Kundapura Festival: ಬೆಂಗಳೂರಲ್ಲಿ 17, 18ರಂದು ʻಕುಂದಾಪ್ರ ಕನ್ನಡ ಹಬ್ಬʼ: ಇಲ್ಲಿದೆ ಕಾರ್ಯಕ್ರಮಗಳ ವಿವರ, ಹೋಯ್‌ ಬನಿಯೇ ಹಬ್ಬಕ್‌ ಹೋಪ! - Vistara News

ಉಡುಪಿ

Kundapura Festival: ಬೆಂಗಳೂರಲ್ಲಿ 17, 18ರಂದು ʻಕುಂದಾಪ್ರ ಕನ್ನಡ ಹಬ್ಬʼ: ಇಲ್ಲಿದೆ ಕಾರ್ಯಕ್ರಮಗಳ ವಿವರ, ಹೋಯ್‌ ಬನಿಯೇ ಹಬ್ಬಕ್‌ ಹೋಪ!

Kundapura Festival: ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ. 3ರಲ್ಲಿರುವ ವೈಟ್‌ ಪೆಟಲ್ಸ್‌ನಲ್ಲಿ ಆ. 17 ಮತ್ತು 18ರಂದು ನಡೆಯಲಿರುವ ಈ ಹಬ್ಬದ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಅವರು ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

VISTARANEWS.COM


on

Kundapura Festival Kannada Habba On August 17 And 18 In Bengaluru Palace Ground
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʼಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರುʼ ರಾಜಧಾನಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ 2 ದಿನಗಳ ಅದ್ಧೂರಿ ʼಕುಂದಾಪ್ರ ಕನ್ನಡ ಹಬ್ಬʼವನ್ನು (Kundapura Festival) ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆ.17ರ ಸಂಜೆ 5ಕ್ಕೆ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ. 3ರಲ್ಲಿರುವ ವೈಟ್‌ ಪೆಟಲ್ಸ್‌ನಲ್ಲಿ ಆ. 17 ಮತ್ತು 18ರಂದು ನಡೆಯಲಿರುವ ಈ ಹಬ್ಬದ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಅವರು ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ರಿಷಬ್ ಶೆಟ್ಟಿಗೆ ಊರ ಗೌರವದ ಸನ್ಮಾನ

ಶನಿವಾರ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಅಂದು ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ ಇರಲಿದ್ದಾರೆ.

ಹೀಗಿದೆ ಪಾರ್ಕಿಂಗ್‌ ವ್ಯವಸ್ಥೆ

ʼಇದು ಕುಂದಾಪ್ರ ಕನ್ನಡ ಹಬ್ಬವಾದರೂ ಸಮಸ್ತ ಕನ್ನಡಿಗರ ಸಂಭ್ರಮ. ಹೀಗಾಗಿ ಈ ಹಬ್ಬಕ್ಕೆ ನಾವು ಎಲ್ಲರನ್ನೂ ಆಹ್ವಾನಿಸುತ್ತಿದ್ದು, ಎರಡು ದಿನಗಳ ಹಬ್ಬ ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಒಂದು ಸಾವಿರ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಅದಾಗ್ಯೂ ಅನುಕೂಲದ ದೃಷ್ಟಿಯಿಂದ ಸಾರ್ವಜನಿಕ ಸಾರಿಗೆ ಮೂಲಕ ಆಗಮಿಸುವುದು ಉತ್ತಮ. ಶನಿವಾರ ಮಧ್ಯಾಹ್ನ 2ರಿಂದ ರಾತ್ರಿ 10.30 ಮತ್ತು ಭಾನುವಾರ ಬೆಳಗ್ಗೆ 9.30ರಿಂದ ರಾತ್ರಿ 10.30ರ ವರೆಗೆ ನಿರಂತರ ಕಾರ್ಯಕ್ರಮಗಳಿದ್ದು, ಈ ಹಬ್ಬಕ್ಕೆ ಯಾವುದೇ ಪ್ರವೇಶ ಶುಲ್ಕವಿಲ್ಲ” ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ದೀಪಕ್ ಶೆಟ್ಟಿ ವಿವರಣೆ ನೀಡಿದ್ದಾರೆ.

ಭಾನುವಾರ ಸಂಜೆ 5ರ ಸಮರೋಪ ಸಮಾಂಭ

ಭಾನುವಾರ ಸಂಜೆ 5ರ ಸಮರೋಪ ಸಮಾಂಭದಲ್ಲಿ ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಡಾ.ಮಾಲತಿ ಕೆ. ಹೊಳ್ಳ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಆ ದಿನ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಎಂ.ಆರ್.ಜಿ. ಸಮೂಹದ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಯುನಿವರ್ಸಲ್ ಗ್ರೂಪ್‌ನ ಉಪೇಂದ್ರ ಶೆಟ್ಟಿ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ, ಸೌತ್‌ ಫೀಲ್ಡ್ ಪೇಂಟ್ಸ್ ಪ್ರೈ. ಲಿ. ಎಂಡಿ ಶಿವರಾಮ ಹೆಗ್ಡೆ, ಚೆಪ್ ಟಾಕ್‌ನ ಗೋವಿಂದಬಾಬು ಪೂಜಾರಿ ಇರಲಿದ್ದಾರೆ.

