್ಣ ಮನೆಗೆ ಬರಲಿಲ್ಲವೆಂದು ಸಹೋದರ ಸುರೇಶ್ ಆಚಾರ್ಯರವರು ಫೋನ್ ಮಾಡಿದ್ದರು. ಸಂತೋಷ್‌ ಅವರ ಫೋನ್ ಸ್ವಿಚ್ ಆಫ್ ಆದ ಕಾರಣಕ್ಕೆ ಮನೆಗೆ ಸ್ನೇಹಿತರೊಬ್ಬರನ್ನು ಕಳುಹಿಸಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲೇ ಸಂತೋಷ್‌ ಮೃತಪಟ್ಟಿದ್ದು, ಕೊಳೆತಿರುವ ಶವ ಪತ್ತೆಯಾಗಿದೆ.

ಕಳೆದ ಮಂಗಳವಾರ ಬೆಳಗ್ಗೆ ಸಂತೋಷ್‌ ಅವರು ತಮ್ಮ ಸ್ನೇಹಿತನಿಗೆ ಗುಡ್ ಮಾರ್ನಿಂಗ್ ಸಂದೇಶ ಮಾಡಿದ್ದಾರೆ. ಬಳಿಕ ಮಂಗಳವಾರ ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಹೆಡ್‌ಫೋನ್‌ ಹಾಕಿಕೊಂಡು ಹಾಡು ಕೇಳುತ್ತಾ ಮಲಗಿರುವ ಸ್ಥಿತಿಯಲ್ಲಿ ಶವ ಸಿಕ್ಕಿದೆ. ಮೃತರು ತಾಯಿ, ಇಬ್ಬರು ಸಹೋದರರು ಹಾಗೂ ಒಬ್ಬ ಸಹೋದರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ಕಾರಣವೇನು ಎಂಬುದು ತಿಳಿಯಲಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

ಬಸ್‌ ಹತ್ತುವಾಗ ಎದೆನೋವು, ಕುಸಿದು ಬಿದ್ದು ವ್ಯಕ್ತಿ ಸಾವು

ಬಸ್ ಹತ್ತುವ ವೇಳೆ ವ್ಯಕ್ತಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಸ್ ನಿಲ್ದಾಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಾಗಲಕೋಟೆಯ ಇಳಕಲ್ಲ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಗೌಡಪ್ಪ ಸಂಗಪ್ಪ ಹೊಕ್ರಾಣಿ (61) ಮೃತ ದುರ್ದೈವಿ.

ಗೌಡಪ್ಪ ಮೂಲತಃ ವಿಜಯಪುರ ಜಿಲ್ಲೆ ಮುದ್ದೆಬಿಹಾಳ ನಿವಾಸಿಯಾಗಿದ್ದಾರೆ. ಸಂಡೂರಿನಿಂದ ಮರಳಿ ಊರಿಗೆ ಹೋಗುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಇಳಕಲ್ಲ ಪಿಎಸ್ಐ ಎಸ್.ಆರ್.ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆ ಸೂಚನೆ; ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಈ ದಿನ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಹಾಗೂ ಒಳನಾಡಿನಲ್ಲಿ ವಾತಾವರಣ ಹೇಗಿರಲಿದೆ? ಇಲ್ಲಿದೆ ಮಾಹಿತಿ

VISTARANEWS.COM


on

By

karnataka weather Forecast
Koo

ಬೆಂಗಳೂರು: ಆಗಸ್ಟ್‌ 10ರಂದು ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮೈಸೂರು-ಮಂಡ್ಯದಲ್ಲೂ ಭಾರಿ ಮಳೆ

ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಸುರಿಯಲಿದೆ.

ಇದನ್ನೂ ಓದಿ: Theft Case : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯತಮ! ಮದುವೆಯಾಗಲು ಹೊರಟವರು ಜೈಲುಪಾಲು

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಜಿಲ್ಲೆಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣವಾಗಿರಲಿದೆ.

ಬೆಂಗಳೂರಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28ºC ಮತ್ತು 21ºC ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ವಿಜಯಪುರದ ಹಲವೆಡೆ ಸುರಿದ ಭಾರಿ ಮಳೆ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ವಾರಾಂತ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಇತ್ತ ಮಳೆ ಇಲ್ಲದೆ ಕಂಗಲಾಗಿದ್ದ ವಿಜಯಪುರದಲ್ಲಿ ಮಳೆಯಾದರೆ, ಕಲಬುರಗಿಯಲ್ಲಿ ನೀರು ನುಗ್ಗಿ ಜಮೀನುಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka weather Forecast
Koo

ವಿಜಯಪುರ: ಮಳೆ ಬಾರದೆ (Rain News) ಕಂಗಾಲಾಗಿದ್ದ ವಿಜಯಪುರ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಶುಕ್ರವಾರ ವಿಜಯಪುರ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿದಿದೆ. ಮಳೆ ಇಲ್ಲದೆ ತೊಗರಿ, ಮೆಕ್ಕೆಜೋಳ ಬೆಳೆ ಒಣಗುತ್ತಿತ್ತು. ವಿಜಯಪುರ ಜಿಲ್ಲೆಯ ಸಿಂದಗಿ, ಕೋರವಾರ, ಕೊಂಡಗೂಳಿ, ಜಾಲವಾದ, ಹಂಚಲಿ, ಸೇರಿದಂತರ ಹಲವೆಡೆ (Karnataka Weather Forecast) ಮಳೆಯಾಗಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಉಜನಿ ಜಲಾಶಯದಿಂದ ಭೀಮಾನದಿಗೆ ಬಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕಲಬುರಗಿ ತಾಲೂಕಿನ ಹಾಗರಗುಂಡಗಿ, ಕೌಲಗಾ ಗ್ರಾಮದ ಸುತ್ತಲ್ಲಿ‌ಭಾರಿ ಪ್ರಮಾಣದ ಬೆಳೆ ಹಾನಿಯಾಗಿದೆ. ಹಾಗರಗುಂಡಗಿ ಗ್ರಾಮದ ಜಮೀನಿಗೆ ನೀರು ನುಗ್ಗಿದೆ. ಸರಿ ‌ಸುಮಾರು 500 ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕಬ್ಬು, ತೊಗರಿ , ಹೆಸರು ಬೆಳೆ ಭೀಮಾ ನೀರು ಪಾಲಾಗಿದ್ದು, ಮತ್ತಷ್ಟು ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಇದನ್ನೂ ಓದಿ: Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ವಾರಾಂತ್ಯದಲ್ಲಿ ಹಗುರ ಮಳೆ ಸಾಧ್ಯತೆ

ವಾರಾಂತ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 21° C ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

Rain News : ರಾಜ್ಯಾದ್ಯಂತ ಮಳೆ ಅಬ್ಬರ ತಗ್ಗಿದೆ. ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನಲ್ಲಿ ಕೆಲವೊಮ್ಮೆ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ (Karnataka Weather Forecast) ಇದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ವ್ಯಾಪಕ ಸ್ಥಳಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

