ಉಡುಪಿ: ಹೆರಿಗೆ ವೇಳೆ ಮಗು ಮೃತಪಟ್ಟುದರಿಂದ ಆಕ್ರೋಶಗೊಂಡ ಮಗುವಿನ ತಾಯಿಯ ಕುಟುಂಬಸ್ಥರು ಹಾಗೂ ಊರವರು ವೈದ್ಯರ ನಿರ್ಲಕ್ಷ್ಯ (Medical Negligence) ಆರೋಪಿಸಿ ಆಸ್ಪತ್ರೆ ಮುಂದೆ ಅಹೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಗಂಗೊಳ್ಳಿ ಮೂಲದ ಶ್ರೀನಿವಾಸ ಖಾರ್ವಿ ಹಾಗೂ ಜ್ಯೋತಿ ಅವರು ಮಗು ಹೆರಿಗೆಯ ವೇಳೆ ಸಾವನ್ನಪ್ಪಿತ್ತು. ನವೆಂಬರ್ 17ರಂದು ಹೆರಿಗೆ ನೋವಿನ ಹಿನ್ನೆಲೆಯಲ್ಲಿ ಜ್ಯೋತಿ ಕುಂದಾಪುರ ತಾಲೂಕಿನ ಸರಕಾರಿ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಬೆಳಿಗ್ಗೆ ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದರು.
ಇದು ವೈದ್ಯರ ನಿರ್ಲಕ್ಷ್ಯದಿಂದಾದ ಸಾವು ಎಂದು ಅಕ್ರೋಶಗೊಂಡ ಊರವರಿಂದ ಪ್ರತಿಭಟನೆ ನಡೆದಿದೆ. ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಬೇಕು, ಡಿಸಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಮಗುವಿನ ಹೊಕ್ಕುಳ ಬಳ್ಳಿ ಸುತ್ತಿಕೊಂಡು ಸಾವಾಗಿದೆ ಎಂದು ವೈದ್ಯರು ಉಡಾಫೆಯಾಗಿ ಮಾತಾಡಿದ್ದಾರೆ. ಹೆರಿಗೆ ಸಂದರ್ಭ ರಕ್ತಸ್ರಾವವಿದೆ ಎಂದರೂ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿಲ್ಲ ಎಂದಿರುವ ಕುಟುಂಬಸ್ಥರು, ಎಂಟುವರೆ ತಿಂಗಳಿನಿಂದ ಸ್ಕ್ಯಾನಿಂಗ್ ಮಾಡಲು ಒಪ್ಪದ ಡಾಕ್ಟರ್ ವಿರುದ್ಧ ಆಕ್ರೋಶಿಸಿದರು. ಇಡೀ ರಾತ್ರಿ ಆಸ್ಪತ್ರೆ ಮುಂದೆ ಕುಳಿತು ಧರಣಿ ನಡೆಸಿದರು. ಸ್ಥಳಕ್ಕೆ ಬಂದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಕುಟುಂಬಕ್ಕೆ ಸಾಂತ್ವನ ಹೇಳಿದರು. ಡಿಎಚ್‌ಓ, ವೈದ್ಯಾಧಿಕಾರಿ ರಾಬರ್ಟ್ ರೆಬೆಲ್ಲೋ ಅವರಿಂದ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಲಾಯಿತು.
ಸತ್ತಿದ್ದೇನೆ ಎಂದು ನಂಬಿಸಿದ ಕೊಲೆ ಆರೋಪಿ 2 ವರ್ಷದ ಬಳಿಕ ಅರೆಸ್ಟ್!
ಬೆಂಗಳೂರು: ಸತ್ತು ಹೋಗಿದ್ದೇನೆ ಎಂದು ಎಲ್ಲರನ್ನೂ ನಂಬಿಸಿ ಎರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರೌಡಿ, ಕೊಲೆ ಆರೋಪಿಯನ್ನು ಬಂಧಿಸಲಾಗಿದೆ.
ವೈಟ್ ಫೀಲ್ಡ್ ಪೊಲೀಸ್ ಠಾಣೆ ರೌಡಿಶೀಟರ್ ಆಗಿರುವ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ರೌಡಿ. ಸಿಸಿಬಿ ಪೊಲೀಸರಿಂದ ಈ ರೌಡಿಶೀಟರ್ ಬಂಧನವಾಗಿದೆ. ಈ ಮಲ್ಲಿ ಕಾಡುಬೀಸನಹಳ್ಳಿ ಸೋಮನ ಡ್ರೈವರ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ. ಬಳಿಕ ರಾಜಾನುಕುಂಟೆಯಲ್ಲಿ ಇನ್ನೊಂದು ಕೊಲೆ ಕೇಸಿನಲ್ಲಿಯೂ ಆರೋಪಿಯಾಗಿದ್ದ.
ಎರಡು ವರ್ಷಗಳಿಂದ ಈತ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ. ಮನೆ ಬಳಿ ಪೊಲೀಸರು ವಿಚಾರಿಸಿದಾಗ ಅವನು ಸತ್ತು ಹೋಗಿದ್ದಾನೆ ಎಂದು ಕುಟುಂಬದವರು ಹೇಳಿದ್ದರು. ಮಲ್ಲಿಯ ಗೆಳೆಯರು, ಪರಿಚಿತರನ್ನು ವಿಚಾರಿಸಿದರೂ ಸತ್ತಿದ್ದಾನೆ ಎಂದು ಮಾಹಿತಿ ದೊರೆತಿತ್ತು. ಸತ್ತಿದ್ದಾನೆ ಅನ್ನುವುದಕ್ಕೆ ಬೇಕಾದ ರೆಕಾರ್ಡ್ಸ್ ಅನ್ನು ಕುಟುಂಬ ರೆಡಿ ಮಾಡಿತ್ತು.
ಅದರೂ ಅನುಮಾನ ಬಂದು ಸಿಸಿಬಿ ಪೊಲೀಸರು ತಲಾಶ್ ಮಾಡಿದ್ದರು. ಮಲ್ಲಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದರು. ಕೊನೆಗೆ ಊರೂರು ಸುತ್ತುತ್ತಾ ತಲೆಮರೆಸಿಕೊಂಡಿದ್ದ ಮಲ್ಲಿಕಾರ್ಜುನ ಅರೆಸ್ಟ್ ಆಗಿದ್ದಾನೆ.
ಇದನ್ನೂ ಓದಿ: Assault Case: ಪೊಲೀಸ್ ಪೇದೆ ಮೇಲೆ ಹಲ್ಲೆ; 16 ಮಂದಿ ವಿರುದ್ಧ ಎಫ್ಐಆರ್