ಬೆಂಗಳೂರು: ಕಳೆದ ಫೆಬ್ರವರಿ ತಿಂಗಳಲೇ ರಾಜ್ಯದ ಜನತೆ ಬೇಸಿಗೆ ವಾತಾವರಣವನ್ನು ಅನುಭವಿಸಿದ್ದಾರೆ. ಮಾರ್ಚ್‌ನಲ್ಲಿ ಬಿಸಿಲ ಧಗೆಯು ಹೆಚ್ಚಾಗುವ (Dry Weather) ಸಾಧ್ಯತೆ ಇದೆ. ಆದರೆ ಸುಡುವ ಬಿಸಿಲಿಗೆ ಮಳೆಯು ಸಾಥ್ (Rain News) ಕೊಡಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆಯನ್ನು (Karnataka Weather Forecast) ನೀಡಿದ್ದಾರೆ.
ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಬಿಸಿಲ ನಡುವೆಯೂ ಅಲ್ಲಲ್ಲಿ ಮಳೆಯೂ ಇರುತ್ತದೆ. ಭಾರಿ ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದರೂ ಸಾಮಾನ್ಯ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ. ಸಾಮಾನ್ಯವಾಗಿ ಮಾರ್ಚ್‌ನಲ್ಲಿ ಸಹ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿಗೆ ಮಾರ್ಚ್‌ನಲ್ಲಿ 14.7 ಮಿಮೀ ಮಳೆಯ ಅಗತ್ಯವಿದೆ. ಕಳೆದ ವರ್ಷ ಬೆಂಗಳೂರಿನಲ್ಲಿ ಮಾರ್ಚ್‌ನಲ್ಲಿ 9 ಮಿಮೀ ಮಳೆಯಾಗಿತ್ತು. ಕರ್ನಾಟಕದಲ್ಲೂ ಈ ವರ್ಷ ಮಾರ್ಚ್‌ನಲ್ಲಿ 10.5 ಮಿಮೀ ಮಳೆಯಾಗಬೇಕು ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಇನ್ನೂ ಈ ಬಾರಿ ಉತ್ತರ ಒಳನಾಡಲ್ಲಿ ಗರಿಷ್ಠ ಉಷ್ಣಾಂಶವು ದುಪ್ಪಟ್ಟಾಗುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಯಲ್ಲಿ ಹೇಗಿರಲಿದೆ ಹವಾಮಾನ?
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವೆಡೆ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಶುಷ್ಕ ವಾತಾವರಣವೇ ಮುಂದುವರಿಯಲಿದೆ.
ಇನ್ನೂ ರಾಜಧಾನಿ ಬೆಂಗಳೂರಲ್ಲಿ ಬಿಸಿಲ ಧಗೆ ಹೆಚ್ಚಾಗಿ ಇರಲಿದ್ದು, ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Blast in Bengaluru : ಬಳ್ಳಾರಿ ಮೂಲಕ ಭಟ್ಕಳ ತಲುಪಿದ ರಾಮೇಶ್ವರಂ ಕೆಫೆ ಬಾಂಬರ್!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 33 ಡಿ.ಸೆ – 20 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 21 ಡಿ.ಸೆ
ಗದಗ: 36 ಡಿ.ಸೆ – 21 ಡಿ.ಸೆ
ಹೊನ್ನಾವರ: 33 ಡಿ.ಸೆ- 22 ಡಿ.ಸೆ
ಕಲಬುರಗಿ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