ಇದನ್ನೂ ಓದಿ: Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

ಹಬ್ಬಕ್ಕೆ ತಾರಾ ಮೆರುಗು

ಕುಂದಾಪುರ ಕನ್ನಡ ಹಬ್ಬದಲ್ಲಿ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ, ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ಗೋಲ್ಡನ್ ಸ್ಟಾರ್ ಗಣೇಶ್ ಆಗಮಿಸಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಅವರನ್ನೂ ಆಹ್ವಾನಿಸಲಾಗಿದ್ದು, ಅವರೂ ಬರುವ ನಿರೀಕ್ಷೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇತಿಹಾಸದಲ್ಲೇ ಪ್ರಥಮ ಬಾರಿ ಬೆಂಗಳೂರಲ್ಲಿ ಜೋಡಾಟ

ಈ ಹಬ್ಬ ಕುಂದಾಪುರ ಸಂಸ್ಕೃತಿಯನ್ನು ವಿಶೇಷ ರೀತಿಯಲ್ಲಿ ಪ್ರಸ್ತುತಿ ಪಡಿಸುವ ಪ್ರಯತ್ನ. ಆ ಪೈಕಿ ಪ್ರಮುಖ ಆಕರ್ಷಣೆ ಆಗಿ ಜೋಡಾಟ ಇರಲಿದೆ. ಇದು ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಒಂದೇ ಪ್ರಸಂಗ ಏಕಕಾಲದಲ್ಲಿ ಎರಡು ರಂಗಸ್ಥಳಗಳಲ್ಲಿ ಸ್ಪರ್ಧೆಯ ಮೇಲೆ ನಡೆಯುವ ಈ ಪ್ರದರ್ಶನವನ್ನು ನೋಡಲು ಊರಿನಿಂದಲೇ 2 ಸಾವಿರಕ್ಕೂ ಅಧಿಕ ಮಂದಿ ಆಗಮಿಸುತ್ತಿದ್ದಾರೆ. ಮತ್ತೊಂದೆಡೆ ಭಾನುವಾರ ಸಂಜೆ 7.30ಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಂದ ʼರವಿ ಬಸ್ರೂರ್ ನೈಟ್ಸ್ʼ ಎಂಬ ವಿಶೇಷ ಸಂಗೀತ ಕಾರ್ಯಕ್ರಮ ಇರಲಿದೆ. ಇದು ಕೂಡ ಇದೇ ಪ್ರಥಮ ಬಾರಿಗೆ ನಡೆಯುತ್ತಿರುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್ ಮಾಹಿತಿ ನೀಡಿದರು.

ದಿನವಿಡೀಯ ವಿಶೇಷ

ʼಹೊಟ್ಟಿ ಕಂಡದ್ದ್ ನಾವೇ ಸೈʼ ಎಂಬ ಹೆಸರಿನಲ್ಲಿ ಕರಾವಳಿ ಖಾದ್ಯಮೇಳ ಇರಲಿದ್ದು, ವಿಶೇಷ ತಿಂಡಿ-ತಿನಿಸುಗಳು ಲಭ್ಯ ಇರಲಿವೆ. ಅಲ್ಲದೆ ಕಡಲೂರಿನ ವಸ್ತು, ಒಡವೆ, ವಸ್ತ್ರಪ್ರದರ್ಶನ ಮತ್ತು ಮಾರಾಟದ ʼಕುಂದಾಪ್ರ ಸಂತಿʼ ಕೂಡ ಇರಲಿದೆ. ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಲೆಕ್ಕಪರಿಶೋಧಕ ವಿಜಯ್ ಶೆಟ್ಟಿ, ಕ್ರೀಡಾ ಸಂಚಾಲಕ ಚಂದ್ರಶೇಖರ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಪೂರ್ಣ ಡೀಟೈಲ್ಸ್‌

ಶನಿವಾರ ಏನೇನಿರುತ್ತೆ?

ಮಧ್ಯಾಹ್ನ 3: ದಿಬ್ಬಣ- ನಗರದ ವಿವಿಧ ಭಾಗಗಳಿಂದ ಆಗಮಿಸುವ ಜನರ ಪುರ ಮೆರವಣಿಗೆ.

ಸಂಜೆ 4: ನಾಕ್ ಘನಾ ಸುರ್ಲ್- ಮಂಗಳೂರಿನ ಜರ್ನಿ ಥೇಟರ್ ಗ್ರೂಪ್‌ನಿಂದ ಜಾನಪದ, ರಂಗ ಹಾಗೂ ಕುಂದಾಪ್ರ ಕನ್ನಡ ಗೀತಗಾಯನ.

ಸಂಜೆ 6.30: ಜೋಡಾಟ- ಕರಾವಳಿ ಜಿಲ್ಲೆಗಳ ಸುಪ್ರಸಿದ್ಧ ಕಲಾವಿದರ ಮೇಳೈಸುವಿಕೆ.

ಭಾನುವಾರದ ಹಬ್ಬದಲ್ಲಿ ಇದೆಲ್ಲಾ ಇರುತ್ತೆ

ಬೆಳಗ್ಗೆ 10: ಬಯಲಾಟ- ಗ್ರಾಮೀಣ ಉತ್ಸವ

ಬೆಳಗ್ಗೆ 10: ತಾರೆಯರ ಜೊತೆ ಮಾತುಕತೆ, ಕವಿತೆ.

ಬೆಳಗ್ಗೆ 11: ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ʼಡಾನ್ಸ್ ಕುಂದಾಪ್ರ ಡಾನ್ಸ್ʼ

ಬೆಳಗ್ಗೆ 11.15: ಕುಂದಾಪುರ ಭಾಷೆ ಬದುಕು ಬರಹ ಕುರಿತ ನುಡಿಚಾವಡಿ.

ಮಧ್ಯಾಹ್ನ 12: ಮನು ಹಂದಾಡಿ ಅವರಿಂದ ʼಹಂದಾಡ್ತಾ ನೆಗ್ಯಾಡಿʼ ಹಾಸ್ಯ ಕಾರ್ಯಕ್ರಮ.

ಮಧ್ಯಾಹ್ನ 1.30: ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ ʼಪೆಟ್ ಒಂದೇ, ಸ್ವರ ಬೇರೆʼ

ಮಧ್ಯಾಹ್ನ 2.30: ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ ʼಮಂದಾರ್ತಿ ಮಾದೇವಿʼ

ಸಂಜೆ 4.30: ರಥೋತ್ಸವ

ರಾತ್ರಿ 7.30: ʼರವಿ ಬಸ್ರೂರ್ ನೈಟ್ಸ್ʼ ವಿಶೇಷ ಸಂಗೀತ ಸಂಜೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯದ ಹಲವೆಡೆ ಅಬ್ಬರಿಸಲಿದೆ ಗುಡುಗು ಸಹಿತ ಮಳೆ

Rain News : ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಭಾಗದಲ್ಲಿ ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ. ಈ ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಸುತ್ತಮುತ್ತಲೂ ಮಧ್ಯಮ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಾಧಾರಣದೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕೆಲವೊಮ್ಮೆ ಬಿಸಿಲ ಧಗೆಯು ಹೆಚ್ಚಿರಲಿದೆ.

