Site icon Vistara News

ಕರಾವಳಿಯಲ್ಲಿನ ಬಿಜೆಪಿ ಭೀಷ್ಮ ಎ.ಜಿ ಕೊಡ್ಗಿ ಇನ್ನಿಲ್ಲ

ಎ.ಜಿ ಕೊಡ್ಗಿ

ಉಡುಪಿ: ಕರಾವಳಿಯಲ್ಲಿನ ಬಿಜೆಪಿಯ ಭೀಷ್ಮ ಎಂದೇ ಹೆಸರಾಗಿದ್ದ ಹಿರಿಯ ಮುಖಂಡ ಎ.ಜಿ ಕೊಡ್ಗಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು, ಇತ್ತೀಚೆಗೆ ಅವರು ಜ್ವರ ಪೀಡಿತರಾಗಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಸುಮಾರು 56 ವರ್ಷಗಳ ಕಾಲ ರಾಜಕೀಯ ಜೀವನದಲ್ಲಿದ್ದ ಅವರು, 1972 ಮತ್ತು 1978ರಲ್ಲಿ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಬೈಂದೂರು ಕ್ಷೇತ್ರದ ಶಾಸಕರಾಗಿದ್ದರು. ನಂತರ 1993ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಇದನ್ನೂ ಓದಿ| ಖ್ಯಾತ ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ

ಪ್ರಗತಿಪರ ಕೃಷಿ, ಸೌರ ವಿದ್ಯುತ್, ಗ್ರಾಮೀಣಾಭಿವೃದ್ಧಿ, ನದಿ ಜೋಡಣೆ ಇವರ ಆಸಕ್ತಿಯ ಕ್ಷೇತ್ರಗಳು. ಬಿಜೆಪಿ ಸರಕಾರದ ಅವಧಿಯಲ್ಲಿ ಮೂರನೇ ಹಣಕಾಸು ಆಯೋಗ ಅಧ್ಯಕ್ಷರಾಗಿದ್ದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಸಹಿತ ಹಲವು ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದರು. ಕರಾವಳಿಯಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯನ್ನು ಛಿದ್ರ ಮಾಡಿ ಬಿಜೆಪಿಗೆ ಬಾಗಿಲು ತೆಗೆದ ಕೀರ್ತಿ ಕೋಡ್ಗಿಯವರಿಗೆ ಸಲ್ಲುತ್ತದೆ. 2013ರಲ್ಲಿ ರಾಜಕೀಯ ನಿವೃತ್ತಿ ಹೊಂದಿ ಸಂಪೂರ್ಣ ಗ್ರಾಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಇದನ್ನೂ ಓದಿ| ಕಿರಣ್ ಮಜುಂದಾರ್ ಶಾ ತಾಯಿ ಯಾಮಿನಿ ಮಜುಂದಾರ್ ನಿಧನ

Exit mobile version