Site icon Vistara News

Pralhad Joshi: ಚುನಾವಣೆ ಸೋಲಿನ ಸೇಡಿಗಾಗಿ ಯಡಿಯೂರಪ್ಪ ಮೇಲೆ ರಾಜಕೀಯ ವೈಷಮ್ಯ; ಪ್ರಲ್ಹಾದ್‌ ಜೋಶಿ

Surya Ghar Long Term Free Power scheme 1 3 crore registration says Minister Pralhad Joshi

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್‌ಗೆ (Congress) ಲೋಕಸಭೆ ಚುನಾವಣೆ (Lok Sabha Election) ಸೋಲನ್ನು ಅರಗಿಸಿಕೊಳ್ಳಲಾಗಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತವನ್ನು ಮನಬಂದಂತೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಇದನ್ನೂ ಓದಿ: Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

ಮೂರ್ನಾಲ್ಕು ತಿಂಗಳ ಹಿಂದೆ ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧ ಪೋಸ್ಕೋ ಪ್ರಕರಣ ದಾಖಲಿಸಿದ ಮಹಿಳೆ ಮಾನಸಿಕ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ ಎಂದು ಆಗಲೇ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಆದರೆ ಈಗ ಚುನಾವಣೆ ಮುಗಿದ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರು ಹೊಸ ಡ್ರಾಮಾ ಶುರು ಮಾಡಿದ್ದಾರೆ ಎಂದು ಸಚಿವರು ಖಂಡಿಸಿದ್ದಾರೆ.

ಆ ಮಹಿಳೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾಳೆ ಎಂದೂ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ತಮ್ಮ ದುರಾಡಳಿತವನ್ನು ಮರೆಮಾಚಲು ಬಿಜೆಪಿ ವರಿಷ್ಠ ಬಿಎಸ್‌ವೈ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಟ್ವೀಟ್ ಮೂಲಕ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Euro Cup 2024: ಇಂದಿನಿಂದ ಯುರೋ ಕಪ್ ಟೂರ್ನಿ; ಜರ್ಮನಿ-ಸ್ಕಾಟ್ಲೆಂಡ್ ನಡುವೆ ಮೊದಲ ಪಂದ್ಯ

ಇಲ್ಲ ಸಲ್ಲದ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಎಳೆಯುತ್ತಿರುವುದು ರಾಜಕೀಯ ವೈಷಮ್ಯ ಸರಿ. ಅವರ ಈ ದುರ್ಬುದ್ಧಿಗೆ ತಕ್ಕ ಪಾಠ ಕಲಿಯಲಿದ್ದಾರೆ ಎಂದು ಸಚಿವ ಜೋಶಿ ಎಚ್ಚರಿಸಿದ್ದಾರೆ.

Exit mobile version