Site icon Vistara News

Pralhad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್‌‌ನಿಂದ ರಾಜಕೀಯ; ಪ್ರಲ್ಹಾದ್‌ ಜೋಶಿ

Union Minister Pralhad Joshi latest statement in Bengaluru

ಬೆಂಗಳೂರು: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಎನ್‌ಡಿಎ ಮೈತ್ರಿಕೂಟ ನಡೆಸುತ್ತಿರುವ ಪಾದಯಾತ್ರೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಮತ್ತು ಜಾನ್ ಬ್ರಿಟಾಸ್ ಅವರು ಕೇರಳದ ವಯನಾಡ್ ದುರಂತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಜೋಶಿ ಆಕ್ಷೇಪಿಸಿದರು.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಕೇರಳ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅವಘಡಕ್ಕೂ ಮೊದಲೇ ಮುನ್ನೆಚ್ಚರಿಕೆ ನೀಡಿದೆ ಎಂದು ಸ್ಪಷ್ಟಪಡಿಸಿದರು. ನಾವು ನಿಜಕ್ಕೂ ಮೊದಲೇ ಎಚ್ಚರಿಕೆ ನೀಡಿದ್ದೇವೆ ಎಂದು ಕೇಂದ್ರ ಗೃಹ ಸಚಿವರು ಸ್ಪಷ್ಟಪಡಿಸಿದ ನಂತರವೂ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದು, ಇದು ರಾಜಕೀಯ ಕಾರಣಕ್ಕಲ್ಲದೆ ಮತ್ತೇನು ಅಲ್ಲ ಎಂದು ಸಚಿವ ಪ್ರಲ್ಹಾದ್‌ ಜೋಶಿ ಹರಿಹಾಯ್ದರು.

ಜುಲೈ 23 ರಂದೇ ಕೇರಳ ಸರ್ಕಾರಕ್ಕೆ ಮುನ್ನೆಚ್ಚರಿಕೆ, ಅಗತ್ಯ ಮಾಹಿತಿಯನ್ನು ಕೇಂದ್ರ ಸರ್ಕಾರ ನೀಡಿದೆ. ಹಾಗಿದ್ದರೂ ಸ್ಥಳೀಯ ಸರ್ಕಾರ ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಿದೆ. ಕೇರಳ ಸರ್ಕಾರದ ಆಡಳಿತ ವ್ಯವಸ್ಥೆ ಸರಿಯಿಲ್ಲ. ಅದನ್ನು ಕೇಂದ್ರದ ಮೇಲೆ ಹೊರಿಸುವುದು ಸರಿಯಲ್ಲ ಎಂದು ಜೋಶಿ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಆ.4ರಂದು ʼರಣಧುರಂಧರʼ ಗ್ರಂಥ ಲೋಕಾರ್ಪಣೆ

ವಯನಾಡ್ ದುರಂತದ ಕುರಿತು ಕಾಂಗ್ರೆಸ್ ಆರೋಪ ಮಾಡಿದರೆ ಅದು ರಾಜಕೀಯವಲ್ಲ, ನಾವು ಸ್ಪಷ್ಟನೆ ನೀಡಿದರೆ ರಾಜಕೀಯ ಮಾಡಿದ ಹಾಗೆ ಆಗುತ್ತದೆಯೇ? ಎಂದು ಸಚಿವರು ಪ್ರಶ್ನಿಸಿದರು.

Exit mobile version