ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕನ್ನಡಿಗರ ತೆರಿಗೆಯಲ್ಲಿ ಕೇರಳದವರನ್ನು ಸಾಕಲು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ.
ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್‌ಗಳಲ್ಲಿ ಕನ್ನಡಿಗರ ಬದಲು ಕೇರಳದ ಯುವಕರಿಗೆ ಅವಕಾಶ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: IAS Exam : ಯುಪಿಎಸ್ ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಉಚಿತ ತರಬೇತಿ
ಕೇರಳದ ಯುವಕರಿಗೆ ಬಿಎಂಟಿಸಿ ಚಾಲಕ ಹುದ್ದೆಗೆ ಅವಕಾಶ ಕಲ್ಪಿಸುವ ಮೂಲಕ ಕನ್ನಡಿಗರಿಗೆ ಪಂಗನಾಮ ಹಾಕುತ್ತಿದ್ದಾರೆ ಎಂದು ಖಂಡಿಸಿರುವ ಅವರು, ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರ ಹುದ್ದೆಗೆ ಕೇರಳದವರನ್ನು ನೇಮಿಸಿಕೊಳ್ಳುವುದೇಕೆ? ಕನ್ನಡಿಗರು ಯಾರೂ ಸಿದ್ಧರಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: Fruit and Veggie Smoothies: ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್! ಒಳ್ಳೆಯದೇ, ಕೆಟ್ಟದ್ದೇ?
ಖಾಸಗಿ ಏಜೆನ್ಸಿ ಮೂಲಕ ನೇಮಕವಾದದ್ದು ಎಂಬುದು ಬರಿಯ ಸಬೂಬು. ಕಾಂಗ್ರೆಸ್ ಯುವನಿಧಿ ಗ್ಯಾರಂಟಿಯ ಹಕೀಕತ್ತು ಇದೇ ಎಂದು ಹೇಳಿರುವ ಅವರು, ಸಿಎಂ ಸಿದ್ದರಾಮಯ್ಯ ಅವರ ನಿಷ್ಠೆ ಕರ್ನಾಟಕ ಅಥವಾ ಕನ್ನಡಿಗರ ಪರವಾಗಿಲ್ಲ ಎಂಬುದು ಇದರಿಂದ ಸ್ಪಷ್ಟವಾಗಿದೆ. ಮತ ಹಾಕಲು ಕನ್ನಡಿಗರೇ ಬೇಕು, ಆದರೆ ನಿಯತ್ತು ಮಾತ್ರ ಪರರ ಪರ ಎಂದು ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.