Dead Body Found | ಮಗನನ್ನು ಕಾಪಾಡಲು ಸೌಪರ್ಣಿಕಾ ನದಿಗೆ ಜಿಗಿದು ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ - Vistara News

ಉಡುಪಿ

Dead Body Found | ಮಗನನ್ನು ಕಾಪಾಡಲು ಸೌಪರ್ಣಿಕಾ ನದಿಗೆ ಜಿಗಿದು ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ

ನೀರಿಗೆ ಬಿದ್ದ ಮಗನನ್ನು ರಕ್ಷಿಸಲೆಂದು ನದಿಗೆ ಹಾರಿ ಸೆಳವಿನಲ್ಲಿ ಸಿಕ್ಕಿ ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆಯಾಗಿದೆ.

VISTARANEWS.COM


on

Dead Body Found
ಮೃತ ಮಹಿಳೆ ಚಾಂದಿ ಶೇಖರ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಸೌಪರ್ಣಿಕಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಮಹಿಳೆಯ ಶವ (Dead Body Found) ಸೋಮವಾರ (ಸೆ.12) ಪತ್ತೆಯಾಗಿದೆ. ಕೇರಳ ಮೂಲದ ಕುಟುಂಬದೊಂದಿಗೆ ಬಂದಿದ್ದ ಚಾಂದಿ ಶೇಖರ್ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಈ ಹಿಂದೆ ನದಿಗೆ ಬಿದ್ದದ್ದ ಮಗನನ್ನು ಕಾಪಾಡುವ ಭರದಲ್ಲಿ ಮಹಿಳೆ ನೀರು ಪಾಲಾಗಿದ್ದರು. ಸೌಪರ್ಣಿಕಾ ನದಿಯ ಮೂರುವರೆ ಕಿ.ಮೀ ದೂರದಲ್ಲಿ ಶವ ಪತ್ತೆಯಾಗಿದೆ.

ಇದನ್ನೂ ಓದಿ | Women Murder | ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಸೌಪರ್ಣಿಕಾ ನದಿಯಲ್ಲಿ ನೀರಿನ ಒತ್ತಡದ ನಡುವೆಯೂ ಸಾಹಸಿಗ ಈಶ್ವರ್ ಮಲ್ಪೆ ಕಾರ್ಯಾಚರಣೆ ಮಾಡಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲುಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ಮನ ಕಲಕುವ ಘಟನೆ ನಡೆದಿದೆ. ತಾಯಿ ಶವದ ಜತೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದ್ದಾಳೆ.

VISTARANEWS.COM


on

Kundapur News
Koo

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock in udupi

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

Continue Reading

ಮಳೆ

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka Rain : ಒಂದೇ ಮಳೆಗೆ ಬೆಂಗಳೂರಿನ ಹಲವು ಏರಿಯಾಗಳು ಸಣ್ಣ ದ್ವೀಪದಂತಾಗಿದೆ. ಚಿಕ್ಕಮಗಳೂರಿನ ಕಳಸದಲ್ಲೂ ಮಳೆಯು ಅಬ್ಬರಿಸುತ್ತಿದೆ. ಹಲವೆಡೆ ಮಳೆಯಿಂದ ಅವಘಡ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಗಂಟೆ ಕಾಲ ಸುರಿದ ಮಳೆಗೆ (Karnataka Rain) ರಸ್ತೆಗಳೆಲ್ಲವೂ ಹೊಳೆಯಂತಾಗಿದೆ. ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ನಿನ್ನೆ ಶನಿವಾರ ರಾತ್ರಿ ಸುರಿದ ಮಳೆಗೆ ಇಡೀ ಏರಿಯಾ ಜಲಾವೃತಗೊಂಡಿದೆ.

