Site icon Vistara News

Pralhad Joshi: ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

Pralhad Joshi

ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀಮದ್ ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳನ್ನು ಭಾನುವಾರ ಭೇಟಿಯಾಗಿ, ಆಶೀರ್ವಾದ ಪಡೆದರು.

ಹಾವೇರಿ ಜಿಲ್ಲೆ ಬಂಕಾಪುರದ ಆರಳೆಲೆ ಹಿರೇಮಠದಲ್ಲಿ ಜರುಗಿದ ಲಿಂಗೈಕ್ಯ ಶ್ರೀ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಸುವರ್ಣ ಸ್ಮರಣೋತ್ಸವದಲ್ಲಿ ಚರಿತಾಮೃತ ಕೃತಿ ಬಿಡುಗಡೆ ಮಾಡಿ, ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದರು.

ದೇಶದಲ್ಲಿ ಸಾಂಸ್ಕೃತಿಕ ಪುನರುತ್ಥಾನ

ಈ ವೇಳೆ ರಂಭಾಪುರಿ ಶ್ರೀಗಳು ಮಾತನಾಡಿ, ಅಯೋಧ್ಯಾ ರಾಮಮಂದಿರ ನಿರ್ಮಾಣ, ಕಾಶಿ ಜೀರ್ಣೋದ್ಧಾರ ಸೇರಿದಂತೆ ದೇಶದಲ್ಲಿ ಸಾಂಸ್ಕೃತಿಕ ಪುನರುತ್ಥಾನ ಆಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿ, ಪರಶಿವನ ಆಶೀರ್ವಾದದಿಂದ ನಾಡು, ನಮ್ಮ ರಾಷ್ಟ್ರ ಸುಭೀಕ್ಷೆಯಾಗಿರಲಿ ಎಂದು ಹಾರೈಸಿದರು.

ಇದನ್ನೂ ಓದಿ | Partition of India: ಡಿಕೆ ಸುರೇಶ್ ‌ʼದೇಶ ವಿಭಜನೆʼ ಹೇಳಿಕೆ; ಡಿಕೆ ಬ್ರದರ್ಸ್‌ ಮನೆಯತ್ತ ನುಗ್ಗಿದ ಬಿಜೆಪಿ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಶಿಗ್ಗಾಂವಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು.

ಕಾಂಗ್ರೆಸ್‌ ಕಾರ್ಯಕರ್ತರನ್ನು ನಾಯಿಗೆ ಹೋಲಿಸಿದ ‘ಹಿರಿ’ ಖರ್ಗೆ; ಪ್ರಲ್ಹಾದ್‌ ಜೋಶಿ ಟೀಕೆ

Mallikarjun Kharge Compares His Party Workers With Dog; Pralhad Joshi Takes Dig

ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ಕೆಲವೇ ತಿಂಗಳು ಬಾಕಿ ಇವೆ. ಹಾಗಾಗಿ, ಬಿಜೆಪಿ, ಕಾಂಗ್ರೆಸ್‌ ಸೇರಿ ದೇಶದ ಎಲ್ಲ ರಾಜಕೀಯ ಪಕ್ಷಗಳೂ ಕಾರ್ಯಕರ್ತರನ್ನು ಹುರಿದುಂಬಿಸುತ್ತಿವೆ. ಕಾರ್ಯಕರ್ತರು ಲವಲವಿಕೆಯಿಂದ ಪ್ರಚಾರ ಕೈಗೊಳ್ಳಲು ಎಲ್ಲ ರೀತಿಯಲ್ಲಿ ಸಿದ್ಧಗೊಳಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಹುರಿದುಂಬಿಸುವ ಭರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ನಾಯಿ ಜತೆ ಹೋಲಿಕೆ ಮಾಡಿದ್ದಾರೆ. ಇದಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಟೀಕಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಕಾರ್ಯಕರ್ತರನ್ನು ನಾಯಿ ಜತೆ ಹೋಲಿಸಿದ ವಿಡಿಯೊವನ್ನು ಪ್ರಲ್ಹಾದ್‌ ಜೋಶಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹಾಗೆಯೇ, “ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ನ ನ್ಯಾಯ ಸಂಕಲ್ಪ ರ‍್ಯಾಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ನಾಯಿಗೆ ಹೋಲಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಆಯ್ಕೆ ಮಾಡುವ ಪ್ರಕ್ರಿಯೆ ವಿವರಿಸುವ ವೇಳೆ ಹೀಗೆ ಹೇಳಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ” ಎಂದು ಪ್ರಲ್ಹಾದ್‌ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಷ್ಟಕ್ಕೂ ಖರ್ಗೆ ಹೇಳಿದ್ದೇನು?

