Union Budget 2023: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಈ ಬಾರಿ 7561 ಕೋಟಿ ರೂ.! ಇದು ದಾಖಲೆಯ ಅನುದಾನ Vistara News

ಕರ್ನಾಟಕ

Union Budget 2023: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಈ ಬಾರಿ 7561 ಕೋಟಿ ರೂ.! ಇದು ದಾಖಲೆಯ ಅನುದಾನ

ವಿಧಾನಸಭೆ ಚುನಾವಣೆ ಎದುರಿಸಲಿರುವ ಕರ್ನಾಟಕಕ್ಕೆ ರೈಲ್ವೆ ಇಲಾಖೆಯ (Indian Railway) ಭರ್ಜರಿ ಅನುದಾನ ಒದಗಿಸಿದೆ. ಫೆ.1ರಂದು ಮಂಡಿಸಿದ ಬಜೆಟ್‌ನಲ್ಲಿ (Union Budget 2023) ಕರ್ನಾಟಕದ ರೈಲು ಯೋಜನೆಗಳಿಗಾಗಿ ಬರೋಬ್ಬರಿ 7561 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

VISTARANEWS.COM


on

Ashwini Vaishnaw
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಈ ಬಾರಿ ಕರ್ನಾಟಕದ (Karnataka) ರೈಲ್ವೇ ಯೋಜನೆಗಳಿಗಾಗಿ (Indian Railway) ಬಜೆಟ್‌ನಲ್ಲಿ (Union Budget 2023) ಅತ್ಯಧಿಕ ಹಣವನ್ನು ಹಂಚಿಕೆ ಮಾಡಲಾಗಿದೆ. ಒಟ್ಟು 7561 ಕೋಟಿ ರೂ. ಮೀಸಲಿಡಲಾಗಿದೆ. ಇದು ಈ ಹಿಂದೆ ನೀಡುತ್ತಿದ್ದ ಮೊತ್ತಕ್ಕೆ ಹೋಲಿಸಿದರೆ, 9 ಪಟ್ಟು ಹೆಚ್ಚು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ತಿಳಿಸಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ಕರ್ನಾಟಕದ ವಿಧಾನಸಭೆಗೆ ಚುನಾವಣೆ ನಡೆಯಲಿರುವುದರಿಂದ, ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ವಿಶೇಷ ಮುತುವರ್ಜಿ ವಹಿಸಲಾಗಿದೆ. ಅದೇ ರೀತಿ, ರೈಲ್ವೆ ಯೋಜನೆಗಳಿಗೂ ಹೆಚ್ಚಿನ ಹಣವನ್ನು ಎತ್ತಿಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ರೈಲ್ವೆಗೆ ಬಜೆಟ್‌ನಲ್ಲಿ ನೀಡಿದ ಅನುದಾನ ಕುರಿತು ಮಾಹಿತಿ ನೀಡಿದ ಸಚಿವ ಅಶ್ವಿನ್ ವೈಷ್ಣವ್ ಅವರು, ಕರ್ನಾಟಕಕ್ಕೆ ಈ ಬಾರಿ ಸಿಕ್ಕಾಪಟ್ಟೆ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಒಟ್ಟು 7561 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಹಣವನ್ನು ಈ ಹಿಂದೆ ಯಾವತ್ತೂ ನೀಡಿಲ್ಲ. 2009ರಿಂದ 2014ರವರೆಗೆ ಕರ್ನಾಟಕಕ್ಕೆ ಪ್ರತಿ ವರ್ಷ ಹೆಚ್ಚು 850 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗುತ್ತಿತ್ತು. ನಮ್ಮ ಸರ್ಕಾರ ಈ ಬಾರಿ 9 ಪಟ್ಟು ಹೆಚ್ಚಳ ಅನುದಾನ ಒದಗಿಸಿದೆ ಎಂದು ಅವರು ತಿಳಿಸಿದರು.

ಸಾರಿಗೆ ಕ್ಷೇತ್ರದಲ್ಲಿ ಮೋದಿ ಬದಲಾವಣೆ

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳಲ್ಲೂ ಬದಲಾವಣೆ ಬಯಸುತ್ತಿದ್ದಾರೆ. ಸಾರಿಗೆ ಕ್ಷೇತ್ರದಲ್ಲೂ ಬದಲಾವಣೆಯ ಸಾಕಷ್ಟು ನಿರೀಕ್ಷೆಗಳನ್ನು ಅವರು ಹೊಂದಿದ್ದಾರೆ. ರೈಲು ನಿಲ್ದಾಣಗಳ ಅಭಿವೃದ್ಧಿ, ಹೊಸ ರೈಲು ಮಾರ್ಗಗಳನ್ನು ಹಾಕಲಾಗುತ್ತಿದೆ. ಕರ್ನಾಟಕದಲ್ಲಿ 55 ರೈಲು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದರು.