karnataka rain

ಯಲಹಂಕದ ನಾರ್ಥ್‌ ಹುಡ್ ಅಪಾರ್ಟ್‌ಮೆಂಟ್ ಸುತ್ತಮುತ್ತ ನೀರು ತುಂಬಿ ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರುವುದರಿಂದ ಈ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನೂ ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ. ಗಬ್ಬು ವಾಸನೆ ತಾಳಲಾರದೇ ಕೆಲ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ರಾತ್ರಿಯಿಂದಲೂ ಮೋಟಾರ್‌ ಮೂಲಕ ನೀರು ಹೊರಹಾಕುತ್ತಿದ್ದಾರೆ. ಸುತ್ತಮುತ್ತಲಿನ ಐದಾರು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ವಾರದ ಹಿಂದೆ ಬಿಬಿಎಂಪಿಗೆ ಪತ್ರ ಬರೆದರೂ ಯಾವುದೇ ಪ್ರಯೋಜವಿಲ್ಲ ಎಂದು ಕಿಡಿಕಾರಿದ್ದಾರೆ. ರಾಜಕಾಲುವೆಯಿಂದ ನೀರು ತುಂಬಿ 22 ಮನೆಗಳ ನಿವಾಸಿಗಳು ಪರದಾಡುತ್ತಿದ್ದಾರೆ. ಪಕ್ಕದಲ್ಲಿರುವ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಯದೇ ಇರುವುದರಿಂದ ಆ ನೀರು ಕೂಡ ಸೇರುತ್ತಿದೆ. ರಾಜಕಾಲುವೆ, ಮಳೆ ನೀರು ಸೇರಿ ಇಡೀ ಏರಿಯಾ ಕೆರೆಯಂತಾಗಿದೆ.

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆ

ಕಾಫಿನಾಡು ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆಗೆ ಕಳಸ ದೇವಸ್ಥಾನದ ಎತ್ತರದ ಪ್ರದೇಶದಿಂದ ನೀರು ಹರಿಯುತ್ತಿದೆ. ದಕ್ಷಿಣ ಕಾಶಿ ಕಳಸೇಶ್ವರ ಸ್ವಾಮಿ ದೇವಸ್ಥಾನದ ಮೆಟ್ಟಿಲು ಮೇಲಿಂದ ನೀರು ಹರಿಯುತ್ತಿದೆ. ಇತ್ತ ಮೆಟ್ಟಿಲ ಮೇಲೆ ನಿಂತು ಮಳೆ ನೀರಲ್ಲಿ ಮಕ್ಕಳು ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಗಾಳಿ-ಮಳೆಗೆ ಮರ ಬಿದ್ದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಭದ್ರಾ ನದಿ ಒಳಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ.

karnataka rain

ಕೊಪ್ಪಳದಲ್ಲೂ ಮುಂಗಾರು ಪೂರ್ವ ಮಳೆ

ಕೊಪ್ಪಳದಲ್ಲಿ ಭಾನುವಾರ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೂರು ದಿನಗಳಿಂದ ಆಗಾಗ ಮಳೆ ಸುರಿಯುತ್ತಿದೆ. ನಿನ್ನೆ ಶನಿವಾರ ಸಂಜೆ ಸುರಿದಿದ್ದ ಮಳೆಯು ಭಾನುವಾರ ಬೆಳಗಿನವರೆಗೆ ಬಿಡುವು ಕೊಟ್ಟಿತ್ತು. ಮಧ್ಯಾಹ್ನದ ನಂತರ ಧೋ ಎಂದು ಗುಡುಗು ಸಹಿತ ಮಳೆ ಸುರಿಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain : ಭಾನುವಾರದ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಮಳೆಯು ಮನೆಯಲ್ಲೇ ಕೂರುವಂತೆ ಮಾಡಿದೆ. ಬೆಂಗಳೂರು, ಆನೇಕಲ್‌ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು, ವಿಜಯನಗರದಲ್ಲಿ ಸಿಡಿಲು ಬಡಿದು ಎರಡು ಜಾನುವಾರು ಮೃತಪಟ್ಟಿವೆ. ದಾವಣಗೆರೆಯಲ್ಲಿ ಮಳೆಗೆ ಬೆಳೆಯು ಕೊಚ್ಚಿ ಹೋಗಿದೆ.

