ಹಾಸನ :ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಸಕಲೇಶಪುರ, ಆಲೂರು, ಅರಕಲಗೂಡು, ಬೇಲೂರಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ತಾಲ್ಲೂಕುಗಳಲ್ಲಿ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸಕಲೇಶಪುರ ಹಾಗೂ ಚಿಕ್ಕಮಗಳೂರು, ಮೂಡಿಗೆರೆಯಲ್ಲೂ ಮಳೆಯಿಂದಾಗಿ ಹೇಮಾವತಿ ನದಿಗೆ ಒಳಹರಿವಿನಲ್ಲಿ ಭಾರಿ ಹೆಚ್ಚಳವಾಗಿದೆ.
ಹೇಮಾವತಿ ಅಣೆಕಟ್ಟೆಗೆ 23530 ಕ್ಯೂಸೆಕ್ ಒಳಹರಿವು ಉಂಟಾಗಿದೆ. ಜಲಾಶಯದಿಂದ 17575 ಕ್ಯೂಸೆಕ್ ನೀರು ಹೊರಹರಿವು ದಾಖಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922 ಅಡಿ. ಇಂದು ಜಲಾಶಯದಲ್ಲಿನ ನೀರಿನ ಮಟ್ಟ 2919.07 ಅಡಿಯಾಗಿತ್ತು. ಜಲಾಶಯ ಭರ್ತಿಗೆ ಎರಡು ಅಡಿ ಮಾತ್ರ ಬಾಕಿ ಇದೆ.
ಉಡುಪಿಯಲ್ಲಿ ಶಾಲೆಗಳಿಗೆ ಮಾತ್ರ ರಜೆ
ಉಡುಪಿ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ಮಾತ್ರ ರಜೆ ಇದೆ. ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ಕೂಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.