ಉಡುಪಿ: ಯುವಕನೊಬ್ಬ ತಾಯಿಯನ್ನು ಕೂರಿಸಿಕೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಇದ್ದ ಟೆಂಪೋಗೆ ಡಿಕ್ಕಿ (Road Accident) ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಕುಳಿತ್ತಿದ್ದ ಮಹಿಳೆಗೆ ತೀವ್ರ ಗಾಯವಾಗಿದೆ.
ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದೆ. ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಮುಫ್ರೀನ್ (18) ಮೃತ ದುರ್ದೈವಿ. ಮುಫ್ರೀನ್ ತಾಯಿ ಹಾಜಿರಾ ಅವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಅಮ್ಮ-ಮಗ ಸ್ಕೂಟರ್‌ನಲ್ಲಿ ಕಟಪಾಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಟೆಂಪೋಗೆ ಸ್ಕೂಟರ್ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿತ್ತು. ಅಪಘಾತದಲ್ಲಿ ಗಾಯಗೊಂಡ ಮುಫ್ರೀನ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕಾಪು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Murder Case: ಹಣಕ್ಕಾಗಿ ತಾಯಿಯನ್ನೇ ಪೀಡಿಸುತ್ತಿದ್ದ ಧೂರ್ತ; ಕೊನೆಗೆ ಅಮ್ಮನ ಕೊಂದು ತಾನೂ ಸತ್ತ
ಹೊಲದಲ್ಲಿ ನೇಣಿಗೆ ಶರಣಾದ ಕೊಪ್ಪಳದ ರೈತ
ಸಾಲಭಾದೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿ ಘಟನೆ ನಡೆದಿದೆ. ದ್ಯಾಮ ನಾಯಕ (30) ಮೃತ ದುರ್ದೈವಿ.
ದ್ಯಾಮ ನಾಯಕ ಬ್ಯಾಂಕ್, ಸ್ವ ಸಹಾಯ ಗುಂಪಿನಲ್ಲಿ 40 ಸಾವಿರ ಸಾಲ ಮಾಡಿದ್ದರು. ಸಾಲ ತೀರಿಸಲು ಆಗದೇ ಮನನೊಂದಿದ್ದ. ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಕುರಿಗಾಹಿಗೆ ಥಳಿತ
ಸಂಚಾರಿ ಕುರಿಗಾಹಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹುಬ್ಬಳ್ಳಿಯ ಕಿರೇಸೂರು ಗ್ರಾಮದಲ್ಲಿ ಘಟನೆ ನಡೆದಿದೆ. ಹೊನ್ನಪ್ಪ ಕುರಿ ಎನ್ನುವ ಕುರಿಗಾಹಿ ಮೇಲೆ ಕೀರೆಸೂರು ಗ್ರಾಮದ ವೆಂಕಟೇಶ್ ಸೋಮನಗೌಡ್ರ ಎಂಬಾತ ಹಲ್ಲೆ ನಡೆಸಿದ್ದಾನೆ. ಹೊಲದಲ್ಲಿ ಕುರಿ ಮೇಯಿಸಿದ ಎಂಬ ಕಾರಣಕ್ಕೆ ಕೋಲಿನಿಂದ ಥಳಿಸಿದ್ದಾನೆ. ಸದ್ಯ ಗಾಯಾಳು ಹೊನ್ನಪ್ಪ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