VISTARANEWS.COM


on

By

Karnataka rain
Koo

ವಿಜಯನಗರ/ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಹಲವೆಡೆ ಗುಡುಗು ಸಹಿತ ಮಳೆ (Karnataka Rain) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಅರ್ಧ ಗಂಟೆಗೂ ಅಧಿಕ ಸಮಯ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ. ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಜಾನುವಾರುಗಳು ಮೃತಪಟ್ಟಿವೆ. ಕೋರಿ ಮಲಿಯಪ್ಪ ಎಂಬ ರೈತರಿಗೆ ಸೇರಿದ ಎತ್ತುಗಳನ್ನು ಹೊಲದಲ್ಲಿ ಮರದಡಿ ಕಟ್ಟಿ ಹಾಕಿದ್ದರು. ಈ ವೇಳೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಅಂದಾಜು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಎತ್ತುಗಳು ಸಾವನ್ನಪ್ಪಿದ್ದರಿಂದ ರೈತ ಕೋರಿ ಮಲಿಯಪ್ಪ ಕಂಗಲಾಗಿದ್ದಾರೆ.

ಬೆಂಗಳೂರು, ಆನೇಕಲ್‌ನಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದೆ. ಸಂಜೆಗೆ ಆವರಿಸುತ್ತಿದ್ದ ಮಳೆ ಭಾನುವಾರ ಬೆಳಗಿನಿಂದಲೇ ಅಬ್ಬರಿಸುತ್ತಿದೆ. ಎಂಎಸ್ ಬಿಲ್ಡಿಂಗ್ , ವಿಧಾನಸೌಧ , ಶಿವಾನಂದ ಸರ್ಕಲ್, ಶಿವಾಜಿನಗರ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಮಧ್ಯಾಹ್ನ ಶುರುವಾದ ಮಳೆಯು ಸುಮಾರು 1 ಗಂಟೆಗೂ ಹೆಚ್ಚು ಸಮಯ ಆವರಿಸಿತ್ತು. ಆಗಾಗ ಬರುತ್ತಿದ್ದ ಗುಡುಗು ಜನರನ್ನು ಬೆಚ್ಚಿ ಬೀಳಿಸುತ್ತಿತ್ತು. ಕೆ.ಆರ್ ಸರ್ಕಲ್, ಕಬ್ಬನ್ ಪಾರ್ಕ್ ರಸ್ತೆ, ಲಾಲ್ ಬಾಗ್ ರಸ್ತೆ, ರಾಜಾಜಿನಗರ, ರಾಜಕುಮಾರ್ ರಸ್ತೆಯಲ್ಲಿಯೂ ಮಳೆಯಾಗಿದೆ. ಯಲಹಂಕ, ನ್ಯೂ ಟೌನ್, ದೊಡ್ಡಬಳ್ಳಾಪುರ ಮುಖ್ಯರಸ್ತೆ, ಪುಟ್ಟೇನಹಳ್ಳಿ, ಏರ್‌ಪೋರ್ಟ್‌ ರೋಡ್‌ನಲ್ಲಿ ಮಳೆಯಾಗಿದೆ.

ಇತ್ತ ಆನೇಕಲ್ ಭಾಗದಲ್ಲೂ ಧಾರಾಕಾರ ಮಳೆಯಾಗಿತ್ತು. ಭಾನುವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಆಗಮಿಸಿದ ಮಳೆಯು ಆನೇಕಲ್, ಅತ್ತಿಬೆಲೆ, ಸರ್ಜಾಪುರ ಭಾಗದಲ್ಲಿ ಅಬ್ಬರಿಸಿತ್ತು. ಕಳೆದೊಂದು ವಾರದಿಂದ ನಿರಂತರ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಧಾರವಾಡದಲ್ಲೂ ಮಳೆ

ಪೇಡಾನಗರಿ ಧಾರವಾಡದಲ್ಲೂ ವರುಣನ ಅಬ್ಬರ ಮುಂದುವರಿದಿದೆ. ಮಧ್ಯಾಹ್ನದ ವೇಳೆ ಶುರುವಾದ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ವಿಜಯನಗರದಲ್ಲಿ ಮರಕ್ಕೆ ಬಡಿದ ಸಿಡಿಲು