ಮಾನ್ಸೂನ್‌‌‌ನಲ್ಲಿ ಟ್ರೆಂಡಿಯಾದ ಫ್ರೆಂಡ್‌‌‌ಶಿಪ್‌ ಡೇ ಫ್ಯಾಷನ್‌ ಥೀಮ್‌

ಮಾನ್ಸೂನ್‌ನಲ್ಲಿ ಫ್ರೆಂಡ್‌ಶಿಪ್‌ ಡೇ ಫ್ಯಾಷನ್‌ (Friendshipday Fashion) ಥೀಮ್‌ ಟ್ರೆಂಡಿಯಾಗಿದೆ. ಹೌದು, ಪ್ರತಿ ವರ್ಷದಂತೆ ಈ ವರ್ಷವೂ ಅಗಸ್ಟ್ ನ ಮೊದಲ ಭಾನುವಾರ ಸೆಲೆಬ್ರೇಟ್‌ ಫ್ರೆಂಡ್‌ ಶಿಪ್‌ ಡೇ ಫ್ಯಾಷನ್‌ನ ಕಾನ್ಸೆಪ್ಟ್ ಒಂದೇ ಎಂದೆನಿಸಿದರೂ ಥೀಮ್‌ ಹಾಗೂ ಸ್ಟೈಲಿಂಗ್‌ ಪ್ರತಿ ವರ್ಷ ಬದಲಾಗುತ್ತದೆ. ಫ್ರೆಂಡ್ಸ್ ಗ್ರೂಪ್‌ನಲ್ಲಿ ಒಮ್ಮೆ ಕಾಣಿಸಿಕೊಂಡ ಫ್ಯಾಷನ್‌ ಮುಂಬರುವ ವರ್ಷ ಕಾಣಿಸುವುದಿಲ್ಲ! ಎನ್ನುತ್ತಾರೆ ಫ್ಯಾಷನಿಸ್ಟಾಗಳು. ಹಾಗಾದಲ್ಲಿ ಈ ಬಾರಿಯ ಫ್ರೆಂಡ್‌ಶಿಪ್‌ ಡೇ ಫ್ಯಾಷನ್‌ ಏನು? ಹೇಗೆಲ್ಲಾ ಕಾಣಿಸಿಕೊಳ್ಳಬಹುದು? ಮಾನ್ಸೂನ್‌ ಫ್ರೆಂಡ್‌ಶಿಪ್‌ ಡೇ ಲುಕ್‌ ಹೇಗೆ? ಎಂಬುದರ ಬಗ್ಗೆ ಸ್ಟೈಲಿಸ್ಟ್‌ಗಳು ಒಂದಿಷ್ಟು ಸಲಹೆ ನೀಡಿದ್ದಾರೆ.

Friendshipday Fashion

ಫ್ರೆಂಡ್‌ಶಿಪ್‌ ಡೇಗೂ ಬಂತು ಫ್ಯಾಷನ್‌ ಥೀಮ್‌

ಫ್ರೆಂಡ್‌ಶಿಪ್‌ ಡೇ ಆಚರಿಸುವ ಸ್ನೇಹಿತರು ಹಾಗೂ ಅವರ ಗ್ರೂಪ್‌ಗಳು, ತಮ್ಮದೇ ಆದ ಥೀಮ್‌ ಫ್ಯಾಷನ್‌ ಫಾಲೋ ಮಾಡಲಾರಂಭಿಸಿದ್ದಾರೆ. ಇದಕ್ಕೆ ಪೂರಕ ಎಂಬಂತೆ, ಮಾಲ್‌-ಶಾಪ್‌ಗಳಲ್ಲಿ ಬಲ್ಕ್‌ ಆರ್ಡರ್ನಲ್ಲಿ ಫ್ಯಾಷನ್‌ವೇರ್‌ಗಳೂ ದೊರೆಯುತ್ತಿವೆ. ಕಾರ್ಪೋರೇಟ್‌ ಕಚೇರಿಯ ಉದ್ಯೋಗಿಗಳಾಗಿರಬಹುದು ಅಥವಾ ಕಾಲೇಜು ಹುಡುಗ-ಹುಡುಗಿಯರಾಗಿರಬಹುದು. ಅವರವರ ಗ್ರೂಪ್‌ನ ಅಭಿರುಚಿಗೆ ತಕ್ಕಂತೆ ಫ್ಯಾಷನ್‌ ಥೀಮ್‌ಗಳನ್ನು ರೂಪಿಸಿಕೊಂಡು ಫ್ಯಾಷನ್‌ವೇರ್‌ಗಳನ್ನು ಧರಿಸುವುದು ಟ್ರೆಂಡಿಯಾಗಿದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಇನ್ನು, ಥೀಮ್‌ ಎಂದಾಕ್ಷಣಾ ಗುಂಪಿನ ಎಲ್ಲರ ಔಟ್‌ಫಿಟ್‌ಗಳು ಒಂದೇ ಆಗಿರಬೇಕೆಂದಿಲ್ಲ! ಒಟ್ಟಿನಲ್ಲಿ ಅವರೆಲ್ಲರೂ ಧರಿಸುವ ಯಾವುದೇ ಉಡುಪು ಅಥವಾ ಆಕ್ಸೆಸರೀಸ್‌ ಇಲ್ಲವೇ ಸ್ಟೈಲಿಂಗ್‌ ಒಂದೇ ಬಗೆಯದ್ದಾಗಿರಬಹುದು. ಅದು ಔಟಿಂಗ್‌ನದ್ದಾಗಿರಬಹುದು, ಪಾರ್ಟಿವೇರ್‌ನದ್ದಾಗಿರಬಹುದು ಅಥವಾ ಕೆಫೆ ಅಥವಾ ರೆಸ್ಟೋರೆಂಟ್‌ನಲ್ಲಿ ಕಾಲ ಕಳೆಯುವಂತದ್ದಾಗಿರಬಹುದು. ಆಯಾ ಗ್ರೂಪ್‌ನ ಐಡೆಂಟಿಟಿಗೆ ತಕ್ಕಂತೆ ಥೀಮ್‌ ಫ್ಯಾಷನ್‌ ಬದಲಿಸಿಕೊಳ್ಳಬಹುದು ಎನ್ನುತ್ತಾರೆ ಡಿಸೈನರ್‌ ರಿಯಾಜ್‌ ಹಾಗೂ ರಕ್ಷ್.

