Site icon Vistara News

Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

Pralhad Joshi

ನವದೆಹಲಿ: ಮಾರುಕಟ್ಟೆಯಲ್ಲಿ ಏರಿಳಿತ ಕಾಣುತ್ತಿರುವ ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ ಕೈಗೊಳ್ಳಲಾಗಿದ್ದು, ಕೆಜಿಗೆ 60 ರೂ. ದರ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

ದೆಹಲಿಯ ಕೃಷಿ ಭವನದಲ್ಲಿ ಇಂದು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಟೊಮೆಟೊ ವ್ಯಾನ್‌ಗಳಿಗೆ ಚಾಲನೆ ನೀಡಿ ಬೆಲೆ ಸ್ಥಿರತೆ ಕುರಿತು ತಿಳಿಸಿದರು.

ದೆಹಲಿ, ಎನ್‌ಸಿಆರ್‌ನ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆ ಏರಿಳಿತ ಕಾಣುತ್ತಿದ್ದು, ಸ್ಥಿರತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು!

ಟೊಮೆಟೋಗೆ ಚಿಲ್ಲರೆ ಬೆಲೆ ಪ್ರತಿ ಕಿಜಿಗೆ 60 ರೂ. ನಿಗದಿಪಡಿಸಲಾಗಿದೆ. ಅಲ್ಲದೇ, ಪ್ರಮುಖ 18 ಸ್ಥಳಗಳಲ್ಲಿ ಮಾರಾಟ ಮಾಡಲಾಗುವುದು. ಗ್ರಾಹಕರ ಅನುಕೂಲ ಮತ್ತು ಬೇಡಿಕೆಗೆ ಅನುಗುಣವಾಗಿ ಮಾರಾಟ ಸ್ಥಳಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ ಎಂದು ಸಚಿವ ಜೋಶಿ ತಿಳಿಸಿದರು.

ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಟೊಮೆಟೊ ವ್ಯಾನ್‌ಗಳು ದೆಹಲಿ- ಎನ್‌ಸಿಆರ್ ಪ್ರದೇಶಗಳಲ್ಲಿ ಲಭ್ಯವಿರುತ್ತವೆ ಎಂದರು.

ದೆಹಲಿ, ಕೋಲಾರ ಮತ್ತು ರಾಜಸ್ಥಾನದ ಮಾರುಕಟ್ಟೆಗಳಿಂದ ಟೊಮೆಟೊ ಖರೀದಿಸಿ, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಪ್ರತಿ ಕೆಜಿಗೆ 60 ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

ಈ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸಚಿವ ಬಿ.ಎಲ್.ವರ್ಮಾ ಉಪಸ್ಥಿತರಿದ್ದರು.

Exit mobile version