ವಿಜಯನಗರದಲ್ಲಿ ಗುಡುಗು ಸಿಡಿಲು ಸಮೇತ ಮಳೆಯಾಗುತ್ತಿದ್ದು, ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಹೊಸಪೇಟೆ ತಾಲೂಕಿನ ಕೆರೆ ತಾಂಡಾ ಗ್ರಾಮದಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ, ಕಮಲಾಪುರ, ಹಂಪಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಇತ್ತ ಹೊಸಪೇಟೆ ಹೃದಯ ಭಾಗದಲ್ಲಿ ರಸ್ತೆ ಮೇಲೆ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ನೂರು ಹಾಸಿಗೆ ಆಸ್ಪತ್ರೆ, VNC ಕಾಲೇಜಿಗೆ ಹೋಗುವ ರಸ್ತೆ ಮೇಲೆ ನೀರು ನಿಂತಿತ್ತು. ಕೆಲ ಸಮಯ ವಾಹನಗಳ ಸಂಚಾರ ಅಡಚಣೆ ಉಂಟಾಯಿತು

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ದಾವಣಗೆರೆಯಲ್ಲಿ ನೆಲ ಕಚ್ಚಿದ ಬೆಳೆ

ಶನಿವಾರ ಸುರಿದ ಮಳೆಯಿಂದ ಭತ್ತದ ಬೆಳೆ‌ಯು ನೆಲ ಕಚ್ಚಿದೆ. ದಾವಣಗೆರೆಯ ದೊಡ್ಡಬಾತಿ ಗ್ರಾಮದ ಸುತ್ತಮುತ್ತಲಿನ 20ಕ್ಕೂ ಹೆಚ್ಚು ಎಕರೆ ಭತ್ತದ ಬೆಳೆ ನಾಶವಾಗಿದೆ. ಉಮೇಶ್ ಎಂಬ ಯುವ ರೈತ ಬೆಳೆದಿದ್ದ ಎರಡು ಎಕರೆ ಭತ್ತ ಸಂಪೂರ್ಣ ನಾಶವಾಗಿತ್ತು. ಬರಗಾಲದ ಸಂದರ್ಭದಲ್ಲಿ ಬೋರ್ ವೆಲ್ ನೀರಿನಲ್ಲಿ ಭತ್ತ ಬೆಳೆ ಬೆಳೆದಿದ್ದರು. ಎಕರೆಗೆ 25 ರಿಂದ 30 ಸಾವಿರ ಖರ್ಚು ಮಾಡಿ ಬೆಳೆದಿದ್ದ ಬೆಳೆಯು ರಾತ್ರಿ ಸುರಿದ ಮಳೆಗೆ ಸಂಪೂರ್ಣ ನಾಶವಾಗಿದೆ. ಮಳೆ ಬಾರದೇ ಕಷ್ಟ ಅನುಭವಿಸಿದ ರೈತರಿಗೆ ಈಗ ಮಳೆ ಬಂದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock : ಭಾರಿ ಮಳೆ ಗಾಳಿಗೆ (Karnataka rain) ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದ್ದು, ಇದನ್ನು ಗಮನಿಸದೆ ವ್ಯಕ್ತಿಯೊಬ್ಬರು ವಿದ್ಯುತ್‌ ತಂತಿ ತುಳಿದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು, ಮೆಸ್ಕಾಂ ಸಿಬ್ಬಂದಿ ದೌಡಾಯಿಸಿದ್ದಾರೆ.