ಇದನ್ನೂ ಓದಿ: Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

ಹುಡುಗಿಯರ ಮಾನ್ಸೂನ್‌ ಡ್ರೆಸ್‌ ಹೇಗಿರಬೇಕು? ಹೇಗಿರಬಾರದು?

ಮಾನ್ಸೂನ್‌ನಲ್ಲಿ ಹುಡುಗಿಯರು ಧರಿಸುವ (Monsoon Fashion do’s & don’ts) ಉಡುಪುಗಳು ನೋಡಲು ಆಕರ್ಷಕವಾಗಿದ್ದರಷ್ಟೇ ಸಾಲದು, ಧರಿಸಿದಾಗ ಕಂಫರ್ಟಬಲ್‌ ಆಗಿರಬೇಕು, ಎಲ್ಲದಕ್ಕಿಂತ ಹೆಚ್ಚಾಗಿ ಸೀಸನ್‌ಗೆ ತಕ್ಕಂತಿರಬೇಕು ಎನ್ನುತ್ತಾರೆ ಫ್ಯಾಷನಿಸ್ಟ್‌ಗಳು. ಸಮೀಕ್ಷೆಯೊಂದರ ಪ್ರಕಾರ, ಸಾಕಷ್ಟು ಹುಡುಗಿಯರು ಸ್ಟೈಲಿಶ್‌ ಆಗಿ ಕಾಣಿಸಲು ಮಾನ್ಸೂನ್‌ನಲ್ಲೂ ಸಮ್ಮರ್‌ ಫ್ಯಾಷನ್‌ವೇರ್‌ಗಳನ್ನು ಧರಿಸುತ್ತಾರಂತೆ. ಇನ್ನು, ಕೆಲವು ಯುವತಿಯರು ಮಾನ್ಸೂನ್‌ ಸೀಸನ್‌ನಲ್ಲಿ ಹೊದ್ದುಕೊಂಡಂತಿರುವ ಉಡುಪುಗಳನ್ನು ಧರಿಸುತ್ತಾರಂತೆ. ಆದರೆ, ಫ್ಯಾಷನಿಸ್ಟ್‌ಗಳ ಪ್ರಕಾರ, ಆಯಾ ವರ್ಗದ ಅನುಗುಣವಾಗಿ ಹುಡುಗಿಯರು ಧರಿಸುವ ಉಡುಪುಗಳು ಬದಲಾಗುತ್ತವಂತೆ. ಅದರಲ್ಲೂ, ಜೆನ್‌ ಜಿ ಹುಡುಗಿಯರು, ಯಾವುದೇ ಸೀಸನ್‌ ಟ್ರೆಂಡ್‌ ಫಾಲೋ ಮಾಡುವುದಿಲ್ಲ, ಬದಲಾಗಿ ತಮ್ಮದೇ ಆದ ಸ್ಟೈಲಿಶ್‌ ಮಾರ್ಗವನ್ನು ಹಿಡಿಯುತ್ತಾರಂತೆ. ಅಂದ ಹಾಗೆ, ಇದೆಲ್ಲಾ ಓಕೆ, ಹಾಗೆಂದು ಸೀಸನ್‌ಗೆ ವಿರುದ್ಧವಾಗಿ ಕಾಣಿಸುವುದು ದಿನಚರಿಯಾಗಬಾರದು! ಇದು ಆರೋಗ್ಯಕ್ಕೂ ಮಾರಕ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಹಾಗಾದಲ್ಲಿ, ಈ ಸೀಸನ್‌ನಲ್ಲಿ ಯಾವ ರೀತಿಯ ಡ್ರೆಸ್‌ಗಳು ಬೆಸ್ಟ್? ಯಾವುದು ನಾಟ್‌ ಓಕೆ ! ಎಂಬುದನ್ನು ಫ್ಯಾಷನಿಸ್ಟ್‌ಗಳು ಸಿಂಪಲ್ಲಾಗಿ ತಿಳಿಸಿದ್ದಾರೆ.

Monsoon Fashion

ಮಾನ್ಸೂನ್‌ ಡ್ರೆಸ್‌ಗಳು

ಮಳೆಗಾಲದಲ್ಲಿ ಟ್ರೆಂಡಿಯಾಗುವ ಜಾಕೆಟ್‌ ಡ್ರೆಸ್‌, ಕೋಟ್‌ ಡ್ರೆಸ್‌-ಫ್ರಾಕ್ಸ್, ಸ್ಕೆಟರ್‌ ಡ್ರೆಸ್, ಮಿಡಿ ಡ್ರೆಸ್‌, ಹೈ ವೇಸ್ಟ್ ಶಾಟ್ಸ್ ಆಯ್ಕೆ ಮಾಡಬಹುದು. ಇವು ಸ್ಟೈಲಿಶ್‌ ಆಗಿ ಕಾಣಿಸುವುದರ ಜೊತೆಗೆ ಟ್ರೆಂಡಿಯಾಗಿಯೂ ಬಿಂಬಿಸುತ್ತವೆ.

Monsoon Fashion

ಗಿಡ್ಡ ಪ್ಯಾಂಟ್‌ಗೆ ಓಕೆ ಹೇಳಿ

ಆಂಕೆಲ್‌ ಲೆಂಥ್‌, ಕ್ರಾಪ್ಡ್ ಪ್ಯಾಂಟ್‌, ಲೆಗ್ಗಿಂಗ್ಸ್, ಜೆಗ್ಗಿಂಗ್ಸ್, ಪುಶ್‌ ಬ್ಯಾಕ್‌ನಂತಹ ಪ್ಯಾಂಟ್‌ಗಳನ್ನು ಧರಿಸಬಹುದು. ಆದರೆ, ಯಾವುದೇ ಕಾರಣಕ್ಕೂ ಪಲ್ಹಾಜೋ, ಪ್ಯಾರಲಲ್‌, ಬೂಟ್‌ ಕಟ್‌, ಶರರಾ, ಘರಾರದಂತಹ ಅಗಲವಾದ ನೆಲಹಾಸುವಂತಹ ಪ್ಯಾಂಟ್‌ಗಳನ್ನು ಧರಿಸಬೇಡಿ.

