ಉಡುಪಿ: ಉಡುಪಿಯ ಪಡುಕೆರೆ ಬೀಚ್‌ನಲ್ಲಿ (Padukere Beach) ಯುವತಿಯ ಬಿಕಿನಿ ಫೋಟೋಶೂಟ್‌ಗೆ (Bikini photoshoot) ಪೊಲೀಸರು ಅಡ್ಡಗಾಲು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ ಎಂದು ಮಾಡೆಲ್‌ವೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋಶೂಟ್ ಮಾಡಿದ ಫೋಟೋಗಳ ಸಹಿತ ಪಡುಕೆರೆ ಬೀಚ್‌ನಲ್ಲಾದ ಕಹಿ ಅನುಭವವನ್ನು ಮಾಡೆಲ್ ಹಂಚಿಕೊಂಡಿದ್ದಾರೆ. ಬೀಚ್‌ನಲ್ಲಿ ನನ್ನ ಪತಿ ಬಿಕಿನಿ ಫೋಟೊಶೂಟ್ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಬಿಕಿನಿ ಹಾಕಿಕೊಂಡು ಫೋಟೊಶೂಟ್ ಮಾಡಿಸಲು ಯಾರು ಪರ್ಮಿಷನ್ ಕೊಟ್ಟಿದ್ದು ಯಾರು? ಬಟ್ಟೆ ಬದಲಿಸಿ ಎಂದು ಸೂಚಿಸಿದ್ದರಂತೆ. ಇಲ್ಲದೇ ಹೋದರೆ ಸ್ಥಳೀಯರು ನಿಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಹೇಳಿದ್ದರಂತೆ.
ಆಗ ಮಾಡೆಲ್‌ನ ಪತಿ ಪ್ರತಿಕ್ರಿಯಿಸಿ ಬೀಚ್‌ನಲ್ಲಿ ಬಿಕಿನಿ ಧರಿಸುವುದು ಯಾವುದೇ ಅಪರಾಧವಲ್ಲ. ಸಾರ್ವಜನಿಕ ಸ್ಥಳದಲ್ಲಿ ಫೋಟ್‌ಶೂಟ್ ಮಾಡಲು ಯಾವುದೇ ಲೈಸೆನ್ಸ್ ಪಡೆಯುವ ಅಗತ್ಯವಿಲ್ಲ ಎಂದಿದ್ದಾರೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರು ಎಂದು ಮಾಡೆಲ್ ಪ್ರಶ್ನೆ ಮಾಡಿದ್ದಾರೆ. ಬೀಚ್ ಸಾರ್ವಜನಿಕ ಪ್ರದೇಶ ಅಲ್ಲಿ ಫೋಟೋಶೂಟ್ ಮಾಡಿಕೊಂಡರೆ ತಪ್ಪೇನು? ಬಿಕಿನಿ ಹಾಕಿಕೊಂಡು ಫೋಟೋಶೂಟ್ ಮಾಡುವುದು ಕಾನೂನು ಉಲ್ಲಂಘನೆಯೇ? ಎಂದು ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಪೊಲೀಸರಿಗೆ ಮಾಡೆಲ್ ಪ್ರಶ್ನೆ ಮಾಡಿದ್ದಾಳೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗಿವೆ. ಫ್ಯಾಷನ್ ವಲಯದಲ್ಲಿ ಪೊಲೀಸರ ನಡೆಗೆ ವಿರೋಧಗಳು ವ್ಯಕ್ತವಾಗಿವೆ.
ಮಹಿಳೆ ವಿರುದ್ಧ ಹಿಂದೂ ಸಂಘಟನೆಗಳು ಗರಂ
ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಫೋಟೋಶೂಟ್ ವಿಚಾರವಾಗಿ ಹಿಂದು ಸಂಘಟನೆಗಳು ಗರಂ ಆಗಿವೆ. ಬಿಕಿನಿ ಫೋಟೋ ವೈರಲ್ ಬೆನ್ನಲ್ಲೇ ಬಿಕಿನಿ ಫೋಟೋಶೂಟ್‌ಗೆ ಉಡುಪಿಯಲ್ಲಿ ಅವಕಾಶವಿಲ್ಲ. ಅಸಭ್ಯ ವರ್ತನೆಗೆ ತುಳುನಾಡಲ್ಲಿ ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: UGCET 2024: ಸಿಇಟಿ, ನೀಟ್; ನೈಜ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ
ಪತ್ನಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿದ ಪಾಪಿ ಪತಿ; ಪ್ರಕರಣ ದಾಖಲು
ಚಿತ್ರದುರ್ಗ: ಪತ್ನಿಯ ಮೇಲೆ ಅನುಮಾನಿಸಿದ ಪತಿಯು, ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆ (Assault Case) ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ನಡೆದಿದೆ.
ಮೊಳಕಾಲ್ಮೂರು ನಿವಾಸಿ ಸಿಎಂ ನಾಗೇಶ್ ಎಂಬಾತನೇ ಕ್ರೌರ್ಯ ಮೆರೆದ ಪತಿ. ಈತನು ತನ್ನ ಪತ್ನಿ ಪೂಜಾ ಮೇಲೆ ಅನುಮಾನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಮುದ್ದೆ ಕೋಲಿನಿಂದ ಹೊಡೆದದ್ದಲ್ಲದೇ ದೇಹದ ಹಲವು ಭಾಗಗಳಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾನೆ ಎಂದು ಹೇಳಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ಮೊಳಕಾಲ್ಮೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿ ನಾಗೇಶ್ ವಿರುದ್ದ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!
ತುಮಕೂರು: ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಯುವಕನೊರ್ವ ಚಾಕು (Attempt To murder) ಇರಿದಿದ್ದಾನೆ. ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ.
ಹನೀಷಾ (21) ಚಾಕುವಿನಿಂದ ಇರಿತಕ್ಕೊಳಗಾದ ಮಂಗಳಮುಖಿಯಾಗಿದ್ದಾರೆ. ಮಂಡ್ಯದ ಆದಿಲ್ (23) ಚಾಕು ಇರಿದ ಆರೋಪಿಯಾಗಿದ್ದಾನೆ. ಇವರಿಬ್ಬರು ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಹನೀಷಾ ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಪರ ಊರುಗಳಿಗೆ ಆಗಾಗ ಹೋಗುತ್ತಿದ್ದರು.
ಇದನ್ನು ಸಹಿಸದ ಆದಿಲ್ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸುತ್ತಿದ್ದ. ಇದರಿಂದ ಬೇಸತ್ತು ಹನೀಷಾ ಪ್ರೇಮ ನಿರಾಕರಿಸಿದ್ದಳು. ಈ ಹಿನ್ನೆಲೆಯಲ್ಲಿ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ಸಿಟ್ಟಿನಲ್ಲಿ ಆದಿಲ್ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