Friendshipday Fashion

ಗ್ರೂಪ್‌ನ ಚಟುವಟಿಕೆಗಳಿಗೆ ತಕ್ಕಂತೆ ಸ್ಟೈಲಿಂಗ್‌

ಸ್ನೇಹಿತರ ಗ್ರೂಪ್‌ಗಳು ಕೇವಲ ಜೆನ್‌ ಜಿ, ಮಿಲೆನಿಯಲ್‌ ಜನರಿಂದ ಕೂಡಿರಬೇಕೆಂದಿಲ್ಲ, ಗ್ರೂಪ್‌ಗಳು ವಯಸ್ಸಾಗಿರುವ ಹಿರಿಯರದ್ದು ಆಗಿರಬಹುದು ಅಥವಾ ಸಮಾನ ಮನಸ್ಕರ ವಿಭಿನ್ನ ಗ್ರೂಪ್‌ಗಳಾಗಬಹುದು. ಆಯಾ ಗ್ರೂಪ್‌ನ ಚಟುವಟಿಕೆಗಳಿಗೆ ತಕ್ಕಂತೆ ಡ್ರೆಸ್ಸಿಂಗ್‌ ಹಾಗೂ ಸ್ಟೈಲಿಂಗ್‌ ಬದಲಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.

ಫ್ರೆಂಡ್‌ಶಿಪ್‌ ಡೇ ಸ್ಟೈಲಿಂಗ್‌ಗೆ ಸಿಂಪಲ್‌ ಟಿಪ್ಸ್

  • ಫ್ರೆಂಡ್ಸ್ ಗ್ರೂಪ್‌ಗೆ ತಕ್ಕಂತೆ ಸ್ಟೈಲಿಂಗ್‌ ಮಾಡಿ.
  • ಎಥ್ನಿಕ್‌, ವೆಸ್ಟರ್ನ್‌, ಸೆಮಿ ಎಥ್ನಿಕ್‌, ಬಿಂದಾಸ್‌ ಯಾವುದಾದರೂ ಸರಿಯೇ ಕಂಫರ್ಟಬಲ್‌ ಸ್ಟೈಲಿಂಗ್‌ ಚೂಸ್‌ ಮಾಡಿ.
  • ಔಟಿಂಗ್‌ ಆದಲ್ಲಿ ಮಾನ್ಸೂನ್‌ ಸೀಸನ್‌ಗೆ ತಕ್ಕಂತೆ ಸ್ಟೈಲಿಂಗ್‌ ಮಾಡಿ.
  • ಆದಷ್ಟೂ ಯಂಗ್‌ ಲುಕ್‌ ನೀಡುವ ಸ್ಟೈಲಿಂಗ್‌ ಅಳವಡಿಸಿಕೊಳ್ಳಿ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Karnataka Weather : ಮಳೆ ಬಂದರೂ ಕಷ್ಟ ಬಾರದೆ ಇದ್ದರೂ ನಷ್ಟ ಎಂಬಂತಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಮಳೆ ಇಲ್ಲದೇ ಅನಾವೃಷ್ಠಿಯಾಗಿದೆ. ಇತ್ತ ಭೀಮಾ ನದಿ ಅಬ್ಬರಕ್ಕೆ ಕೆಲವೆಡೆ ನೆರೆ ಸೃಷ್ಟಿಯಾಗಿದೆ. ಯಾದಗಿರಿಯಲ್ಲಿ ನದಿ ತೀರದ ದೇಗುಲಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka Weather Forecast
Koo

