ಉಡುಪಿ: ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಉಡುಪಿಯ (Udupi News) ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಘಟನೆ ನಡೆದಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡವರು.
ಮೋಸಿನಾ ತಂದೆಯ ನಿಧನದ ನಂತರ ಖಿನ್ನತೆಗೊಳಗಾಗಿದ್ದರು. ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು ಮಕ್ಕಳಿದ್ದರು. ತಂದೆಯ ಕೊರಗಿನಲ್ಲೇ ಖಿನ್ನತೆಗೆ ಒಳಗಾದ ಮೋಸಿನಾ ಮನೆ ಬಳಿ ಇದ್ದ ಬಾವಿ ಹಾರಿ ಮೃತಪಟ್ಟಿದ್ದಾರೆ. ಸ್ಥಳೀಯರು ಇದನ್ನೂ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹ ಬಾವಿಯಿಂದ ತೆರವು ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾಪು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?
14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ
ಜಾರ್ಖಂಡ್: ಅತ್ಯಾಚಾರ ಪ್ರಕರಣ ದೇಶದಲ್ಲಿ ಹೆಚ್ಚಾಗುತ್ತಿದೆ. ನಿತ್ಯ ಒಂದಿಲ್ಲೊಂದು ಕಡೆ ಅತ್ಯಾಚಾರ ಪ್ರಕರಣಗಳನ್ನು ನಾವು ಕೇಳಿರುತ್ತೇವೆ. ಕೆಲವೊಂದು ಪ್ರಕರಣಗಳು ಬೆಳಕಿಗೆ ಬರುತ್ತವೆ. ಇನ್ನು ಕೆಲವು ಹಾಗೆಯೇ ಮುಚ್ಚಿ ಹೋಗುತ್ತದೆ. ಅದರಲ್ಲೂ ಅಪರಿಚಿತರಿಂದ ಹುಡುಗಿಯರು ಅತ್ಯಾಚಾರಕ್ಕೆ (Rape Case ) ಒಳಗಾಗುವುದಕ್ಕಿಂತ ಹೆಚ್ಚು ತಮ್ಮವರಿಂದಲೇ ಅತ್ಯಾಚಾರಕ್ಕೆ ಬಲಿಯಾಗುತ್ತಿದ್ದಾರೆ. ಅಂತಹದೊಂದು ಘಟನೆ ಇದೀಗ ಜಾರ್ಖಂಡ್‌ನಲ್ಲಿ ನಡೆದಿದೆ.
14 ವರ್ಷದ ಬಾಲಕಿಯನ್ನು ಆಕೆಯ ಅಪ್ರಾಪ್ತ ಗೆಳೆಯ ಮತ್ತು ಆತನ ಆರು ಮಂದಿ ಗೆಳೆಯರು ಸೇರಿ 2 ದಿನಗಳ ಕಾಲ ಅತ್ಯಾಚಾರ ಎಸಗಿ, ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿದ ಘಟನೆ ಜಾರ್ಖಂಡ್‌ನ ಧನ್ಬಾದ್ ಜಿಲ್ಲಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹಾಗೂ ಆರೋಪಿ ಗೆಳೆಯ ಇಬ್ಬರೂ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಭಾನುವಾರ ಸಂಜೆ ಅವಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಅಲ್ಲಿ ಆತ ಮತ್ತು ಆತನ ಸ್ನೇಹಿತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಕೋಣೆಯಲ್ಲಿ ಕೂಡಿಹಾಕಿದ್ದಾರೆ. ಮರುದಿನ ಸಂಜೆ ಆತನ ಗೆಳೆಯನ ಐದು ಮಂದಿ ಸ್ನೇಹಿತರು ಬಂದು ಮತ್ತೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಈ ಲೈಂಗಿಕ ದೌರ್ಜನ್ಯದ ಕೃತ್ಯವನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.
ಬಾಲಕಿ ಸಹಾಯಕ್ಕಾಗಿ ಕಿರುಚಿದಾಗ ಆಕೆಯ ಕೂಗಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಧನ್ಸಾರ್ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ಏಳು ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದು, ಮಾತ್ರವಲ್ಲ ಅವರಲ್ಲಿ ಒಬ್ಬ ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ. ಅಪರಾಧ ಸ್ಥಳದಲ್ಲಿದ್ದ ಆ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಆರೋಪಿಯ ಮನೆ ಮೇಲೆ ದಾಳಿ ಮಾಡಿದಾಗ ಅಲ್ಲಿ ಯಾರೂ ಇರಲಿಲ್ಲ. ಹಾಗೇ ಸಂತ್ರಸ್ತೆಯ ಕುಟುಂಬದವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಧನ್ಸಾರ್ ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮತ್ತು ಮಕ್ಕಳ ಕಲ್ಯಾಣ ಸಮಿತಿಯ ನಿರ್ದೇಶನದ ಮೇರೆಗೆ ಆಶ್ರಯ ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