ಸರ್ ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ

ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ಬ್ಲೂಪ್ರಿಂಟ್ ದೇಶಕ್ಕೆ ಮಾದರಿಯಾಗಿದೆ. ಇದೇ ಮಾದರಿಯನ್ನು ದೇಶದ ಇತರ ಕಡೆಗೂ ಬಳಸಿಕೊಳ್ಳಲಾಗುವುದು. ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಸೇರಿ ಎಲ್ಲ ಹಂತಗಳಲ್ಲಿ ರಾಜ್ಯ ಸರ್ಕಾರ ನೆರವು ನೀಡುತ್ತಿದೆ ಎಂದು ಕರ್ನಾಟಕ ಸರ್ಕಾರದ ಕ್ರಮವನ್ನು ಶ್ಲಾಘಿಸಿದರು.

ಇದನ್ನೂ ಓದಿ: Union Budget 2023: ನಮ್ಮ ಬಜೆಟ್‌ ಅನ್ನು ಜಗತ್ತು ಸ್ವೀಕರಿಸಲು 10 ಕಾರಣ ನೀಡಿದ ವಿದೇಶಾಂಗ ಸಚಿವ ಜೈಶಂಕರ್

ಸ್ಥಳೀಯ ಆಹಾರಕ್ಕೆ ಆದ್ಯತೆ

ರೈಲುಗಳಲ್ಲಿ ಸ್ಥಳೀಯ ಆಹಾರವನ್ನು ನೀಡಲು ನಿರ್ಧಾರ ಮಾಡಲಾಗಿದ್ದು, ಮುಂದಿನ ಒಂದೂವರೆ ವರ್ಷದಲ್ಲಿ ಸ್ಥಳೀಯ ಆಹಾರಕ್ಕೆ ಆದ್ಯತೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು. ರೈಲುಗಳ ಹಳೆ‌ ಕೋಚ್‌‌ಗಳನ್ನು ಬದಲಾಯಿಸಲಾಗುತ್ತಿದೆ. ಜತೆಗೆ, ಮುಂದಿನ ದಿನಗಳಲ್ಲಿ ಒಂದೇ ಮೆಟ್ರೋ ಯೋಜನೆಗೆ ನಿರ್ಧರಿಸಲಾಗಿದೆ. ರೈಲು ಮಾರ್ಗಗಳ ಮೂಲಕ ನೂರು ಕಿಲೋಮೀಟರ್ ಅಂತರದಲ್ಲಿರುವ ಎರಡು ದೊಡ್ಡ ನಗರಗಳಿಗೆ ಸಂಪರ್ಕ ಕಲ್ಪಿಸುವ ಚಿಂತನೆ ಇದೆ. ಹೈಡ್ರೋಜನ್ ರೈಲು ಈ ಡಿಸೆಂಬರ್ ನಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Self Harming : ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

Self Harming : ಮಾನಸಿಕ ಖಿನ್ನತೆಯಿಂದಾಗಿ ನೊಂದ ವಿದ್ಯಾರ್ಥಿಯೊಬ್ಬ ಮುಖಕ್ಕೆ ಪ್ಲಾಸ್ಟಿಕ್‌ ಕವರ್‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಂದು ಕಡೆ ಎಸಿಸಿ ಸಿಮೆಂಟ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್‌ ನೇಣು ಬಿಗಿದುಕೊಂಡಿದ್ದಾಳೆ.

VISTARANEWS.COM


on

By

self harming by wadi Acc cement Depute Director
Koo

ಕಲಬುರಗಿ/ಮೈಸೂರು: ವಾಡಿ ಎಸಿಸಿ ಸಿಮೆಂಟ್ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದಲ್ಲಿರುವ ಅದಾನಿ ಗ್ರೂಪ್ ಮಾಲೀಕತ್ವದ ಎಸಿಸಿ ಕಾರ್ಖಾನೆಯ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

ರಮೇಶ ಪವಾರ (47) ಆತ್ಮಹತ್ಯೆ ಮಾಡಿಕೊಂಡ ಎಸಿಸಿ ಕಾರ್ಖಾನೆ ಡೆಪ್ಯೂಟಿ ಮ್ಯಾನೇಜರ್ ಆಗಿದ್ದಾರೆ. ಎಸಿಸಿ ಕಾಲೋನಿಯ ಮನೆಯ ಬಾಲ್ಕನಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕಾರ್ಖಾನೆ ಹಿರಿಯ ಅಧಿಕಾರಿಗಳ ಮೇಲೆ ಆರೋಪ ಮಾಡಿರುವ ವಿಡಿಯೊ ಮಾಡಿ ಹರಿಬಿಟ್ಟಿದ್ದಾರೆ. ಈ ರಮೇಶ ಪವಾರ್ ಚಿತ್ತಾಪೂರದ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅವರ ಅಳಿಯರಾಗಿದ್ದಾರೆ.

ವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

ಮುಖಕ್ಕೆ ಪ್ಲಾಸ್ಟಿಕ್‌ ಕವರ್‌ ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು: ಮೈಸೂರಿನ ರೀಜನಲ್ ಇನ್‌ಸ್ಟಿಟ್ಯೂಟ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮುಖಕ್ಕೆ ಪ್ಲಾಸ್ಟಿಕ್ ಕವರ್ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಕ್ಷಜ್ (18) ಮೃತ ದುರ್ದೈವಿ.

ಹೈದರಾಬಾದ್ ಮೂಲದ ಅಕ್ಷಜ್‌ ರೀಜನಲ್ ಇನ್‌ಸ್ಟಿಟ್ಯೂಟ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ. ಇತ್ತೀಚೆಗೆ ಮಾನಸಿಕ ಖಿನ್ನೆತೆಗೆ ಒಳಗಾಗಿದ್ದ ಎನ್ನಲಾಗಿದೆ. ಹಾಸ್ಟೆಲ್‌ನಲ್ಲಿ ಯಾರು ಇಲ್ಲದ ವೇಳೆ ಪ್ಲಾಸ್ಟಿಕ್‌ ಕವರ್‌ನಿಂದ ಮುಖವನ್ನು ಪೂರ್ತಿ ಮುಚ್ಚಿಕೊಂಡು ಉಸಿರುಗಟ್ಟಿಸಿಕೊಂಡು ಮೃತಪಟ್ಟಿದ್ದಾನೆ.

ಸಹಪಾಠಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: lawyer Murder: ಕಲಬುರಗಿಯಲ್ಲಿ ವಕೀಲನನ್ನು ಅಟ್ಟಾಡಿಸಿ ಕೊಂದರು! ಹತ್ಯೆಗೆ ಇದುವೇ ಕಾರಣ!

ಪ್ರೀತಿಸಿ ಕೈಬಿಟ್ಟಳು; ನೊಂದು ಬೆಂಕಿ ಹಚ್ಚಿಕೊಂಡ ಪ್ರೇಮಿ!

ಬೆಂಗಳೂರು: ಪ್ರೀತಿಸಿದ ಹುಡುಗಿ ಏಕಾಏಕಿ ಪ್ರೀತಿಯನ್ನು ನಿರಾಕರಿಸಿ (Love failure) ಬಿಟ್ಟು ಹೋಗಿದ್ದಕ್ಕೆ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ರಾಕೇಶ್ ಮೃತ ದುರ್ದೈವಿ. ರಾಕೇಶ್‌ ಐದಾರು ವರ್ಷದಿಂದ‌ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇಬ್ಬರು ಪಾರ್ಕ್‌, ಸಿನಿಮಾ ಎಂದು ಊರು ಊರು ತಿರುಗಿದ್ದರು. ಆದರೆ ಇತ್ತೀಚೆಗೆ ರಾಕೇಶ್‌ನನ್ನು ಯುವತಿ ಅವಾಯ್ಡ್‌ ಮಾಡಲು ಶುರು ಮಾಡಿದ್ದಳು.

ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದವಳು ಏಕಾಏಕಿ ದೂರಾಗಿದ್ದಳು. ಮಸೇಜ್‌, ಫೋನ್‌ ಕಾಲ್‌ಗೂ ರೆಸ್ಪಾನ್ಸ್‌ ಮಾಡುತ್ತಿರಲಿಲ್ಲ. ಈ ನಡುವೆ ಬೇರೆ ಯುವಕನ ಜತೆ ಮದುವೆಗೆ ಸಿದ್ಧತೆಯನ್ನು ನಡೆಸಿದ್ದಳು. ಈ ವಿಷಯ ತಿಳಿದು ನಿನ್ನೆ ಬುಧವಾರ ರಾಕೇಶ್ ನೇರ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ವೇಳೆ ರಾಕೇಶ್ ಹಾಗೂ ಯುವತಿ ನಡುವೆ ಗಲಾಟೆ ಆಗಿತ್ತು.

ಪ್ರೀತಿಸಿದವಳು ಮೋಸ ಮಾಡಿಬಿಟ್ಟಳೆಂದು ಮನನೊಂದಿದ್ದ ರಾಕೇಶ್‌, ಮನೆಗೆ ಬಂದವನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಗಾಯಾಳು ರಾಕೇಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಬೆಂಕಿ ತೀವ್ರತೆಗೆ ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ಬುಧವಾರ ರಾತ್ರಿಯೇ ಮೃತಪಟ್ಟಿದ್ದಾನೆ. ರಾಕೇಶ್ ಕುಟುಂಬಸ್ಥರು ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

Veer Savarkar : ಸಾವರ್ಕರ್ ಫೋಟೊ ತೆಗೆದರೆ ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನನಗೆ ಬಿಟ್ಟರೆ ಇಂದೇ ಅವರ ಫೋಟೊವನ್ನು ತೆಗೆದು ಹಾಕುತ್ತೇನೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಕೆಂಡವಾಗಿದ್ದು, ಪ್ರಿಯಾಂಕ್‌ ಖರ್ಗೆ ಅವರು ಸಂಪೂರ್ಣ ಭಾರತೀಯರಿಗೆ, ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶವನ್ನು ಹೊರಹಾಕಿದೆ.

