Site icon Vistara News

Udupi News: ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಹೆಮ್ಮೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Minister Lakshmi Hebbalkar watched the fruit and flower display at the 75th Republic Day program held in Udupi

ಉಡುಪಿ: ರಾಜ್ಯ ಸರ್ಕಾರದ ಯೋಜನೆಗಳು ಎಲ್ಲರಿಗೂ ಅನುಕೂಲವಾಗುವಂತಿರಬೇಕು ಎಂಬ ದೃಷ್ಟಿಯಿಂದ ಐದು ಗ್ಯಾರಂಟಿ ಯೋಜನೆಗಳನ್ನು (Guarantee Schemes) ಜಾತಿ, ಧರ್ಮ, ಲಿಂಗಬೇಧಗಳಿಲ್ಲದೇ ಸರ್ವರಿಗೂ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆ ಮೆರೆಯುತ್ತಿದೆ‌ ಎಂದು (Udupi News) ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಇಲ್ಲಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಯಶಸ್ಸು ಹೆಮ್ಮೆಯ ಸಂಗತಿಯಾಗಿದೆ. ಈ ಐದು ಯೋಜನೆಗಳಿಂದ ಜನರ ಬದುಕು ಸಾಕಷ್ಟು ಬದಲಾಗಿದೆ ಎಂದರು.

ನಾವು ಕಳೆದ ವಿಧಾನಸಭಾ ಚುನಾವಣೆ ವೇಳೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾದ ಪಂಚಗ್ಯಾರಂಟಿಗಳ ಭರವಸೆಯಂತೆ ಈಗಾಗಲೇ ಐದು ಯೋಜನೆಗಳನ್ನು ಕಾರ್ಯರೂಪಕ್ಕೆ ತರುವುದರೊಂದಿಗೆ ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಎಂದು ಹೇಳಿದರು.

ಇದನ್ನೂ ಓದಿ: Sachin Tendulkar: ಸಫಾರಿ ವೇಳೆ ಮೂರನೇ ತಲೆ ಮಾರಿನ ಹುಲಿಯನ್ನು ತೋರಿಸಿದ ಸಚಿನ್​ ತೆಂಡೂಲ್ಕರ್​

ರಾಜ್ಯದಾದ್ಯಂತ ತೀವ್ರ ಮಳೆಯ ಕೊರತೆಯಿಂದಾಗಿ ಬರಗಾಲದ ಛಾಯೆ ಆವರಿಸಿದೆ. ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿದ್ದು, ಈ ಜಿಲ್ಲೆಯ ಮೂರು ತಾಲೂಕುಗಳಲ್ಲೂ ಬರದ ಛಾಯೆ ಆವರಿಸಿದ್ದು, ಜಿಲ್ಲೆಯ ಹೆಬ್ರಿ, ಬ್ರಹ್ಮಾವರ ಹಾಗೂ ಕಾರ್ಕಳ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಈಗಾಗಲೇ ಸೇರಿಸಲಾಗಿದೆ. ಬರ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ದವಾಗಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬರ ಸಮೀಕ್ಷೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 13,937 ಹೆಕ್ಟೇರ್ ನಷ್ಟು ಭತ್ತದ ಬೆಳೆ ಹಾನಿ ಅಂದಾಜಿಸಲಾಗಿದ್ದು, ರೂ.11 ಕೋಟಿ 85 ಲಕ್ಷ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ, ಸರ್ಕಾರದಿಂದ ಮೊದಲನೇ ಕಂತಿನಲ್ಲಿ 19,071 ರೈತರಿಗೆ ರೂ.2 ಕೋಟಿ 64 ಲಕ್ಷ ಪರಿಹಾರವನ್ನು ಪಾವತಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Book On Narendra Modi : ದಿ ಮೇಕರ್‌ ಆಫ್‌ ನ್ಯೂ ಇಂಡಿಯಾ; ಮೋದಿ ಬಗ್ಗೆ ಬ್ರೈಲ್‌ ಲಿಪಿ ಪುಸ್ತಕ ಬಿಡುಗಡೆ

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಯಾಲ್, ಎಡಿಸಿ ಮಮತಾ ದೇವಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version