Monsoon Fashion

ನೆಲ ಮುಟ್ಟುವ ಗೌನ್‌ಗಳನ್ನು ದೂರವಿಡಿ

ನಡೆಯುವಾಗ ನೆಲವನ್ನು ಮುಟ್ಟುವಂತಹ ಉದ್ದುದ್ದ ಮ್ಯಾಕ್ಸಿ, ಗೌನ್‌ಗಳಿಗೆ ಸದ್ಯಕ್ಕೆ ಬೈ ಹೇಳಿ. ಇವು ನೋಡಲು ಮಾತ್ರ ಆಕರ್ಷಕವಾಗಿ ಕಾಣಿಸುತ್ತವೆ. ಇವನ್ನು ನಿರ್ವಹಣೆ ಮಾಡುವುದು ಕಷ್ಟ.

Monsoon Fashion

ಭಾರವಿಲ್ಲದ ಲೈಟ್‌ವೈಟ್‌ ಉಡುಗೆ ಧರಿಸಿ

ಲೇಯರಿಂಗ್‌ ಹೆಸರಲ್ಲಿ ದಪ್ಪನೆಯ ಫ್ಯಾಬ್ರಿಕ್‌ನ ಉಡುಗೆಗಳು ಉಸಿರುಕಟ್ಟಿಸಬಹುದು. ಮಳೆಯಲ್ಲಿ ಒದ್ದೆಯಾದರಂತೂ ಕಿರಿಕಿರಿ ಎನಿಸಬಹುದು. ಇದನ್ನು ಅವಾಯ್ಡ್ ಮಾಡಲು, ಬೇಗನೇ ಒಣಗುವ ಲೈಟ್‌ವೈಟ್‌ ಡ್ರೆಸ್‌ಗಳಿಗೆ ಸೈ ಎನ್ನಿ.

ಹೆವಿ ಎಥ್ನಿಕ್‌ ಡಿಸೈನರ್‌ವೇರ್‌ ಅವಾಯ್ಡ್ ಮಾಡಿ

ಹೆವಿ ಎಥ್ನಿಕ್‌ವೇರ್‌ಗಳನ್ನು ಆವಾಯ್ಡ್ ಮಾಡಿ. ಎಥ್ನಿಕ್‌ವೇರ್‌ ಧರಿಸಲೇ ಬೇಕಿದ್ದಲ್ಲಿ ಆದಷ್ಟೂ ಆಂಕೆಲ್‌ ಲೆಂಥ್‌ ಡಿಸೈನರ್‌ವೇರ್ಸ್ ಸೆಲೆಕ್ಟ್ ಮಾಡಿ ಶಾರ್ಟ್ ಕುರ್ತಾ, ಆಂಕೆಲ್‌ ಲೆಂಥ್‌ ಚೂಡಿದಾರ್‌, ಸಲ್ವಾರ್‌ಗಳನ್ನು ಧರಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ ಮಳೆರಾಯ

Karnataka Weather Forecast : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ (Rain News) ರೈತರು ಕಂಗಲಾಗಿದ್ದಾರೆ. ಮಳೆಯ ಆರ್ಭಟಕ್ಕೆ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು ಜಮೀನುಗಳು ನೀರುಪಾಲಾಗಿವೆ.

VISTARANEWS.COM


on

By

karnataka Weather Forecast
Koo

ಹಾಸನ: ಮಳೆರಾಯ ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ್ದಾನೆ. ಮುಂದಿನ ಒಂದು ವಾರದಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ಹಾಸನದ ವಿವಿಧೆಡೆ ಕಳೆದ ರಾತ್ರಿಯಿಂದ ಧಾರಾಕಾರ ಮಳೆ ಸುರಿದಿದೆ. ಭಾರಿ ಮಳೆಗೆ ನಾಟಿ ಮಾಡಿದ್ದ ಭತ್ತದ ಸಸಿಗಳು ಕೊಚ್ಚಿ ಹೋಗಿವೆ. ಹಾಸನದ ಆಲೂರು ತಾಲೂಕಿನ ಬೆಂಬಳೂರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿದಿದೆ. ಭತ್ತದ ಗದ್ದೆಗಳಿಗೆ ಬಾರಿ ಪ್ರಮಾಣದ ನೀರು ನುಗ್ಗಿದೆ.

ನೀರಿನ‌ ರಭಸಕ್ಕೆ ಗದ್ದೆಯ ಬದುಗಳು ಕೊಚ್ಚಿ ಹೋಗಿವೆ. ನಾಟಿ ಮಾಡಲು ಸಿದ್ಧತೆ ನಡೆಸಿದ್ದ ರೈತರ ಆಸೆಗೆ ಮಳೆರಾಯ ತಣ್ಣೀರು ಎರಚಿದ್ದಾನೆ. ಐವತ್ತಕ್ಕೂ ಹೆಚ್ಚು ಎಕರೆ ಪ್ರದೇಶದ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದೆ. ಧಾರಾಕಾರ ಮಳೆಯಿಂದ ಕಂಗಾಲಾದ ರೈತರು ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: CM Siddaramaiah: ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ, ರೈತರಿಗೆ ತೊಂದರೆಯಾಗದಂತೆ ಕ್ರಮ: ಸಿಎಂ

ಸರ್ಕಾರಿ ಶಾಲೆ ಜಲಾವೃತ, ರಸ್ತೆಗಳೆಲ್ಲವೂ ಗುಂಡಿ ಮಯ

ನಿನ್ನೆ ಸುರಿದ ಮಳೆಗೆ ಸರ್ಕಾರಿ ಶಾಲೆಯೊಂದು ಜಲಾವೃತಗೊಂಡಿದೆ. ಬೆಂಗಳೂರಿನ ವರ್ತೂರಿನ ಸಿದ್ದಾಪುರ ಸರ್ಕಾರಿ ಶಾಲೆಯ ಆವರಣದ ಸುತ್ತಲೂ ಮಳೆ ನೀರು ನಿಂತಿತ್ತು. ಬೆಳಗ್ಗೆ ಶಾಲೆಗೆ ಬಂದ ಮಕ್ಕಳು, ಎರಡು ಗಂಟೆಗಳ‌ ಕಾಲ ಶಾಲಾ ಕೊಠಡಿಗಳು ಸ್ವಚ್ಚತೆ ಮಾಡಿದರು.

