ಉಡುಪಿ: ಎಂಬಿಎ ವಿದ್ಯಾಭ್ಯಾಸ ಮಾಡಿದರೂ ಕೆಲಸ ಸಿಗದೆ ಇರುವುದರಿಂದ ಬೇಸತ್ತ ಯುವತಿಯೊಬ್ಬರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಕಟ್ಟಿಂಗೇರಿಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಸಹನಾ ಒಂದು ವರ್ಷದ ಹಿಂದೆ ಮಂಗಳೂರಿನಲ್ಲಿ ಎಂಬಿಎ ಪೂರೈಸಿದ್ದರು. ಇದಾದ ಬಳಿಕ ಹಲವು ಕಡೆ ಉದ್ಯೋಗಕ್ಕೆ ಪ್ರಯತ್ನಿಸಿದರೂ ಎಲ್ಲರೂ ಕೆಲಸ ಸಿಗಲಿಲ್ಲ. ಹೀಗಾಗಿ ಅವರು ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಅಕ್ಕನ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ..
ಇದನ್ನೂ ಓದಿ | ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ, ಗಂಡನೇ ಕೊಲೆಗಾರ ಎಂದ ಕುಟುಂಬ
ಅರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ತೀವ್ರ ಬೇಸರಗೊಂಡಿದ್ದ ಅವರು ವಿಷ ಸೇವಿಸಿ ಅಸ್ವಸ್ಥರಾದಾಗ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಡುಪಿಯ ಮಿಷನ್ ಆಸ್ಪತ್ರೆ, ಕೆಎಂಸಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉಡುಪಿಯ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಸೊರಬದ ಯುವ ರೈತ ಆತ್ಮಹತ್ಯೆಗೆ ಶರಣು, ಅಕಾಲಿಕ ಮಳೆಯಿಂದ ಕೈಕೊಟ್ಟ ಬೆಳೆ