VISTARANEWS.COM


on

By

Electric shock in udupi
Koo

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಮದರಸಾ ವಿದ್ಯಾರ್ಥಿ; ಸ್ಫೋಟಕ್ಕೆ ಮೌಲಾನಾ ಸಾವು

ಪಾಟ್ನಾ:ಲೋಕಸಭೆ ಚುನಾವಣೆ(Lok Sabha Election 2024)ಗೆ ಇನ್ನೇನು ಕೆಲವೇ ದಿನಗಳ ಬಾಕಿ ಉಳಿದಿರುವಗಲೇ ಬಿಹಾರ(Bihar)ದಲ್ಲಿ ಬಾಂಬ್‌ ಸ್ಫೋಟ(Bomb blast)ಗೊಂಡಿದ್ದು, ಮೌಲಾನ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅಪ್ರಾಪ್ತ ಬಾಲಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸರನ್‌ ಜಿಲ್ಲೆಯ ಮದರಸಾವೊಂದರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೌಲಾನ ಮೌಲಾನಾ ಇಮಾಮುದ್ದೀನ್ ಮತ್ತು ವಿದ್ಯಾರ್ಥಿ ನೂರ್ ಆಲಂ (15) ಗಾಯಗೊಂಡಿದ್ದರು. ಇವರಿಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಇಮಾಮುದ್ದೀನ್‌ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಘಟನೆ ವಿವರ:

ಬುಧವಾರ ತಡರಾತ್ರಿ ಸರನ್‌ನ ಓಲ್ಹಾನ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದರಸಾದ ಎದುರು ಬಿದ್ದಿದ್ದ ಚೆಂಡಿನಂತಹ ವಸ್ತುವನ್ನು ಚೆಂಡೆಂದು ಭಾವಿಸಿ ಆಲಂ ಮದರಸಾದೊಳಗೆ ಕೊಂಡೊಯ್ದಿದ್ದಾನೆ. ಮೌಲಾನಾ ಆ ವಸ್ತುವನ್ನು ನೋಡಿದ್ದರು. ಅವರು ಆಲಂನಿಂದ ಅದನ್ನು ತೆಗೆದುಕೊಂಡು ಅದನ್ನು ಬಾಂಬ್ ಎಂದು ಶಂಕಿಸಿ ಎಸೆದರು. ವಸ್ತು ಸ್ಫೋಟಗೊಂಡು ಇಬ್ಬರಿಗೂ ಗಾಯಗಳಾಗಿವೆ.  ಘಟನೆಯಲ್ಲಿ ಇಮಾಮುದ್ದೀನ್‌ ಮತ್ತು ಆಲಂ ಗಂಭೀರವಾಗಿ ಗಾಯಗೊಂಡಿದ್ದ ಇವರಿಬ್ಬರನ್ನೂ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾದರಿಗಳನ್ನು ಸಂಗ್ರಹಿಸಿದೆ. ನಾವು ಅವರ ವರದಿಯನ್ನು ಪಡೆದ ನಂತರ, ವಸ್ತುವು ಬಾಂಬ್ ಅಥವಾ ಪಟಾಕಿಯೇ ಎನ್ನುವುದನ್ನು ಖಚಿತವಾಗಿ ಹೇಳಬಹುದು ಎಂದು ಸರನ್ ಎಸ್ಪಿ ಗೌರವ್ ಮಂಗಳಾ ತಿಳಿಸಿದ್ದಾರೆ. ಇನ್ನು ಪ್ರಕರಣದ ವಿಚಾರ ರಾಜ್ಯದಲ್ಲಿ ಸುದ್ದಿಯಾಗುತ್ತಿದ್ದಂತೆ ಪೊಲೀಸರು ಪ್ರಕರಣವನ್ನು ಕೂಲಂಕಷ ತನಿಖೆ ಮಾಡಲು ನಿರ್ಧಾರ ಮಾಡಿದ್ದಾರೆ. ಶುಕ್ರವಾರದ ವೇಳೆ ಬ್ಲಾಸ್ಟ್‌ನಲ್ಲಿ ಗಾಯಗೊಂಡವರು ಇಬ್ಬರು ವ್ಯಕ್ತಿಗಳು ಎಂದು ತಿಳಿಸಲಾಗಿದೆ.  ಎಸ್ಪಿ ಗೌರವ್ ಮಂಗಳಾ ನೀಡಿರುವ ಮಾಹಿತಿಯ ಪ್ರಕಾರ, ಪ್ರಕರಣದ ನಡೆದ ಬಳಿಕ ಸ್ಥಳೀಯ ಜನರು ಸಾಕ್ಷ್ಯವನ್ನು ನಾಶ ಮಾಡಿದ್ದರಿಂದ ಇಲ್ಲಿ ಬ್ಲಾಸ್ಟ್‌ ಆದ ವಸ್ತು ಯಾವುದು ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ತಿಳಿಸಿದ್ದಾರೆ.

