ನವದೆಹಲಿ: ಕರ್ನಾಟಕ ಸರ್ಕಾರ ಎಸ್‌ಸಿ/ಎಸ್‌ಟಿ ಹಣವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad joshi) ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಕುರಿತು ಪ್ರತಿಕ್ರಿಯಿಸಿದರು.
ಇದನ್ನೂ ಓದಿ: Pralhad joshi: ನವೀಕರಿಸಬಹುದಾದ ಇಂಧನ ಉತ್ಪಾದನೆ; ವಿಶ್ವದಲ್ಲೇ 4ನೇ ಸ್ಥಾನದಲ್ಲಿ ಭಾರತ
ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಹಗರಣವು ಬಹಳ ದೊಡ್ಡ ಹಗರಣವಾಗಿದೆ ಎಂದು ತಿಳಿಸಿದ ಅವರು. ವಾಲ್ಮೀಕಿ ನಿಗಮದಲ್ಲಾದ ಹಗರಣ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿದೆ. ಒತ್ತಡ ಹೆಚ್ಚಿದ ನಂತರ ಸಚಿವರು ರಾಜೀನಾಮೆ ನೀಡಿದ್ದಾರೆ. ಈಗ ಇಡಿ ಪ್ರವೇಶಿಸಿದಾಗ, ಅವರು ವಾಲ್ಮೀಕಿ ಬೋರ್ಡ್ ಹಗರಣದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ಅತ್ಯಮೂಲ್ಯ ನಿವೇಶನಗಳನ್ನು ತಮ್ಮ ಪತ್ನಿ ಹೆಸರಿಗೆ ಮಂಜೂರು ಮಾಡಿಸಿದ್ದು 2013ರಲ್ಲಿ. ಆದರೆ, ಈ ಜಮೀನಿನ ಬಗ್ಗೆ 2018ರಲ್ಲಿ ಅಫಿಡವಿಟ್‌ನಲ್ಲಿ ಯಾವುದೇ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ: Back Benchers Movie: ಬ್ಯಾಕ್ ಬೆಂಚರ್ಸ್ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ!
2023ರಲ್ಲಿ ಅದರ ಮೌಲ್ಯ 25 ಲಕ್ಷ ರೂ. ಎಂದು ಅಫಿಡವಿಟ್ ಸಲ್ಲಿಸಿದರು. ಈಗ ಅದರ ಮೌಲ್ಯ ದುಪ್ಪಟ್ಟು ಎನ್ನುತ್ತಿದ್ದಾರೆ. ಈ ಎರಡೂ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಬಿಜೆಪಿ ಒತ್ತಾಯಿಸುತ್ತದೆ ಹಾಗೂ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದರು.