Site icon Vistara News

Yakshagana Artist: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

yakshagana artist

ಉಡುಪಿ: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ (Yakshagana Artist) ನೇಣಿಗೆ (Self Harming) ಶರಣಾಗಿದ್ದಾರೆ. ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ಆತ್ಮಹತ್ಯೆ ಮಾಡಿಕೊಂಡವರು. ಕಲಾವಿದ ಗುರುಪ್ರಸಾದ್ ಉಡುಪಿಯ ಬ್ರಹ್ಮಾವರ ತಾಲೂಕು ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಬಡಗುತಿಟ್ಟು ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದರು.

ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಹೀಗೆ ಹಲವು ಮೇಳಗಳಲ್ಲಿ ಸೇವೆ ನೀಡಿದ್ದರು. ಬಹುತೇಕ ಸ್ತ್ರೀ ಪಾತ್ರಗಳ ಮೂಲಕವೇ ಗುರುಪ್ರಸಾದ್ ಪ್ರಚಾರದಲ್ಲಿದ್ದರು. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Karnataka Rain : ಗಾಳಿ-ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವು; ಮತ್ತೆ ಮುಳುಗಡೆಯಾದ ತ್ರಿವೇಣಿ ಸಂಗಮ

ಮಂಡ್ಯದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು

ಮಂಡ್ಯದ ಹನಕೆರೆ ಗ್ರಾಮದ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಮೃತಪಟ್ಟಿದ್ದಾರೆ. ಹನಕೆರೆ ಗ್ರಾಮದಿಂದ ಮಂಡ್ಯ ಕಡೆ ತೆರಳುವ ಮಾರ್ಗದಲ್ಲಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಡ್ಯ ರೈಲ್ವೆ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ವಾರಸುದಾರರು ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ. ಮೈಸೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version