VISTARANEWS.COM


on

Veer Savarkar and Priyank Kharge
Koo

ಬೆಳಗಾವಿ: ಬೆಳಗಾವಿ ವಿಧಾನಸೌಧದಲ್ಲಿ ಕಳೆದ ಬಿಜೆಪಿ ಸರ್ಕಾರ ಇದ್ದಾಗ ಹಾಕಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್‌ (Veer Savarkar) ಅವರ ಫೋಟೊ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ (Minister Priyank Kharge) ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಸಾವರ್ಕರ್ ಫೋಟೊ ತೆಗೆದರೆ ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನನಗೆ ಬಿಟ್ಟರೆ ಇಂದೇ ಅವರ ಫೋಟೊವನ್ನು ತೆಗೆದು ಹಾಕುತ್ತೇನೆ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಕೆಂಡವಾಗಿದ್ದು, ಪ್ರಿಯಾಂಕ್‌ ಖರ್ಗೆ ಅವರು ಸಂಪೂರ್ಣ ಭಾರತೀಯರಿಗೆ, ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶವನ್ನು ಹೊರಹಾಕಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ, ವೀರ ಸಾವರ್ಕರ್‌ ಅವರ ಯಾವ ತತ್ವ ಸಿದ್ಧಾಂತದಲ್ಲಿಯೂ ಸಮಾನತೆ ಕಾಣಲ್ಲ. ಅದನ್ನು ನಾನು ಒಪ್ಪಲ್ಲ. ಯಾವ ತತ್ವ ಸಿದ್ಧಾಂತದ ಪ್ರೇರಿತವಾಗಿ ಗಾಂಧೀಜಿ ಹತ್ಯೆಯಾಗಿದೆ? ನನ್ನನ್ನು ಬಿಟ್ಟರೆ ಬೆಳಗಾವಿ ವಿಧಾನಸೌಧದೊಳಗೆ ಇರುವ ವೀರ ಸಾವರ್ಕರ್‌ ಅವರ ಫೋಟೊವನ್ನು ಇವತ್ತೇ ತೆಗೆದುಹಾಕುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; ಉ.ಕ ಜಿಲ್ಲಾ ಶಾಸಕರಲ್ಲೇ ಒಡಕು! ತಮ್ಮ ತಾಲೂಕಿಗೇ ಬೇಕೆಂದು ಸದನದಲ್ಲಿ ಕಿತ್ತಾಟ

