Site icon Vistara News

ಹಿರಿಯ ವಿದ್ವಾಂಸ, ಸಾಹಿತಿ ಅಂಬಾತನಯ ಮುದ್ರಾಡಿ ಅಸ್ತಂಗತ

ambatanaya mudradi

ಉಡುಪಿ: ಹಿರಿಯ ವಿದ್ವಾಂಸ, ಸಾಹಿತಿ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ (88) ಇಂದು ಮುಂಜಾನೆ ವಿಧಿವಶರಾಗಿದ್ದಾರೆ.

ಶಿಕ್ಷಕ, ಹರಿದಾಸ, ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಸಾಹಿತಿ ಹೀಗೆ ಅನೇಕ ವಿಭಾಗಗಳಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ ಕೀರ್ತಿ ಅಂಬಾತನಯ ಮುದ್ರಾಡಿ ಅವರದ್ದು. 1935ರ ಜೂನ್ 4ರಂದು ಕಾರ್ಕಳದ ಮುದ್ರಾಡಿಯಲ್ಲಿ ಜನಿಸಿದ ಅಂಬಾತನಯ ಮುದ್ರಾಡಿ ಅವರ ಮೂಲ ಹೆಸರು ಕೇಶವ ಶೆಟ್ಟಿಗಾರ್. ಎಂಟನೆಯ ತರಗತಿಯವರೆಗೆ ಶಾಲಾ ವಿದ್ಯಾಭ್ಯಾಸ ಪಡೆದಿದ್ದ ಅವರು ಸ್ವಂತ ಆಸಕ್ತಿಯಿಂದ ಅಧ್ಯಯನ ಮಾಡಿ ಬೆಳೆದವರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಅವರು ಇತ್ತೀಚೆಗೆ ಉಡುಪಿಯಲ್ಲಿ ಜರುಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ‘ಯಕ್ಷಗಾನ ಮತ್ತು ಹರಿಕಥೆ ಒಂದು ತೌಲನಿಕ ಅಧ್ಯಯನ’ ಪುಸ್ತಕವನ್ನು ಪ್ರಕಟಿಸಲಾಗಿತ್ತು. ಸಾಹಿತ್ಯ ಕೃಷಿಗಾಗಿ ಮುದ್ರಾಡಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಪ್ರಾಪ್ತಿಯಾಗಿವೆ. ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ಬಳಗವನ್ನು ಅಗಲಿದ್ದಾರೆ. ಮಂಗಳವಾರ ಸಂಜೆ ಮುದ್ರಾಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ: SK Bhagavan : ಆತ್ಮಕತೆ ಬರೆಯುತ್ತಿದ್ದ ಭಗವಾನ್‌; ಪ್ರಕಟಣೆಗೆ ಮುನ್ನವೇ ಇನ್ನಿಲ್ಲವಾದರು

Exit mobile version