ಇತ್ತ ಮಳೆ ನಿಂತು ಹೋದಮೇಲೆ ಗುಂಡಿಗಳು ಬಿದ್ದಿವೆ. ಎರಡು ದಿನದಿಂದ ಸುರಿದ ಮಳೆಗೆ ಬೆಂಗಳೂರಿನ ಟೌನ್ ಹಾಲ್ ಎದುರೇ 50ಕ್ಕೂ ಹೆಚ್ಚು ರಸ್ತೆ ಗುಂಡಿ ಬಿದ್ದಿವೆ. ಬಿಬಿಎಂಪಿಯಿಂದ 500 ಮೀಟರ್ ದೂರದಲ್ಲಿರುವ ಟೌನ್ ಹಾಲ್‌ ಸುತ್ತಮುತ್ತ ಇರುವ ಗುಂಡಿಗಳು ಬೈಕ್ ಸವಾರರ ಪಾಲಿಗೆ ಮೃತ್ಯುಕೂಪವಾಗಿದೆ.

ಕ್ಯಾರೆ ಎನ್ನದ ಬಿಬಿಎಂಪಿ

ಗುಂಡಿ ಫೋಟೋ ತೆಗೆದು ಕಳಿಸಿ ಅಂದರೆ ಬಿಬಿಎಂಪಿ ಕೆಲಸ ಮುಗಿತಾ? ಕೇವಲ ಆ್ಯಪ್ ಮಾಡಿ ಕೈತೊಳೆದು ಕೊಳ್ಳುತ್ತಿದೆ. ಮೊಣಕಾಲು ಉದ್ದ ಗುಂಡಿ ಇದ್ದರೂ ಬಿಬಿಎಂಪಿ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಬೆಂಗಳೂರಿನ ಸಿಂಗಯ್ಯನಪಾಳ್ಯ ರಸ್ತೆಯ ಮಧ್ಯದಲ್ಲಿ ಯಮ ಸ್ವರೂಪಿ ಗುಂಡಿ ಬಿದ್ದಿದೆ. ಸ್ವಲ್ಪ ಎಚ್ಚರ ತಪ್ಪಿದ್ದರೂ, ಜೀವಕ್ಕೆ ಅಪಾಯ ಗ್ಯಾರಂಟಿ. ಇನ್‌ಸ್ಟಾಗ್ರಾಂ‌ಮ್‌ನಲ್ಲಿ ಪೋಸ್ಟ್ ಹಾಕಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Tungabhadra Dam: ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

ನಾಳೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲೂ ಮಳೆಯು ಅಬ್ಬರಿಸಲಿದೆ. ಇತ್ತ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಸಾಥ್‌ ನೀಡಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kundapra Kannada Habba : ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನ ಅದ್ಧೂರಿ ‘ಕುಂದಾಪ್ರ ಕನ್ನಡ ಹಬ್ಬ’

Kundapra Kannada Habba : ಶನಿವಾರ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಅಂದು ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ ಇರಲಿದ್ದಾರೆ.

VISTARANEWS.COM


on

Koo

ಬೆಂಗಳೂರು: ʼಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರುʼ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ 2 ದಿನಗಳ ಅದ್ಧೂರಿ ʼಕುಂದಾಪ್ರ ಕನ್ನಡ ಹಬ್ಬʼವನ್ನು (Kundapra Kannada Habba) ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆ.17ರ ಸಂಜೆ 5ಕ್ಕೆ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ. 3ರಲ್ಲಿರುವ ವೈಟ್‌ ಪೆಟಲ್ಸ್‌ನಲ್ಲಿ ಆ. 17 ಮತ್ತು 18ರಂದು ನಡೆಯಲಿರುವ ಈ ಹಬ್ಬದ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಅವರು ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಶನಿವಾರ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಅಂದು ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ ಇರಲಿದ್ದಾರೆ.

ಭಾನುವಾರ ಸಂಜೆ 5ರ ಸಮರೋಪ ಸಮಾಂಭದಲ್ಲಿ ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಡಾ.ಮಾಲತಿ ಕೆ. ಹೊಳ್ಳ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಆ ದಿನ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಎಂ.ಆರ್.ಜಿ. ಸಮೂಹದ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಯುನಿವರ್ಸಲ್ ಗ್ರೂಪ್‌ನ ಉಪೇಂದ್ರ ಶೆಟ್ಟಿ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ, ಸೌತ್‌ ಫೀಲ್ಡ್ ಪೇಂಟ್ಸ್ ಪ್ರೈ. ಲಿ. ಎಂಡಿ ಶಿವರಾಮ ಹೆಗ್ಡೆ, ಚೆಪ್ ಟಾಕ್‌ನ ಗೋವಿಂದಬಾಬು ಪೂಜಾರಿ ಇರಲಿದ್ದಾರೆ.

