ಮಂಗಳೂರು: ಸಂಘ ನಿಕೇತನದ ಕೇಶವ ಸ್ಮೃತಿ ಸಂವರ್ಧನ ಸಮಿತಿಯಿಂದ ಮಂಗಳೂರಿನ ಪ್ರತಾಪನಗರದ ‘ಸಂಘ ನಿಕೇತನ’ದಲ್ಲಿ ನವೆಂಬರ್ 19 ಮತ್ತು 20 ರಂದು ಮಕ್ಕಳ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ. ಕನ್ನಡ ಶಾಲೆಯಲ್ಲಿ ಕಲಿಯುವ ಮಕ್ಕಳಲ್ಲಿ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕನ್ನಡ ಶಾಲಾ ಮಕ್ಕಳ ಹಬ್ಬದ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಮೋಹನ್ ಆಳ್ವಾ ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಿಂದ ಕನ್ನಡ ಶಾಲೆಯ ಸುಮಾರು 15 ಸಾವಿರ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಕನ್ನಡ ಹಬ್ಬದಲ್ಲಿ ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯದ ಮಹತ್ವದ ಜತೆಗೆ ಹಲವು ವಿಚಾರಗಳನ್ನು ಮಕ್ಕಳಿಗೆ ತಿಳಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಚಿಂತಕ, ಬರಹಗಾರ ರೋಹಿತ್ ಚಕ್ರತೀರ್ಥ ಶಿಕ್ಷಕರ ಜತೆ ಸಂವಾದ ನಡೆಸಲಿದ್ದಾರೆ. ಕನ್ನಡ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಐಎಎಸ್ ಪರೀಕ್ಷೆ ಎದುರಿಸುವ ಕುರಿತಾಗಿ ಐಎಎಸ್ ಅಧಿಕಾರಿ ನಂದಿನಿ ಅವರು ಮಕ್ಕಳಿಗೆ ಮಾಹಿತಿ ನೀಡಲಿದ್ದಾರೆ. ಕನ್ನಡ ಕೇವಲ ನುಡಿ ಅಲ್ಲ ಎಂಬ ವಿಚಾರದಲ್ಲಿ ಯುವಾ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಗೋಷ್ಠಿಯನ್ನು ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ | Vir Das comedy show | ವೀರ್ ದಾಸ್ ಕಾಮಿಡಿ ಶೋ ನಿಷೇಧಕ್ಕೆ ಆಗ್ರಹಿಸಿ ಹಿಂದು ಸಂಘಟನೆಗಳ ಪ್ರತಿಭಟನೆ, ಲಾಠಿ ಚಾರ್ಜ್