ವಿಜಯನಗರ: ಒಂದು ಕಡೆ ಭಾರಿ ಮಳೆಯಿಂದಾಗಿ (Karnataka Weather Forecast) ಅತಿ ವೃಷ್ಠಿ ಉಂಟಾದರೆ ಮೊತ್ತೊಂದು ಕಡೆ ಮಳೆ (No Rain) ಇಲ್ಲದೇ ಅನಾವೃಷ್ಠಿಯಾಗಿದೆ. ಮಳೆಯಿಂದ ಮನೆ-ಮಠ ಕಳೆದುಕೊಂಡು ನಷ್ಟ ಅನುಭವಿಸಿದ್ದರೆ, ಇತ್ತ ಕಡೆ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಸ್ವತಃ ರೈತರೇ ಬೆಳೆ ನಾಶ ಮಾಡಿದ್ದಾರೆ. ವಿಜಯನಗರದ ಗೊಲ್ಲರಹಳ್ಳಿ ಗ್ರಾಮದ ಗುಬ್ಬಿಕಾಳೇ ಶ್ರೀ ಪರಶುರಾಮ ಎಂಬ ರೈತ ಬೆಳೆ ನಾಶ ಮಾಡಿದ್ದಾರೆ.

ಪರಶುರಾಮ ಅವರು 8 ಎಕರೆಯಲ್ಲಿ ಸಾವಿರಾರು ರೂ. ಖರ್ಚು ಮಾಡಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಮುಂಗಾರಿನಲ್ಲಿ ಅಲ್ಪ ಸ್ವಲ್ಪ ಮಳೆ ಬಂದಿದ್ದರಿಂದ ರೈತರು ಬಿತ್ತನೆ ಮಾಡಿದ್ದರು. ಮುಂದಿನ ದಿನಗಳಲ್ಲಿ ಸಮರ್ಪಕ ಮಳೆ ಬಾರದಿದ್ದಕ್ಕೆ ಕಾಳು ಕಟ್ಟುವ ಮೊದಲೇ ಬೆಳೆ ಒಣಗಿ ಹೋಗಲಿದೆ. ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ 4,625 ಹಕ್ಟೇರ್‌ ಜೋಳ, ಮೆಕ್ಕೆಜೋಳ, ಸಜ್ಜೆ ಇನ್ನಿತರ ಬೆಳೆ ಬಿತ್ತನೆ ಕಾರ್ಯ ಆಗಿದೆ.

ಆದರೆ ಮಳೆ ಇಲ್ಲದೇ ಒಣಗುತ್ತಿದೆ ಎಂದು ರೈತರು ಸಂಕಟದಿಂದ ಬೆಳೆ ನಾಶ ಮಾಡುತ್ತಿದ್ದಾರೆ. ಎಲ್ಲಾ ಕಡೆ ಬಿತ್ತನೆಯಾಗಿದ್ದು ತಂಪು ಇಲ್ಲದಿರುವುದು ಬೆಳೆ ಒಣಗಿ ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವನ್ನುಂಟು ಮಾಡಿದೆ. ಬಿತ್ತನೆ ಮಾಡಿದ್ದ ಖರ್ಚು ಕೂಡ ರೈತನಿಗೆ ಬಾರದೇ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಒಂದು ಎಕರೆ ಬಿತ್ತನೆಗೆ 20 ರಿಂದ 30 ಸಾವಿರ ರೂ ಖರ್ಚು ಮಾಡಲಾಗಿದೆ. ಈಗ ಬಿಡಿಗಾಸು ಸಿಗದೆ ರೈತರು ಕಂಗಾಲಾಗಿದ್ದಾರೆ. ದನಕರುಗಳಿಗೆ ಮೇವಾದರೂ ಸಿಗಲಿ ಎಂಬ ಉದ್ದೇಶದಿಂದ ಕಟಾವು ಮಾಡ್ತಿದ್ದೇವೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಸವಾರನ ಕುತ್ತಿಗೆಗೆ ತಂತಿ ಸಿಲುಕಿ ಗಂಭೀರ