ಒಂದು ಲಕ್ಷ ಜನರು ಸೇರುವ ನಿರೀಕ್ಷೆ

ಇದು ಕುಂದಾಪ್ರ ಕನ್ನಡ ಹಬ್ಬವಾದರೂ ಸಮಸ್ತ ಕನ್ನಡಿಗರ ಸಂಭ್ರಮ. ಹೀಗಾಗಿ ಈ ಹಬ್ಬಕ್ಕೆ ನಾವು ಎಲ್ಲರನ್ನೂ ಆಹ್ವಾನಿಸುತ್ತಿದ್ದು, ಎರಡು ದಿನಗಳ ಹಬ್ಬದಲ್ಲಿ ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಒಂದು ಸಾವಿರ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಅದಾಗ್ಯೂ ಅನುಕೂಲದ ದೃಷ್ಟಿಯಿಂದ ಸಾರ್ವಜನಿಕ ಸಾರಿಗೆ ಮೂಲಕ ಆಗಮಿಸುವುದು ಉತ್ತಮ. ಶನಿವಾರ ಮಧ್ಯಾಹ್ನ 2ರಿಂದ ರಾತ್ರಿ 10.30 ಮತ್ತು ಭಾನುವಾರ ಬೆಳಗ್ಗೆ 9.30ರಿಂದ ರಾತ್ರಿ 10.30ರ ವರೆಗೆ ನಿರಂತರ ಕಾರ್ಯಕ್ರಮಗಳಿದ್ದು, ಈ ಹಬ್ಬಕ್ಕೆ ಯಾವುದೇ ಪ್ರವೇಶ ಶುಲ್ಕವಿಲ್ಲ ಎಂದು ದೀಪಕ್ ಹೇಳಿದ್ದಾರೆ.

ಹಬ್ಬಕ್ಕೆ ತಾರಾ ಮೆರುಗು

ಕುಂದಾಪುರ ಕನ್ನಡ ಹಬ್ಬದಲ್ಲಿ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ, ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ಗೋಲ್ಡನ್ ಸ್ಟಾರ್ ಗಣೇಶ್ ಆಗಮಿಸಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಅವರನ್ನೂ ಆಹ್ವಾನಿಸಲಾಗಿದ್ದು, ಅವರೂ ಬರುವ ನಿರೀಕ್ಷೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇದೇ ಮೊದಲು

ಈ ಹಬ್ಬ ಕುಂದಾಪುರ ಸಂಸ್ಕೃತಿಯನ್ನು ವಿಶೇಷ ರೀತಿಯಲ್ಲಿ ಪ್ರಸ್ತುತಿಪಡಿಸುವ ಪ್ರಯತ್ನ. ಆ ಪೈಕಿ ಪ್ರಮುಖ ಆಕರ್ಷಣೆ ಆಗಿ ಜೋಡಾಟ ಇರಲಿದೆ. ಇದು ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಒಂದೇ ಪ್ರಸಂಗ ಏಕಕಾಲದಲ್ಲಿ ಎರಡು ರಂಗಸ್ಥಳಗಳಲ್ಲಿ ಸ್ಪರ್ಧೆಯ ಮೇಲೆ ನಡೆಯುವ ಈ ಪ್ರದರ್ಶನವನ್ನು ನೋಡಲು ಊರಿನಿಂದಲೇ 2 ಸಾವಿರಕ್ಕೂ ಅಧಿಕ ಮಂದಿ ಆಗಮಿಸುತ್ತಿದ್ದಾರೆ. ಮತ್ತೊಂದೆಡೆ ಭಾನುವಾರ ಸಂಜೆ 7.30ಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಂದ ʼರವಿ ಬಸ್ರೂರ್ ನೈಟ್ಸ್ʼ ಎಂಬ ವಿಶೇಷ ಸಂಗೀತ ಕಾರ್ಯಕ್ರಮ ಇರಲಿದೆ. ಇದು ಕೂಡ ಇದೇ ಪ್ರಥಮ ಬಾರಿಗೆ ನಡೆಯುತ್ತಿರುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್ ಮಾಹಿತಿ ನೀಡಿದರು.

ದಿನವಿಡೀಯ ವಿಶೇಷ

ʼಹೊಟ್ಟಿ ಕಂಡದ್ದ್ ನಾವೇ ಸೈʼ ಎಂಬ ಹೆಸರಿನಲ್ಲಿ ಕರಾವಳಿ ಖಾದ್ಯಮೇಳ ಇರಲಿದ್ದು, ವಿಶೇಷ ತಿಂಡಿ-ತಿನಿಸುಗಳು ಲಭ್ಯ ಇರಲಿವೆ. ಅಲ್ಲದೆ ಕಡಲೂರಿನ ವಸ್ತು, ಒಡವೆ, ವಸ್ತ್ರಪ್ರದರ್ಶನ ಮತ್ತು ಮಾರಾಟದ ʼಕುಂದಾಪ್ರ ಸಂತಿʼ ಕೂಡ ಇರಲಿದೆ.

ಇದನ್ನೂ ಓದಿ: Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಲೆಕ್ಕಪರಿಶೋಧಕ ವಿಜಯ್ ಶೆಟ್ಟಿ, ಕ್ರೀಡಾ ಸಂಚಾಲಕ ಚಂದ್ರಶೇಖರ್ ಉಪಸ್ಥಿತರಿದ್ದರು.

ಕುಂದಾಪುರ ಕನ್ನಡ ಹಬ್ಬದ ಇತರ ಕಾರ್ಯಕ್ರಮಗಳ ವಿವರ

ಆಗಸ್ಟ್ 17, ಶನಿವಾರ
ಮಧ್ಯಾಹ್ನ 3: ದಿಬ್ಬಣ- ನಗರದ ವಿವಿಧ ಭಾಗಗಳಿಂದ ಆಗಮಿಸುವ ಜನರ ಪುರ ಮೆರವಣಿಗೆ.
ಸಂಜೆ 4: ನಾಕ್ ಘನಾ ಸುರ್ಲ್- ಮಂಗಳೂರಿನ ಜರ್ನಿ ಥೇಟರ್ ಗ್ರೂಪ್​ನಿದ ಜಾನಪದ, ರಂಗ ಹಾಗೂ ಕುಂದಾಪ್ರ ಕನ್ನಡ ಗೀತಗಾಯನ.
ಸಂಜೆ 6.30: ಜೋಡಾಟ- ಕರಾವಳಿ ಜಿಲ್ಲೆಗಳ ಸುಪ್ರಸಿದ್ಧ ಕಲಾವಿದರ ಮೇಳೈಸುವಿಕೆ.

