ಉಡುಪಿ: ಆದಿ ಉಡುಪಿ ಪ್ರೌಢಶಾಲೆಯಲ್ಲಿ ಕರ್ತವ್ಯನಿರತ ಹೆಡ್ ಕಾನ್ಸ್ಟೇಬಲ್ ಸರ್ವೀಸ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜೇಶ್ ಕುಂದರ್(42) ಆತ್ಮಹತ್ಯೆ ಮಾಡಿಕೊಂಡ ಕಾನ್ಸ್ಟೇಬಲ್. ಸದ್ಯ ಎಸ್ಎಸ್ಎಲ್ಸಿ ಉತ್ತರ ಪತ್ರಿಕೆ ಕೊಠಡಿಯ ಭದ್ರತಾ ನಿರ್ವಹಣೆಗಾಗಿ ಆದಿ ಉಡುಪಿ ಪ್ರೌಢಶಾಲೆಗೆ ನಿಯೋಜನೆ ಮಾಡಲಾಗಿತ್ತು. ರಾತ್ರಿ ಕರ್ತವ್ಯದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ. ರಾಜೇಶ್ ತಮ್ಮದೇ ಸರ್ವೀಸ್ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾರೆ.
ಇವರು ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ಗರ್ಭಿಣಿಯ ಕೊಲೆ ಆರೋಪ: ಡೆತ್ನೋಟ್ ಬರೆದಿಟ್ಟು ವೈದ್ಯೆ ಆತ್ಮಹತ್ಯೆ