ಉಡುಪಿ: ಮಣಿಪಾಲ ಆಸ್ಪತ್ರೆ (Manipal Hospital) ಬಳಿ ಕಾರಿನ ಎಲ್ಲ ಗ್ಲಾಸ್‌ಗಳನ್ನು ಮುಚ್ಚಿಕೊಂಡು ಮಲಗಿದ್ದ ಚಾಲಕರೊಬ್ಬರು ಉಸಿರು ಗಟ್ಟಿ (Death in Car) ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು (Udupi News) ಮೂಲದ ಆನಂದ (37) ಮೃತಪಟ್ಟವರು.
ಇವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಒಳಗೆ ಮಲಗಿದ್ದರು.
ಕಾರಿನ ಎಲ್ಲ ಗ್ಲಾಸುಗಳನ್ನು ಏರಿಸಿಕೊಂಡು ಬಂದ್ ಮಾಡಿ ಮಲಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಇಂದು ಯಾವುದೇ ಆಸ್ಪತ್ರೆಯಲ್ಲಿ ಒಪಿಡಿ ಇಲ್ಲ; ವೈದ್ಯರ ಮುಷ್ಕರಕ್ಕೆ ರಾಜ್ಯದ ಡಾಕ್ಟರ್‌ಗಳ ಸಾಥ್
ಬೆಂಗಳೂರು: ಕೋಲ್ಕತಾದಲ್ಲಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ವೈದ್ಯರು ನೀಡಿರುವ ದೇಶವ್ಯಾಪಿ ಪ್ರತಿಭಟನೆಗೆ ರಾಜ್ಯದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ ಸೂಚಿಸಿದ್ದಾರೆ. ಇಂದು ಬೆಳಗ್ಗೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಎಲ್ಲ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳು (OPD) ಬಂದ್ ಆಗಿರಲಿವೆ.
ರಾಜಧಾನಿಯ ಫ್ರೀಡಂ ಪಾರ್ಕಿನಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ವೈದ್ಯರ ಪ್ರತಿಭಟನೆ ಆರಂಭವಾಗಲಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ಓಪಿಡಿ ಬಂದ್ ಮಾಡಿ ವೈದ್ಯ ಸಮೂಹ ಪ್ರತಿಭಟನೆಗೆ ಕರೆ ಕೊಟ್ಟಿದೆ. ತುರ್ತು ಸೇವೆ ಹೊರತುಪಡಿಸಿ ಉಳಿದಂತೆ ಓಪಿಡಿ ಬಂದ್ ಇರಲಿದೆ.
ಪ್ರತಿಭಟನೆಗೆ ಸರ್ಕಾರಿ ವೈದ್ಯರು ಕೂಡ ಸಾಥ್ ಕೊಟ್ಟಿದ್ದಾರೆ. ಸರ್ಕಾರಿ ವೈದ್ಯರು ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಫ್ರೀಡಂ ಪಾರ್ಕಿನಲ್ಲಿ ಇಂದು ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿದಂತೆ ಹಲವು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಪ್ರತಿಭಟನೆಗೆ ಸಂಸದ ಹಾಗೂ ಖ್ಯಾತ ವೈದ್ಯ ಸಿಎನ್ ಮಂಜುನಾಥ್ ಜೊತೆ ನೀಡಲಿದ್ದಾರೆ.
ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ
ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ತುರ್ತು ಸೇವೆಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘವು ಆ.17ರಂದು ದೇಶಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಗೆ (Doctors Protest) ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ ವ್ಯಕ್ತಪಡಿಸಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಪತ್ರ ಬರೆದಿದೆ. ವೈದ್ಯಾಧಿಕಾರಿಗಳು ದಿನದ 24/7 ಗಂಟೆ ಬಡ ರೋಗಿಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ ಹಾಗೂ ಕೋವಿಡ್ -19 ನಂತಹ ಸಾಂಕ್ರಾಮಿಕ ರೋಗವು ಇಡೀ ಪ್ರಪಂಚವನ್ನೇ ಬಾಧಿಸಿದ ಸಂದರ್ಭದಲ್ಲಿ ವೈದ್ಯರು ಹಗಲಿರುಳು ಎನ್ನದೇ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಶ್ರಮಿಸಿದ್ದರು.
ಆದರೆ ಆ.9 ರಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಯುವ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಘೋರ ಅಪರಾಧವಾಗಿದ್ದು, ಇದು ಕಾನೂನಿನ ವೈಫಲ್ಯವನ್ನು ಎತ್ತಿ ಹಿಡಿಯುತ್ತದೆ. ಅಲ್ಲದೇ ಈ ಪ್ರಕರಣವು ವೈದ್ಯರ ಮನೋಸ್ಥೈರ್ಯವನ್ನು ಕುಗ್ಗುವಂತೆ ಮಾಡಿದ್ದು, ಇದನ್ನು ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಗಂಭೀರವಾಗಿ ಪರಿಗಣಿಸಿದೆ.
ಇದನ್ನೂ ಓದಿ: Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