Site icon Vistara News

Kundapura Festival: ಬೆಂಗಳೂರಲ್ಲಿ 17, 18ರಂದು ʻಕುಂದಾಪ್ರ ಕನ್ನಡ ಹಬ್ಬʼ: ಇಲ್ಲಿದೆ ಕಾರ್ಯಕ್ರಮಗಳ ವಿವರ, ಹೋಯ್‌ ಬನಿಯೇ ಹಬ್ಬಕ್‌ ಹೋಪ!

Kundapura Festival Kannada Habba On August 17 And 18 In Bengaluru Palace Ground

ಬೆಂಗಳೂರು: ʼಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರುʼ ರಾಜಧಾನಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ 2 ದಿನಗಳ ಅದ್ಧೂರಿ ʼಕುಂದಾಪ್ರ ಕನ್ನಡ ಹಬ್ಬʼವನ್ನು (Kundapura Festival) ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆ.17ರ ಸಂಜೆ 5ಕ್ಕೆ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ. 3ರಲ್ಲಿರುವ ವೈಟ್‌ ಪೆಟಲ್ಸ್‌ನಲ್ಲಿ ಆ. 17 ಮತ್ತು 18ರಂದು ನಡೆಯಲಿರುವ ಈ ಹಬ್ಬದ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಅವರು ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ರಿಷಬ್ ಶೆಟ್ಟಿಗೆ ಊರ ಗೌರವದ ಸನ್ಮಾನ

ಶನಿವಾರ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಅಂದು ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ ಇರಲಿದ್ದಾರೆ.

ಹೀಗಿದೆ ಪಾರ್ಕಿಂಗ್‌ ವ್ಯವಸ್ಥೆ

ʼಇದು ಕುಂದಾಪ್ರ ಕನ್ನಡ ಹಬ್ಬವಾದರೂ ಸಮಸ್ತ ಕನ್ನಡಿಗರ ಸಂಭ್ರಮ. ಹೀಗಾಗಿ ಈ ಹಬ್ಬಕ್ಕೆ ನಾವು ಎಲ್ಲರನ್ನೂ ಆಹ್ವಾನಿಸುತ್ತಿದ್ದು, ಎರಡು ದಿನಗಳ ಹಬ್ಬ ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಒಂದು ಸಾವಿರ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಅದಾಗ್ಯೂ ಅನುಕೂಲದ ದೃಷ್ಟಿಯಿಂದ ಸಾರ್ವಜನಿಕ ಸಾರಿಗೆ ಮೂಲಕ ಆಗಮಿಸುವುದು ಉತ್ತಮ. ಶನಿವಾರ ಮಧ್ಯಾಹ್ನ 2ರಿಂದ ರಾತ್ರಿ 10.30 ಮತ್ತು ಭಾನುವಾರ ಬೆಳಗ್ಗೆ 9.30ರಿಂದ ರಾತ್ರಿ 10.30ರ ವರೆಗೆ ನಿರಂತರ ಕಾರ್ಯಕ್ರಮಗಳಿದ್ದು, ಈ ಹಬ್ಬಕ್ಕೆ ಯಾವುದೇ ಪ್ರವೇಶ ಶುಲ್ಕವಿಲ್ಲ” ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ದೀಪಕ್ ಶೆಟ್ಟಿ ವಿವರಣೆ ನೀಡಿದ್ದಾರೆ.

ಭಾನುವಾರ ಸಂಜೆ 5ರ ಸಮರೋಪ ಸಮಾಂಭ

ಭಾನುವಾರ ಸಂಜೆ 5ರ ಸಮರೋಪ ಸಮಾಂಭದಲ್ಲಿ ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಡಾ.ಮಾಲತಿ ಕೆ. ಹೊಳ್ಳ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಆ ದಿನ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಎಂ.ಆರ್.ಜಿ. ಸಮೂಹದ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಯುನಿವರ್ಸಲ್ ಗ್ರೂಪ್‌ನ ಉಪೇಂದ್ರ ಶೆಟ್ಟಿ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ, ಸೌತ್‌ ಫೀಲ್ಡ್ ಪೇಂಟ್ಸ್ ಪ್ರೈ. ಲಿ. ಎಂಡಿ ಶಿವರಾಮ ಹೆಗ್ಡೆ, ಚೆಪ್ ಟಾಕ್‌ನ ಗೋವಿಂದಬಾಬು ಪೂಜಾರಿ ಇರಲಿದ್ದಾರೆ.

ಇದನ್ನೂ ಓದಿ: Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

ಹಬ್ಬಕ್ಕೆ ತಾರಾ ಮೆರುಗು

ಕುಂದಾಪುರ ಕನ್ನಡ ಹಬ್ಬದಲ್ಲಿ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ, ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ಗೋಲ್ಡನ್ ಸ್ಟಾರ್ ಗಣೇಶ್ ಆಗಮಿಸಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಅವರನ್ನೂ ಆಹ್ವಾನಿಸಲಾಗಿದ್ದು, ಅವರೂ ಬರುವ ನಿರೀಕ್ಷೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇತಿಹಾಸದಲ್ಲೇ ಪ್ರಥಮ ಬಾರಿ ಬೆಂಗಳೂರಲ್ಲಿ ಜೋಡಾಟ