ಮೈದುಂಬಿ ತುಂಬಿ ಹರಿಯುತ್ತಿರುವ ಭೀಮಾ

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಉಜನಿ ಜಲಾಶಯದಿಂದ ಮತ್ತೆ ಭೀಮಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಭೀಮಾ ನದಿ ಮೈದುಂಬಿ ತುಂಬಿ ಹರಿಯುತ್ತಿದ್ದು, ಕಲಬುರಗಿಯ ಅಫಜಲಪೂರ ಘತ್ತರಗಾ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಲಬುರಗಿ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಆಗಿದೆ. ದೇವಲಗಾಣಗಾಪುರ ಬಳಿಯ ಸೇತುವೆ ಸಹ ಮುಳುಗಡೆಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಸೇತುವೆ ಕಡೆ ಜನ ಹೋಗದಂತೆ ಪೊಲೀಸರ ನಿಯೋಜನೆ ಮಾಡಲಾಗಿದೆ.

ಮಹಾರಾಷ್ಟ್ರದ ಮಳೆಯಿಂದ ತತ್ತರಿಸಿದ ಗಡಿ ಜನತೆ

ಮಹಾರಾಷ್ಟ್ರದ ಮಳೆಯಿಂದ ಗಡಿ ಜನತೆ ತತ್ತರಿಸಿ ಹೋಗಿದ್ದಾರೆ. ಕಳೆದ ಒಂದು ವಾರದಿಂದ ಕೃಷ್ಣಾ ನದಿ ಒಳ ಹರಿವು ಯಥಾವತ್‌ ಕಾಯ್ದುಕೊಂಡಿದೆ. ಕೃಷ್ಣಾ ನದಿ ಒಳ ಹರಿವಿನಿಂದ ಕೃಷ್ಣಾ ನದಿ ತೀರದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈಗಾಗಲೇ ನದಿ‌ ತೀರದ ಜನರಿಗೆ ತೊಂದರೆಯಾಗದಂತೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಸರ್ಕಾರದ ಆದೇಶಕ್ಕಿಲ್ಲ ಕವಡೆ ಕಾಸಿನ‌ ಕಿಮ್ಮತ್ತಿಲ್ಲ. ನೆರೆ ಬಂದರೂ ತಾಲೂಕಾಡಳಿತ ಗಂಜಿ‌ ಕೇಂದ್ರ ತೆಗೆದಿಲ್ಲ. ಕಲಬುರಗಿಯ ರಾಯಬಾಗ ತಾಲೂಕಿನ ಶಿರಗೂರ ಗ್ರಾಮದ ನೆರೆ ಸಂತ್ರಸ್ಥರು ಸಂಕಷ್ಟ ಪಡುತ್ತಿದ್ದಾರೆ. ದನಗಳಿಗೆ ಮೇವಿಲ್ಲ, ಇರಲು ಜಾಗ ಇಲ್ಲ ಹೀಗಾದರೆ ಹೇಗೆ ಎಂದು ನೆರೆ ಸಂತ್ರಸ್ಥರು ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಿದ್ದಾರೆ.

ಯಾದಗಿರಿಯಲ್ಲಿ ನದಿ ತೀರದ ದೇಗುಲಗಳು ಜಲಾವೃತ

ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ ಆಗುತ್ತಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್‌ನಿಂದ ಭೀಮಾನದಿಗೆ 80 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಬ್ಯಾರೇಜ್‌ನ 24 ಗೇಟ್‌ಗಳಲ್ಲಿ 20 ಗೇಟ್ ಓಪನ್ ಮಾಡಿ ನೀರು ಬಿಡುಗಡೆ ಮಾಡಲಾಗಿದ್ದು, ಅಪಾಯದ ಮಟ್ಟ ಮೀರಿ ಭೀಮಾನದಿ ಹರಿಯುತ್ತಿದೆ. ಭೀಮಾನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಕಂಗಳೇಶ್ವರ ಹಾಗೂ ವಿರಾಂಜನೇಯ ದೇಗುಲಗಳು ಸಂಪೂರ್ಣ ಮುಳುಗಡೆಯಾಗಿದೆ. ಈಗಾಗಲೇ ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕು

