Site icon Vistara News

Road Accident: ಕಾರು ಅಪಘಾತದಲ್ಲಿ ಗ್ರಾಮ ಪಂಚಾಯತ್‌ ಸದಸ್ಯ ಸಾವು

car bus accident in hunsoor village panchayat member dead

ಮೈಸೂರು: ಕರ್ನಾಟಕ ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಅಪಘಾತ ನಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ನಿಲುವಾಗಿಲು ಗ್ರಾಮ ಪಂಚಾಯತ್ ಸದಸ್ಯ ಭಾಸ್ಕರ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಪತ್ನಿ, ತಾಯಿ ಹಾಗು ಪುತ್ರನಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮೇಶ್ವರ ಬಳಿ ಕಾರು ಅಪಘಾತ, ಇಬ್ಬರು ಸಾವು

ಉಡುಪಿ: ಕಾರು ಅಪಘಾತದಲ್ಲಿ ಉಡುಪಿ ಮೂಲದ ಶಿಕ್ಷಕ ಸೇರಿ ಇಬ್ಬರು ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ರಿ ಠಾಣೆ ವ್ಯಾಪ್ತಿಯ ಸೋಮೇಶ್ವರದ ಸೀತಾನದಿ ಜಕ್ಕನಮಕ್ಕಿ ಬಳಿ ನಡೆದಿದೆ.

ಉಡುಪಿ ಡಿಡಿಪಿಐ ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುಬ್ಬಣ್ಣ ಗಾಣಿಗ, ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ ಸೋಮ ಶೇಖರ್ ಮೃತರು. ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿಯಿಂದ ಆಗುಂಬೆಗೆ ಬಸ್‌ ತೆರಳುತ್ತಿತ್ತು. ಮತ್ತೊಂದೆಡೆ ಚೆನ್ನಗಿರಿಯಲ್ಲಿ ಮದುವೆ ಸಮಾರಂಭ ಮುಗಿಸಿಕೊಂಡು ಶಿಕ್ಷಕರು ಉಡುಪಿಗೆ ಕಾರಿನಲ್ಲಿ ಬರುತ್ತಿದ್ದರು. ಹೆಬ್ರಿ ಠಾಣೆ ವ್ಯಾಪ್ತಿಯ ಸೋಮೇಶ್ವರ ಬಳಿ ಬರುತ್ತಿದ್ದಂತೆ ಬಸ್‌ ಹಾಗೂ ಕಾರು ಪರಸ್ಪರ ಡಿಕ್ಕಿಯಾಗಿವೆ. ಅಪಘಾತದ ತೀವ್ರತೆಗೆ ಬಸ್‌ನ ಒಳಗೆ ಸಿಲುಕಿದ್ದ ಕಾರನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು.

ಇದನ್ನೂ ಓದಿ: Road Accident: ರಸ್ತೆ ದಾಟುತ್ತಿದ್ದಾಗ ಇನ್ನೋವಾ ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

Exit mobile version