“ಚುನಾವಣೆ ವೇಳೆ ಬೂತ್‌ ಏಜೆಂಟರನ್ನಾಗಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಆಯ್ಕೆ ಮಾಡುವಾಗ ತುಂಬ ಎಚ್ಚರಿಕೆ ವಹಿಸಬೇಕು. ನಾಯಿಯನ್ನು ಸಾಕಲು ಆಯ್ಕೆ ಮಾಡಿಕೊಳ್ಳುವಾಗ, ಆ ನಾಯಿ ಚುರುಕಿದೆಯೋ ಇಲ್ಲವೋ, ಬೊಗಳುತ್ತದೆಯೋ ಇಲ್ಲದೆಯೋ ಎಂಬುದನ್ನು ಕಿವಿ ಹಿಂಡಿ ಪರೀಕ್ಷೆ ಮಾಡಲಾಗುತ್ತದೆ. ಹಾಗೆಯೇ, ಕಾಂಗ್ರೆಸ್‌ ಕಾರ್ಯಕರ್ತರನ್ನು ಆಯ್ಕೆ ಮಾಡುವಾಗಲೂ ಎಚ್ಚರಿಕೆ ವಹಿಸಬೇಕು. ಜೋರಾಗಿ ಕೂಗಾಡುವ ಕಾರ್ಯಕರ್ತರನ್ನೇ ಬೂತ್‌ ಏಜೆಂಟರನ್ನಾಗಿ ಆಯ್ಕೆ ಮಾಡಬೇಕು” ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಲೋಕಸಭೆ ಚುನಾವಣೆಗೆ ಅಣಿಗೊಳಿಸುವ ಭರದಲ್ಲಿ ಅವರು ನೀಡಿದ ಉದಾಹರಣೆಯು ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಡಿ.ಕೆ. ಸುರೇಶ್‌ ದೇಶ ವಿಭಜನೆ ಹೇಳಿಕೆ; ಸೋನಿಯಾ ಗಾಂಧಿ ಕ್ಷಮೆಯಾಚನೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

ದೇಶ ವಿಭಜನೆ ಕುರಿತು ಸಂಸದ ಡಿ.ಕೆ.ಸುರೇಶ್‌ ನೀಡಿದ ಹೇಳಿಕೆಯನ್ನು ಕೂಡ ಪ್ರಲ್ಹಾದ್‌ ಜೋಶಿ ಅವರು ಸಂಸತ್‌ನಲ್ಲಿ ಪ್ರಸ್ತಾಪಿಸಿದ್ದರು. “ದೇಶ ಒಡೆಯುವ ನೀತಿ ಕಾಂಗ್ರೆಸ್‌ನ ಪರಂಪರೆಯಾಗಿಬಿಟ್ಟಿದೆ. ಈಗ ಅದೇ ಪಕ್ಷದ ಸಂಸದ, ಅದೂ ಒಬ್ಬ ಉಪ ಮುಖ್ಯಮಂತ್ರಿ ಸಹೋದರ ದೇಶ ವಿಭಜನೆ ಹೇಳಿಕೆ ನೀಡಿರುವುದು ಖಂಡನೀಯ. ಈ ವಿಷಯವನ್ನು ಎಥಿಕ್ಸ್ ಕಮಿಟಿ ಮುಂದಿಡಬೇಕು. ದೇಶ ವಿಭಜನೆ ಕೂಗೆಬ್ಬಿಸಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ವಿರುದ್ಧ ಸಂವಿಧಾನಾತ್ಮಕ ಕ್ರಮ ಕೈಗೊಳ್ಳಬೇಕು ಮತ್ತು ಕಾಂಗ್ರೆಸ್ ಪಕ್ಷ ದೇಶದ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ


Exit mobile version