Site icon Vistara News

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Union Food and Consumer Affairs Minister Pralhad Joshi latest statement

ಬೀದರ್‌: ರಾಜ್ಯದಲ್ಲಿ ಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಈ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದರು.

ಬೀದರ್‌ನಲ್ಲಿ ಗುರುವಾರ ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024, ಈಶಾನ್ಯ ಪದವೀಧರ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ರಾಜ್ಯದೆಲ್ಲೆಡೆ ಮಹಿಳೆಯರಿಗೆ ಸುರಕ್ಷತಾ ಭಾವ ಇಲ್ಲದಾಗಿದೆ. ಜೀವಕ್ಕೆ ಗ್ಯಾರಂಟಿ ಇರದಂತಹ ಘಟನೆಗಳು ಘಟಿಸುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, ಪೊಲೀಸರು ಬಹುಶಃ ಸರ್ಕಾರದ ಕೈಗೊಂಬೆ ಎಂಬಂತೆ ಕೆಲಸ ಮಾಡುತ್ತಿದ್ದರೇನೋ ಅನಿಸುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ಘಟನೆಗಳನ್ನು ನೋಡಿ ಸಾರ್ವಜನಿಕರೇ ಈ ರೀತಿ ಶಂಕೆ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಮಾದಕ ವಸ್ತು ಮಾರಾಟ

ಕಾಲೇಜುಗಳ ಹತ್ತಿರ ರಾಜಾರೋಷವಾಗಿ ಮಾದಕ ವಸ್ತುಗಳ ಮಾರಾಟವಾಗುತ್ತಿದ್ದರೂ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಹೀಗೇ ಕೆಲ ವರ್ಷಗಳು ಮುಂದುವರೆದರೆ, ಕರ್ನಾಟಕ ಪಂಜಾಬನ್ನೂ ಮೀರಿಸುವ ಸಾಧ್ಯತೆ ಇದೆ ಎಂದು ಸಚಿವ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಶಾಂತಿ-ಸುವ್ಯವಸ್ಥೆ ಹಾಗೂ ಅಭಿವೃದ್ಧಿಗಾಗಿ ಈ ಬಾರಿ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಯಶಸ್ವಿಯಾಗಬೇಕು ಎಂದ ಅವರು, ಕರ್ನಾಟಕದ ಕನ್ನಡಿಗರ ಉಳಿವಿಗಾಗಿ, ಒಳ್ಳೆಯ ಭವಿಷ್ಯಕ್ಕಾಗಿ ನಾವೆಲ್ಲರೂ ಇಂದು ಶ್ರಮಿಸಬೇಕಾಗಿದೆ ಎಂದು ಎರಡು ಪಕ್ಷಗಳ ಕಾರ್ಯಕರ್ತರಿಗೆ ಸಚಿವರು ಕರೆ ನೀಡಿದರು.

ಇದನ್ನೂ ಓದಿ: Mouth Sleeping: ನಿದ್ದೆಯಲ್ಲಿದ್ದಾಗ ಬಾಯಿಯಿಂದ ಉಸಿರಾಡುತ್ತೀರಾ? ಹಾಗಾದರೆ ಮುಂದೆ ಸಮಸ್ಯೆಯಾಗಬಹುದು!

ಈ ಸಂದರ್ಭದಲ್ಲಿ ಸಂಸದ ಭಗವಂತ್ ಖೂಬ, ಬಸವ ಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗರ, ವಿಧಾನ ಪರಿಷತ್ತಿನ ಸದಸ್ಯರಾದ ರಘುನಾಥ ಮಲ್ಕಾಪುರೆ, ರವಿ ಕುಮಾರ್, ಜೆಡಿಎಸ್ ನಾಯಕರಾದ ಬಂಡೆಪ್ಪ ಕಾಶೆಂಪುರ ಉಪಸ್ಥಿತರಿದ್ದರು.

Exit mobile version