ಉಡುಪಿ: ಬೈಕ್‌ನಲ್ಲಿ ತೆರಳುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರಿಣಿ ಮೃತಪಟ್ಟತಹ ಘಟನೆ ಉಡುಪಿ ಜಿಲ್ಲೆಯ
ಕುಂದಾಪುರ ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಾ ಶೆಟ್ಟಿ (55) ಮೃತಪಟ್ಟವರು. ಮತ್ತೊಬ್ಬರು ಬೈಕ್ ಚಲಾಯಿಸುತ್ತಿದ್ದಾಗ ಹಿಂಬದಿ ಸವಾರರಾಗಿ ಲಲಿತಾ ಶೆಟ್ಟಿ ತೆರಳುತ್ತಿದ್ದರು. ಈ ಸಮಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾರೆ. ಲಲಿತಾ ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಪೆಟ್ಟಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಲಲಿತಾ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯಾಗಿ ಲಲಿತಾ ಕಾರ್ಯ ನಿರ್ವಹಿಸಿದ್ದರು. ಕಾಲ್ತೋಡು ಗ್ರಾಮ ಪಂಚಾಯಿತಿಗೆ ಸದಸ್ಯರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದರು. ಈಗ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಪಂಚಾಯತ್ ಸಭೆ ಮುಗಿಸಿ ಮನೆಗೆ ಹೋಗುವ ಮಾರ್ಗ ಮಧ್ಯೆ ದುರ್ಘಟನೆ ನಡೆದಿದೆ.
ಇದನ್ನೂ ಓದಿ| ಅಸ್ಸಾಂನಲ್ಲಿ ಮಳೆ ಅಬ್ಬರ; ಪ್ರವಾಹ, ಭೂಕುಸಿತಕ್ಕೆ 8 ಮಂದಿ ಸಾವು