ಆಗಸ್ಟ್ 18, ಭಾನುವಾರ

ಬೆಳಗ್ಗೆ 10: ಬಯಲಾಟ- ಗ್ರಾಮೀಣ ಉತ್ಸವ
ಬೆಳಗ್ಗೆ 10: ತಾರೆಯರ ಜೊತೆ ಮಾತುಕತೆ, ಕವಿತೆ.
ಬೆಳಗ್ಗೆ 11: ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ʼಡಾನ್ಸ್ ಕುಂದಾಪ್ರ ಡಾನ್ಸ್ʼ
ಬೆಳಗ್ಗೆ 11.15: ಕುಂದಾಪುರ ಭಾಷೆ ಬದುಕು ಬರಹ ಕುರಿತ ನುಡಿಚಾವಡಿ.
ಮಧ್ಯಾಹ್ನ 12: ಮನು ಹಂದಾಡಿ ಅವರಿಂದ ʼಹಂದಾಡ್ತಾ ನೆಗ್ಯಾಡಿʼ ಹಾಸ್ಯ ಕಾರ್ಯಕ್ರಮ.
ಮಧ್ಯಾಹ್ನ 1.30: ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ ʼಪೆಟ್ ಒಂದೇ, ಸ್ವರ ಬೇರೆʼ
ಮಧ್ಯಾಹ್ನ 2.30: ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ ʼಮಂದಾರ್ತಿ ಮಾದೇವಿʼ
ಸಂಜೆ 4.30: ರಥೋತ್ಸವ
ರಾತ್ರಿ 7.30: ʼರವಿ ಬಸ್ರೂರ್ ನೈಟ್ಸ್ʼ ವಿಶೇಷ ಸಂಗೀತ ಸಂಜೆ.

Continue Reading

ಚಿಕ್ಕೋಡಿ

Murder Case : ಕೆಲ್ಸ ಜಾಸ್ತಿ ಮನೆಗೆ ಬರಲ್ಲ ಎಂದವನು, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬೀದಿ ಹೆಣವಾದ

Murder case : ಕೆಲಸ ಜಾಸ್ತಿ ಇದೆ ಇಂದು ಮನೆಗೆ ಬರುವುದಿಲ್ಲ ಎಂದವನು ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಅಥಣಿ ಸಮೀಪ ವ್ಯಕ್ತಿಯೊಬ್ಬ ಕೊಲೆಯಾಗಿ ಹೋಗಿದ್ದಾನೆ. ಇತ್ತ ಉಡುಪಿಯಲ್ಲಿ ಕೆಲಸದಲ್ಲಿ ಅಶಿಸ್ತು ತೋರಿದ ಸೆಕ್ಯೂರಿಟಿ ಗಾರ್ಡ್‌ಗೆ ವಾರ್ನಿಂಗ್‌ ಕೊಟ್ಟ ಮ್ಯಾನೇಜರ್‌ಗೆ ಹಲ್ಲೆ ನಡೆಸಲಾಗಿದೆ.

VISTARANEWS.COM


on

By

Murder case
Koo

ಚಿಕ್ಕೋಡಿ: ಬೆಳಗಾವಿಯ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಬಸ್ ನಿಲ್ದಾಣದಲ್ಲಿ ಕೊಲೆಯಾದ (Murder Case) ಸ್ಥಿತಿಯಲ್ಲಿ ವ್ಯಕ್ತಿಯ ಶವ (Dead body Found) ಪತ್ತೆಯಾಗಿದೆ. ಮಧಬಾವಿ ಗ್ರಾಮದ ಅಪ್ಪಾಸಾಬ ಕಾಂಬಳೆ (37) ಕೊಲೆಯಾದವರು.

ಅಪ್ಪಾಸಾಬ ಕಾಂಬಳೆ ದುಡಿಯಲು ನಿತ್ಯ ಪಕ್ಕದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು. ಕಳೆದ ರಾತ್ರಿ 9 ಗಂಟೆಗೆ ಪತ್ನಿಗೆ ಕರೆ ಮಾಡಿದ ಅಪ್ಪಾಸಾಬ ಇಂದು ಕೆಲಸ ಇದೆ ಮನೆ ಬರಲು ಆಗುವುದಿಲ್ಲ ಎಂದು ಮಾಹಿತಿ ನೀಡಿದ್ದರು. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಅಪ್ಪಾಸಾಬ ಬೀದಿ ಹೆಣವಾಗಿದ್ದಾರೆ.

ಹಂತಕರು ಯಾರೋ ಅಪ್ಪಾಸಾಬನನ್ನು ಕೊಲೆ ಮಾಡಿ ಅನಂತಪುರ ಬಸ್ ನಿಲ್ದಾಣದಲ್ಲಿ ಹಾಕಿ ಹೋಗಿದ್ದಾರೆ. ಮೈಮೇಲೆ ಹೊಡೆದಿರುವ ಗಾಯದ ಗುರುತುಗಳು ಪತ್ತೆಯಾಗಿವೆ. ಬೇರೆಡೆ ಕೊಲೆ ಮಾಡಿ ಶವ ಹಾಕಿ ಹೋಗಿರುವ ಶಂಕೆ ಇದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುರಿಸಿದ್ದಾರೆ.

ಇದನ್ನೂ ಓದಿ: Love Failure : ಹುಬ್ಬಳ್ಳಿ ಬಳಿಕ ಮಂಗಳೂರಿನಲ್ಲಿ ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಪಾಗಲ್‌ ಪ್ರೇಮಿ

ಚೂರಿ ಹಿಡಿದು ಮ್ಯಾನೇಜರ್‌ನನ್ನು ಅಟ್ಟಾಡಿಸಿದ ಸೆಕ್ಯೂರಿಟಿ ಗಾರ್ಡ್‌!

