ಕಾರವಾರ/ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಯ (Multi specialty) ಬೇಡಿಕೆ ಹೆಚ್ಚಾಗಿದೆ. ಈ ಸಂಬಂಧ ಶನಿವಾರ (ಜು.30) ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 10 ಗಂಟೆಗೆ ನೂರಾರು ಸಂಖ್ಯೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಜನರಿಂದ ಪ್ರತಿಭಟನೆ ನಡೆಯಲಿದೆ.
ಪ್ರಮುಖವಾಗಿ ಚಿಂತಕ ಚಕ್ರವರ್ತಿ ಸೂಲಿಬೆಲೆ, ಚಿತ್ರ ನಟ-ನಟಿಯರು, ಸಾಹಿತಿಗಳು ಹಾಗೂ ಭಾಗಿಯಾಗಲಿದ್ದಾರೆ. ಈ ಕುರಿತು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಮುಖಾಂತರ ಅಭಿಯಾನ ಆರಂಭಗೊಂಡಿದೆ. ಪ್ರತಿಭಟನೆ ಬಳಿಕ ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲೆಯ ಮುಖಂಡರು ಸಿಎಂಗೆ ಮನವಿ ಸಲ್ಲಿಸಲಿದ್ದಾರೆ. ಸಿಎಂ ಆಗಸ್ಟ್ ಮೊದಲ ವಾರ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದು, ಆ ವೇಳೆ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಲ್ ಆಸ್ಪತ್ರೆ ಘೋಷಣೆ ಮಾಡಬೇಕೆಂದು ಒತ್ತಾಯಿಸಲಿದ್ದಾರೆ.
ಇದನ್ನೂ ಓದಿ | Multi specialty | ಉ.ಕ.ಕ್ಕೆ ಬರಲು ವೈದ್ಯರೇ ಒಪ್ಪುತ್ತಿಲ್ಲವೆಂದ ಶಾಸಕಿ; ಸಿಎಂ ಜತೆ ಚರ್ಚಿಸುವೆನೆಂದ ಆರೋಗ್ಯ ಸಚಿವ
2019ರಲ್ಲಿ ಈ ಮುಂಚೆ ಇದೇ ವಿಚಾರವಾಗಿ ಟ್ವಿಟರ್ ಅಭಿಯಾನ ಆಗಿತ್ತು. ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕ್ರಮದ ಬಗ್ಗೆ ಭರವಸೆ ನೀಡಿದ್ದರು. ಉತ್ತರ ಕನ್ನಡ ಮಟ್ಟಿಗೆ ಸುಸಜ್ಜಿತ ಆಸ್ಪತ್ರೆ ಕನಸಾಗೇ ಉಳಿದಿತ್ತು. ಜಿಲ್ಲೆಯಲ್ಲಿ ಎಲ್ಲೇ ಅಪಘಾತವಾದರೂ ಜೀವ ಕೈಯಲ್ಲಿ ಹಿಡಿದು ಆಂಬ್ಯುಲೆನ್ಸ್ನಲ್ಲಿ ನೆರೆಯ ಜಿಲ್ಲೆಗಳಿಗೆ ಸಾಗಬೇಕಾದ ಅನಿವಾರ್ಯ ಒದಗಿದೆ. ಈ ನಿಟ್ಟಿನಲ್ಲಿ ಇದೀಗ ಉತ್ತರ ಕನ್ನಡದ ಜನಪ್ರತಿನಿಧಿಗಳು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.
ಇದನ್ನೂ ಓದಿ | Multi-Specialty Hospital | ಉತ್ತರ ಕನ್ನಡದ ಜನತೆಯ ಹೋರಾಟಕ್ಕೆ ಸಿದ್ದರಾಮಯ್ಯ ಬೆಂಬಲ