ನೈರುತ್ಯ ಮುಂಗಾರು ಉತ್ತರ ಒಳನಾಡಲ್ಲಿ ಚುರುಕುಗೊಂಡಿದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲಗೊಂಡಿತ್ತು. ಶುಕ್ರವಾರದಂದು (ಆ.9) ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಕೆಲವಡೆ ಹಗುರದಿಂದ ಕೂಡಿರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bangladesh Unrest
ಕರ್ನಾಟಕ5 mins ago

Bangladesh Unrest: ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Viral News
Latest7 mins ago

Viral News: ಬಸ್ ನಿಲ್ಲಿಸದಿದ್ದಕ್ಕೆ ಕೋಪಗೊಂಡು ಕಂಡಕ್ಟರ್‌ ಮೇಲೆ ನಾಗರಹಾವನ್ನು ಎಸೆದ ಮಹಿಳೆ!

Viral News
Latest13 mins ago

Viral News: ದಂತ ಕಸಿ ಮಾಡಲು ಮೂಳೆಗಳಿಗಾಗಿ ಸಾವಿರಾರು ಶವಗಳನ್ನು ಕದ್ದ ಚೀನಾ ಕಂಪನಿ!

Jagdeep Dhankhar
ರಾಜಕೀಯ21 mins ago

Jagdeep Dhankhar: ರಾಜ್ಯಸಭಾಧ್ಯಕ್ಷರನ್ನು ಹುದ್ದೆಯಿಂದ ಇಳಿಸಲು ಹೊರಟಿವೆ ಪ್ರತಿಪಕ್ಷಗಳು! ಇದು ಸಾಧ್ಯವೇ?

Bangladesh Unrest
ವಿದೇಶ39 mins ago

Bangladesh Unrest: ಪ್ರತಿಭಟನೆಗೆ ಮಣಿದು ರಾಜೀನಾಮೆಗೆ ಮುಂದಾದ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಒಬೈದುಲ್ ಹಸನ್

ed raid
ಬೆಂಗಳೂರು53 mins ago

ED Raid: ಬೆಂಗಳೂರು, ಧಾರವಾಡದಲ್ಲಿ ಕೆಐಎಡಿಬಿ ಕಚೇರಿಗಳಿಗೆ ಇಡಿ ದಾಳಿ; 26 ಗಂಟೆ ಪರಿಶೀಲಿಸಿದರೂ ಮುಗಿಯದ ಹಗರಣದ ದಾಖಲೆ!

Govt Quota Seats
ಕರ್ನಾಟಕ1 hour ago

Govt Quota Seats: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ಇನ್ಮುಂದೆ ಖಾಸಗಿ ಪದವಿ ಕಾಲೇಜುಗಳಲ್ಲೂ ಸಿಗಲಿದೆ ಸರ್ಕಾರಿ ಕೋಟಾ ಸೀಟ್!

Team India
ಕ್ರೀಡೆ1 hour ago

Team India: ಆಸೀಸ್​ ಪ್ರವಾಸದಲ್ಲಿ 2 ದಿನಗಳ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಆಡಲಿದೆ ಭಾರತ ತಂಡ

Narendra Modi
ದೇಶ2 hours ago

Narendra Modi: ಭೂಕುಸಿತ ಪೀಡಿತ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ

Anti-Racist Protests
ವಿದೇಶ2 hours ago

Britain Violence: ಬ್ರಿಟನ್‌ನಲ್ಲಿ ವಲಸಿಗರು, ಮುಸ್ಲಿಮರ ವಿರುದ್ಧ ಪ್ರತಿಕಾರದ ದಾಳಿ ನಡೆಯುತ್ತಿರುವುದೇಕೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