ಮದರಸಾದಲ್ಲಿ ಸ್ಫೋಟದ ನಂತರ, ಎಫ್‌ಎಸ್‌ಎಲ್ ತಂಡ ತನಿಖೆ ಆರಂಭಿಸಿದೆ. ಸ್ಫೋಟದ ಹಿಂದಿನ ನಿಜವಾದ ಕಾರಣ ಇನ್ನೂ ಬಹಿರಂಗವಾಗಿಲ್ಲ. ಸ್ಫೋಟದ ಹಿಂದೆ ಬಾಂಬ್ ಇದೆಯೇ ಅಥವಾ ಪಟಾಕಿಯಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ. ಆದರೆ ಈ ಘಟನೆಯ ನಂತರ ಮದರಸಾದಲ್ಲಿ ಯಾರೂ ಪತ್ತೆಯಾಗಿಲ್ಲ. ಘಟನೆಗೂ ಮುನ್ನ ಮದರಸಾದಲ್ಲಿ 12 ಮಕ್ಕಳು ಓದುತ್ತಿದ್ದರು. ಘಟನೆಯ ನಂತರ ಸ್ಥಳವನ್ನು ತೊಳೆಯಲಾಗಿದೆ. ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸುವ ಯತ್ನ ನಡೆದಿದೆ ಎಂಬ ಆರೋಪಗಳಿವೆ ಎನ್ನಲಾಗಿದೆ. ಸ್ಫೋಟದ ನಂತರ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿಹಾರದ ಮದರಸಾಗಳು ಭಯೋತ್ಪಾದನೆಯ ಗೂಡು ಎಂಬುದನ್ನು ಚಾಪ್ರಾ ಘಟನೆ ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ. ಬಿಹಾರದ ಮದರಸಾಗಳು ಭಯೋತ್ಪಾದಕರ ತಾಣಗಳಾಗಿವೆ ಎಂದು ನಾವು ಮೊದಲೇ ಹೇಳಿದ್ದೆವು ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
SRH vs PBKS
ಕ್ರೀಡೆ31 mins ago

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

Harish Poonja
ಕರ್ನಾಟಕ1 hour ago

Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Ebrahim Raisi
ವಿದೇಶ1 hour ago

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

PBKS vs SRH
ಕ್ರೀಡೆ2 hours ago

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

West Nile fever Health department on alert
ಆರೋಗ್ಯ2 hours ago

West Nile fever : ಕೇರಳದಲ್ಲಿ ವೆಸ್ಟ್‌ ನೈಲ್ ಭೀತಿ; ಮೈಸೂರು ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌

Great Khali
ದೇಶ2 hours ago

Great Khali: ಜಗತ್ತಿನ ಕುಬ್ಜ ಮಹಿಳೆಯನ್ನು ಮಗುವಿನಂತೆ ಎತ್ತಿ ಆಡಿಸಿದ ಗ್ರೇಟ್‌ ಖಲಿ; ಜನ ಕೆಂಡವಾಗಿದ್ದು ಏಕೆ?

Kalki 2898 AD
ಪ್ರಮುಖ ಸುದ್ದಿ2 hours ago

Kalki 2898 AD: ಮೇ 22ಕ್ಕೆ ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ; ಕಲ್ಕಿ ಚಿತ್ರದ 5ನೇ ಸೂಪರ್ ಸ್ಟಾರ್ ಯಾರು?

RCB vs CSK
ಕ್ರೀಡೆ3 hours ago

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

Rain News
ಕರ್ನಾಟಕ3 hours ago

Rain News: ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು, ಯುವಕನಿಗೆ ಗಂಭೀರ ಗಾಯ

Prajwal Revanna Case
ಕರ್ನಾಟಕ3 hours ago

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