Site icon Vistara News

ಕರ್ನಾಟಕದ ಬೆಟ್ಟ ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಅಸ್ತು

ಪ್ರಲ್ಹಾದ್ ಜೋಶಿ

ನವದೆಹಲಿ: ಕರ್ನಾಟಕದ ಬೆಟ್ಟ ಕುರುಬ ಜನಾಂಗ ಸೇರಿ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದ್ದು, ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ.

ಬೆಟ್ಟ ಕುರುಬ ಜನಾಂಗವನ್ನು ರಾಜ್ಯದಲ್ಲಿ ಕಾಡು ಕುರುಬ ಎಂದೂ ಕರೆಯಲಾಗುತ್ತದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಕಾಡು ಕುರುಬ ಸೇರಿದಂತೆ 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನ ಕಲ್ಪಿಸುವ ಸಂಬಂಧ ಸಂವಿಧಾನ ತಿದ್ದುಪಡಿ ತರುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಈ ಕುರಿತಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. ಸುಮಾರು 30 ವರ್ಷಗಳಿಂದಲೂ ಈ ಸಮುದಾಯದ ಜನರು ಮೀಸಲಾತಿಗಾಗಿ ಹೋರಾಟ ನಡೆಸುತ್ತ ಬಂದಿದ್ದಾರೆ. ಇದೀಗ ಕಾಡು ಕುರುಬರು ದಶಕಗಳ ಮೀಸಲಾತಿ ಹೋರಾಟಕ್ಕೆ ನ್ಯಾಯ ಸಿಕ್ಕಂತಾಗಿದೆ.

ಇದನ್ನು ಓದಿ | Mysore Dasara 2022 | ದಸರಾ ಕುಸ್ತಿಗೆ ಅಖಾಡ ಸಜ್ಜು, ಈ ಬಾರಿ ಅದ್ಧೂರಿ ಪಂದ್ಯಾವಳಿ ಆಯೋಜನೆಗೆ ಸಿದ್ಧತೆ

Exit mobile version