ಹೀಗೆ ವಿಧಾನಸೌಧದೊಳಗೆ ಇರುವ ಫೊಟೊವನ್ನು ತೆಗೆಯುವ ಕೆಲಸ ನಿಯಮಾನುಸಾರವಾಗಿ ಆಗಬೇಕು. ಈ ವಿಷಯದಲ್ಲಿ ಸ್ಪೀಕರ್ ಯು.ಟಿ. ಖಾದರ್‌ ಅವರ ನಿರ್ಧಾರವನ್ನು ನೋಡೋಣ. ನಾನು ಸಂವಿಧಾನವನ್ನು ನಂಬಿರುವ ವ್ಯಕ್ತಿ. ಕಳೆದ ಬಾರಿ ಸಾವರ್ಕರ್ ಫೋಟೊ ಹಾಕಿದಾಗ ಬಿಜೆಪಿಯವರಿಗೆ ಪ್ರಶ್ನೆ ಕೇಳಿದ್ದೆ. ಅವರು ಇದುವರೆಗೂ ಉತ್ತರ ಕೊಟ್ಟಿಲ್ಲ. ಸಾವರ್ಕರ್ ಹೆಸರಿಗೆ ವೀರ್ ಹೇಗೆ ಬಂತು? ಬ್ರಿಟಿಷರ ಬಳಿ ಸಾವರ್ಕರ್ ಪಿಂಚಣಿ ಪಡೆಯುತ್ತಿರಲಿಲ್ಲವೇ? ಅವರ ಮನೆಯವರು ಕ್ಷಮಾಪಣೆ ಅರ್ಜಿ ಹಾಕಿದ್ದರಾ, ಇಲ್ಲವಾ? ಸುಭಾಷ್ ಚಂದ್ರ ಬೋಸ್ ಇಂಡಿಯನ್ ನ್ಯಾಷನಲ್ ಆರ್ಮಿ ಮಾಡಿದ್ದರು. ಅದಕ್ಕೆ ನೋಂದಣಿ ಮಾಡಿಕೊಳ್ಳಲು ಸೇರಿದ್ದರಾ ಇಲ್ಲವಾ? ಸಾವರ್ಕರ್ ಅವರಿಗೆ ಗೋ ಮಾತೆ ಬಗ್ಗೆ ಅಭಿಪ್ರಾಯ ಏನಿತ್ತು? ನಾನು ಅವರ ಐಡಿಯಾಲಜಿ ವಿರುದ್ಧ ಇದ್ದೇನೆ‌. ಅವರ ತತ್ವದ ಮೇಲೆ ನನಗೆ ನಂಬಿಕೆ ಇಲ್ಲ. ವೀರ ಸಾವರ್ಕರ್‌ ಫೋಟೊ ತೆಗೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೂ ಮನವಿ ಮಾಡಿದ್ದೇನೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಸಾವರ್ಕರ್ ಫೋಟೊ ತೆಗೆದು, ಜವಾಹರ್‌ಲಾಲ್‌ ನೆಹರು ಫೋಟೊ ಹಾಕುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್‌ ಖರ್ಗೆ, ನೆಹರೂ ಅವರ ಫೋಟೊವನ್ನು ಹಾಕಲೇಬೇಕು‌. ಅವರು 3259 ದಿನ ಜೈಲಲ್ಲಿ ಇದ್ದವರು. ದೇಶದ ಮೊದಲ ಪ್ರಧಾನಿ. 16 ವರ್ಷ ದೇಶವನ್ನು ಆಳಿದ್ದಾರೆ. ಆರ್ಥಿಕವಾಗಿ ಸದೃಢವಾಗಿದ್ದೇವೆ ಅಂತ ಹೇಳುತ್ತಿದ್ದಾರಲ್ಲ? ಪ್ರಧಾನಿ ನರೇಂದ್ರ ಮೋದಿ ವಿಶ್ವಗುರು ಅಂತ ಹೇಳ್ತಿದ್ದಾರಲ್ಲವೇ? ಅದಕ್ಕೆ ಅಡಿಪಾಯ ಹಾಕಿದ್ದೇ ನೆಹರು. ಐಐಟಿ, ಐಐಎಂ, ಇಸ್ರೋ ಎಲ್ಲವನ್ನೂ ಸ್ಥಾಪಿಸಿದ್ದೇ ನೆಹರು. ಚಂದ್ರಯಾನ, ಸೂರ್ಯಯಾನ ಅಂತ ಬೆನ್ನು ತಟ್ಟಿಕೊಂಡು ಓಡಾಡುತ್ತಿದ್ದಾರಲ್ಲವೇ? ಇಸ್ರೋ ಸ್ಥಾಪಿಸಿದ್ದು ಯಾರು? ನೆಹರು ಅವರ ಫೋಟೊ ಹಾಕಲೇಬೇಕು ಎಂದು ಪ್ರತಿಪಾದಿಸಿದರು.

ಸಂಪೂರ್ಣ ಭಾರತೀಯರಿಗೆ, ಕನ್ನಡಿಗರಿಗೆ ಮಾಡಿದ ಅಪಮಾನ: ಅಶ್ವತ್ಥನಾರಾಯಣ್

ಪ್ರಿಯಾಂಕ್ ಖರ್ಗೆ ಅವರು ವೀರ ಸಾವರ್ಕರ್‌ ಅವರ ಬಗ್ಗೆ ಗೊಂದಲದ ಹೇಳಿಕೆ ನೀಡಿದ್ದಾರೆ. ಅವರಿಗೆ ಅಪಮಾನವಾಗಿ ಮಾತನಾಡಿದ್ದಾರೆ. ನಾನು ಫೋಟೊ ತೆಗೆದು ಹಾಕುತ್ತೇನೆ ಎಂದು ಹೇಳಿದ್ದಾರೆ. ಸಂಪೂರ್ಣ ಭಾರತೀಯರಿಗೆ, ಕನ್ನಡಿಗರಿಗೆ ಮಾಡಿದ ಅಪಮಾನ ಇದಾಗಿದೆ. ವೀರ ಸಾವರ್ಕರ್ ಅವರಿಗೆ ಅಗೌರವ ತೋರಿಸಿದ್ದನ್ನು ನಾವು ಖಂಡಿಸುತ್ತೇವೆ ಎಂದು ಶಾಸಕ ಅಶ್ವತ್ಥನಾರಾಯಣ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ್, ಈ ರೀತಿ ಹೇಳಿಕೆಯನ್ನು ಕೊಡುವುದು ಬಿಟ್ಟು, ಕಲಬುರಗಿಗೆ ಹೋಗಿ ಅಭಿವೃದ್ಧಿ ಮಾಡಿ. ಭಾವನೆಗೆ ಧಕ್ಕೆ ತರುವ ಹೇಳಿಕೆಗಳನ್ನು ನಿಲ್ಲಿಸಿ. ಕೀಳು ಮಟ್ಟದ ಯೋಚನೆಯನ್ನು ನಿಲ್ಲಿಸಿ. ನೀವು ಈಗ ವ್ಯಕ್ತಿ ಮಾತ್ರ ಅಲ್ಲ, ಒಂದು ಘನತೆವೆತ್ತ ಸ್ಥಾನದಲ್ಲಿದ್ದೀರಿ. ಮಂತ್ರಿಯಾಗಿ ಅವಮಾನ ಆಗುವ ಕೆಲಸ ಮಾಡಬೇಡಿ ಎಂದು ಹೇಳಿದರು.

