ಉಡುಪಿ: ಉಡುಪಿಯಲ್ಲಿ (Udupi News) ಮಹಿಳಾ ಕಾನ್ಸ್‌ಟೇಬಲ್ (Lady Constable) ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಬಾಗಲಕೋಟೆ ಮೂಲದ ಜ್ಯೋತಿ ಮೃತ ದುರ್ದೈವಿ.
ಕಾಪು ಪೊಲೀಸ್ ಠಾಣೆಯಲ್ಲಿ (Kapu Police Station) ಜ್ಯೋತಿ ಕರ್ತವ್ಯ ನಿರ್ವಹಿಸುತಿದ್ದರು. ಕೆಲಸ ಮುಗಿಸಿ ಪೊಲೀಸ್ ಕ್ವಾಟ್ರಸ್‌ಗೆ ತೆರಳಿದ ಜ್ಯೋತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Artificial Heart : ಈತನ ಎದೆಯೊಳಗೆ ಹೃದಯವೇ ಇಲ್ಲ; ಎಲೆಕ್ಟ್ರಿಕ್ ಡಬ್ಬದಲ್ಲಿ ಕೇಳುತ್ತೆ ಲಬ್ ಡಬ್ ಸೌಂಡ್!
Self Harming: ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ತಾಯಿ ಆತ್ಮಹತ್ಯೆ
ಮಂಗಳೂರು: ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು ಹೊರವಲಯದ ಅಡ್ಯಾರ್ ಡ್ಯಾಂ ಬಳಿಯ ನೇತ್ರಾವತಿ ನದಿಯಲ್ಲಿ ಘಟನೆ ನಡೆದಿದೆ.
ಅಡ್ಯಾರ್ ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತ ದುರ್ದೈವಿಗಳು. ಇಬ್ಬರ ಮೃತದೇಹಗಳು ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಗುರುವಾರವಷ್ಟೇ ಚೈತ್ರ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದರು. ನಂತರ ನಿನ್ನೆ ಶುಕ್ರವಾರ ಮಧ್ಯಾಹ್ನದ ನಂತರ ತಾಯಿ-ಮಗು ನಾಪತ್ತೆಯಾಗಿದ್ದರು.
ಸಂಬಂಧಿಕರು ಮನೆ ಸುತ್ತಮುತ್ತ ಹುಡಕಾಡಿದ್ದರು. ಕಾಣದಿದ್ದಾಗ ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಮನವಿ ಮಾಡಿದ್ದರು. ಆದರೆ ಇಂದು ಹರೇಕಳ ಸೇತುವೆ ಸಮೀಪ ತಾಯಿ-ಮಗುವಿನ ಮೃತದೇಹ ಪತ್ತೆಯಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