Site icon Vistara News

Pralhad Joshi: ವಾಲ್ಮೀಕಿ ನಿಗಮದ ಹಗರಣ; ಸಚಿವ ನಾಗೇಂದ್ರರನ್ನು ಬಂಧಿಸಿ, ಸಿಬಿಐ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

union Minister Pralhad Joshi latest statement about Valmiki Corporation scam

ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ (Valmiki Corporation scam) ಸಂಬಂಧ ಸಚಿವ ನಾಗೇಂದ್ರರನ್ನು ಬಂಧಿಸಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಇದೊಂದು ಬಹುದೊಡ್ಡ ಭ್ರಷ್ಟಾಚಾರ ಹಗರಣವಾಗಿದ್ದು, ಇದರ ತನಿಖೆ ಸಿಬಿಐಗೇ ವಹಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

ಸಚಿವ ನಾಗೇಂದ್ರರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬೇಕು ಮತ್ತು ಇದರಲ್ಲಿ ಸಿಎಂ ಸೇರಿದಂತೆ ಸಂಬಂಧಿಸಿದ ಎಲ್ಲರ ಮೇಲೂ ತನಿಖೆ ಆಗಬೇಕು ಎಂದು ಜೋಶಿ ಆಗ್ರಹಿಸಿದರು.

ನಿರ್ಲಜ್ಜೆಯ ಸರ್ಕಾರ

ರಾಜ್ಯ ಕಾಂಗ್ರೆಸ್ ಸರ್ಕಾರ ತೀರಾ ನಿರ್ಲಜ್ಜೆಯ ಸರ್ಕಾರವಾಗಿದೆ. ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ರೂ. ಭ್ರಷ್ಟಾಚಾರ ಹಗರಣ ಬಯಲಿಗೆ ಬಂದರೂ ಇದೂವರೆಗೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲ ಎಂದು ಜೋಶಿ ಖಂಡಿಸಿದರು.

ಚುನಾವಣೆಗೆ ಬಳಸಲೆಂದೇ ಹಣ ಲೂಟಿ

ಚುನಾವಣೆಗೆ ಬಳಸಲೆಂದೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣವನ್ನು ಲೂಟಿ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಸರ್ಕಾರಿ ದುಡ್ಡು ಲಪಟಾಯಿಸಿ ಚುನಾವಣೆ ನಡೆಸಲು ಷಡ್ಯಂತ್ರ ನಡೆಸಿದೆ ಎಂದು ಪ್ರಲ್ಹಾದ ಜೋಶಿ ಆರೋಪಿಸಿದರು.

ಯಾವ ಕಾರಣಕ್ಕಾಗಿ ನಿಗಮದ ಹಣವನ್ನು ಮತ್ತೊಂದು ಖಾತೆಗೆ ವರ್ಗಾಯಿಸಿದರು? ಎಂಬುದಕ್ಕೆ ಸರ್ಕಾರ ಇನ್ನೂ ಉತ್ತರಿಸಿಲ್ಲ ಎಂದು ಹರಿಹಾಯ್ದರು.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳಲು ಇಂದೇ ಸಕಾಲ, ಬಂಗಾರದ ಬೆಲೆಯಲ್ಲಿ ಇಳಿಕೆ

ಇದೊಂದು ಬಹುದೊಡ್ಡ ಹಗರಣವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇರುವುದರಿಂದ ಪಾರದರ್ಶಕ ತನಿಖೆ ನಡೆಯುವುದು ಅನುಮಾನ. ಅಲ್ಲದೇ, ಯುನಿಯನ್ ಬ್ಯಾಂಕ್ ಕೆಲ ಅಧಿಕಾರಿಗಳೂ ಇದರಲ್ಲಿ ಇರುವುದರಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೇ ವಹಿಸಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದರು.

Exit mobile version