ಇದನ್ನೂ ಓದಿ: Belagavi Winter Session: ರೈತರ ಸಾಲ ಮನ್ನಾಕ್ಕೆ ಬಿಜೆಪಿ ಆಗ್ರಹ; ಇದು ದಿವಾಳಿ ಸರ್ಕಾರ ಎಂದ ಅಶೋಕ್‌

ಪ್ರಸ್ತಾವನೆ ಬಂದಿಲ್ಲ; ಬಂದ ಮೇಲೆ ನೋಡೋಣ

ಈ ಬಗ್ಗೆ ಸ್ಪೀಕರ್‌ ಯು.ಟಿ. ಖಾದರ್‌ ಅವರಿಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ ಪ್ರತಿಕ್ರಿಯೆ ನೀಡಿದ ಅವರು, ಸಂವಿಧಾನಬದ್ಧವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇನೆ. ನನ್ನ ಕರ್ತವ್ಯವನ್ನು ನಿಭಾಯಿಸುತ್ತೇನೆ. ಸಾವರ್ಕರ್‌ ಫೋಟೊ ಬದಲಾವಣೆ ಮಾಡುವ ಬಗ್ಗೆ ಈವರೆಗೆ ನನಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ. ಬಂದ ಮೇಲೆ ಈ ಬಗ್ಗೆ ನೋಡೋಣ. ಈಗಲೇ ಅದರ ಬಗ್ಗೆ ಬ್ಯಾಟ್‌ ಬೀಸಿದರೆ ಆಗುತ್ತದೆಯೇ? ಪ್ರಜಾಪ್ರಭುತ್ವದಲ್ಲಿ ಅವರವರ ಹೇಳಿಕೆ ನೀಡಲು ಅವಕಾಶವಿದೆ. ನನಗೆ ಮಂತ್ರಿಗಳೂ ಒಂದೇ, ಪ್ರತಿಪಕ್ಷದವರೂ ಒಂದೇ ಎಂದು ಹೇಳಿದರು.

Continue Reading

ಕರ್ನಾಟಕ

BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

BMTC Accident : ಕೆಲವೊಮ್ಮೆ ಚಾಲಕರ ನಿರ್ಲಕ್ಷ್ಯದಿಂದಲೋ ಸವಾರರ ಅಜಾಗರೂಕತೆಯಿಂದಲೂ ಬಿಎಂಟಿಸಿ ಬಸ್‌ಗೆ ಜನರು ಬಲಿಯಾಗುತ್ತಿದ್ದಾರೆ. ಸದ್ಯ ವರ್ಷಕ್ಕೆ ಹತ್ತಾರು ಮಂದಿ ಬಸ್ಸಿಗೆ ಸಿಲುಕಿ ಮೃತಪಡುತ್ತಿದ್ದಾರೆ. ಹೀಗಾಗಿ ಬಿಎಂಟಿಸಿ ಡ್ರೈವರ್‌ಗಳಿಗೆ ಟ್ರಾಫಿಕ್ ಪೊಲೀಸ್‌ರಿಂದ ಟ್ರೈನಿಂಗ್ ನೀಡಲಾಗುತ್ತಿದೆ.

VISTARANEWS.COM


on

By

BMTC Bus hits bike
ಉತ್ತರಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದ ಬಿಎಂಟಿಸಿ
Koo

ಬೆಂಗಳೂರು: ಬಿಎಂಟಿಸಿ ಬೆಂಗಳೂರಿಗರ ಪ್ರಮುಖ ಸಾರ್ವಜನಿಕ ಸಾರಿಗೆ. ಬಿಎಂಟಿಸಿಗೆ ಎಷ್ಟು ಖ್ಯಾತಿ ಇದ್ದಯೋ ಅಷ್ಟೇ ಅಪಖ್ಯಾತಿಯು ಸೇರಿಕೊಂಡಿದೆ. ಚಾಲಕರ ಅತಿವೇಗ ಚಾಲನೆ, ನಿರ್ಲಕ್ಷ್ಯದಿಂದ ಅದೆಷ್ಟೋ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಕಿಲ್ಲರ್‌ ಎಂದೇ ಹೆಸರು ಪಡೆದಿರುವ ಬಿಎಂಟಿಸಿಗೆ ಕಳೆದ ನಾಲ್ಕು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಪ್ರಾಣ (BMTC Accident) ಕಳೆದುಕೊಂಡಿದ್ದಾರೆ.