ಸೆಕ್ಯೂರಿಟಿ ಗಾರ್ಡ್‌ನಿಂದ ಶೋರೂಂ ಕ್ಲಸ್ಟರ್ ಮ್ಯಾನೇಜರ್‌ ಚೂರಿಯಿಂದ ಇರಿದು ಅಟ್ಟಾಡಿಸಿಕೊಂಡು ಹೋಗಿರುವ ಘಟನೆ ನಡೆದಿದೆ. ಚೂರಿಯಿಂದ ಇರಿದ ದೃಶ್ಯ ವಿಸ್ತಾರ ನ್ಯೂಶ್‌ಗೆ ಲಭ್ಯವಾಗಿದೆ. ಉಡುಪಿಯ ಹರ್ಷ ಶೋರೂಂನಲ್ಲಿ ಘಟನೆ ನಡೆದಿದೆ.

ಹರ್ಷ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಇರಿತಕ್ಕೊಳಗಾದವರು. ಅಲ್ಲೇ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರಸಾದ್ ಹಲ್ಲೆ ನಡೆಸಿದವನು. ಪ್ರಸಾದ್‌ ಕೆಲಸದಲ್ಲಿ ಅಶಿಸ್ತು ತೋರಿದ್ದಕ್ಕಾಗಿ ರೋನ್ಸನ್‌ ವಾರ್ನಿಂಗ್ ನೀಡಿದ್ದರು. ಕೆಲಸದಿಂದ ತೆಗೆಯದಂತೆ ರೋನ್ಸನ್ ಬಳಿ ಪ್ರಸಾದ್ ಕೇಳಿಕೊಂಡಿದ್ದ. ಮರುದಿನ ಮೀಟಿಂಗ್‌ನಲ್ಲಿ ಚರ್ಚಿಸುವುದಾಗಿ ರೋನ್ಸನ್‌ ಹೇಳಿದ್ದರು.

ಆಗಸ್ಟ್ 10 ರ ಸಂಜೆ 7.30ರಂದು ಮಾತುಕತೆ ಬಳಿಕ ಗ್ರೌಂಡ್ ಫ್ಲೋರ್‌ನಲ್ಲಿ ಕಾದು ಕುಳಿತಿದ್ದ ಆರೋಪಿ ಪ್ರಸಾದ್ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಬರುತ್ತಿದ್ದಂತೆ ಚೂರಿಯಲ್ಲಿ ಇರಿದಿದ್ದ. ಕೂಡಲೇ ಈತನಿಂದ ತಪ್ಪಿಸಿಕೊಂಡು ರೋನ್ಸನ್‌ ಓಡಿದ್ದರು. ಆದರೂ ಬಿಡದೇ ಪ್ರಸಾದ್‌ ಬೆನ್ನಟ್ಟಿ ಹೋಗಿ ಕೊಲೆಗೆ ಯತ್ನಿಸಿದ್ದಾನೆ. ಇದೆಲ್ಲವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral News
Latest17 mins ago

Viral News: ರೈಲು ಬೋಗಿಯಲ್ಲಿ ನಮಾಜ್: ಮುಸ್ಲಿಂ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡ ಟಿಟಿಇ; ವಿಡಿಯೊ ಇಲ್ಲಿದೆ

Viral Video
Latest29 mins ago

Viral Video: ರೀಲ್ಸ್ ಅವಾಂತರ; 6ನೇ ಮಹಡಿಯಿಂದ ಬಿದ್ದ ಬಾಲಕಿ; ಅಪ್ಪನನ್ನು ಕರೆ ಎಂದು ಅಮ್ಮನ ಬಳಿ ಅಂಗಲಾಚಿದ್ದು ಯಾಕೆ?

ramanagara murder case
ಕ್ರೈಂ33 mins ago

Murder Case: ಪೂಜೆಗೆಂದು ಕರೆದೊಯ್ದು ಹೆಂಡತಿಯ ಕೊಂದ ಗಂಡ; ಕೊಲೆಯಾದಳೇಕೆ ಚಿಟ್ಟೆ ಟ್ಯಾಟೂ ಚೆಲುವೆ?

Dodda Ganesh
ಕ್ರೀಡೆ37 mins ago

Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Rachael Lillis The voice of Pokémon Misty and Jessie passes away
ಸಿನಿಮಾ37 mins ago

Rachael Lillis: ಧ್ವನಿ ನಿಲ್ಲಿಸಿದ ʻಪೋಕೆಮಾನ್ʼ ತಾರೆ ರಾಚೆಲ್; ಸ್ತನ ಕ್ಯಾನ್ಸರ್‌ ವಿರುದ್ಧ ಹೋರಾಡಿ ಸೋತ ನಟಿ

Gold Rate Today
ಚಿನ್ನದ ದರ40 mins ago

Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

Independence Day 2024 gadag students pm narendra modi
ಪ್ರಮುಖ ಸುದ್ದಿ1 hour ago

PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

Buchi Babu Tournament
ಕ್ರೀಡೆ1 hour ago

Buchi Babu Tournament: ಬುಚ್ಚಿಬಾಬು ಕ್ರಿಕೆಟ್‌ ಟೂರ್ನಿ ಆಡಲಿದ್ದಾರೆ ಸೂರ್ಯಕುಮಾರ್​, ಅಯ್ಯರ್​

Police Raid puttur mangalore
ಕ್ರೈಂ1 hour ago

Police Raid: ಹಿಂದೂ ಯುವತಿ- ಮುಸ್ಲಿಂ ಯುವಕ ಜೋಡಿಗೆ ರೂಂ ನೀಡಿದ ಲಾಡ್ಜ್‌ಗೆ ಪೊಲೀಸರ ದಾಳಿ

Actor Darshan case Renukaswamy blood found on Pavitra Gowda's slippers, beer bottle
ಸ್ಯಾಂಡಲ್ ವುಡ್1 hour ago

Actor Darshan: ಪವಿತ್ರಾಗೌಡ ಚಪ್ಪಲಿ, ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