ಈ ಹಬ್ಬ ಕುಂದಾಪುರ ಸಂಸ್ಕೃತಿಯನ್ನು ವಿಶೇಷ ರೀತಿಯಲ್ಲಿ ಪ್ರಸ್ತುತಿ ಪಡಿಸುವ ಪ್ರಯತ್ನ. ಆ ಪೈಕಿ ಪ್ರಮುಖ ಆಕರ್ಷಣೆ ಆಗಿ ಜೋಡಾಟ ಇರಲಿದೆ. ಇದು ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಒಂದೇ ಪ್ರಸಂಗ ಏಕಕಾಲದಲ್ಲಿ ಎರಡು ರಂಗಸ್ಥಳಗಳಲ್ಲಿ ಸ್ಪರ್ಧೆಯ ಮೇಲೆ ನಡೆಯುವ ಈ ಪ್ರದರ್ಶನವನ್ನು ನೋಡಲು ಊರಿನಿಂದಲೇ 2 ಸಾವಿರಕ್ಕೂ ಅಧಿಕ ಮಂದಿ ಆಗಮಿಸುತ್ತಿದ್ದಾರೆ. ಮತ್ತೊಂದೆಡೆ ಭಾನುವಾರ ಸಂಜೆ 7.30ಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಂದ ʼರವಿ ಬಸ್ರೂರ್ ನೈಟ್ಸ್ʼ ಎಂಬ ವಿಶೇಷ ಸಂಗೀತ ಕಾರ್ಯಕ್ರಮ ಇರಲಿದೆ. ಇದು ಕೂಡ ಇದೇ ಪ್ರಥಮ ಬಾರಿಗೆ ನಡೆಯುತ್ತಿರುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್ ಮಾಹಿತಿ ನೀಡಿದರು.

ದಿನವಿಡೀಯ ವಿಶೇಷ

ʼಹೊಟ್ಟಿ ಕಂಡದ್ದ್ ನಾವೇ ಸೈʼ ಎಂಬ ಹೆಸರಿನಲ್ಲಿ ಕರಾವಳಿ ಖಾದ್ಯಮೇಳ ಇರಲಿದ್ದು, ವಿಶೇಷ ತಿಂಡಿ-ತಿನಿಸುಗಳು ಲಭ್ಯ ಇರಲಿವೆ. ಅಲ್ಲದೆ ಕಡಲೂರಿನ ವಸ್ತು, ಒಡವೆ, ವಸ್ತ್ರಪ್ರದರ್ಶನ ಮತ್ತು ಮಾರಾಟದ ʼಕುಂದಾಪ್ರ ಸಂತಿʼ ಕೂಡ ಇರಲಿದೆ. ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಲೆಕ್ಕಪರಿಶೋಧಕ ವಿಜಯ್ ಶೆಟ್ಟಿ, ಕ್ರೀಡಾ ಸಂಚಾಲಕ ಚಂದ್ರಶೇಖರ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಪೂರ್ಣ ಡೀಟೈಲ್ಸ್‌

ಶನಿವಾರ ಏನೇನಿರುತ್ತೆ?

ಮಧ್ಯಾಹ್ನ 3: ದಿಬ್ಬಣ- ನಗರದ ವಿವಿಧ ಭಾಗಗಳಿಂದ ಆಗಮಿಸುವ ಜನರ ಪುರ ಮೆರವಣಿಗೆ.

ಸಂಜೆ 4: ನಾಕ್ ಘನಾ ಸುರ್ಲ್- ಮಂಗಳೂರಿನ ಜರ್ನಿ ಥೇಟರ್ ಗ್ರೂಪ್‌ನಿಂದ ಜಾನಪದ, ರಂಗ ಹಾಗೂ ಕುಂದಾಪ್ರ ಕನ್ನಡ ಗೀತಗಾಯನ.

ಸಂಜೆ 6.30: ಜೋಡಾಟ- ಕರಾವಳಿ ಜಿಲ್ಲೆಗಳ ಸುಪ್ರಸಿದ್ಧ ಕಲಾವಿದರ ಮೇಳೈಸುವಿಕೆ.

ಭಾನುವಾರದ ಹಬ್ಬದಲ್ಲಿ ಇದೆಲ್ಲಾ ಇರುತ್ತೆ

ಬೆಳಗ್ಗೆ 10: ಬಯಲಾಟ- ಗ್ರಾಮೀಣ ಉತ್ಸವ

ಬೆಳಗ್ಗೆ 10: ತಾರೆಯರ ಜೊತೆ ಮಾತುಕತೆ, ಕವಿತೆ.

ಬೆಳಗ್ಗೆ 11: ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ʼಡಾನ್ಸ್ ಕುಂದಾಪ್ರ ಡಾನ್ಸ್ʼ

ಬೆಳಗ್ಗೆ 11.15: ಕುಂದಾಪುರ ಭಾಷೆ ಬದುಕು ಬರಹ ಕುರಿತ ನುಡಿಚಾವಡಿ.

ಮಧ್ಯಾಹ್ನ 12: ಮನು ಹಂದಾಡಿ ಅವರಿಂದ ʼಹಂದಾಡ್ತಾ ನೆಗ್ಯಾಡಿʼ ಹಾಸ್ಯ ಕಾರ್ಯಕ್ರಮ.

ಮಧ್ಯಾಹ್ನ 1.30: ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ ʼಪೆಟ್ ಒಂದೇ, ಸ್ವರ ಬೇರೆʼ

ಮಧ್ಯಾಹ್ನ 2.30: ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ ʼಮಂದಾರ್ತಿ ಮಾದೇವಿʼ

ಸಂಜೆ 4.30: ರಥೋತ್ಸವ

ರಾತ್ರಿ 7.30: ʼರವಿ ಬಸ್ರೂರ್ ನೈಟ್ಸ್ʼ ವಿಶೇಷ ಸಂಗೀತ ಸಂಜೆ.

Exit mobile version