ತಿಂಗಳಿಗೆ ಒಬ್ಬರಾದರೂ ಬಿಎಂಟಿಸಿಗೆ ಬಲಿಯಾದರು ಎಂಬ ಸುದ್ದಿ ಕೇಳುತ್ತಲೇ ಇರುತ್ತವೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಿಂದ ಅಪಘಾತಗಳು ಹೆಚ್ಚಾಗುತ್ತಲೆ ಇವೆ. ಕಳೆದ ನಾಲ್ಕು ವರ್ಷಕ್ಕೆ ಹೋಲಿಸಿದರೆ, ಸಾವಿನ‌ ಸಂಖ್ಯೆಗಿಂತ ಗಾಯಾಳುಗಳ ಸಂಖ್ಯೆಯೇ ಹೆಚ್ಚಿದೆ. ಈ ವರ್ಷದಲ್ಲಿ ಬಿಎಂಟಿಸಿಯಿಂದ ಸತ್ತವರ ಸಂಖ್ಯೆ 34 ಇದ್ದರೆ, 97 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಿಎಂಟಿಸಿ ಮಾತ್ರವಲ್ಲ ಕೆಎಸ್‌ಆರ್‌ಟಿಸಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಇದರಿಂದಾಗಿ ಈ ವರ್ಷ ಹತ್ತು ಮಂದಿ ಮೃತಪಟ್ಟಿದ್ದರೆ, 28 ಅಪಘಾತಗಳಾಗಿರುವ ವರದಿಯಾಗಿದೆ. ಈ ಮಧ್ಯೆ ಸಂಚಾರಿ ನಿಯಮಗಳನ್ನು ಉಲಂಘಿಸುತ್ತಿರುವ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಚಾಲಕರಿಗೆ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಸಂಚಾರಿ ಪೊಲೀಸರ ತನಿಖೆಯಲ್ಲಿ ಕೆಲ ಚಾಲಕರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: lawyer Murder: ಕಲಬುರಗಿಯಲ್ಲಿ ವಕೀಲನನ್ನು ಅಟ್ಟಾಡಿಸಿ ಕೊಂದರು! ಹತ್ಯೆಗೆ ಇದುವೇ ಕಾರಣ!

bmtc accident case

ನಿಯಮ ಉಲ್ಲಂಘಿಸಿ 1 ಕೋಟಿ ದಂಡ ಕಟ್ಟಿದ ಬಿಎಂಟಿಸಿ

ಬಿಎಂಟಿಸಿಯಲ್ಲಿ ಬರೋಬ್ಬರಿ 13, 917 ಸಂಚಾರಿ ನಿಯಮ ಉಲ್ಲಂಘಿಸಿದರೆ, ಕೆಎಸ್‌ಆರ್‌ಟಿಸಿ ಚಾಲಕರು ಮೂರು ಸಾವಿರಕ್ಕೂ ಹೆಚ್ಚು ರೂಲ್ಸ್ ಬ್ರೇಕ್ ಮಾಡಿದ್ದಾರೆ. ಬಿಎಂಟಿಸಿ ಬಸ್‌ ಚಾಲಕರಿಂದಲೇ ಹೆಚ್ಚು ಸಂಚಾರ ನಿಯಮ ಉಲ್ಲಂಘನೆ ಆಗಿದೆ. ಹೀಗಾಗಿ 1,04,10,000 ರೂ. ದಂಡವನ್ನು ಬಿಎಂಟಿಸಿ ಇಲಾಖೆ ಕಟ್ಟಿದೆ. 14 ಲಕ್ಷ ರೂ. ದಂಡವನ್ನು ಕೆಎಸ್‌ಆರ್‌ಟಿಸಿ ಸಂಸ್ಥೆ ಕಟ್ಟಿದೆ. ಕಳೆದ ನಾಲ್ಕು ವರ್ಷಗಳಲ್ಲಿ‌ ನಡೆದಿರುವ ಅಪಘಾತಗಳ‌ ಅಂಕಿ‌ ಅಂಶ ನೋಡುವುದಾದರೆ,..

ಬಿಎಂಟಿಸಿಗೆ ಬಲಿಯಾದವರು- ಗಂಭೀರ ಗಾಯಗೊಂಡವರು

2020ರಲ್ಲಿ 22 ಮಂದಿ ಸಾವು- 49 ಮಂದಿ ಗಾಯಾಳುಗಳು
2021ರಲ್ಲಿ 27 ಮಂದಿ ಸಾವು- 58 ಮಂದಿ ಗಾಯಾಳುಗಳು
2022ರಲ್ಲಿ 37 ಮಂದಿ ಸಾವು- 85 ಮಂದಿ ಗಾಯಾಳುಗಳು
2023ರಲ್ಲಿ 34 ಮಂದಿ ಸಾವು -97 ಮಂದಿ ಗಾಯಾಳುಗಳು

ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಪಘಾತಗಳನ್ನು ಹೆಚ್ಚು ಮಾಡುವರ ವಿರುದ್ಧ ಕ್ರಮಕ್ಕೆ ಇಲಾಖೆ ಸೂಚನೆ ನೀಡಿದೆ. ಮುಂದಿನ ದಿನದಲ್ಲಿ ಚಾಲಕರಿಗೆ ತರಬೇತಿ ಕೊಡಲು ಪೊಲೀಸರು ಮುಂದಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Karnataka Weather : ಮುಕ್ಕಾಲು ಕರ್ನಾಟಕದಲ್ಲಿ ಶುಷ್ಕ ವಾತಾವರಣ! ಇಲ್ಲೆಲ್ಲ ಸಣ್ಣ ಮಳೆ!

Karnataka Weather Forecast : ಡಿ.8ರಂದು ಕರ್ನಾಟಕದ ಮುಕ್ಕಾಲು ಭಾಗದಲ್ಲಿ ಶುಷ್ಕ ವಾತಾವರಣವೇ ಇರಲಿದ್ದು, ದಕ್ಷಿಣ ಒಳನಾಡಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ (rain News) ಇದೆ.

VISTARANEWS.COM


on

By

No rain alert dry weather in karnataka
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದ್ದರೆ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಹಾಗೇ ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸೂಚನೆ ಇದೆ.

ಡಿ.8ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು ಹಾಗೂ ಕೋಲಾರ, ರಾಮನಗರದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ ಹಾಗೂ ಬಳ್ಳಾರಿಯಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ: Wedding Fashion: ವೆಡ್ಡಿಂಗ್‌ ಸೀಸನ್‌ನಲ್ಲಿ ಟ್ರೆಂಡಿಯಾದ 3 ಶೈಲಿಯ ವೆಡ್ಡಿಂಗ್‌ ಪರ್ಸ್

ಇಲ್ಲೆಲ್ಲ ಶುಷ್ಕ ವಾತಾವರಣ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸೂಚನೆ ಇಲ್ಲ, ಬದಲಿಗೆ ಒಣಹವೆ ಇರಲಿದೆ. ಜತೆಗೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಶುಷ್ಕ ವಾತಾವರಣವೇ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣ ಇರಲಿದೆ.

ಬೆಂಗಳೂರಲ್ಲಿ ಹಗುರ ಮಳೆ ಸಾಧ್ಯತೆ

ಬೆಂಗಳೂರಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇದ್ದರೆ, ಮಧ್ಯಾಹ್ನದ ನಂತರ ಬಿಸಿಲು ಆವರಿಸಲಿದೆ. ಯಲಹಂಕ, ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಪ್ರತ್ಯೇಕ ಕಡೆಗಳಲ್ಲಿ ಹಗುರಿದಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇನ್ನು ಬುಧವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶ 16.1 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
self harming by wadi Acc cement Depute Director
ಕರ್ನಾಟಕ3 mins ago

Self Harming : ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

A girl shoots her classmate and herself with shotgun
ವಿದೇಶ4 mins ago

ಸಹಪಾಠಿಗೆ ಗುಂಡು ಹೊಡೆದು ತಾನೂ ಸತ್ತ 14 ವರ್ಷದ ವಿದ್ಯಾರ್ಥಿನಿ!

Flax Seeds Benefits For Hair
ಆರೋಗ್ಯ13 mins ago

Flax Seeds Benefits For Hair: ಚಳಿಗಾಲದಲ್ಲಿ ಕೂದಲ ಆರೋಗ್ಯಕ್ಕೆ ಅಗಸೆಬೀಜ ಸೂಪರ್‌!

Wedding Fashion
ಫ್ಯಾಷನ್19 mins ago

Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

U-19 Asia Cup IND vs PAK
ಕ್ರಿಕೆಟ್28 mins ago

ನಾಳೆಯಿಂದ ಅಂಡರ್​-19 ಏಷ್ಯಾಕಪ್; ಭಾರತ-ಪಾಕ್​ ಮುಖಾಮುಖಿ ಯಾವಾಗ?

Veer Savarkar and Priyank Kharge
ಕರ್ನಾಟಕ29 mins ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

job opportunity
ದೇಶ42 mins ago

Job News: ಕೇಂದ್ರ ಸರ್ಕಾರ, ರಕ್ಷಣಾ ಇಲಾಖೆಗಳಲ್ಲಿ ಶೇ.14ರಷ್ಟು ಉದ್ಯೋಗ ಹೆಚ್ಚಳ

Office Rental Rises in top 7 cities including bengaluru
ದೇಶ44 mins ago

ಬೆಂಗಳೂರು ಸೇರಿ ದೇಶದ ಟಾಪ್ 7 ನಗರಗಳಲ್ಲಿ ಕಚೇರಿ ಬಾಡಿಗೆ ಹೆಚ್ಚಳ!

BMTC Bus hits bike
ಕರ್ನಾಟಕ57 mins ago

BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

Kapil Sharma and Sunil Grover
ಬಾಲಿವುಡ್59 mins ago

The Kapil Sharma Show: 6 ವರ್ಷದ ಮುನಿಸು ಮರೆತು ಒಟ್ಟಿಗೆ ಪಾರ್ಟಿ ಮಾಡಿದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Veer Savarkar and Priyank Kharge
ಕರ್ನಾಟಕ29 mins ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ6 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ13 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ21 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

ಟ್ರೆಂಡಿಂಗ್‌